“ಮಕ್ಕಳು ಹೆತ್ತವರಿಗೂ ಸಮಾಜಕ್ಕೂ ಹೆಸರು ತರಲಿ’ : ಐಕಳ ಹರೀಶ್ ಶೆಟ್ಟಿ
Team Udayavani, Jan 19, 2021, 2:31 PM IST
ಮುಂಬಯಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಕುಂದಾಪುರ ಬಂಟರ ಸಂಘದ ಸಭಾಭವನದಲ್ಲಿ ನಡೆದ
ಕಾರ್ಯಕ್ರಮದಲ್ಲಿ ಸಹಾಯಧನವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ವಿತರಿಸಿದರು.
ಇದೇ ಸಂದರ್ಭ ಐಕಳ ಹರೀಶ್ ಶೆಟ್ಟಿ ಅವರು ಮಾತನಾಡಿ, ನಮ್ಮ ದಾನಿಗಳು ನೀಡಿದ ಸಹಕಾರ ನಮಗೆ ನಮ್ಮ ಸಮಾಜದ ನೊಂದವರ ಬಗ್ಗೆ ಕಾಳಜಿ ವಹಿಸಲು ಸಾಧ್ಯವಾಯಿತು. ನಾವು ಸಮಾಜದಲ್ಲಿ ಒಳ್ಳೆ ಕೆಲಸ ಮಾಡಿದರೆ ಸಮಾಜ ನಮ್ಮನ್ನು ಗುರುತಿಸುತ್ತದೆ. ನಮ್ಮ ಮಕ್ಕಳು ಒಳ್ಳೆಯ ವಿದ್ಯಾಭ್ಯಾಸ ಮಾಡಿ ಹೆತ್ತವರಿಗೂ ಸಮಾಜಕ್ಕೂ ಹೆಸರು ತರಬೇಕು. ಸಮಾಜ ಕಲ್ಯಾಣ ಯೋಜನೆಯ ಹೊಸ ಮನೆ ನಿರ್ಮಾಣ ಯೋಜನೆಯ ಅಡಿಯಲ್ಲಿ ಶೇ. 80ರಷ್ಟು ಮನೆಗಳು ಸಂಪೂರ್ಣ ಗೊಂಡಿದ್ದು,
ಇನ್ನುಳಿದ ಮನೆಗಳನ್ನು ಅತೀ ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು. ಕಷ್ಟದಲ್ಲಿರು ವವರು ಚಿಂತಿಸುವ ಅಗತ್ಯವಿಲ್ಲ.
ನಿಮೆಲ್ಲರ ಕಷ್ಟದಲ್ಲಿ ನಿಮ್ಮ ಜತೆ ಒಕ್ಕೂಟ ಇದೆ ಎಂದರು. ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಮಾತನಾಡಿ, ಒಕ್ಕೂಟ ಈ ವರೆಗೆ 6 ಕೋ. ರೂ.ಗಳ ಸಹಾಯಧನ ವಿತರಣೆ ಮಾಡಿದೆ. ಮಕ್ಕಳು ಒಳ್ಳೆಯ ಗುಣ ನಡತೆಯಿಂದ ಉತ್ತಮ ಅಂಕ ಪಡೆದು ಕೀರ್ತಿ ತನ್ನಿ, ಒಕ್ಕೂಟದಿಂದ ನಿಮಗೆ ಸಹಕಾರ ನೀಡುತ್ತೇವೆ. ಮನೆ ಇಲ್ಲದವರಿಗೆ ಮನೆ ಕೊಡುವ ಕೆಲಸ ಒಕ್ಕೂಟದಿಂದ ನಡೆಯುತ್ತಿದೆ ಎಂದರು. ಒಕ್ಕೂಟದ ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ ಅವರು ಒಕ್ಕೂಟದ ಕಾರ್ಯಕ್ರಮಗಳ ವಿವರ ನೀಡಿ ಪ್ರಸ್ತಾವಿಸಿದರು.
ಇದನ್ನೂ ಓದಿ:ಭಾಯಂದರ್ ಶ್ರೀ ಅಯ್ಯಪ್ಪ ಆರಾಧನಾ ಭಕ್ತ ಮಂಡಲ : 15ನೇ ವಾರ್ಷಿಕ ಮಹಾಪೂಜೆ ಸಂಪನ್ನ
ಕುಂದಾಪುರ ಬಂಟರ ಸಂಘದ ಸಂಚಾಲಕ ಸುಧಾಕರ ಶೆಟ್ಟಿ ಅವರ್ಸೆ ಯುವ ಬಂಟರ ಸಂಘದ ಅಧ್ಯಕ್ಷ ಸುನಿಲ್ ಶೆಟ್ಟಿ ಅವರ
ಉಪಸ್ಥಿತಿಯಲ್ಲಿ ಸಹಾಯಧನವನ್ನು ವಿತರಣೆ ಮಾಡಿದರು. ಇದೇ ಸಂದರ್ಭದಲ್ಲಿ ಆರ್ಥಿಕವಾಗಿ ಹಿಂದುಳಿದ ಸಮಾಜದ ನೂರಾರು ಮಂದಿಗೆ ಆರ್ಥಿಕ ನೆರವು ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಟಿಟಿ ರೋಡ್‌ನಲ್ಲಿವೆ 4 ಬಾವಿ; ನೀರಿದೆ, ನಿರ್ವಹಣೆಯೇ ಇಲ್ಲ!
Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್ ಸಿಟಿʼ
Vijay Hazare Trophy; ಅಭಿನವ್ ಮನೋಹರ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.