ಕುಲಾಲ ಸಂಘ ಪಿಂಪ್ರಿ ಚಿಂಚ್ವಾಡ್‌ 7ನೇ ವಾರ್ಷಿಕೋತ್ಸವ ಸಮಾರಂಭ


Team Udayavani, Feb 7, 2018, 4:28 PM IST

0402mum03.jpg

ಪುಣೆ: ಕುಲಾಲ ಸಂಘ ಪಿಂಪ್ರಿ ಚಿಂಚಾÌಡ್‌ ಇದರ 7ನೇ ವಾರ್ಷಿಕೋತ್ಸವವು ಜ. 26ರಂದು ಪಿಂಪ್ರಿಯ ನೆಹರೂ ನಗರದ ಮಧುಸೂದನ ಸಭಾಭವನದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಿತು.

ಈ ಸಂದರ್ಭ ಸಂಘದ ಸ್ಥಾಪಕಾಧ್ಯಕ್ಷ ನ್ಯಾಯವಾದಿ ಅಪ್ಪು ಮೂಲ್ಯ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆಯಿತ್ತು ಮಾತನಾಡುತ್ತಾ ಪಿಂಪ್ರಿ ಚಿಂಚಾÌಡ್‌ ಪರಿಸರದಲ್ಲಿರುವ ಸಮಾಜ ಬಾಂಧವರೆಲ್ಲರನ್ನೂ ಒಂದೇ ಛತ್ರದಲ್ಲಿ ಸೇರಿಸಿ ಒಗ್ಗೂಡಿಸುವುದರ ಮೂಲಕ ನಮ್ಮ ತುಳು ಭಾಷೆ, ಸಾಂಸ್ಕೃತಿಕ ಪರಂಪರೆಗಳನ್ನು ಉಳಿಸುವಲ್ಲಿ ಸಂಘದ ಕಾರ್ಯವೈಖರಿ ಶ್ಲಾಘನೀಯವಾಗಿದೆ.  ಸಂಘಕ್ಕೊಂದು ಸ್ವಂತ ಕಚೇರಿಯ ಆವಶ್ಯಕತೆಯಿದ್ದು ಈ ಬಗ್ಗೆ ಚಿಂತಿಸಿ ಆದಷ್ಟು ಬೇಗ ಕಾರ್ಯಪ್ರವೃತ್ತರಾಗಬೇಕಿದೆ. ಸಂಘದ ಪ್ರಗತಿಯಲ್ಲಿ ಇದೊಂದು ಸ್ಫೂರ್ತಿದಾಯಕ ಹೆಜ್ಜೆಯಾಗಲಿದ್ದು ಮುಂದೆ ಸಮಾಜದ ಒಗ್ಗಟ್ಟು ಹಾಗೂ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಸಂಘದ ಸದಸ್ಯರೆಲ್ಲರೂ ಶ್ರಮಿಸಿ ಸಂಘವನ್ನು ಪ್ರಗತಿಪಥದಲ್ಲಿ ಕೊಂಡೊಯ್ಯಲು ನೆರವಾಗಬೇಕು. ನಮ್ಮ ಸಂಘವು ಇದೀಗ ನೋಂದಾಯಿತಗೊಂಡ ಸಂಸ್ಥೆಯಾಗಿದ್ದು, ಮುಂಬಯಿ, ಪುಣೆಯ ಸಂಘಟನೆಗಳ ಸಹಕಾರದೊಂದಿಗೆ ಮುಂದಡಿಯಿಟ್ಟು ಇನ್ನೂ ಹೆಚ್ಚಿನ ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸಮಾಜ ಬಾಂಧವರ ಆಶೋ ತ್ತರದಂತೆ ಕಾರ್ಯನಿರ್ವಹಿಸಬೇಕಾಗಿದೆ ಎಂದರು.

ಅತಿಥಿಗಳಾಗಿ ಉಪಸ್ಥಿತರಿದ್ದ ಪುಣೆ ತುಳುಕೂಟದ ಪಿಂಪ್ರಿ ಚಿಂಚಾÌಡ್‌ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಶ್ಯಾಮ್‌ ಸುವರ್ಣ ಮಾತನಾಡಿ ಸಂಘ ತನಗೇನು ಕೊಟ್ಟಿದೆ ಅನ್ನುವುದಕ್ಕಿಂದ ಸಂಘಕ್ಕಾಗಿ ತಾನೇನು ಮಾಡಿದೆ ಎನ್ನುವುದು ಮುಖ್ಯವಾಗುತ್ತದೆ. ಕುಲಾಲ ಸಮಾಜ ಬಾಂಧವರೆಲ್ಲರೂ ಒಗ್ಗಟ್ಟಿನಿಂದ ಸಂಘವನ್ನು ಬಲಿಪಡಿಸಬೇಕು ಎಂದರು.

ಅತಿಥಿ ನೂತನ್‌ ಸುವರ್ಣ ಮಾತನಾಡಿ ಸಂಘವು ಸ್ವಂತ ಕಚೇರಿಯನ್ನು ಹೊಂದಬೇಕಾಗಿದೆ. ಇದರೊಂದಿಗೆ ಮಹಿಳೆಯರು ಅರಸಿನ ಕುಂಕುಮದಂತಹ ಕಾರ್ಯಕ್ರಮ ವನ್ನು ಆಯೋಜಿಸಬೇಕು ಅಲ್ಲದೆ ಮಕ್ಕಳ ಆರೋಗ್ಯದ ಬಗ್ಗೆ ಗಮನಹರಿಸುವ ಅಗತ್ಯತೆಯಿದೆ ಎಂದರು.

ಸಂಘ ಬಲಪಡಿಸಲು ಕರೆ 
ಸಂಘದ ಅಧ್ಯಕ್ಷ ಸದಾನಂದ ಮೂಲ್ಯ ಮಾತನಾಡಿ, ಈ ವರ್ಷ ನಮ್ಮ ಸಂಘದ 6ನೇ ವಾರ್ಷಿಕೋತ್ಸವಕ್ಕೆ ಹೆಚ್ಚು ಸಮಾಜ ಬಾಂಧವರು ಆಗಮಿಸಿ ಸಹಕಾರ ನೀಡಿರುವುದಕ್ಕೆ ಸಂತೋಷವಾಗುತ್ತಿದೆ. ಮುಂದಿನ ವರ್ಷ ದೊಡ್ಡ ಸಭಾಂಗಣದಲ್ಲಿ ಕಾರ್ಯಕ್ರಮ ಏರ್ಪಡಿಸುವ ಅಗತ್ಯತೆಯಿದೆ. ಸಮಾಜ ಬಾಂಧವರು ಸಂಘದ ಚಟುವಟಿಕೆಗಳಲ್ಲಿ ಭಾಗವಹಿಸಿ ಸಂಘವನ್ನು ಬಲಪಡಿಸ ಬೇಕಾಗಿದೆ. ಸಂಘಕ್ಕೊಂದು ಕಚೇರಿ ಹೊಂದುವಲ್ಲಿ ಸಮಾಜ ಬಾಂಧವರ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು.

ಸಂಘದ ಉಪಾಧ್ಯಕ್ಷ ಸಂಜೀವ ಮೂಲ್ಯ ಮಾತನಾಡಿ ಸಂಘದ ಒಳಿತಿಗಾಗಿ ಸಮಾಜ ಬಾಂಧವರೆಲ್ಲರೂ ಸಹಕಾರ ನೀಡಬೇಕೆಂದರು.ಸಂಘದ ಪ್ರಧಾನ ಕಾರ್ಯದರ್ಶಿ ಜಯ ಮೂಲ್ಯ ಸಂಘದ ವಾರ್ಷಿಕ ಕಾರ್ಯಚಟುವಟಿಕೆಗಳ ವರದಿಯನ್ನು ಪ್ರಸ್ತುತಪಡಿಸಿದರು. ಸಂಘದ ಕೋಶಾಧಿಕಾರಿ ವಾರ್ಷಿಕ ಲೆಕ್ಕಪತ್ರಗಳನ್ನು ಮಂಡಿಸುತ್ತಾ ಸಂಘವನ್ನು  ನೂತನವಾಗಿ  ನೋಂದಾಯಿಸಿಕೊಂಡಿದ್ದಲ್ಲದೆ ಸಂಘದ ಕಚೇರಿಯನ್ನು ಖರೀದಿಸಲು ಧನ ಸಹಕಾರವಿತ್ತ ಸ್ಥಾಪಕಾಧ್ಯಕ್ಷ  ನ್ಯಾಯ ವಾದಿ ಅಪ್ಪು ಮೂಲ್ಯರನ್ನು ಅಭಿನಂದಿಸಿದರು.

ಸಂಘದ ಸದಸ್ಯರಾದ ನ್ಯಾಯವಾದಿ ಮೇಘನಾ ಮೂಲ್ಯ ನೂತನವಾಗಿ ನೋಂದಾಯಿತಗೊಂಡ ಸಂಘದ ಉದ್ದೇಶ ಹಾಗೂ ಕಾನೂನು ಸಲಹೆಗಳನ್ನು ನೀಡಿದರು.

ಆರಂಭದಲ್ಲಿ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಂಘದ ಸದಸ್ಯರು ಪ್ರಾರ್ಥಿಸಿದರು. ಶ್ಯಾಮ್‌ ಸುವರ್ಣ ಹಾಗೂ ನೂತನ್‌ ಸುವರ್ಣ ದಂಪತಿಯನ್ನು ಸತ್ಕರಿಸಲಾಯಿತು. ಕ್ರೀಡೋತ್ಸವದಲ್ಲಿ ಕಾರ್ಯದರ್ಶಿ ಜಯ ಮೂಲ್ಯ ಸ್ವಾಗತಿಸಿದರು. ಉಪಾಧ್ಯಕ್ಷ ರವಿ ಕೆ. ಮೂಲ್ಯ ವಂದಿಸಿದರು. ಮನೋರಂಜನೆಯ ಅಂಗವಾಗಿ ಸಂಘದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಭೋಜನದೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.  

ಚಿತ್ರ-ವರದಿ: ಕಿರಣ್‌ ಬಿ.ರೈ ಕರ್ನೂರು

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-putthige-2

State Formation: ಶ್ರೀ ಕೃಷ್ಣ ಬೃಂದಾವನ ಹೂಸ್ಟನ್ ಶಾಖೆಯಲ್ಲಿ ಸಂಸ್ಥಾಪನಾ ದಿನಾಚರಣೆ

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.