ಮಲಾಡ್ ಇರಾನಿ ಕಾಲನಿ: ಶನಿಜಯಂತಿ ಆಚರಣೆ
Team Udayavani, Jun 6, 2019, 4:56 PM IST
ಮುಂಬಯಿ: ಮಲಾಡ್ ಪೂರ್ವದ ಇರಾನಿ ಕಾಲನಿಯ ಶ್ರೀ ಶನಿಮಹಾತ್ಮ ಪೂಜಾ ಸಮಿತಿಯ ವತಿಯಿಂದ ಶ್ರೀ ಶನಿಜಯಂತಿ ಆಚರಣೆಯು ಜೂ. 3 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು.
ವೇದಮೂರ್ತಿ ಕೆ. ಗೋವಿಂದ ಮೂರ್ತಿ ಭಟ್ ಇವರ ಮಾರ್ಗದರ್ಶನದಲ್ಲಿ ಧಾರ್ಮಿಕ ಕಾರ್ಯಕ್ರಮ ವಾಗಿ ಬೆಳಗ್ಗೆ 7ರಿಂದ ಗಣಹೋಮ, ಪಂಚಾಮೃತ ಅಭಿಷೇಕ, ನವಕ ಕಲಶ ಅಭಿಷೇಕ ಜರಗಿತು. ಬಳಿಕ ಸಾಮೂಹಿಕ ಶನಿಶಾಂತಿ ಹೋಮ ನೆರವೇರಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಮಸ್ತ ಭಕ್ತಾದಿಗಳು ಹೋಮಕುಂಡಕ್ಕೆ ತಿಲ, ಎಳ್ಳೆಣ್ಣೆ ಸುರಿಯುವ ಮೂಲಕ ಶನಿಜಯಂತಿಯನ್ನು ಆಚರಿಸಿದರು.
ಮಧ್ಯಾಹ್ನ 12ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಸಂಜೆ 4ರಿಂದ ಕಲಶ ಮುಹೂರ್ತ, ಶನಿ ಗ್ರಂಥ ಪಾರಾಯಣ, ಸಮಿತಿಯ ಸದಸ್ಯರಿಂದ ಭಜನೆ ಹಾಗೂ ರಾತ್ರಿ 8.30ರಿಂದ ಮಂಗಳಾರತಿ, ಪ್ರಸಾದ ವಿತರಣೆಯನ್ನು ಆಯೋಜಿಸಲಾಗಿತ್ತು. ಸುಮಾರು 63 ವರ್ಷಗಳ ಹಿಂದೆ ಸಮಾನ ಮನಸ್ಕ ಆಧ್ಯಾತ್ಮಿಕ ಚಿಂತಕರಿಂದ ಭಜನೆಯ ಮೂಲಕ ಪ್ರಾರಂಭಗೊಂಡ ಮಲಾಡ್ ಪೂರ್ವದ ಇರಾನಿ ಕಾಲನಿಯಲ್ಲಿ ಸ್ಥಾಪನೆಗೊಂಡ ಪೂಜಾ ಸಮಿತಿಯು ಇದೀಗ ನಗರದಲ್ಲಿ ಆರಾಧನಾ ಮಂದಿರವಾಗಿ ಪ್ರಸಿದ್ಧಿ ಪಡೆದಿದೆ.
1963ರಲ್ಲಿ ಪೂಜಾ ಕೊಠಡಿಯನ್ನು ಖರೀದಿಸಿ ಅಲ್ಲಿಂದ ನಿರಂತರವಾಗಿ ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸುತ್ತಾ ಬಂದಿದ್ದು, ದಿನೇ ದಿನೇ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ 1965 ರಲ್ಲಿ ಶ್ರೀ ಶನಿದೇವರ ರಜತ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು.
2005ರಲ್ಲಿ ಸುವರ್ಣ ಮಹೋತ್ಸವವನ್ನು ಆಚರಿಸಿದ ಸಮಿತಿಯು ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನೆರವೇರಿ
ಸಿತು. ಜತೆಗೆ ಸಾಮಾಜಿಕ, ವೈದ್ಯಕೀಯ, ಶೈಕ್ಷಣಿಕ ಸಹಾಯ, ಪ್ರತಿಭಾ ಪುರಸ್ಕಾರಗಳನ್ನು ನೀಡಿ ವಿದ್ಯಾರ್ಥಿಗಳಿಗೆ ಸಹಕರಿಸುತ್ತಿದೆ. ವಾರ್ಷಿಕ ಹಬ್ಬ ಹರಿದಿನಗಳನ್ನು ಆಚರಿಸುವುದರ ಜತೆಗೆ ರಾಷ್ಟ್ರೀಯ ಹಬ್ಬಗಳನ್ನು ಆಚರಿಸುವುದು ಈ ಸಮಿತಿಯ ವಾಡಿಕೆ. ಸಾಂಸ್ಕೃತಿಕವಾಗಿ ಕರಾವಳಿಯ ಸಮಗ್ರ ಕಲೆ ಯಕ್ಷಗಾನಕ್ಕೆ ಸದಾ ಪ್ರೋತ್ಸಾಹ ನೀಡುತ್ತಾ, ಸಮಾಜಪರ ಕಾರ್ಯಕ್ರಮಗಳೊಂದಿಗೆ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.
ಭವಿಷ್ಯದಲ್ಲಿ ಜೀರ್ಣೋದ್ಧಾರದ ಆಶಯವನ್ನು ಸಮಿತಿಯು ಹೊಂದಿದ್ದು, ಇಂದಿನ ಧಾರ್ಮಿಕ ಕಾರ್ಯಕ್ರಮವನ್ನು ಯಶಸ್ವಿಯಾಗಿ ಮುನ್ನಡೆಸುವಲ್ಲಿ ಸಮಿತಿಯ ಅಧ್ಯಕ್ಷ ಬಿ. ದಿವಾಕರ ಡಿ. ಶೆಟ್ಟಿ, ಕಾರ್ಯದರ್ಶಿ
ಗಳಾದ ಎಚ್. ಎಸ್. ಕರ್ಕೇರ, ಎಂ. ಎನ್. ಸುವರ್ಣ, ಗೌರವ ಕೋಶಾಧಿಕಾರಿಗಳಾದ ಎಂ. ಜಿ. ಬಂಗೇರ, ಕೆ. ಎನ್. ಸಾಲ್ಯಾನ್, ಸಮಿತಿಯ ಸದಸ್ಯ
ರಾದ ಎಸ್. ಪಿ. ದೇವಾಡಿಗ, ಎಸ್. ಯು. ಬಂಗೇರ, ಕೆ. ಎನ್. ಸಾಲ್ಯಾನ್, ಎಸ್. ಎ. ಸಾಲ್ಯಾನ್, ಎಂ. ಎನ್.
ಕೋಟ್ಯಾನ್, ಪಿ. ಆರ್. ಸಾಲ್ಯಾನ್, ಬಿ. ಎಚ್. ಹೆಜ್ಮಾಡಿ, ಜಯಾ ಎಂ. ಬಂಗೇರ, ಅತುಲ್ ಓಜಾ, ಅರ್ಚಕರಾದ ಸುಧಾಕರ ಎಂ. ಶೆಟ್ಟಿ, ಭುವಾಜಿ ಯು. ಎಸ್. ಬಂಗೇರ ಅವರು ಸಹಕರಿಸಿದರು.
ಚಿತ್ರ-ವರದಿ: ರಮೇಶ್ ಉದ್ಯಾವರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.