ಖಾರ್‌ ಶ್ರೀ ಶನಿಮಹಾತ್ಮ ಸೇವಾ ಸಮಿತಿ: ಸಾಮೂಹಿಕ ಶ್ರೀ ಶನೀಶ್ವರ ಮಹಾಪೂಜೆ

ಶನಿದೇವರ ಸ್ವರ್ಣ ಭಾವಚಿತ್ರ ಪ್ರತಿಷ್ಠಾಪನೆ

Team Udayavani, Jun 5, 2019, 5:23 PM IST

0406MUM03

ಮುಂಬಯಿ: ಖಾರ್‌ ಪೂರ್ವದ ಸಾಯಿಬಾಬಾ ರಸ್ತೆಯ ಜವಾಹರ್‌ ನಗರದ ಪಹೇಲ್ವಾನ್‌ ಚಾಳ್‌ನಲ್ಲಿ ತುಳು ಕನ್ನಡಿಗರ ಆಡಳಿತದ‌ಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಸೇವೆಗಳಿಂದ ಕಳೆದ ಸುಮಾರು ಐದೂವರೆ ದಶಕಗಳಿಂದ ಮುನ್ನಡೆದು ಬಂದ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ ಶ್ರೀ ಶನಿದೇವರ ಪ್ರತಿಷ್ಠಾಪಿತ ಸಾಯಿಧಾಮ್‌ ಬಿಲ್ಡಿಂಗ್‌ನ ಮಂದಿರದಲ್ಲಿ ಶ್ರೀ ಶನೀಶ್ವರ ಜಯಂತಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜೂ. 3 ರಂದು ದಿನಪೂರ್ತಿ ನಡೆಯಿತು.

ಶನಿಜಯಂತಿಯ ಅಂಗವಾಗಿ ಜೂ. 3 ರಂದು ವಿದ್ವಾನ್‌ ಶ್ರೀನಿವಾಸ ಜೋಯಿಸ ಅವರ ಪೌರೋಹಿತ್ಯದಲ್ಲಿ ಗಣಹೋಮ, ಚಿನ್ನದ ಶನಿದೇವರ ಭಾವಚಿತ್ರ, ಜಗನ್ಮಾತೆ, ಗುರು ರಾಘವೇಂದ್ರ ಸ್ವಾಮಿ ಹಾಗೂ ಮಹಾಗಣಪತಿ ದೇವರ ಬೆಳ್ಳಿಯ ಭಾವಚಿತ್ರವನ್ನು ಪ್ರತಿಷ್ಠಾಪಿಸಲಾಯಿತು. ಮಂದಿರದ ಅರ್ಚಕ, ಸಮಿತಿಯ ಗೌರವ ಕೋಶಾಧಿಕಾರಿ ನಾಗೇಶ್‌ ಜಿ. ಸುವರ್ಣ ಅವರ ಪೌರೋಹಿತ್ಯದಲ್ಲಿ ಕಲಶ ಪ್ರತಿಷ್ಠೆ, ಬಿಂಬ ಪ್ರತಿಷ್ಠೆ, ಕಲಶ ಅಭಿಷೇಕ ಹಾಗೂ ಸಮಿತಿಯ ಉಪಾಧ್ಯಕ್ಷ ದೇವೇಂದ್ರ ವಿ. ಬಂಗೇರ ಮತ್ತು ತಾರಾ ದೇವೇಂದ್ರ ದಂಪತಿಯ ಯಜಮಾನಿಕೆಯಲ್ಲಿ ಕಲಶ ಪ್ರತಿಷ್ಠೆ ಮತ್ತು ಜತೆ ಕಾರ್ಯದರ್ಶಿ ರಮೇಶ್‌ ಪೂಜಾರಿ ಯಜಮಾನಿಕೆಯಲ್ಲಿ ಮಹಾಪೂಜೆ ನಡೆಯಿತು. ಅನಂತರ ಭಜನೆ, ಶ್ರೀ ಶನಿಗ್ರಂಥ ಪಾರಾಯಣ ಹಾಗೂ ರಾತ್ರಿ ಮಹಾ ಮಂಗಳಾರತಿ ನೆರವೇರಿಸಿ ತೀರ್ಥಪ್ರಸಾದ ವಿತರಿಸಲಾಯಿತು.

ಕಲಶ ಪ್ರತಿಷ್ಠೆ ಸಂದರ್ಭದಲ್ಲಿ ಬ್ಯಾಂಕ್‌ ಆಫ್‌ ಬರೋಡಾದ ನಿವೃತ್ತ ಪ್ರಧಾನ ಪ್ರಬಂಧಕ ಎನ್‌. ಜಿ. ಪೂಜಾರಿ, ಭೂಮಿಕಾ ಎನ್‌.ಪೂಜಾರಿ, ರೈಲ್ವೇ ಯಾತ್ರಿ ಸಂಘ ಬೊರಿವಿಲಿ ಮುಂಬಯಿ ಇದರ ಪ್ರೇಮನಾಥ್‌ ಪಿ. ಕೋಟ್ಯಾನ್‌, ರಜಿತ್‌ ಸುವರ್ಣ ಅವರು ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿದರು.

ಶ್ರೀ ಶನಿಮಹಾತ್ಮ ಸೇವಾ ಸಮಿತಿಯ ಅಧ್ಯಕ್ಷ ಶಂಕರ್‌ ಕೆ. ಸುವರ್ಣ, ಗೌರವ ಪ್ರಧಾನ ಕಾರ್ಯದರ್ಶಿ ಯೋಗೇಶ್‌ ಕೆ. ಹೆಜ್ಮಾಡಿ, ಕಾರ್ಯಾಧ್ಯಕ್ಷ ಆರ್‌. ಡಿ. ಕೋಟ್ಯಾನ್‌, ಉಪಾಧ್ಯಕ್ಷ ಜಯರಾಮ ಶೆಟ್ಟಿ, ಜತೆ ಕಾರ್ಯದರ್ಶಿಗಳಾದ ಹರೀಶ್‌ ಎನ್‌. ಪೂಜಾರಿ, ಹರೀಶ್‌ ಕೋಟ್ಯಾನ್‌ ಕಾಪು, ಜನಾರ್ದನ್‌ ಎನ್‌. ಸಾಲ್ಯಾನ್‌, ಜತೆ ಕೋಶಾಧಿಕಾರಿ ವಿನೋದ್‌ ವೈ. ಹೆಜ್ಮಾಡಿ, ಮಹಿಳಾ ಮಂಡಳಿ ಜೊತೆ ಕಾರ್ಯಾಧ್ಯಕ್ಷೆಯರಾದ ಕೇಸರಿ ಬಿ. ಅಮೀನ್‌, ಶೋಭಾ ವಿ. ಕೋಟ್ಯಾನ್‌, ಯುವಕ ವೃಂದದ ಕಾರ್ಯಾಧ್ಯಕ್ಷ ವಿಜಯ್‌ ಎನ್‌. ಸಾಲ್ಯಾನ್‌, ಭೋಜ ಸಿ. ಪೂಜಾರಿ, ಅರ್ಚಕರಾದ ಕೃಷ್ಣ ಕುಲಾಲ್‌, ಗಿರೀಶ್‌ ಪೂಜಾರಿ, ರವಿ ಹೆಜ್ಮಾಡಿ, ವಿಶ್ವಸ್ತ ಮಂಡಳಿ ಸದಸ್ಯರು, ಮಹಿಳಾ ಮಂಡಳಿ ಮತ್ತು ಯುವಕ ವೃಂದದ ಸೇವಾಕರ್ತರು, ಸದಸ್ಯರು, ಅಪಾರ ಸಂಖ್ಯೆಯ ಭಕ್ತರು ಪಾಲ್ಗೊಂಡು ಶ್ರೀ ಶನಿದೇವರ ಪ್ರಸಾದ ಸ್ವೀಕರಿಸಿದರು.

ಚಿತ್ರ-ವರದಿ: ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ

Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ

2(1)

AI ಆರೋಗ್ಯ ರಕ್ಷಣೆಯ ವ್ಯವಸ್ಥೆಯಲ್ಲಿ ಸ್ವೀಕಾರದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆಯೇ?

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.