ಬಂಟರ ಭವನ ಆವರಣದ ಮಹಾವಿಷ್ಣು ದೇವಸ್ಥಾನ :ಜಾತ್ರೆ

Team Udayavani, Mar 16, 2018, 4:23 PM IST

1403mum02c.jpg

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಆವರಣದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ದೇವರ ಜಾತ್ರಾ ಮಹೋತ್ಸವವು ಮಾ. 10 ರಂದು ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿಗಳ ಮಾರ್ಗದರ್ಶನದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ, ಸಾಮಾಜಿಕ  ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಜರಗಿತು.

ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ, ದೇವಸ್ಥಾನದ ಜ್ಞಾನಮಂದಿರ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರನಾಥ ಎಂ. ಭಂಡಾರಿ ಇವರ ನೇತೃತ್ವದಲ್ಲಿ ಮಂದಿರದ ಪ್ರಧಾನ ಅರ್ಚಕ ವಿದ್ವಾನ್‌ ಅರವಿಂದ ಬನ್ನಿಂತಾಯ ಇವರಿಂದ ಪೂಜೆ-ಪುನಸ್ಕಾರಗಳು ನಡೆಯಿತು.

ಧಾರ್ಮಿಕ ಕಾರ್ಯಕ್ರಮವಾಗಿ ಮಾ. 9 ರಂದು ಸಂಜೆ 6 ರಿಂದ ದೇವತಾ  ಪ್ರಾರ್ಥನೆ, ತೋರಣ ಮುಹೂರ್ತ, ಪುಣ್ಯಾಹ ವಾಚನ, ವಾಸ್ತು ಹೋಮ, ವಾಸ್ತುಪೂಜೆ, ರಾತ್ರಿಪೂಜೆ ನೆರವೇರಿತು. ಮಾ. 10 ರಂದು ಬೆಳಗ್ಗೆ 9 ರಿಂದ ಗಣಹೋಮ, ಪಂಚ ವಿಶಂತಿ ಕಲಶಾಭಿಷೇಕ, ಆಶ್ಲೇಷ ಬಲಿ, ಪ್ರಸನ್ನ ಪೂಜೆ, ಮಧ್ಯಾಹ್ನ 1 ರಿಂದ ಅಪರಾಹ್ನ  2 ರವರೆಗೆ ಅನ್ನ ಸಂತರ್ಪಣೆ ನಡೆಯಿತು.

ಸಮಾಜ ಬಾಂಧವರು ಸೇರಿದಂತೆ ಭಕ್ತಾದಿಗಳು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡು ಅನ್ನಪ್ರಸಾದ ಸ್ವೀಕರಿಸಿದರು.

ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮದ ಮೆರುಗು
 ಅಪರಾಹ್ನ 4 ರಿಂದ ಬಂಟರ ಸಂಘ ಮಹಿಳಾ ವಿಭಾಗದ ವತಿಯಿಂದ ಭಜನೆ, ಸಂಜೆ 6 ರಿಂದ ದುರ್ಗಾಪೂಜೆ, ರಂಗಪೂಜೆ, ದರ್ಶನ ಬಲಿ, ಉತ್ಸವ  ಹಾಗೂ ಪ್ರಸಾದ ವಿತರಣೆ ಜರಗಿತು. ಮಾ. 11 ರಂದು ಬೆಳಗ್ಗೆ 8 ರಿಂದ ಸಂಪ್ರೋಕ್ಷಣೆ, ಮಂತ್ರಾಕ್ಷತೆ ಪೂಜೆಯೊಂದಿಗೆ ಜಾತ್ರಾ ಮಹೋತ್ಸವ ಮುಕ್ತಾಯಗೊಂಡಿತು.

ಬಂಟರ ಸಂಘದ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ, ಜ್ಞಾನ ಮಂದಿರ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರನಾಥ್‌ ಎಂ. ಭಂಡಾರಿ, ಸಂಘದ ಉಪಾಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರವೀಣ್‌ ಭೋಜ ಶೆಟ್ಟಿ, ಜತೆ ಕಾರ್ಯದರ್ಶಿ ಮಹೇಶ್‌ ಎಸ್‌. ಶೆಟ್ಟಿ, ಜೊತೆ ಕೋಶಾಧಿಕಾರಿ ಗುಣಪಾಲ್‌ ಶೆಟ್ಟಿ ಐಕಳ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ್‌ ಹೆಗ್ಡೆ, ಯುವ ವಿಭಾಗದ ಕಾರ್ಯಾಧ್ಯಕ್ಷ ಶರತ್‌ ವಿ. ಶೆಟ್ಟಿ ಹಾಗೂ ಜ್ಞಾನ ಮಂದಿರ ಸಮಿತಿಯ ಸದಸ್ಯರು, ಸಂಘದ ಪದಾಧಿಕಾರಿಗಳು, ಮಹಿಳಾ ವಿಭಾಗ, ಯುವ ವಿಭಾಗದ ಪದಾಧಿಕಾರಿಗಳು, ವಿವಿಧ ಪ್ರಾದೇಶಿಕ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು, ಉದ್ಯಮಿಗಳು, ಸಮಾಜ ಸೇವಕರು, ವಿವಿಧ ಕ್ಷೇತ್ರಗಳ ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-putthige-2

State Formation: ಶ್ರೀ ಕೃಷ್ಣ ಬೃಂದಾವನ ಹೂಸ್ಟನ್ ಶಾಖೆಯಲ್ಲಿ ಸಂಸ್ಥಾಪನಾ ದಿನಾಚರಣೆ

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.