ಕುಕ್ಕೆ: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಂಬಯಿ ಕನ್ನಡಿಗರು
Team Udayavani, Mar 4, 2018, 5:29 PM IST
ಮುಂಬಯಿ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ 22ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಕುಕ್ಕೆ ಸುಬ್ರಹ್ಮಣ್ಯದ ಕುಲ್ಕುಂದ ಶಿವರಾವ್ ಸಭಾಂಗಣದ ಕೊಳಂಬೆ ಪುಟ್ಟಣ್ಣ ಗೌಡ ವೇದಿಕೆಯಲ್ಲಿ ಮಾ. 5ರಿಂದ ಮಾ. 7 ರವರೆಗೆ ಜರಗಲಿವೆ.
ಕುಕ್ಕೆ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಕನ್ನಡ ತಾಯಿ ಭುವನೇಶ್ವರಿಯ ದಿಬ್ಬಣಕ್ಕೆ ಜಿಲ್ಲಾ ಪಂಚಾಯತ್ ಸದಸ್ಯೆ ಆಶಾ ತಿಮ್ಮಪ್ಪ ಗೌಡ ಇವರು ಚಾಲನೆ ನೀಡಲಿದ್ದಾರೆ. ಸಮ್ಮೇಳನವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್. ಜಿ. ಸಿದ್ಧರಾಮಯ್ಯನವರು ಉದ್ಘಾಟಿಸಲಿದ್ದಾರೆ. ಮೂರು ದಿನಗಳ ಸಮ್ಮೇಳನಕ್ಕೆ ಹಿರಿಯ ಸಾಹಿತಿ ಎ. ಪಿ. ಮಾಲತಿ ಇವರು ಅಧ್ಯಕ್ಷತೆ ವಹಿಸಲಿದ್ದಾರೆ.
ಸಮ್ಮೇಳನದಲ್ಲಿ ಸಾಹಿತ್ಯ, ಸಂಸ್ಕೃತಿ ವಿಕಾಸ, ತೌಳವ ಚಿಂತನೆ, ಮಹಿಳಾ ಗೋಷ್ಠಿ, ಯುವ ಕವಿಗೋಷ್ಠಿ, ಯಕ್ಷಗಾನ ತಾಳಮದ್ದಳೆ, ಸಂವಾದ, ಸಾಧಕರಿಗೆ ಸಮ್ಮಾನ, ಹೊರನಾಡಿನಲ್ಲಿ ಕನ್ನಡದ ಅನುಷ್ಠಾನ, ಬಹಿರಂಗ ಅಧಿವೇಶನ ಹಾಗೂ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದೆ.
ಸಮ್ಮೇಳನದಲ್ಲಿ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟÅ ಇದರ ಅಧ್ಯಕ್ಷ ಚಂದ್ರಶೇಖರ ಪಾಲೆತ್ತಾಡಿ ಇವರು ಹೊರನಾಡಿನಲ್ಲಿ ಕನ್ನಡ ಅನುಷ್ಠಾನ ಗೋಷ್ಠಿಯಲ್ಲಿ ವಿಚಾರ ಮಂಡಿಸಲಿದ್ದಾರೆ. ಮಹಾರಾಷ್ಟÅ ಕನ್ನಡಿಗ ಕಲಾವಿದರ ಪರಿಷತ್ತು ಅಧ್ಯಕ್ಷ, ರಂಗಕರ್ಮಿ, ಸಂಘಟಕ ಸುರೇಂದ್ರ ಕುಮಾರ್ ಹೆಗ್ಡೆ, ವಿರಾರ್ ಕರ್ನಾಟಕ ಸಂಘದ ಅಧ್ಯಕ್ಷ ವಿರಾರ್ ಶಂಕರ್ ಶೆಟ್ಟಿ ಇವರು ಗೋಷ್ಠಿಯಲ್ಲಿ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಾಧಕರಿಗೆ ಸಮ್ಮಾನ
ಸಾಧಕರಿಗೆ ಸಮ್ಮಾನ ಕಾರ್ಯಕ್ರಮದಲ್ಲಿ ಸಂಘಟಕ, ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಯೆಯ್ನಾಡಿ ಇವರು ಗೌರವ ಅತಿಥಿಯಾಗಿ ಪಾಲ್ಗೊಳ್ಳಲಿದ್ದು, ಹೊರನಾಡ ಸೇವೆಗಾಗಿ ಮುಂಬಯಿಯ ಪ್ರಸಿದ್ಧ ವೈದ್ಯ, ಬಿಎಸ್‌ಕೆಬಿ ಅಸೋಸಿಯೇಶನ್ ಅಧ್ಯಕ್ಷ ಡಾ| ಸುರೇಶ್ ರಾವ್, ಕನ್ನಡ ಕಲಾಕೇಂದ್ರ ಮುಂಬಯಿ ಅಧ್ಯಕ್ಷ ಬಿ. ಬಾಲಚಂದ್ರ ರಾವ್ ಇವರನ್ನು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಇವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.