ಮೀರಾರೋಡ್ ಪಲಿಮಾರು ಮಠ:ನವರಾತ್ರಿ ಉತ್ಸವಕ್ಕೆ ಚಾಲನೆ
Team Udayavani, Sep 23, 2017, 1:46 PM IST
ಮುಂಬಯಿ: ರಕ್ಷಣೆಗೆ ದುರ್ಗೆ, ಸಮೃದ್ಧಿಗೆ ಲಕ್ಷ್ಮೀ, ಜ್ಞಾನಕ್ಕೆ ಸರಸ್ವತಿ ಈ ಮೂರರ ಒಟ್ಟು ಸ್ವರೂಪವೇ ಆದಿಶಕ್ತಿ. ವಿಜಯ ಸಾಧಿಸಲು ನೆರವಾಗುವ ಸಲಕರಣೆಗಳಿಗೆ ಸಲ್ಲಿಸುವ ಗೌರವವೇ ಆಯುಧ ಪೂಜೆ, ಜಗನ್ಮಾತೆಯು ನವ ವಿಧವಾಗಿ ಅವತಾರವೆತ್ತಿ ದುಷ್ಟಶಕ್ತಿಯನ್ನು ದಮನಿಸುವುದೇ ನವರಾತ್ರಿ ಮಹೋತ್ಸವದ ವೈಶಿಷ್ಟé ಆಗಿದೆ ಎಂದು ವಿದ್ವಾನ್ ರಮಣ ಆಚಾರ್ಯ ಅವರು ನುಡಿದರು.
ಸೆ. 21ರಂದು ಮೀರಾರೋಡ್ ಪೂರ್ವದ ಪಲಿಮಾರು ಮಠದ ಶ್ರೀ ಬಾಲಾಜಿ ಸನ್ನಿಧಿಯಲ್ಲಿ ಪ್ರಾರಂಭಗೊಂಡ ನವರಾತ್ರಿ ಉತ್ಸವದಲ್ಲಿ ಆಶೀರ್ವಚನ ನೀಡಿದ ಅವರು, ಮನಸ್ಸನ್ನು ವಿಚಲಿತ ಗೊಳಿಸುವ ಸಂಧ್ಯಾ ಕಾಲದಲ್ಲಿ ದೇವರ ಸ್ಮರಣೆಯೊಂದಿಗೆ ಬೌದ್ಧಿಕ ಶಕ್ತಿಯನ್ನು ಜಾಗೃತಗೊಳಿಸಬೇಕು. ಶಂಖ ನಾದದ ಮೂಲಕ ದೈವೀಶಕ್ತಿಯನ್ನು ಹೆಚ್ಚಿಸಬೇಕು. ಅಸುರ ಶಕ್ತಿಯು ಮನ ದೊಳಗೆ ಪ್ರವೇಶಿಸಿದಂತೆ ಸದಾ ಜಾಗೃತ ರಾಗಿರಬೇಕು ಎಂದು ತಿಳಿಸಿದರು.
ಮಠದ ಟ್ರಸ್ಟಿ ಸಚ್ಚಿದಾನಂದ ರಾವ್ ಅವರು ಶ್ರೀ ಕ್ಷೇತ್ರದ ಬಗ್ಗೆ ತಿಳಿಸಿ, ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಸೆ. 30 ರವರೆಗೆ ವಿವಿಧ ಧಾರ್ಮಿಕ, ಆಧ್ಯಾತ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ವಿಜಯ ದಶಮಿಯ ದಿನದಂದು ಶ್ರೀ ಕ್ಷೇತ್ರದಲ್ಲಿ ಬ್ರಹ್ಮೋತ್ಸವ ಜರಗಲಿದೆ. ಉತ್ಸವ ಬಲಿ, ಮಹಾ ರಥೋತ್ಸವದ ಶೋಭಾಯಾತ್ರೆಯು ಬ್ರಹ್ಮ ಮಂದಿರ ದವರೆಗೆ ನಡೆಯಲಿದೆ.
ಆನಂತರ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅವರಿಂದ ಪ್ರವಚನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಗರದ ತುಳು-ಕನ್ನಡಿಗ ಭಕ್ತಾದಿಗಳು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ವಿನಂತಿಸಿದರು.
ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ ವಿದ್ವಾನ್ ರಾಧಾಕೃಷ್ಣ ಭಟ್ ಅವರ ಪೌರೋಹಿತ್ಯದಲ್ಲಿ ಚಂಡಿಕಾ ಹೋಮ ಹಾಗೂ ಪರಿವಾರ ದೇವರಿಗೆ ವಿಶೇಷ ಪೂಜೆ ನೆರವೇರಿತು. ಗೋಪಾಲ್ ಭಟ್, ವಿಷ್ಣು ಭಟ್, ಜಯರಾಮ ಭಟ್, ಗಣೇಶ್ ಭಟ್, ಕರಮಚಂದ ಗೌಡ, ಮಹಿಳಾ ವಿಭಾಗದ ಸದಸ್ಯೆಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಪ್ರಸಾದ ರೂಪದಲ್ಲಿ ಅನ್ನ ಸಂತರ್ಪಣೆಯನ್ನು ಆಯೋಜಿಸಲಾಗಿತ್ತು. ನೂರಾರು ಭಕ್ತಾದಿಗಳು ಅನ್ನಪ್ರಸಾದ ಸ್ವೀಕರಿಸಿದರು.ಸಾಂಸ್ಕೃತಿಕ ಕಾರ್ಯಕ್ರಮವಾಗಿ ಬಂಗಾಲಿ ಬಾಲಕಲಾವಿದರಿಂದ ಶಾಸ್ತಿÅàಯ ಸಂಗೀತ ಕಾರ್ಯಕ್ರಮ ನಡೆಯಿತು. ತುಳು-ಕನ್ನಡಿಗ ಭಕ್ತಾದಿಗಳು, ಸ್ಥಳೀಯ ಉದ್ಯಮಿಗಳು, ಸಮಾಜ ಸೇವಕರು, ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಅನ್ಯಭಾಷಿಗ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ಚಿತ್ರ-ವರದಿ : ರಮೇಶ್ ಅಮೀನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
Desi Swara@150: ಪೊಲೇಂಡ್ ಕನ್ನಡಿಗರು ಸಂಘದ ಅದ್ದೂರಿ ಉದ್ಘಾಟನೆ
Desi Swara@150: ನವವಿಂಶತಿ ನೃತ್ಯ ಹಬ್ಬದಲ್ಲಿ ದ್ವಿದಳದ ಸತ್ರಿಯ ಪ್ರದರ್ಶನ
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.