ಸಂಘಟಿತರಾಗಿ ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸೋಣ: ಹರೀಶ್‌ ಜಿ. ಅಮೀನ್‌


Team Udayavani, Mar 31, 2021, 11:17 AM IST

Let us be unselfish and serve society

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಜೋಗೇಶ್ವರಿ ಸ್ಥಳೀಯ ಸಮಿತಿಯ ನೂತನ ಕಚೇರಿಯು ಜೋಗೇಶ್ವರಿ ಪೂರ್ವ ರೈಲ್ವೇ ನಿಲ್ದಾಣ ಸಮೀಪದ ಪ್ರೇಮ್‌ಸನ್‌ ಇಂಡಸ್ಟ್ರಿಯಲ್‌ ಎಸ್ಟೇಟ್‌ನಲ್ಲಿ ಖರೀದಿಸಿದ ಸ್ವಂತ ಜಾಗದಲ್ಲಿ ಮಾ. 28ರಂದು ಉದ್ಘಾಟನೆಗೊಂಡಿತು.

ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಅಧ್ಯಕ್ಷ ಹರೀಶ್‌ ಜಿ. ಅಮೀನ್‌ ನೂತನ ಕಚೇರಿಯನ್ನು ರಿಬ್ಬನ್‌ ಕತ್ತರಿಸಿ ಉದ್ಘಾಟಿಸಿ, ಸಮಾಜ ಬಾಂಧವರ ಕಷ್ಟ, ಸಮಸ್ಯೆಗಳಿಗೆ ಸ್ಪಂದಿಸಲು ಜೋಗೇಶ್ವರಿ ಸ್ಥಳೀಯ ಕಚೇರಿಯ ಸ್ವಂತ ಕಟ್ಟಡದ ಬಹಳ ಅಗತ್ಯವಿತ್ತು. ಈ ಬಗ್ಗೆ ಕಳೆದ ಕೆಲವು ವರ್ಷಗಳಿಂದ ಸತತವಾಗಿ ಪ್ರಯತ್ನಿಸಲಾಗುತ್ತಿತ್ತು. ಎಲ್ಲರೂ ಒಟ್ಟಾಗಿ ಶ್ರಮಿಸಿದ ಫಲವಾಗಿ ಇಂದು ಒಳ್ಳೆಯ ಕಟ್ಟಡವನ್ನು ಜೋಗೇಶ್ವರಿ ಸ್ಥಳೀಯ ಕಚೇರಿಯು ಹೊಂದಲು ಸಾಧ್ಯವಾಗಿದೆ. ನಾರಾಯಣಗುರುಗಳ ತತ್ತÌ-ಸಂದೇಶದಂತೆ ಸಮಾಜದ ಜನರ ಆಶೋತ್ತರಗಳಿಗೆ ನಾವು ಸ್ಪಂದಿಸಬೇಕು. ನಿಮ್ಮೊಂದಿಗೆ ಕೇಂದ್ರ ಕಚೇರಿ ಸದಾ ಸಹಕಾರಕ್ಕೆ ನಿಲ್ಲುತ್ತದೆ. ನಾವೆಲ್ಲರೂ ಸಂಘಟಿತರಾಗಿ ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸೋಣ ಎಂದರು.

ಮುಖ್ಯ ಅತಿಥಿಯಾಗಿದ್ದ ಬಂಟರ ಸಂಘ ಮುಂಬಯಿ ಅಧ್ಯಕ್ಷ ಚಂದ್ರಹಾಸ್‌ ಕೆ. ಶೆಟ್ಟಿ ಅವರು ದೀಪ ಪ್ರಜ್ವಲಿಸಿ ಸಮಾರಂಭವನ್ನು ಉದ್ಘಾಟಿಸಿ, ಬಂಟರ ಸಂಘದ ಸಮನ್ವಯ ಸಮಿತಿಯ ಜವಾಬ್ದಾರಿ ನನ್ನ ಪಾಲಿಗೆ ಬಂದಿದ್ದಾಗ ದಿ| ಜಯ ಸಿ. ಸುವರ್ಣ ಅವರಲ್ಲಿ ಮಾರ್ಗದರ್ಶನ ಪಡೆದಿದ್ದೆ. ಸಮನ್ವಯ ಸಮಿತಿ, ಸ್ಥಳೀಯ ಕಚೇರಿಗಳ ಉದ್ದೇಶ ಹಾಗೂ ಅದರಿಂದ ಸಮಾಜ ಬಾಂಧವರಿಗೆ ಆಗುವ ಪ್ರಯೋಜನದ ಬಗ್ಗೆ ಜಯ ಸಿ. ಸುವರ್ಣ ಅವರು ನನಗೆ ಮನದಟ್ಟು ಮಾಡಿದ್ದರು. ಅವರ ಪ್ರೇರಣೆ, ಮಾರ್ಗದರ್ಶನ ಪಡೆದು ಸಮಾಜವನ್ನು ಒಗ್ಗೂಡಿಸಲು ಪ್ರಯತ್ನಶೀಲನಾಗಿದ್ದೆ. ಇಂದು ಬಂಟ ಸಮಾಜದ ಮಹಾನ್‌ ಸಂಸ್ಥೆಯ ಅಧ್ಯಕ್ಷನಾದ ನನಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ದೀಪ ಪ್ರಜ್ವಲಿಸುವ ಅವಕಾಶ ಸಿಕ್ಕಿರುವುದು ತುಂಬಾ ಸಂತೋಷ ತಂದಿದೆ. ನಾವೆಲ್ಲರೂ ಒಂದಾಗಿ ಸಮಾಜವನ್ನು ಉನ್ನತಿಯತ್ತ ಕೊಂಡೊಯ್ಯೋಣ. ಆರ್ಥಿಕ ವಾಗಿ ಹಿಂದುಳಿದವರ ಬಗ್ಗೆ ಕಾಳಜಿ ವಹಿಸೋಣ. ಸಮಾಜದ ಏಳ್ಗೆ ನಮ್ಮೆಲ್ಲರ ಮುಖ್ಯ ಧ್ಯೇಯವಾಗಿರಬೇಕು ಎಂದು ತಿಳಿಸಿ ಶುಭ ಹಾರೈಸಿದರು.

ಜೋಗೇಶ್ವರಿ ಸ್ಥಳೀಯ ಕಚೇರಿಯ ಕಾರ್ಯಾಧ್ಯಕ್ಷ ನಾರಾಯಣ ಕೆ. ಪೂಜಾರಿ ಮಾತನಾಡಿ, 2018-2021ರ ನಡುವೆ ಕೇಂದ್ರ ಕಾರ್ಯಕಾರಿ ಸಮಿತಿ ನಮಗೆ ಸ್ವಂತ ಕಚೇರಿ ಮಾಡಲು ಜವಾಬ್ದಾರಿ ನೀಡಿತ್ತು. ದಿ| ಜಯ ಸುವರ್ಣ ಅವರು ಆಗಾಗ ಸ್ವಂತ ಸ್ಥಳೀಯ ಕಚೇರಿ ಬಗ್ಗೆ ವಿಚಾರಿಸುತ್ತಿದ್ದರು. ಇಂದು ಮಾರ್ಗದರ್ಶಕರಾದ ಜಯ ಸುವರ್ಣರು ನಮ್ಮೊಂದಿಗಿಲ್ಲದಿದ್ದರೂ ಅವರಿಗೆ ನೀಡಿದ ಭರವಸೆಯನ್ನು ನಾವು ಈಡೇರಿಸಿದ್ದೇವೆ. ನಮ್ಮ ಸಮಿತಿಯ ಎಲ್ಲರ ಶ್ರಮ, ಸಹಕಾರ ತೃಪ್ತಿ ನೀಡಿದೆ ಎಂದರು.

ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ್‌ ಕೆ. ಶೆಟ್ಟಿ ಹಾಗೂ ಸಹಕರಿಸಿದ ದಾನಿಗಳನ್ನು ಬಿಲ್ಲವರ ಅಸೋಸಿಯೇಶನ್‌ ಅಧ್ಯಕ್ಷ ಹರೀಶ್‌ ಜಿ. ಅಮೀನ್‌ ಹಾಗೂ ಜೋಗೇಶ್ವರಿ ಸ್ಥಳೀಯ ಕಚೇರಿಯ ಪದಾಧಿಕಾರಿಗಳು ಸಮ್ಮಾನಿಸಿದರು. ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಉಪಾ ಧ್ಯಕ್ಷ ಶಂಕರ ಡಿ. ಪೂಜಾರಿ, ಶ್ರೀನಿವಾಸ ಕರ್ಕೇರ, ಕೇಂದ್ರ ಕಚೇರಿಯ ಪ್ರತಿನಿಧಿ ಹರೀಶ್‌ ಸಾಲ್ಯಾನ್‌, ಜತೆ ಕಾರ್ಯದರ್ಶಿಗಳಾದ ಕೇಶವ ಕೋಟ್ಯಾನ್‌, ಅಕ್ಷಯ್‌ ಪೂಜಾರಿ, ಗೌರವ ಪ್ರಧಾನ ಕೋಶಾಧಿಕಾರಿ ರಾಜೇಶ್‌ ಜೆ. ಬಂಗೇರ, ಜತೆ ಕೋಶಾಧಿಕಾರಿಗಳಾದ ಶಿವರಾಮ ಪೂಜಾರಿ, ಮೋಹನ್‌ ಡಿ. ಪೂಜಾರಿ, ಸದಾಶಿವ ಕರ್ಕೇರ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಂತಿ ಉಳ್ಳಾಲ್‌, ಯುವಾಭ್ಯುದಯ ಸಮಿತಿಯ ಕಾರ್ಯಾಧ್ಯಕ್ಷ ನಾಗೇಶ್‌ ಎಂ. ಕೋಟ್ಯಾನ್‌, ಸದಸ್ಯರಾದ ಕೇಶವ ಪೂಜಾರಿ, ನಿಲೇಶ್‌ ಪೂಜಾರಿ ಪಲಿಮಾರು, ಶಕುಂತಳಾ ಕೋಟ್ಯಾನ್‌, ಬಬಿತಾ ಕೋಟ್ಯಾನ್‌, ಜೋಗೇಶ್ವರಿ ಸ್ಥಳೀಯ ಕಚೇರಿಯ ಉಪ ಕಾರ್ಯಾಧ್ಯಕ್ಷೆ ಸುಶೀಲಾ ಪೂಜಾರಿ, ಕೋಶಾಧಿಕಾರಿ ಪ್ರಶಾಂತ್‌ ಸುವರ್ಣ, ಮಾಜಿ ಕಾರ್ಯಾಧ್ಯಕ್ಷ ಮುದ್ದು ಸಿ. ಸುವರ್ಣ, ಕೇಂದ್ರ ಕಚೇರಿಯ ಮಾಜಿ ಗೌರವ ಪ್ರಧಾನ ಕಾರ್ಯದರ್ಶಿ ಧರ್ಮಪಾಲ್‌ ಅಂಚನ್‌ ಉಪಸ್ಥಿತರಿದ್ದರು.

ಸಮಾಜ ಸೇವಕರಾದ ಶಂಕರ್‌ ಸುವರ್ಣ ಖಾರ್‌, ಗಣೇಶ್‌ ಪೂಜಾರಿ, ದಾನಿಗಳಾದ ಸಂತೋಷ್‌, ಗೋಪಾಲ್‌ ಪೂಜಾರಿ, ಸಿಎ ಗಣೇಶ್‌ ಪೂಜಾರಿ, ಉದ್ಯಮಿ ಉಮೇಶ್‌ ಕಾಪು, ಜಗದಂಬಾ ಕಾಲಭೈರವ ದೇವಸ್ಥಾನ ಜೋಗೇಶ್ವರಿ, ಶ್ರೀ ಶನಿಮಹಾತ್ಮ ಪೂಜಾ ಸಮಿತಿ, ಮೇಘವಾಡಿ ಮಹಾಕಾಳಿ ಮಂದಿರ ಇದರ ಪದಾಧಿಕಾರಿಗಳು, ಸಮಾಜ ಬಾಂಧವರು ಉಪಸ್ಥಿತರಿದ್ದರು.
ಧಾರ್ಮಿಕ ಕಾರ್ಯಕ್ರಮವಾಗಿ ಉಳ್ಳೂರು ಶೇಖರ್‌ ಶಾಂತಿ ಅವರ ಪೌರೋಹಿತ್ಯದಲ್ಲಿ ಮಾ. 27ರಂದು ವಾಸ್ತುಪೂಜೆ, ವಾಸ್ತುಹೋಮ ಹಾಗೂ ಮಾ. 28ರಂದು ಮುಂಜಾನೆ 6ರಿಂದ ಗಣಪತಿ ಹೋಮ, ಗುರುಪೂಜೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆ, ಬೆಳಗ್ಗೆ 9.30ರಿಂದ ಮಂಗಳಾರತಿ ಜರಗಿತು. ಸ್ಥಳೀಯ ಕಚೇರಿಯ ಕಾರ್ಯಾಧ್ಯಕ್ಷ ನಾರಾಯಣ ಕೆ. ಪೂಜಾರಿ ದಂಪತಿ ಪೂಜಾ ವ್ರತದಲ್ಲಿ ಸಹಕರಿಸಿದರು. ಕೇಂದ್ರ ಕಚೇರಿಯ ಗೌರವ ಪ್ರಧಾನ ಕಾರ್ಯದರ್ಶಿ ಧನಂಜಯ ಶಾಂತಿ ಕಾರ್ಯಕ್ರಮ ನಿರ್ವಹಿಸಿದರು. ಜೋಗೇಶ್ವರಿ ಸ್ಥಳೀಯ ಸಮಿತಿಯ ಕಾರ್ಯದರ್ಶಿ ಚಂದ್ರೇಶ್‌ ಸುವರ್ಣ ವಂದಿಸಿದರು. ಕೊರೊನಾ ಮಾರ್ಗಸೂಚಿಗಳಿಗೆ ಅನುಗುಣವಾಗಿ ಕಾರ್ಯಕ್ರಮ ನಡೆಯಿತು.

ಟಾಪ್ ನ್ಯೂಸ್

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

INDvAUS: Is captain Rohit Sharma standing against to Shami?; Aussie tour difficult for pacer!

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?;‌ ವೇಗಿಗೆ ಆಸೀಸ್‌ ಪ್ರವಾಸ ಕಷ್ಟ!

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.