ಮಲಾಡ್ ಕನ್ನಡ ಸಂಘ: ಒಳಾಂಗಣ ಕೇರಂ,ಚೆಸ್ ಪಂದ್ಯಾಟ
Team Udayavani, Feb 1, 2018, 10:35 AM IST
ಮುಂಬಯಿ: ಮಲಾಡ್ ಕನ್ನಡ ಸಂಘದ ವತಿಯಿಂದ ಒಳಾಂಗಣ ಕೇರಂ ಮತ್ತು ಚೆಸ್ ಪಂದ್ಯಾಟವು ಜ. 28ರಂದು ಮಲಾಡ್ ಮಾರ್ವೇರೋಡ್‌ನ ದೀಪಮಾಲ ಕೋ. ಆಪರೇಟಿವ್ ಸೊಸೈಟಿಯ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು.
ಅಪರಾಹ್ನ 2ರಿಂದ ಪ್ರಾರಂಭಗೊಂಡ ಪಂದ್ಯಾಟವು ರಾತ್ರಿ 8ರವರೆಗೆ ನಡೆಯಿತು. ಸಮಾರೋಪ ಕಾರ್ಯಕ್ರಮದಲ್ಲಿ ವಿಜೇತ ಸ್ಪರ್ಧಿಗಳಿಗೆ ಗಣ್ಯರು ಬಹುಮಾನ ವಿತರಿಸಿ ಶುಭಹಾರೈಸಿದರು. ಮಲಾಡ್ ಕನ್ನಡ ಸಂಘದ ಯುವ ವಿಭಾಗದ ವತಿಯಿಂದ ಒಳಾಂಗಣ ಪಂದ್ಯಾಟಗಳನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಉದ್ಯಮಿ, ತಿಮ್ಮಪ್ಪ ಶೆಟ್ಟಿ ಹಾಗೂ ಕೊಂಜಾಲುಗುತ್ತು ದಯಾನಂದ ಶೆಟ್ಟಿ, ನವೀನ್ ಡಿ. ಕರ್ಕೇರ ಅವರು ಉಪಸ್ಥಿತರಿದ್ದರು. ಅತಿಥಿ-ಗಣ್ಯರು ದೀಪಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಘದ ವತಿಯಿಂದ ಅತಿಥಿಗಳನ್ನು ಗೌರವಿಸಲಾಯಿತು.
ಯುವ ವಿಭಾಗದ ಕಾರ್ಯಾಧ್ಯಕ್ಷ ಸಂತೋಷ್ ಕೆ. ಪೂಜಾರಿ ಅವರು ಮಾತನಾಡಿ, ಯುವಶಕ್ತಿ ಹೆಚ್ಚಾಗಿ ಇಂದು ಸಂಘ-ಸಂಸ್ಥೆಗಳ ಮೂಲಕ ತಮ್ಮನ್ನು ತೊಡಗಿಸಿಕೊಂಡು, ಸಂಘದ ಪ್ರಗತಿಗಾಗಿ ದುಡಿಯಬೇಕು. ಸಂಘದ ಅಧ್ಯಕ್ಷರ ಆಶಯಕ್ಕೆ ಪೂರಕವಾಗಿ ಯಾವುದೇ ರೀತಿಯ ಫಲಾಪೇಕ್ಷೆಯಿಲ್ಲದೆ ಕಾರ್ಯನಿರ್ವಹಿಸಿದಾಗ ಸಂಘವು ವೇಗವಾಗಿ ಬೆಳೆಯಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಯುವಕರನ್ನು ಆಕರ್ಷಿಸುವ ಉದ್ದೇಶದಿಂದ ಇಂತಹ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಪಂದ್ಯದಲ್ಲಿ ಸೋಲು-ಗೆಲುವು ಸಾಮಾನ್ಯ. ಸೋತವರು ಸೋಲನ್ನು ಧನಾತ್ಮಕವಾಗಿ ಸ್ವೀಕರಿಸಿ ಮುಂದೆ ಗೆಲ್ಲುವುದಕ್ಕೆ ಪ್ರಯತ್ನಿಸಬೇಕು. ಎಲ್ಲಾ ಪಂದ್ಯಗಳಲ್ಲೂ ಪ್ರಯತ್ನ ಮುಖ್ಯ ಹಾಗೂ ಸಂಘದ ನಿಮ್ಮ ಸೇವಾಭಾವ ಮುಖ್ಯ ಎಂದು ನುಡಿದು ವಿಜೇತರನ್ನು ಅಭಿನಂದಿಸಿ ಶುಭಹಾರೈಸಿದರು.
ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಹರೀಶ್ ಎನ್. ಶೆಟ್ಟಿ ಅವರು ಮಾತನಾಡಿ, ಕಳೆದ 17 ವರ್ಷಗಳ ಅವಿರತ ಕಾರ್ಯಚಟುವಟಿಕೆಗಳಿಂದ ನಿರತವಾಗಿರುವ ಮಲಾಡ್ ಕನ್ನಡ ಸಂಘವು ಮಹಾನಗರದೆಲ್ಲೆಡೆ ನಾಡು-ನುಡಿಯ ಕಂಪನ್ನು ಪಸರಿಸುವ ಕಾಯಕ ದಲ್ಲಿ ತೊಡಗಿದೆ. ಸಂಘದಲ್ಲಿ ನಡೆಸುವ ಎಲ್ಲಾ ಕಾರ್ಯಕ್ರಮಗಳಿಗೆ ಸದಾ ಪ್ರೋತ್ಸಾಹ ನೀಡುತ್ತಾ ಬಂದಾಗ ಅದು ಬೆಳೆಯುತ್ತದೆ. ಕಳೆದ ವರ್ಷಕ್ಕಿಂತ ಈ ಬಾರಿ ಕ್ರೀಡಾಳುಗಳ ಸಂಖ್ಯೆ ಹೆಚ್ಚಾಗಿದೆ. ಸಂಸ್ಥೆಯ ಬೆಳವಣಿಗೆಯ ದೃಷ್ಟಿಯಿಂದ ನಿರಂತರವಾಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಮುಖ್ಯ ಎಂದು ನುಡಿದು ವಿಜೇತರಿಗೆ ಶುಭಹಾರೈಸಿದರು.
ಪ್ರಾರಂಭದಲ್ಲಿ ಲಕ್ಷ್ಮೀ ಸುಂದರ ಪೂಜಾರಿ ಪ್ರಾರ್ಥನೆಗೈದರು. ವೇದಿಕೆಯಲ್ಲಿ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರಕಾಶ್ ಎಸ್. ಶೆಟ್ಟಿ, ಜತೆ ಕೋಶಾಧಿಕಾರಿ ಶಂಕರ್ ಆರ್. ಶೆಟ್ಟಿ, ಜತೆ ಕಾರ್ಯದರ್ಶಿ ಅನಿಲ್ ಎಸ್. ಪೂಜಾರಿ, ಮಹಿಳಾ ವಿಭಾಗದ ಕಾರ್ಯದರ್ಶಿ ಶಾಂಭವಿ ಬಿ. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಯುವ ವಿಭಾಗದ ಕಾರ್ಯದರ್ಶಿ ಶಂಕರ ಎಚ್. ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು. ಕೋಶಾಧಿಕಾರಿ ರಜನಿ ಶೆಟ್ಟಿ ಅವರು ಸ್ಪರ್ಧಾಳುಗಳ ಯಾದಿಯನ್ನು ಓದಿದರು. ಸಂಘದ ಪದಾಧಿಕಾರಿಗಳು, ವಿವಿಧ ಉಪಸಮಿತಿಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಚಿತ್ರ-ವರದಿ:ರಮೇಶ್ ಉದ್ಯಾವರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.