ಸಂಘದ ಗತವೈಭವ ಮತ್ತೆ ಮರುಕಳಿಸಲು ಸದಸ್ಯರು ಕೈಜೋಡಿಸಿ: ಅಡೊಕೇಟ್‌ ಜಗದೀಶ್‌ ಹೆಗ್ಡೆ

ಮಲಾಡ್‌ ಕನ್ನಡ ಸಂಘದ ನೂತನ ಕಾರ್ಯಕಾರಿ ಸಮಿತಿಯ ಸಾಮಾನ್ಯ ಸಭೆ

Team Udayavani, Aug 17, 2021, 1:29 PM IST

ಸಂಘದ ಗತವೈಭವ ಮತ್ತೆ ಮರುಕಳಿಸಲು ಸದಸ್ಯರು ಕೈಜೋಡಿಸಿ: ಅಡೊಕೇಟ್‌ ಜಗದೀಶ್‌ ಹೆಗ್ಡೆ

ಮಲಾಡ್‌: ಕ್ರಿಯಾಶೀಲ ಹಾಗೂ ಸೃಜನಶೀಲ ವ್ಯಕ್ತಿತ್ವದ ಅಧ್ಯಕ್ಷ ಹರೀಶ್‌ ಎನ್‌. ಶೆಟ್ಟಿಯವರ ಸುದೀರ್ಘ‌ ಅಧ್ಯಕ್ಷತೆಯಲ್ಲಿ ವಿಶಾಲ ಮಲಾಡ್‌ ಪ್ರದೇಶದಲ್ಲಿ ಸಾಂಸ್ಕೃತಿಕ ರಾಯಭಾರಿಯಾಗಿ ಕಾರ್ಯವೆಸಗುತ್ತಿದ್ದ ಮಲಾಡ್‌ ಕನ್ನಡ ಸಂಘದ ಕಾರ್ಯಕ್ರಮಗಳ ಗತವೈಭವವನ್ನು ಮರು ಅನುಷ್ಠಾನಗೊಳಿಸುವ ಶತಪ್ರಯತ್ನಕ್ಕೆ ಸದಸ್ಯರೆಲ್ಲರು ಮತ್ತೂಮ್ಮೆ ನಿಸ್ವಾರ್ಥ ಸೇವೆಯಿಂದ ಕೈಜೋಡಿಸಬೇಕು.

ಉಪನಗರದಲ್ಲಿ ಅತೀ ಹೆಚ್ಚು ಕನ್ನಡ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿರುವ ಈ ಸಂಸ್ಥೆಯ ಸಾಂಸ್ಕೃತಿಕ, ಸಾಮಾಜಿಕ ವೈಭವವನ್ನು ಮರು ಸ್ಥಾಪಿಸಿ ಪರಿಸರದ ಕನ್ನಡಿಗರಿಗೆ ಮತ್ತೊಮ್ಮೆ ವೈವಿಧ್ಯ ಕಾರ್ಯಕ್ರಮಗಳನ್ನು ನೀಡುವ ಸಂಸ್ಥೆಯನ್ನಾಗಿ ಬೆಳೆಸಬೇಕು ಎಂದು ಮಲಾಡ್‌ ಕನ್ನಡ ಸಂಘದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನ್ಯಾಯವಾದಿ ಜಗದೀಶ್‌ ಹೆಗ್ಡೆ ತಿಳಿಸಿದರು.

ಆ. 8ರಂದು ಮಲಾಡ್‌ ಕನ್ನಡ ಸಂಘದ ಯುನಿಟಿ ಅಪಾರ್ಟ್‌ಮೆಂಟ್‌ನಲ್ಲಿರುವ ಮಲಾಡ್‌ ಕನ್ನಡ ಸಂಘದ ಕಚೇರಿಯಲ್ಲಿ ಆಯೋಜಿಸಿದ್ದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಘ ಯಾವತ್ತೂ ಏಕವ್ಯಕ್ತಿಯಿಂದ ನಡೆಯಲು ಸಾಧ್ಯವಿಲ್ಲ. ಇಲ್ಲಿ ನಿಸ್ವಾರ್ಥ ಸಾಂಘಿಕತೆ ಮನೋಭಾವ ಇರಬೇಕು. ಬದಲಾಗುತ್ತಿರುವ ಕಾಲ ಘಟ್ಟದಲ್ಲಿ ಸಂಘ ದಲ್ಲಿ ಕೆಲವೊಂದು ಬದಲಾವಣೆಗಳು ಅನಿವಾರ್ಯವಾಗಿವೆ. ದೊಡ್ಡ ಯೋಜನೆಯ ಕಾರ್ಯ ಕ್ರಮಗಳನ್ನು ನಡೆಸಲು ಅಸಾಧ್ಯವಾದ ಇಂದಿನ ಪರಿಸ್ಥಿತಿಯಲ್ಲಿ ಸಣ್ಣ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಲಾಡ್‌ ಪರಿಸರದಲ್ಲಿ ಮತ್ತೊಮ್ಮೆ ಮಲಾಡ್‌ ಕನ್ನಡ ಸಂಘವನ್ನು ತುಳು-ಕನ್ನಡಿಗರ ಆಕರ್ಷಣೆಯ ವೇದಿಕೆಯನ್ನಾಗಿ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ.

ಇದನ್ನೂ ಓದಿ:ಮನೆಯಲ್ಲೇ ನಕಲಿ ನೋಟು ಮುದ್ರಿಸಿ ಚಲಾಯಿಸುತ್ತಿದ್ದ ಭೂಪ !

ಪ್ರಸ್ತುತ ಕೋವಿಡ್‌ ಸಮಯದಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಕಾರ್ಯಕ್ರಮ ನಡೆಸುವ ಜವಾಬ್ದಾರಿಯಿದೆ. ಆ ಮೂಲಕ ನಾವು ಸಾಂಘಿಕವಾಗಿ ಜವಾಬ್ದಾರಿಯುತವಾಗಿ ಮುಂದುವರಿಯ ಬೇಕಾಗಿದೆ. ಸದಸ್ಯರೆಲ್ಲರೂ ಸಾಮೂಹಿಕವಾಗಿ ಅಥವಾ ವೈಯಕ್ತಿಕವಾಗಿ ಸಲಹೆ ನೀಡಿ ಹರೀಶಣ್ಣನ ಸೇವೆಗಿಂತ ಹೆಚ್ಚಿನ ಮಟ್ಟದಲ್ಲಿ ಸಂಘವನ್ನು ಬೆಳೆಸುವ ಉದ್ದೇಶ ಹೊಂದುವ ಎಂದು ತಿಳಿಸಿ, ಕಾನೂನು ಸಲಹೆಗಾರನಾಗಿ ಸಂಘದ ಸದಸ್ಯರಿಗೆ ಯಾವುದೇ ಸಂದರ್ಭದಲ್ಲಿ ಧರ್ಮಾರ್ಥವಾಗಿ ಕಾನೂನು ಸಲಹೆ ನೀಡಲು ಸದಾ ಸಿದ್ಧ ಎಂದು ಹೇಳಿದರು .

ಗೌರವ ಕಾರ್ಯದರ್ಶಿ ಶಂಕರ್‌ ಡಿ. ಪೂಜಾರಿ ಮಾತನಾಡಿ, ಸುಮಾರು ಇಪ್ಪತ್ತು ವರ್ಷಗಳ ಹಿಂದೆ ಮಾಲ್ವಾಣಿ ಪರಿಸರದಲ್ಲಿ ಬೆಳೆದ ಈ ಸಂಸ್ಥೆಗೆ
ಕೋವಿಡ್‌ ಮಹಾಮಾರಿಯಿಂದ ಸ್ಥಗಿತಗೊಂಡಿದ್ದ ಕಾರ್ಯಕ್ರಮಗಳಿಗೆ ಮತ್ತೆ ಕಾಯಕಲ್ಪ ದೊರೆಯ  ಬೇಕಾಗಿದೆ. ಆ ನಿಟ್ಟಿನಲ್ಲಿ ನಾವೆಲ್ಲ ಒಗ್ಗಟ್ಟಾಗಿ ಮತ್ತೆ ಕಾರ್ಯೋನ್ಮುಖರಾಗಬೇಕು. ಮಲಾಡ್‌ ಪರಿಸರದಲ್ಲಿ ವೈವಿಧ್ಯ ಕಾರ್ಯಕ್ರಮಗಳನ್ನು ನೀಡುತ್ತಾ ಹೆಸರು ವಾಸಿ ಯಾದ ಸಂಸ್ಥೆಗೆ ನಾವೆಲ್ಲ ಹಿಂದಿನಂತೆ ನಿಸ್ವಾರ್ಥ ಸೇವೆಯಿಂದ ಸೇವೆ ಸಲ್ಲಿಸಬೇಕಾಗಿದೆ. ಪರಿಸರದಲ್ಲಿ ಮಲಾಡ್‌ ಕನ್ನಡ ಸಂಘದ ಹೆಸರನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ಸಾಂಘಿಕ ಚಿಂತನೆ ನಮ್ಮಲ್ಲಿ ಬೆಳೆಯಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಹಿರಿಯ ಸದಸ್ಯರಾದ ಬಾಬು ಶೆಟ್ಟಿ, ಸಾಧು ಡಿ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಸಂತೋಷ್‌ ಪೂಜಾರಿ, ಮಾಜಿ ಯುವ ವಿಭಾಗದ ಕಾರ್ಯಾಧ್ಯಕ್ಷ ಸೂರಪ್ಪ ಕುಂದರ್‌ ಅವರು ಸಂಘದ ಮುಂದಿನ ಕಾರ್ಯಯೋಜನೆಯ ಬಗ್ಗೆ ಸಲಹೆ-ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಮಾಸಿಕ ಲೆಕ್ಕಪತ್ರ, ವರದಿ ಮಂಡಿಸಲಾಯಿತು. ಸಂಘದ ಮುಖಾಂತರ ಶೀಘ್ರದಲ್ಲಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ
ಸಭೆಯಲ್ಲಿ ಸುದೀರ್ಘ‌ವಾಗಿ ಚರ್ಚಿಸಲಾಯಿತು. ಗೌರವ ಕೋಶಾಧಿಕಾರಿ ಪ್ರಕಾಶ್‌ ಎಸ್‌. ಶೆಟ್ಟಿ, ಜತೆ ಕಾರ್ಯದರ್ಶಿ ಅನಿಲ್‌ ಎಸ್‌ ಪೂಜಾರಿ, ಜತೆ ಕೋಶಾಧಿಕಾರಿ ಶಂಕರ್‌ ಆರ್‌. ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗದ ಕಾರ್ಯದರ್ಶಿ ಶಾಂಭವಿ ಬಿ. ಶೆಟ್ಟಿ, ಯುವ ವಿಭಾಗದ ಕಾರ್ಯದರ್ಶಿ ಸುಂದರ ಪೂಜಾರಿ, ಉಪಸಮಿತಿಯ ಸದಸ್ಯರು ಸಲಹೆ-ಸೂಚನೆಗಳನ್ನು ನೀಡಿದರು.

ಟಾಪ್ ನ್ಯೂಸ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.