ಚೆಂಬೂರು ಕರ್ನಾಟಕ ಸಂಘದ “ಸಾಹಿತ್ಯ ಸಹವಾಸ ಸಂಭ್ರಮ’
Team Udayavani, Jan 6, 2018, 4:46 PM IST
ಮುಂಬಯಿ: ಚೆಂಬೂರು ಕರ್ನಾಟಕ ಸಂಘ ಇದರ ವಾರ್ಷಿಕ “ಸಾಹಿತ್ಯ ಸಹವಾಸ-2017-2018′ ಸಮಾರಂಭವು ಚೆಂಬೂರು ಘಾಟ್ಲಾದಲ್ಲಿರುವ ಚೆಂಬೂರು ಕರ್ನಾಟಕ ಶಿಕ್ಷಣ ಸಂಸ್ಥೆಯ ಸಂಕುಲದಲ್ಲಿ ಡಿ. 23ರಂದು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಮುಂಬಯಿ ಕ್ರೈಂ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಕೆ. ಎಂ. ಎಂ. ಪ್ರಸನ್ನ ಐಪಿಎಸ್ ಅವರು ಸಮಾರಂಭವನ್ನು ದೀಪಪ್ರಜ್ವಲಿಸಿ ಉದ್ಘಾಟಿಸಿ ಶುಭಹಾರೈಸಿದರು. ಸಂಘದ ಅಧ್ಯಕ್ಷ ನ್ಯಾಯವಾದಿ ಎಚ್. ಕೆ. ಸುಧಾಕರ ಅರಾಟೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಗಣ್ಯರು ಹಾಗೂ ಸಂಸ್ಥೆಯ ಪದಾಧಿಕಾರಿಗಳಾದ ಉಪಾಧ್ಯಕ್ಷ ಪ್ರಭಾಕರ ಬಿ. ಬೋಳಾರ್, ಗೌರವ ಪ್ರಧಾನ ಕಾರ್ಯದರ್ಶಿ ರಂಜನ್‌ಕುಮಾರ್ ಆರ್. ಅಮೀನ್, ಗೌರವ ಕೋಶಾಧಿಕಾರಿ ಟಿ. ಆರ್. ಶೆಟ್ಟಿ ಮತ್ತು ಮಾಜಿ ಅಧ್ಯಕ್ಷ ಜಯ ಎನ್. ಶೆಟ್ಟಿ ಅವರು ಉಪಸ್ಥಿತರಿದ್ದು ಸಂಘದ ವಾರ್ಷಿಕ ಪ್ರತಿಷ್ಠಿತ “ರಾಷ್ಟ್ರೀಯ ಕನ್ನಡರತ್ನ ಪ್ರಶಸ್ತಿ-2017’ನ್ನು “ಅಕ್ಷರ ಸಂತ ಅಕ್ಕರದ ಅವಧೂತ’ ಹರೇಕಲ ಹಾಜಬ್ಬ, “ದಿ| ವೈ. ಜಿ. ಶೆಟ್ಟಿ ಶ್ರೇಷ್ಠ ಶಿಕ್ಷಕ ಪ್ರಶಸ್ತಿಯನ್ನು ನಿವೃತ್ತ ಶಿಕ್ಷಕಿ ಲೀಲಾವತಿ ಕೆ. ಶೆಟ್ಟಿ, “ಸುಬ್ಬಯ್ಯ ಶೆಟ್ಟಿ ದತ್ತಿ’ ಗೌರವ ಪುರಸ್ಕಾರವನ್ನು ಹಿರಿಯ ರಂಗ ನಟ, ನಿರ್ದೇಶಕ ಉಮೇಶ್ ಎನ್. ಶೆಟ್ಟಿ ಹಾಗೂ “ಅರಾಟೆ ನಾಗಮ್ಮ ಶೇಷಪ್ಪ ಪೂಜಾರಿ ಸ್ಮಾರಕ ಪ್ರಶಸ್ತಿ’ಯನ್ನು ಹಿರಿಯ ಸಾಹಿತಿ ಡಾ| ಸುನೀತಾ ಎಂ. ಶೆಟ್ಟಿ ಅವರಿಗೆ ಪ್ರದಾನಿಸಿ ಗೌರವಿಸಿ ಶುಭಹಾರೈಸಿದರು.
ವೇದಿಕೆಯಲ್ಲಿ ದಕ್ಷಿಣ ಕನ್ನಡ ಹಿರಿಯ ಪತ್ರಕರ್ತ ಗುರುವಪ್ಪ ಎನ್. ಟಿ. ಬಾಳೆಪುಣಿ, ಸಂಘದ ಜೊತೆ ಕಾರ್ಯದರ್ಶಿ ದೇವದಾಸ್ ಕೆ. ಶೆಟ್ಟಿಗಾರ್, ಜೊತೆ ಕೋಶಾಧಿಕಾರಿ ಸುಂದರ್ ಎನ್. ಕೋಟ್ಯಾನ್, ಕಾರ್ಯಕಾರಿ ಸಮಿತಿಯ ಸದಸ್ಯರಾದ ಗುಣಾಕರ್ ಎಚ್. ಹೆಗ್ಡೆ, ಯೋಗೇಶ್ ವಿ. ಗುಜರನ್, ಮಧುಕರ್ ಜಿ. ಬೈಲೂರು, ಮೋಹನ್ ಎಸ್. ಕಾಂಚನ್, ಚಂದ್ರಶೇಖರ್ ಎ. ಅಂಚನ್, ಅಶೋಕ್ ಸಾಲ್ಯಾನ್, ಜಯ ಎಂ. ಶೆಟ್ಟಿ, ಸುಧೀರ್ ಪುತ್ರನ್, ಸಂಜೀವ ಎಸ್. ಶೆಟ್ಟಿ, ಮಾಜಿ ಅಧ್ಯಕ್ಷರುಗಳಾದ ಜಯ ಎನ್. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಶಿಕ್ಷಣಾಭಿಮಾನಿಗಳು, ಸಂಸ್ಕೃತಿ ಪ್ರಿಯರು, ಕಲಾಸಕ್ತರು, ಸಂಘದ ವಿವಿಧ ಶಿಕ್ಷಣ ಸಂಸ್ಥೆಗಳ ಶಿಕ್ಷಕರು, ಶಿಕ್ಷಕೇತರ ಸಿಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಭರತ್ ಶೆಟ್ಟಿ ಪ್ರಾರ್ಥನೆಗೈದರು. ಗೌರಿ ಜಗ್ತಾಪ್ ಸಾಂಸ್ಕೃತಿಕ ಕಾರ್ಯಕ್ರಮ ನಿರ್ವಹಿಸಿದರು. ಸಾಂಸ್ಕೃತಿಕ ಉಪ ಸಮಿತಿಯ ಕಾರ್ಯದರ್ಶಿ ದಯಾಸಾಗರ್ ಚೌಟ ಸ್ವಾಗತಿಸಿ ಪುರಸ್ಕೃತರನ್ನು ಪರಿಚಯಿಸಿ ಕಾರ್ಯಕ್ರಮ ನಿರೂಪಿಸಿದರು. ರಂಜನ್‌ಕುಮಾರ್ ಆರ್. ಅಮೀನ್ ವಂದಿಸಿದರು. ಸಂಘದ ಚೆಂಬೂರು ಕರ್ನಾಟಕ ಪೂರ್ವ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಮತ್ತು ಕಿರಿಯ ಮಹಾ ವಿದ್ಯಾಲಯ ಮತ್ತು ಕಾನೂನು ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ವಿನೋದಾವಳಿಗಳು ಪ್ರದರ್ಶನಗೊಂಡವು.
ಚಿತ್ರ-ವರದಿ:ರೋನ್ಸ್ ಬಂಟ್ವಾಳ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
Train; ಗೋಮಟೇಶ್ವರ ಎಕ್ಸ್‌ಪ್ರೆಸ್ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.