“ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರಕಾರ ಕ್ರಮ ಕೈಗೊಳ್ಳಲಿ’
Team Udayavani, Mar 6, 2021, 7:27 PM IST
ಮುಂಬಯಿ: ಒಂದು ಲೀಟರ್ ಪೆಟ್ರೋಲ್ ಮೇಲಿನ ತೆರಿಗೆಗಳು ಅದರ ಮೂಲ ವೆಚ್ಚಕ್ಕಿಂತ ಹೆಚ್ಚಾಗಿದೆ ಎಂದು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ವಿಧಾನಸಭೆಯಲ್ಲಿ ಹೇಳಿದ್ದಾರೆ.
ಕಳೆದ ಕೆಲವು ತಿಂಗಳುಗಳಿಂದ ಅಡುಗೆ ಅನಿಲದ ಬೆಲೆಯೂ ಹೆಚ್ಚಾಗಿದ್ದು, ಕೇಂದ್ರವು ತತ್‌ಕ್ಷಣವೇ ಬೆಲೆಗಳನ್ನು ಕಡಿಮೆ ಮಾಡಲು ಮತ್ತು ಹಣದುಬ್ಬರದಿಂದ ಪರಿಹಾರ ಒದಗಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಪವಾರ್ ಆಗ್ರಹಿಸಿದ್ದಾರೆ. ಪೆಟ್ರೋಲ್‌ನ ಮೂಲ ವೆಚ್ಚ, ಅದರ ಸಂಸ್ಕರಣಾ ವೆಚ್ಚದ ಬಳಿಕ 32.82 ರೂ. ಗಳಾದರೆ, 32.90 ರೂ. ಗಳನ್ನು ಕೇಂದ್ರವು ವಿವಿಧ ತೆರಿಗೆಗಳ ಮೂಲಕ ವಿಧಿಸುತ್ತದೆ. ಈ ತೆರಿಗೆಗಳು ಮೂಲ ಬೆಲೆಗಿಂತ ಹೆಚ್ಚಾಗಿವೆ. ರಾಜ್ಯ ಸರಕಾರವೂ ಪೆಟ್ರೋಲ್‌ಗೆ ತೆರಿಗೆ ವಿಧಿಸಿದೆ. ನಮ್ಮ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ, ನಾವು ತೆರಿಗೆ ಹೆಚ್ಚಿಸುವ ಬಗ್ಗೆ ಯೋಚಿಸಿಲ್ಲ. ಹಿಂದಿನ ಸರಕಾರವು ವಿಧಿಸಿದ್ದನ್ನು ನಾವು ಮುಂದುವರಿಸಿದ್ದೇವೆ ಎಂದು ರಾಜ್ಯ ಹಣಕಾಸು ಸಚಿವ ಅಜಿತ್ ಪವಾರ್ ಹೇಳಿದ್ದಾರೆ.
ವಿಶೇಷವಾಗಿ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಕೇಂದ್ರವು ಹಣದುಬ್ಬರಕ್ಕೆ ತತ್‌ಕ್ಷಣ ಪರಿಹಾರ ಒದಗಿಸಬೇಕು. ಕೋವಿಡ್ ಕಾಲದಲ್ಲಿ ಜನರು ಬದುಕುವುದು ಕಷ್ಟಕರವಾಗಿದೆ. ಈ ರೀತಿಯಾಗಿ ಬೆಲೆಗಳು ಹೆಚ್ಚಾದರೆ ಜನರು ಸಹಾಯಕ್ಕಾಗಿ ಎಲ್ಲಿ ಹೋಗಬೇಕು ಎಂದು ಪವಾರ್ ಪ್ರಶ್ನಿಸಿದ್ದಾರೆ. ಡಾ| ಮನಮೋಹನ್ ಸಿಂಗ್ ಪ್ರಧಾನಿಯಾಗಿ¨ªಾಗ ಕಚ್ಚಾ ತೈಲ ಬೆಲೆ ಬ್ಯಾರೆಲ್‌ಗೆ 106.85 ರೂ.ಗಳಿದ್ದರೂ ಪೆಟ್ರೋಲ್‌ಗೆ 70 ರೂ. ಗಳಿತ್ತು. ಇಂದು ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 63 ರೂ. ಗಳಾದರೂ ಪೆಟ್ರೋಲ್ ಬೆಲೆ ಲೀಟರ್‌ಗೆ ಸುಮಾರು 100 ರೂ. ಗಳಿಗೆ ತಲುಪಿದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desiswara: ನ್ಯೂಯಾರ್ಕ್ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ
Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…
Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ
Kannada Alphanbets: “ಕ’ ಕಾರದಲ್ಲಿನ ವಿಶೇಷ: ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ
ನ.9: ವಿಶ್ವ ಕನ್ನಡ ಹಬ್ಬ: ಈ ಬಾರಿ ಸಿಂಗಾಪುರದಲ್ಲಿ ರಂಗೇರಲಿರುವ ಸಂಭ್ರಮ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.