ಪೇಜಾವರ ಮಠದಲ್ಲಿ ಎಡನೀರು ಶ್ರೀಗಳಿಂದ ದಾಸವಾಣಿ
Team Udayavani, Aug 22, 2017, 12:39 PM IST
ಮುಂಬಯಿ: ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾ ಸಂಸ್ಥಾನದ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠಾಧೀಶ ಪರಮಪೂಜ್ಯ ಶ್ರೀ ವಿಶ್ವೇಶತೀರ್ಥ ಶ್ರೀ ಪಾದಂಗಳವರ ಮತ್ತು ಕಿರಿಯ ಯತಿಗಳಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳ ಆಶೀರ್ವಾದಗಳೊಂದಿಗೆ ಆ. 19ರಂದು ಸಂಜೆ ಸಾಂತಾಕ್ರೂಜ್ ಪೂರ್ವದ ಪೇಜಾವರ ಮಠ ಮುಂಬಯಿ ಶಾಖೆಯಲ್ಲಿ ಎಡನೀರು ಮಠಾಧೀಶ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಅವರಿಂದ ದಾಸವಾಣಿ ಕಾರ್ಯಕ್ರಮ ನಡೆಯಿತು.
ಮುಂಬಯಿ ಚಾತುರ್ಮಾಸ್ಯದಲ್ಲಿರುವ ಸಂಗೀತ ವಿದ್ವಾಂಸರು, ಸಾಹಿತಿಗಳು ಹಾಗೂ ಯಕ್ಷಗಾನ ತಾಳಮದ್ದಳೆಯ ಒಳ್ಳೆಯ ಅರ್ಧದಾರಿಗಳಾಗಿರುವ ಎಡನೀರು ಮಠಾಧೀಶ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಅವರು ಪ್ರಾರಂಭದಲ್ಲಿ ಶ್ರೀ ಕೃಷ್ಣ ದೇವರಿಗೆ ಮಂಗಳಾರತಿಯನ್ನು ಬೆಳಗಿಸಿ ಭಕ್ತರಿಗೆ ಮಂತ್ರಾಕ್ಷತೆಯನ್ನು ನೀಡಿ ಆಶೀರ್ವದಿಸಿದರು.
ಪೇಜಾವರ ಮಠ ಮುಂಬಯಿ ಶಾಖೆಯ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಭಕ್ತಾದಿಗಳು, ಸಂಗಿತಾಭಿಮಾನಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಪೇಜಾವರ ಮಠ ಮುಂಬಯಿ ಶಾಖೆಯ ಪ್ರಬಂಧಕರುಗಳಾದ ರಾಮದಾಸ ಉಪಾಧ್ಯಾಯ ರೆಂಜಾಳ, ಪ್ರಕಾಶ ಆಚಾರ್ಯ ರಾಮಕುಂಜ, ನಿರಂಜನ್ ಗೋಗೆr ಮೊದಲಾದವರು ಉಪಸ್ಥಿತರಿದ್ದು ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desiswara: ನ್ಯೂಯಾರ್ಕ್ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ
Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…
Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ
Kannada Alphanbets: “ಕ’ ಕಾರದಲ್ಲಿನ ವಿಶೇಷ: ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ
ನ.9: ವಿಶ್ವ ಕನ್ನಡ ಹಬ್ಬ: ಈ ಬಾರಿ ಸಿಂಗಾಪುರದಲ್ಲಿ ರಂಗೇರಲಿರುವ ಸಂಭ್ರಮ
MUST WATCH
ಹೊಸ ಸೇರ್ಪಡೆ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.