ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ: 117ನೇ ವರ್ಷಾಚರಣೆ

Team Udayavani, Aug 14, 2018, 4:59 PM IST

1208mum06.jpg

ಮುಂಬಯಿ: ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ ಇದರ 117ನೇ ವರ್ಷಾಚರಣೆಯು ಆ. 9 ರಂದು ಅಂಧೇರಿಯ ಶ್ರೀ ಮದ್ಭಾರತ ಮಂಡಳಿಯ ಶ್ರೀ ಲಕ್ಷ್ಮೀ ನಾರಾಯಣ ಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.

ಮಂಡಳಿಯ ಅಧ್ಯಕ್ಷ ಕೃಷ್ಣ ಕುಮಾರ್‌ ಎಲ್‌. ಬಂಗೇರ ಅವರು ಉಪಸ್ಥಿತರಿದ್ದು ಮಾತನಾಡಿ, 1902ರಲ್ಲಿ ಸ್ಥಾಪನೆಗೊಂಡ ಮಂಡಳಿಯು ಅನೇಕ ಕಷ್ಟ-ನಷ್ಟ ಹಾಗೂ ಹಲವಾರು ಸಮಸ್ಯೆಗಳನ್ನು ಎದುರಿಸಿ ಮುಂಬಯಿಯಲ್ಲಿ ಐತಿಹಾಸಿಕ, ಸಾಮಾಜಿಕ, ರಾಜಕೀಯ ಬದಲಾವಣೆಗಳನ್ನು ಸಹಿಸಿ, ಆರ್ಥಿಕ ಮುಗ್ಗಟ್ಟನ್ನು ಅನುಭವಿಸಿ ಗುರಿ ಸಾಧನೆಯನ್ನು ಬುನಾದಿಯ ಮೇಲೆ ಯಶಸ್ವಿಯಾಗಿ ಇದೀಗ ನೆಲೆ, ಬಲ, ಬೆಲೆಯನ್ನು ತನ್ನದಾಗಿಸಿಕೊಂಡಿರುವುದು ಹೆಮ್ಮೆಯ ವಿಷಯವಾಗಿದೆ. ಕರ್ನಾಟಕ ಸರಕಾರದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದ ಮಂಡಳಿಯು ಅನೇಕ ಸಾಧನೆಗಳನ್ನು ಮಾಡುತ್ತಾ ಬಂದಿದೆ. 1908 ರಲ್ಲಿ ರಾತ್ರಿಶಾಲೆಯನ್ನು ತೆರೆದು ಬ್ರಿಟಿಷ್‌ ಸರಕಾರದಿಂದ ಮಾನ್ಯತೆಯನ್ನು ಪಡೆದ ಈ ಶಾಲೆಯು ಸಾವಿರಾರು ಮಂದಿಗೆ ಶಿಕ್ಷಣದ ಅವಕಾಶವನ್ನು ನೀಡಿ, ಜಾತಿ, ಮತ, ಭೇದವಿಲ್ಲದೆ ಸಹಕರಿಸಿದೆ. 1939 ರಲ್ಲಿ ಕನ್ನಡ ಮಾಸಿಕ ಪತ್ರಿಕೆ ಮೊಗವೀರದ ಮೂಲಕ ಸಾಹಿತ್ಯ ಸೇವೆ, ಸಾಮಾಜಿಕ, ಭದ್ರತೆ, ಶೈಕ್ಷಣಿಕ ಪ್ರಚಾರ, ಔದ್ಯೋಗಿಕ ಮಾರ್ಗದರ್ಶನ ಇನ್ನಿತರ ಆದರ್ಶದ ಪ್ರತೀಕವಾಗಿ ಮಂಡಳಿಯು ಬೆಳೆಯಲು ಪ್ರಾರಂಭಿಸಿತು. ಮಂಡಳಿಯು ಸಮಾಜದ ಯುವಕರನ್ನು ಸದೃಢಗೊಳಿಸುವುದಕ್ಕಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಅಂಧೇರಿಯ ಶಿಕ್ಷಣ ಸಂಕುಲದಲ್ಲಿ ಬೃಹತ್‌ ಕಟ್ಟಡ ನಿರ್ಮಾಣಗೊಂಡಿದೆ. ಉತ್ಛ ಶಿಕ್ಷಣದ ವಿಭಾಗಗಳು ಪ್ರಾರಂಭಗೊಂಡಿವೆ. ಮಂಡಳಿಯ ಸಂಚಾಲಿತ ಶಾಲೆಗಳಲ್ಲಿ ಸಮಾಜದ ವಿದ್ಯಾರ್ಥಿಗಳಿಗೆ ಶೇ. 30 ರಿಯಾಯಿತಿಯನ್ನು ನೀಡಲಾಗುತ್ತಿದೆ. ಮಂಡಳಿಯ ಸಮಾಜ ಕಲ್ಯಾಣ ಯೋಜನೆಯ ಮುಖಾಂತರ ವರ್ಷಕ್ಕೆ 25 ಲಕ್ಷ ರೂ. ಗಳನ್ನು ವಿವಿಧ ಕ್ಷೇತ್ರಗಳಲ್ಲಿ ಹಂಚಲಾಗುತ್ತಿದೆ. ಮಂಡಳಿಯ ಪ್ರತಿಯೊಂದು ಯೋಜನೆಗಳಿಗೆ ಮೊಗವೀರ ಗ್ರಾಮ ಸಭೆಗಳು ಮತ್ತು ಮೊಗವೀರ ಮೂಲಸ್ಥಾನ ಸಭೆಯವರು ಸಹಕರಿಸುತ್ತಿದ್ದು, ಸಂತೋಷದ ಸಂಗತಿಯಾಗಿದೆ. ಭವಿಷ್ಯದ ಯೋಜನೆಗಳಿಗೂ ಅವರ ಸಹಕಾರ, ಪ್ರೋತ್ಸಾಹ ಅಗತ್ಯವಾಗಿದೆ. ಮಂಡಳಿಯ ಎಲ್ಲಾ ಕಾರ್ಯಕ್ರಮಗಳಿಗೆ ಸಮಾಜ ಬಾಂಧವರ ಸಹಕಾರ ಸದಾಯಿರಲಿ. ನಿಮ್ಮೆಲ್ಲರ ಶ್ರಮ, ಕಾರ್ಯದಕ್ಷತೆಯಿದ್ದಾಗ ಮಾತ್ರ ಮಂಡಳಿಯ ಸಂಸ್ಥಾಪಕರ ಕನಸು ನನಸಾಗಲು ಸಾಧ್ಯವಿದೆ. ಮಂಡಳಿಗೆ ಸಹಕರಿಸುತ್ತಿರುವ ದಾನಿಗಳಿಗೆ, ಸಮಾಜ ಬಾಂಧವರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದೇನೆ ಎಂದರು.

ಇದೇ ಸಂದರ್ಭದಲ್ಲಿ ಅಂಧೇರಿ ವಿದ್ಯಾ ಸಂಕುಲದಲ್ಲಿ ನಡೆದ ಸಭೆಯಲ್ಲಿ ಶಾಲಾ-ಕಾಲೇಜುಗಳ ಪ್ರಾಂಶುಪಾಲರು, ಮುಖ್ಯ ಶಿಕ್ಷಕರು, ಇನ್ನಿತರ ಅಧಿಕಾರಿಗಳು ವಿಚಾರ ವಿನಿಮಯ ನಡೆಸಲಾಯಿತು. ಮಂಡಳಿಯ ಉಪಾಧ್ಯಕ್ಷ ಶ್ರೀನಿವಾಸ ಸಿ. ಸುವರ್ಣ, ಶಾಲಾ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ವಿಕಾಸ್‌ ಪುತ್ರನ್‌, ನಿಧಿ ಸಂಗ್ರಹ ಸಮಿತಿಯ ಕಾರ್ಯಾಧ್ಯಕ್ಷ ಹರೀಶ್‌ ಪುತ್ರನ್‌, ಮೊಗವೀರ ಭವನದ ಮ್ಯಾನೇಜರ್‌ ದಯಾನಂದ ಬಂಗೇರ, ಬ್ಯಾಂಕ್‌ ನಿರ್ದೇಶಕ ಮುಕೇಶ್‌ ಬಂಗೇರ, ಚಂದ್ರಶೇಖರ ಕರ್ಕೇರ, ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ| ಗೋಪಾಲ್‌ ಕಲಕೋಟಿ, ಹೈಸ್ಕೂಲ್‌ ವಿಭಾಗದ ಪ್ರಾಂಶುಪಾಲೆ ಲತಾ ಕರ್ಕೇರ, ಮೋಹನ್‌ ಸಾಲ್ಯಾನ್‌, ಮನು ಕರ್ಕೇರ, ಸೀಮಾ ಧಾವತ್‌, ಅಮೂಲ್‌ ಶಿಂಧೆ, ರಜನಿ ರೈ, ಪ್ರಣೀತಾ ಶೇರಿಗಾರ್‌, ಯೋಗಿತಾ ಖನ್ಹಾ, ಅನ್ನಿ ಡಯಾಸ್‌, ಜೂನಿಯರ್‌ ಕಾಲೇಜಿನ ಪ್ರಿಯಾಮಿತ್ರ ಮೊದಲಾದವರು ಉಪಸ್ಥಿತರಿದ್ದರು.
 
ಟಾಪ್ ನ್ಯೂಸ್

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.