ಮಕ್ಕಳು ಕನ್ನಡ ಕಲಿಕಾ ವರ್ಗದ ಪ್ರಯೋಜನ ಪಡೆಯಲಿ: ನಳಿನಾ

ಕರ್ನಾಟಕ ಸಂಘ ಖಾರ್‌ಘರ್‌ ವಾರ್ಷಿಕ ಮಹಾಸಭೆ ಮತ್ತು ಪ್ರತಿಭಾ ಪುರಸ್ಕಾರ

Team Udayavani, Aug 10, 2019, 1:29 PM IST

MUMBAI-TDY-1

ಮುಂಬಯಿ, ಆ. 9: ಖಾರ್‌ಘರ್‌ ಕರ್ನಾಟಕ ಸಂಘವು ಹದಿನೇಳು ವರ್ಷಗಳಲ್ಲಿ ಬೆಳೆದು ಬಂದ ರೀತಿ ಅನನ್ಯವಾಗಿದೆ. ಬೆರಳೆಣಿಕೆಯ ಕಾರ್ಯಕ್ರಮಗಳೊಂದಿಗೆ ಗಳಿಸಿದ ಸದಸ್ಯರ ಪ್ರೀತಿ ವಿಶ್ವಾಸಗಳು ಅಭಿನಂದನೀಯವಾಗಿದೆ ಎಂದು ಕರ್ನಾಟಕ ಸಂಘ ಖಾರ್‌ಘರ್‌ ಅಧ್ಯಕ್ಷೆ ಎಸ್‌. ನಳಿನಾ ಪ್ರಸಾದ್‌ ತಿಳಿಸಿದರು.

ಆ. 4ರಂದು ಖಾರ್‌ಘರ್‌ ಸೆಕ್ಟರ್‌ 11 ರಲ್ಲಿನ ಕೇಂದ್ರಿಯ ವಿಹಾರ್‌ ಹಾಲ್ನಲ್ಲಿ ನಡೆದ ಸಂಘದ 17 ನೇ ಸಂಸ್ಥಾಪನಾ ದಿನ ಹಾಗೂ ಸರ್ವ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಘದ ನಾಡು-ನುಡಿಯನ್ನು ಬಿಂಬಿಸುವ ಕಾರ್ಯಕ್ರಮಗಳಲ್ಲಿ ಕನ್ನಡಿಗರು ಪಾಲ್ಗೊಂಡುಸಹಕರಿಸಬೇಕು. ನಾಡಿನ ಸಂಸ್ಕೃತಿ, ಸಂಸ್ಕಾರ,ಆಚಾರ-ವಿಚಾರಗಳ ಬಗ್ಗೆ ಯುವಪೀಳಿಗೆಗೆ ಅರಿವು ಮೂಡಿಸುವ ಕಾರ್ಯದಲ್ಲಿ ತೊಡಗಿದಾಗ ಸಂಘದ ಧ್ಯೇಯೋದ್ದೇಶಗಳು ಸಾರ್ಥಕವಾಗುತ್ತದೆ. ಸಂಘದ ಹೊಸ ಯೋಜನೆಗಳ ಬಗ್ಗೆ, ಅದರಲ್ಲೂ ವಿಶೇಷವಾಗಿ ಸದಸ್ಯರ ಮಕ್ಕಳಿಗಾಗಿ ಕನ್ನಡ ಕಲಿಕಾ ಶಿಕ್ಷಣ ತರಗತಿಗಳನ್ನು ಪ್ರಸ್ತುತ ವರ್ಷದಿಂದ ಆರಂಭಿಸಲಾಗುವುದು. ಇದರ ಪ್ರಯೋಜನವನ್ನು ಕನ್ನಡಿಗರ ಮಕ್ಕಳು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಶ್ರೀ ಲಲಿತಾ ಭಜನಾ ಮಂಡಳಿಯ ವತಿಯಿಂದ ಕಲಾ ಭಾಗವತ್‌ ಅವರ ನೇತೃತ್ವದಲ್ಲಿ ಭಜನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ನಂತರ ಮಹಿಳೆಯರಿಗಾಗಿ ಶ್ರಾವಣ ಮಾಸದ ವಿಶೇಷವಾಗಿ ಅರಸಿನ ಕುಂಕುಮ ಕಾರ್ಯಕ್ರಮ ನಡೆಯಿತು. ಮಹಿಳೆಯರು ಪರಸ್ಪರ ಅರಸಿದ ಕುಂಕುಮವನ್ನು ಹಚ್ಚಿಕೊಂಡು ಶುಭಹಾರೈಸಿಕೊಂಡರು. ಆನಂತರ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಸಂಘದ ಕಾರ್ಯದರ್ಶಿ ಚಿತ್ರಾ ರಾವ್‌ ಸ್ವಾಗತಿಸಿ, ಸಂಘದ ವಾರ್ಷಿಕ ವರದಿಯನ್ನು ವಾಚಿಸಿದರು.

ವಾರ್ಷಿಕ ಆದಾಯ, ಖರ್ಚು ವೆಚ್ಚಗಳ ವಿವರವನ್ನು ಕೋಶಾಧಿಕಾರಿ ಎಸ್‌. ಸಿ. ಹರಕಂಗಿ ಅವರು ಸಭೆಗೆ ತಿಳಿಸಿದರು. ಸಂಘದಲ್ಲಿ ವರ್ಷ ಪೂರ್ತಿ ನಡೆಯುವ ಕಾರ್ಯಕ್ರಮಗಳ ಬಗ್ಗೆ ಸದಸ್ಯರು ತಮ್ಮ ಅಭಿಪ್ರಾಯ ಹಂಚಿಕೊಂಡು. ಸಂಘದ ಅಭಿವೃದ್ಧಿಯ ಬಗ್ಗೆ ಸದಸ್ಯ ಬಾಂಧವರು ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷೆ ಮೈಥಿಲಿ ಪ್ರಸಾದ್‌ ಭಟ್ ಅವರು ಉಪಸ್ಥಿತರಿದ್ದರು. ಸಭೆಯ ನಂತರ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಹತ್ತು ಹಾಗೂ ಹನ್ನೆರಡನೆಯ ತರಗತಿಯಲ್ಲಿ ಶೇ. 90 ಕ್ಕಿಂತ ಅಧಿಕ ಅಂಕಗಳನ್ನು ಪಡೆದು ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ನಂತರ ನೆಡದ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಘದ ಸದಸ್ಯೆ, ಯೋಗ ಶಿಕ್ಷಕಿ ಬಿ. ಎಸ್‌. ಸ್ವರ್ಣಾಂಬ ಅವರು ಯೋಗದಿಂದ ನಿರೋಗ ಕುರಿತಾಗಿ ಸದಸ್ಯರಿಗೆ ಉಪಯುಕ್ತ ಮಾಹಿತಿ ನೀಡಿದರು.

ಜತೆ ಕಾರ್ಯದರ್ಶಿ ಡಾ| ಜಿ. ಪಿ. ವಿಮಲಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕಾರಿ ಸಮಿತಿಯ ಸದಸ್ಯೆ ಆಶಾ ಪೂಜಾರಿ ವಂದನೆಗೈದರು. ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಡಾ| ಎಂ. ಎಸ್‌. ನಾಗೇಶ್‌, ನಾಗರಾಜ ಗಾಣಿಗ, ಸುಮತಿ ಅರುಣ್‌, ಜ್ಯೋತಿ ದೇವರು ಸಹಕರಿಸಿದರು. ಕಾರ್ಯಕ್ರಮದ ನಂತರ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. ಸದಸ್ಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.