ಶ್ರೀ ಆದಿಶಕ್ತಿ ಕನ್ನಡ ಶಾಲೆಯಲ್ಲಿ ಮಹಾರಾಷ್ಟ್ರ ದಿನಾಚರಣೆ
Team Udayavani, May 7, 2019, 12:46 PM IST
ಥಾಣೆ:ಶ್ರೀ ಆದಿಶಕ್ತಿ ಕನ್ನಡ ಸಂಘ ಸಂಚಾಲಿತ ಶ್ರೀ ಆದಿಶಕ್ತಿ ಕನ್ನಡ ಶಾಲೆಯಲ್ಲಿ ಮಹಾರಾಷ್ಟ್ರ ದಿನಾಚರಣೆಯು ಮೇ 1ರಂದು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಶಾಲಾ ಸಭಾಂಗಣದಲ್ಲಿ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀ ಆದಿಶಕ್ತಿ ಕನ್ನಡ ಸಂಘ ಮತ್ತು ರಾತ್ರಿ ಶಾಲೆಗಳ ಅಧ್ಯಕ್ಷರಾದ ಭಾಸ್ಕರ್ ಎಂ. ಶೆಟ್ಟಿ ಅವರು ಮಾತನಾಡಿ, ಮಹಾರಾಷ್ಟÅದ ಏಳ್ಗೆಗಾಗಿ ಹುತಾತ್ಮರಾದ ಛತ್ರಪತಿ ಶಿವಾಜಿ ಮಹಾರಾಜ್, ಗೋಪಾಲ್‌ಕೃಷ್ಣ ಗೋಖಲೆ ಹಾಗೂ ಲೋಕಮಾನ್ಯ ತಿಲಕರಂತಹ ಮಹಾನೀಯ ರನ್ನು ಸ್ಮರಿಸಿದರು. ಈ ನಾಡು ನುಡಿಯ ಕುರಿತು ವಿದ್ಯಾರ್ಥಿಗಳಿಗೆ ಬಾಲ್ಯದಲ್ಲಿಯೇ ಅಭಿಮಾನವನ್ನು ಬೆಳೆಸಬೇಕು. ನಮ್ಮೆಲ್ಲರ ಕರ್ಮ ಭೂಮಿಯಾದ ಮಹಾರಾಷ್ಟ್ರವನ್ನು ನಾವು ಎಂದೂ ಮರೆಯಬಾರದು. ಈ ಮಣ್ಣಿನ ಋಣವನ್ನು ತೀರಿಸಲು ನಾವು ಯಾವಾಗಲೂ ಸಿದ್ಧರಾಗಿರಬೇಕು. ಮಹಾರಾಷ್ಟ್ರ ದಿನ ಮತ್ತು ಕಾರ್ಮಿಕ ದಿನದ ಮಹತ್ವವನ್ನು ಹೇಳಿ ಮಹಾ ರಾಷ್ಟ್ರ ದಿನದ ಬಗ್ಗೆ ಎಲ್ಲರಿಗೂ ಶುಭ ಹಾರೈಸಿದರು.
ವೇದಿಕೆಯಲ್ಲಿ ಸಂಘದ ಕಾರ್ಯದರ್ಶಿ ವಾದಿರಾಜ ಶೆಟ್ಟಿ, ಕೋಶಾಧಿಕಾರಿ ಮನೋಹರ ಅಂಚನ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಪುಷ್ಪಾ ಕುಂಬಳೆ ಮೊದಲಾದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಚಾಲನೆಗೊಂಡಿತು. ಮಾಧ್ಯಮಿಕ ವಿಭಾಗದ ಮುಖ್ಯ ಶಿಕ್ಷಕಿ ವಿಮಲಾ ಕರ್ಕೇರ ಸ್ವಾಗತಿಸಿದರು.
ಮಹಾರಾಷ್ಟ್ರ ದಿನ ಮತ್ತು ಕಾರ್ಮಿಕರ ದಿನಾಚರಣೆಯ ಕುರಿತು
ಶಾಲಾ ವಿದ್ಯಾರ್ಥಿಗಳಾದ ರಾಜು ಬಜಂತ್ರಿ ಮತ್ತು ರಾಹುಲ್ ರಾಠೊಡ್ ಮಾತನಾಡಿದರು. ಶಿಲ್ಪಾ ಹತ್ತರಕಿ ಹಾಗೂ ರಾಹುಲ್ ರಾಠೊಡ್ ಮಹಾರಾಷ್ಟ್ರ ಗೀತೆಯನ್ನು ಹಾಡಿದರು. ಮಾಧ್ಯಮಿಕ ವಿಭಾಗದ ಶಾಲಾ ಶಿಕ್ಷಕ ವೆಂಕಟರಮಣ ಶೆಣೈ ಅವರು ಕಾರ್ಯಕ್ರಮ ನಿರ್ವಹಿಸಿದರು. ಸಹಶಿಕ್ಷಕ ಸಂತೋಷ್ ದೊಡ್ಡಮನಿ ಅವರು ವಂದಿಸಿದರು. ವಿದ್ಯಾರ್ಥಿ ಗಳಿಗೆ ಸಿಹಿ-ತಿಂಡಿಯನ್ನು ವಿತರಿಸಲಾಯಿತು. ಶ್ರೀ ಆದಿಶಕ್ತಿ ಕನ್ನಡ ಸಂಘದ ಪದಾಧಿಕಾರಿಗಳು, ಸದಸ್ಯರು ವಿದ್ಯಾರ್ಥಿಗಳಿಗೆ ಪಾಲಕ- ಪೋಷಕರು, ಶಿಕ್ಷಕವೃಂದದವರು, ಶಿಕ್ಷಕೇತರ ಸಿಬಂದಿ ಅಧಿಕ ಸಂಖ್ಯೆ ಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಹೊಸ ಸೇರ್ಪಡೆ
Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.