ಸನಾತನ ಧರ್ಮ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವುದು ಅಗತ್ಯ
Team Udayavani, Apr 4, 2019, 3:07 PM IST
ಡೊಂಬಿವಲಿ: ಮಹಾನಗರ ಕನ್ನಡ ಸಂಸ್ಥೆ ಡೊಂಬಿವಲಿ ವತಿಯಿಂದ ವಿಶೇಷ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮವು ಮಾ. 23 ರಂದು ಸಂಜೆ 6ರಿಂದ ಡೊಂಬಿವಲಿ ಪೂರ್ವದಲ್ಲಿರುವ ವಿನಾಯಕ ಸಭಾಗೃಹದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯ ಪಾತ್ರೆ ಫೌಂಡೇಷನ್ ಇದರ ಸೇವಾಕರ್ತ ಧೀರ ಗೋವಿಂದ ದಾಸ್ ಅವರು ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು, ಭಗವದ್ಗೀತೆ ತಾತ್ವಿಕ ಮತ್ತು ವೈಜ್ಞಾನಿಕ ದರ್ಶನ ಎಂಬ ವಿಷಯದ ಮೇಲೆ ಉಪನ್ಯಾಸ ನೀಡಿ, ಪ್ರತಿಯೊಬ್ಬರೂ ರಾಮಕೃಷ್ಣ ನಾಮಸ್ಮರಣೆ ಮಾಡುವುದರಿಂದ ಅಂತರಂಗದ ಚೇತನ ಹೆಚ್ಚಾಗು
ವುದರಿಂದ ಲೌಖೀಕದೆಡೆಗೆ ಗಮನ ಕಡಿಮೆಯಾಗುತ್ತದೆ. ಸದಾ ಸಂತಸದ ಬದುಕನ್ನು ಇದರಿಂದ ನಡೆಸಬಹುದು. ಭಗವಂತನ ನಾಮ ಸ್ಮರಣೆಯನ್ನು ಪ್ರಯಾಣದ ಸಮಯದಲ್ಲೂ ಅಥವಾ ಬಿಡುವಿದ್ದ ಸಮಯದಲ್ಲಿ ಮಾಡುವುದರಿಂದ ಮಾನಸಿಕ ನೆಮ್ಮದಿ ಲಭಿಸುತ್ತದೆ. ಮನೆಯಲ್ಲಿ ಹಿರಿಯರು ಕಿರಿಯರಿಗೆ ಭಗವಂತನ ನಾಮಸ್ಮರಣೆ, ಆರಾಧನೆಯ ಉಪಯುಕ್ತತೆಯನ್ನು ತಿಳಿಯಪಡಿಸಿದಾಗ ಎಳೆಯ ಮನಸ್ಸಿನಲ್ಲಿ ಸಂಸ್ಕೃತಿ, ಸಂಸ್ಕಾರಗಳು ಬೆಳೆಯುತ್ತವೆ. ಸನಾತನ ಧರ್ಮದ ಸಂಸ್ಕೃತಿಯನ್ನು ಪಾಲಿಸಿ
ಕೊಂಡಾಗ ಸಂಸ್ಕೃತಿ, ಸಂಸ್ಕಾರ, ಆಚಾರ-ವಿಚಾರಗಳು ಉಳಿಯಲು ಸಾಧ್ಯವಿದೆ. ಮಹಾನಗರ ಕನ್ನಡ ಸಂಸ್ಥೆ ಡೊಂಬಿವಲಿಯು ಇಂತಹ ಧಾರ್ಮಿಕ, ಆಧ್ಯಾತ್ಮಿಕ ಕಾರ್ಯಕ್ರಮಗಳಲ್ಲಿ ಮಕ್ಕಳನ್ನು ಹೆಚ್ಚಾಗಿ ಪಾಲ್ಗೊಳ್ಳುವಂತೆ ಮಾಡಬೇಕು. ಇದರಿಂದ ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆ ಜಾಗೃತವಾಗುತ್ತದೆ. ಭಗವದ್ಗೀತೆಯ ಬಗ್ಗೆ ಮಕ್ಕಳಲ್ಲಿ ಅಭಿರುಚಿಯನ್ನು ಮೂಡಿಸುವ ಉದ್ದೇಶದಿಂದ ಇಸ್ಕಾನ್ ಸಂಸ್ಥೆಯು ಹಲವಾರು ಯೋಜನೆ ಗಳನ್ನು ಹಮ್ಮಿಕೊಂಡಿದೆ. ಇದರ ಸದುಪಯೋಗವನ್ನು ಸಂಘ-ಸಂಸ್ಥೆ
ಗಳು ಪಡೆದುಕೊಳ್ಳಬೇಕು ಎಂದು ನುಡಿದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಾನಗರ ಕನ್ನಡ ಸಂಸ್ಥೆ ಡೊಂಬಿವಲಿ ಇದರ ಅಧ್ಯಕ್ಷ ಎಸ್. ಆರ್. ಕುಬೇರ ಅವರು ಮಾತನಾಡಿ, ಆರೋಗ್ಯಪೂರ್ಣ ಸಮಾಜವನ್ನು ಕಟ್ಟಬೇಕಾದರೆ ನಮ್ಮ ಸಂಸ್ಕೃತಿಯ ಬಗ್ಗೆ ಕಾಳಜಿ ಅಗತ್ಯವಾಗಿದೆ. ಇಂದಿನ ಕಾರ್ಯಕ್ರಮವು ಅದ್ಭುತವಾಗಿ ಮೂಡಿ ಬಂದಿದ್ದು, ಇಂತಹ ಕಾರ್ಯಕ್ರಮಗಳಿಂದ ಆಧ್ಯಾತ್ಮಿಕ ಚಿಂತನೆ ಬೆಳೆಯುವುದರಲ್ಲಿ ಸಂಶಯವಿಲ್ಲ. ಸಂಘದ ನಾಡು-ನುಡಿಯನ್ನು ಬಿಂಬಿ ಸುವ ಎಲ್ಲ ಕಾರ್ಯಕ್ರಮಗಳಲ್ಲಿ ತುಳು – ಕನ್ನಡಿಗರು ಪಾಲ್ಗೊಂಡು ಸಹಕರಿಸಬೇಕು ಎಂದು ನುಡಿದರು.
ಸಂಸ್ಥೆಯ ಕಾರ್ಯಾಧ್ಯಕ್ಷ ಎಸ್. ವಿ. ಆಲಗೂರ ಅವರು ಅತಿಥಿಗಳನ್ನು ಹಾಗೂ ಸಭಿಕರನ್ನು ಸ್ವಾಗತಿಸಿದರು. ಶೀತಲ್ ಹುಯಿಲಗೋಳ ಇವರ ಸ್ವಾಗತಗೀತೆಯೊಂದಿಗೆ ಕಾರ್ಯಕ್ರಮವು ಪ್ರಾರಂಭಗೊಂಡಿತು. ಡಾ| ವಿ. ಆರ್. ದೇಶಪಾಂಡೆ ಇವರು ಸಂಸ್ಥೆಯ ಬೆಳವಣಿಗೆಯ ಬಗ್ಗೆ ಮಾತನಾಡಿ, ಸಂಸ್ಥೆಯು ವರ್ಷಪೂರ್ತಿ ನಡೆಸುತ್ತಿರುವ ನಾಡು-ನುಡಿಯನ್ನು ಬಿಂಬಿಸುವ ಹಾಗೂ ಸಮಾಜಪರ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯ ಪಾತ್ರೆ ಫೌಂಡೇಷನ್ ಇದರ ಸೇವಾಕರ್ತ ಧೀರ ಗೋವಿಂದ ದಾಸ್ ಅವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ವಾಸಂತಿ ದೇಶಪಾಂಡೆ ಇವರು ಕಾರ್ಯಕ್ರಮ ನಿರ್ವಹಿಸಿದರು. ಶ್ರೀಧರ ಹುಯಿಲಗೋಳ ಇವರು ಅತಿಥಿಗಳನ್ನು ಪರಿಚಯಿಸಿದರು.
ಕಾರ್ಯಕ್ರಮದಲ್ಲಿ ಸೋಮನಾಥ ಮಸಳಿ, ಎಸ್. ಎನ್. ಸೋಮ, ಪ್ರೊ| ಅಜಿತ್ ಉಮ್ರಾಣಿ, ಜಿ. ಬಿ. ಮಠದಲೆ, ವಿ. ಎನ್. ಕುಲಕರ್ಣಿ, ಡಿ. ಆರ್. ದೇಶಪಾಂಡೆ, ವಿ. ಎಲ್. ದೇಶಪಾಂಡೆ, ವಿದ್ಯಾವತಿ ಆಲ್ಲೂರ, ವಿ. ಬಿ. ಕುಲಕರ್ಣಿ ಹಾಗೂ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು. ಸ್ಥಳೀಯ ವಿವಿಧ ಸಂಘಟನೆಗಳ ಪ್ರತಿನಿಧಿಗಳು, ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
Train; ಗೋಮಟೇಶ್ವರ ಎಕ್ಸ್‌ಪ್ರೆಸ್ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.