ಕುರ್ಲಾ ಬಂಟರ ಸಂಘ ಉನ್ನತ ಶಿಕ್ಷಣ ಕಾಲೇಜ್‌: ಕಂಪ್ಯೂಟರ್‌(ಐಟಿ) ತರಬೇತಿ


Team Udayavani, Jun 24, 2018, 5:24 PM IST

2306mum07a.jpg

ಮುಂಬಯಿ: ವೇದಾಂತ ಫೌಂಡೇಷನ್‌ ಮೆರಿನ್‌ಲೈನ್ಸ್‌ ಮುಂಬಯಿ, ರೋಟರಿ ಕ್ಲಬ್‌ ಪೊವಾಯಿ ಮುಂಬಯಿ, ಟಾಟಾ ಮೋಟಾರ್ ಲಿಮಿಟೆಡ್‌ ಡಿ. ಲಿಂಕ್‌ (ಇಂಡಿಯಾ) ಲಿಮಿಟೆಡ್‌ ಹಾಗೂ ಬಂಟರ ಸಂಘ ಮುಂಬಯಿ ಉನ್ನತ ಶಿಕ್ಷಣ ಯೋಜನಾ ಸಮಿತಿಯ ಸಹಭಾಗಿತ್ವದಲ್ಲಿ ಬಂಟರ ಸಂಘ ಶಶಿಮನ್‌ಮೋಹನ್‌ ಶೆಟ್ಟಿ ಉನ್ನತ ಶಿಕ್ಷಣ ಸಂಕೀರ್ಣದಲ್ಲಿರುವ ಅಣ್ಣಲೀಲಾ ವಾಣಿಜ್ಯ ಮತ್ತು ಅರ್ಥಶಾಸ್ತ್ರ ಕಾಲೇಜು ಹಾಗೂ ಶೋಭಾ ಜಯರಾಮ ಶೆಟ್ಟಿ ಬಿ. ಎಂ. ಎಸ್‌. ಕಾಲೇಜಿನ ವಿದ್ಯಾರ್ಥಿಗಳಿಗಾಗಿ ರಿಯಾಯಿತಿ ದರದಲ್ಲಿ ವೃತ್ತಿಪರ ಕಂಪ್ಯೂಟರ್‌ ತರಬೇತಿ (ಐಟಿ) ಕೇಂದ್ರವು ಜೂ. 21 ರಂದು ಉದ್ಘಾಟನೆಗೊಂಡಿತು.

ಈ ತರಬೇತಿ ಕೇಂದ್ರವನ್ನು ರೋಟರಿ ಕ್ಲಬ್‌ ಪೊವಾಯಿ ಮುಂಬಯಿ ಇದರ ಅಧ್ಯಕ್ಷೆ ಶ್ರೀಮತಿ ಅಮಿತಾ ವೋರ, ಮಿರೇಕಾಲ್‌ ಅಧ್ಯಕ್ಷ ಹನುಮಾನ್‌ ತ್ರಿಪಾಠಿ, ವೇದಾಂತ ಫೌಂಡೇಷನ್‌ ಶಿಕ್ಷಣ ವಿಭಾಗದ ಪ್ರಬಂಧಕ ಸಚಿನ್‌ ಜಗತಪ್‌ ರಿಬ್ಬನ್‌ ಕತ್ತರಿಸಿ ಮೂಲಕ ಉದ್ಘಾಟಿಸಿದರು.

ಬಂಟರ ಸಂಘದ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರ ಮಾರ್ಗದರ್ಶನದಲ್ಲಿ ಸಂಘದ ಉನ್ನತ ಶಿಕ್ಷಣ ಯೋಜನಾ ಸಮಿತಿಯ ಕಾರ್ಯಾಧ್ಯಕ್ಷ ನಗ್ರಿಗುತ್ತು ವಿವೇಕ್‌ ಶೆಟ್ಟಿ ಅವರ ನೇತೃತ್ವದಲ್ಲಿ ಉನ್ನತ ಶಿಕ್ಷಣ ಸಂಕೀರ್ಣದಲ್ಲಿರುವ ಕಾಲೇಜು ವಿದ್ಯಾರ್ಥಿಗಳಿಗಾಗಿ ಹಾಗೂ ಶಿಕ್ಷಕರಿಗಾಗಿ ವಿವಿಧ ರೀತಿಯ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸಲು ಉನ್ನತ ಶಿಕ್ಷಣ ಸಮಿತಿಯು ಶ್ರಮಿಸುತ್ತಿದೆ. ಕಾಲೇಜು ವಿದ್ಯಾರ್ಥಿಗಳಿಗಳು ಶಿಕ್ಷಣ ಮುಗಿಸಿದಾಕ್ಷಣ ಉದ್ಯೋಗಕ್ಕೆ ಅರ್ಹರಾಗುವಂತೆ ಮಾಡಲು ವೃತ್ತಿಪರ ಕಂಪ್ಯೂಟರ್‌ ಐಟಿ ತರಬೇತಿ ಆವಶ್ಯಕವಾಗಿದ್ದು, ವಿವಿಧ ಸಂಸ್ಥೆಗಳ ಸಹಭಾಗಿತ್ವದೊಂದಿಗೆ ಈ ಸೇವಾ ಸೌಲಭ್ಯವನ್ನು ನೀಡಲಾಗುತ್ತಿದೆ. ಇದರ ಸದುಪಯೋಗವನ್ನು ಕಾಲೇಜಿನ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ಬಂಟರ ಸಂಘ ಉನ್ನತ ಶಿಕ್ಷಣ ಸಮಿತಿಯ ಉಪಕಾರ್ಯಾಧ್ಯಕ್ಷ ಕಿಶೋರ್‌ ಕುಮಾರ್‌ ಕುತ್ಯಾರ್‌ ಅವರು ನುಡಿದರು.

ಉನ್ನತ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಭಾಸ್ಕರ್‌ ಶೆಟ್ಟಿ ಕಾರ್ನಾಡ್‌ ಮತ್ತು ಕೋಶಾಧಿಕಾರಿ ಸಿಎ ರಮೇಶ್‌ ಶೆಟ್ಟಿ ಅವರು ಮಾತನಾಡಿ, ವೃತ್ತಿಪರ ಕಂಪ್ಯೂಟರ್‌ ಐಟಿ ತರಬೇತಿಗೆ ಪ್ರೋತ್ಸಾಹ ನೀಡಿದ ವೇದಾಂತ ಫೌಂಡೇಷನ್‌, ರೋಟರಿ ಕ್ಲಬ್‌ ಪೊವಾಯಿ, ಟಾಟಾ ಮೋಟಾರ್, ಡಿ. ಲಿಂಕ್‌ ಲಿಮಿಟೆಡ್‌ ಸಂಸ್ಥೆಗಳಿಗೆ ಕೃತಜ್ಞತೆ ಸಲ್ಲಿಸಿದರು.

ರೋಟರಿ ಕ್ಲಬ್‌ ಪೊವಾಯಿ ಇದರ ಅಧ್ಯಕ್ಷೆ ಅಮಿತಾ ವೋರಾ ಮಾತನಾಡಿ, ಬಂಟರ ಸಂಘದ ಶಿಕ್ಷಣ ಸಂಸ್ಥೆಗಳಿಗೆ ರೋಟರಿ ಕ್ಲಬ್‌ ಸದಾ ಸಹಕಾರ ನೀಡಲು ಸಿದ್ಧವಾಗಿರುವುದಾಗಿ ಭರವಸೆ ನೀಡಿದರು. ಅಣ್ಣಲೀಲಾ ಕಾಲೇಜಿನ ಪ್ರಾಂಶುಪಾಲೆ ಡಾ| ಪದ್ಮಾ ದೇಶು¾ಖ್‌ ಸ್ವಾಗತಿಸಿದರು. ವೇದಾಂತ ಫೌಂಡೇಷನ್‌ ಪ್ರಾದೇಶಿಕ ಪ್ರಬಂಧಕ ಸಚಿನ್‌ ಜಗತಪ್‌ ಕಂಪ್ಯೂಟರ್‌ ಶಿಕ್ಷಣದ ಅಗತ್ಯತೆಯ ಬಗ್ಗೆ ವಿವರಿಸಿದರು. ಬಂಟರ ಸಂಘ ಉನ್ನತ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಭಾಸ್ಕರ ಶೆಟ್ಟಿ ಅವರು ವಂದಿಸಿದರು.

ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಮಿತಿಯ ಕೋಶಾಧಿಕಾರಿ ಸಿಎ ರಮೇಶ್‌ ಶೆಟ್ಟಿ, ಉಪ ಕಾರ್ಯಾಧ್ಯಕ್ಷೆ ಮಮತಾ ಶೆಟ್ಟಿ, ಅಣ್ಣಲೀಲಾ ಕಾಲೇಜಿನ ಪ್ರಾಂಶುಪಾಲೆ ಡಾ| ಪದ್ಮಾ ದೇಶ್‌ಮುಖ್‌, ಉನ್ನತ ಶಿಕ್ಷಣ ಸಂಸ್ಥೆಯ ಪ್ರಧಾನ ಆಡಳಿತಾಧಿಕಾರಿ ಪ್ರಕಾಶ್‌ ಮೋರೆ, ಆರತಿ ಶಶಿಕಿರಣ್‌ ಶೆಟ್ಟಿ ಜ್ಯೂನೀಯರ್‌ ಕಾಲೇಜಿನ ಉಪ ಪ್ರಾಂಶುಪಾಲೆ ಶೈಲಾ ಶೆಟ್ಟಿ, ಆರ್‌ಪಿಎಚ್‌ ಕಾಲೇಜಿನ ಪ್ರಾಂಶುಪಾಲೆ ಸಂಯೋಜಿತಾ ಮೊರಾರ್ಜಿ, ರೋಟರಿ ಜಿಲ್ಲಾ ಕಾರ್ಯದರ್ಶಿ ದೀಪಕ್‌ ಜಿಂದಾನಿ, ಸುಶೀಲ್‌ ವಾರಿಯರ್‌ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 ಚಿತ್ರ-ವರದಿ : ಪ್ರೇಮನಾಥ್‌ ಶೆಟ್ಟಿ ಮುಂಡ್ಕೂರು.

ಟಾಪ್ ನ್ಯೂಸ್

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Udupi: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

accident

Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ

Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.