ಡಾ| ಮೀನಾಕ್ಷೀ,ಡಾ| ಜಿ.ಪಿ.ಕುಸುಮಾರಿಗೆ ಮೊಗವೀರ ಸಾಧನಾ ಪ್ರಶಸ್ತಿ

Team Udayavani, Mar 23, 2018, 4:44 PM IST

2203mum07.jpg

 ಮುಂಬಯಿ: ದಕ್ಷಿಣ ಕನ್ನಡ ಜಿಲ್ಲೆಯ ಮೊಗವೀರ ಯುವ ವೇದಿಕೆಯ ವಾರ್ಷಿಕ ಮೊಗವೀರ ಸಾಧನಾ ಪ್ರಶಸ್ತಿಗೆ ಸಾಂಸ್ಕೃತಿಕ ಕ್ಷೇತ್ರದ ಸಾಧಕಿ, ಅರುಣೋದಯ ಕಲಾನಿಕೇತನ ಮುಂಬಯಿ ಇದರ ನೃತ್ಯ ಗುರು, ನಿರ್ದೇಶಕಿ ಡಾ| ಮೀನಾಕ್ಷೀ ರಾಜು ಶ್ರೀಯಾನ್‌ ಮತ್ತು ಸಾಹಿತ್ಯ ಕ್ಷೇತ್ರದ ಸಾಧಕಿ ಡಾ| ಜಿ. ಪಿ. ಕುಸುಮಾ ಇವರು ಆಯ್ಕೆಯಾಗಿದ್ದು, ಮಾ. 11 ರಂದು ಸಂಜೆ ಬಂಟರ ಭವನ ಸುರತ್ಕಲ್‌ ಇಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಪ್ರದಾನಿಸಿ ಶುಭ ಹಾರೈಸಲಾಯಿತು.

ಅದೇ ರೀತಿ ಕ್ರೀಡಾ ಕ್ಷೇತ್ರದ ಸಾಧಕ ಕಮಲಾಕ್ಷ ಅಮೀನ್‌ ಬೋಳಾರ, ವೈದ್ಯಕೀಯ ಕ್ಷೇತ್ರದಲ್ಲಿ ಡಾ| ಭರತ್‌ರಾಜ್‌ ಬೊಕ್ಕಪಟ್ಣ ಹಾಗೂ ಮೀನುಗಾರಿಕಾ ಕ್ಷೇತ್ರದ ಸಾಧಕ ರಘುನಾಥ್‌ ಎಸ್‌. ಪುತ್ರನ್‌ ಇವರಿಗೂ ಪ್ರಶಸ್ತಿಯನ್ನು ಪ್ರದಾನಿಸಲಾಯಿತು.  ದಕ್ಷಿಣ ಕನ್ನಡ ಜಿಲ್ಲೆಯ ಮೊಗವೀರ ಯುವ ವೇದಿಕೆಯ ವತಿಯಿಂದ ಮೊಗವೀರ ಕುಲಗುರು ಮಾಧವ ಮಂಗಳ ಪೂಜರಾರ ಸವಿನೆನಪಿಗಾಗಿ ಮೊಗವೀರ ಸಾಧನಾ ಪ್ರಶಸ್ತಿಯನ್ನು ಪ್ರತೀ ವರ್ಷ ನೀಡಲಾಗುತ್ತದೆ.

ನಗರದ ಪ್ರತಿಷ್ಠಿತ ಅರುಣೋದಯ ಕಲಾನಿಕೇತನದ ನೃತ್ಯ ಗುರು, ನಿರ್ದೇಶಕಿ ಡಾ| ಮೀನಾಕ್ಷೀ ರಾಜು ಶ್ರೀಯಾನ್‌ ಇವರದ್ದು ಅಪ್ರತಿಮ ಪ್ರತಿಭೆ. ನಾಟ್ಯವನ್ನೇ ಉಸಿರಾಗಿಸಿಕೊಂಡು ಕಳೆದ ಐದು ದಶಕಗಳ ಹಿಂದೆ ಸ್ಥಾಪನೆಗೊಂಡ ಸಂಸ್ಥೆಯನ್ನು ಇಂದಿಗೂ ಅಚ್ಚುಕಟ್ಟಾಗಿ ಮುನ್ನಡೆಸುತ್ತಿರುವ ಮೀನಾಕ್ಷೀ ರಾಜು ಶ್ರೀಯಾನ್‌ ಇವರು ಸಾವಿರಾರು ಮಕ್ಕಳಿಗೆ ಜಾತಿ, ಮತ, ಬೇಧವನ್ನು ಮರೆತು ಭರತನಾಟ್ಯ ಹಾಗೂ ಇನ್ನಿತರ ನೃತ್ಯ ಪ್ರಕಾರಗಳನ್ನು  ಧಾರೆ ಎರೆಯುತ್ತಿದ್ದಾರೆ. ಮುಂಬಯಿ ಸೇರಿದಂತೆ ಇನ್ನಿತರ ಉಪನಗರಗಳಲ್ಲಿ ಶಾಖೆಗಳನ್ನು ಹೊಂದಿರುವುದಲ್ಲದೆ, ಪ್ರತೀ ವರ್ಷ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಿ ಮಕ್ಕಳಿಗೆ ವೇದಿಕೆಯನ್ನು ಕಲ್ಪಿಸಿಕೊಡುತ್ತಿದ್ದಾರೆ. ಇವರ ಹಲವಾರು ಶಿಷ್ಯೆಯಂದಿರು ವಿದೇಶದಲ್ಲಿ ನೆಲೆಸಿ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಭರತನಾಟ್ಯವನ್ನು ವಿದೇಶಿಯರಿಗೆ ಕಲಿಸಿಕೊಡುತ್ತಿದ್ದಾರೆ. ದೇಶದ ವಿವಿಧ ರಾಜ್ಯಗಳು ಸೇರಿದಂತೆ ವಿದೇಶಿ ನೆಲದಲ್ಲೂ ನೃತ್ಯ ರೂಪಕ ಸೇರಿದಂತೆ ವೈವಿಧ್ಯಮಯ ನೃತ್ಯ ಪ್ರಕಾರಗಳನ್ನು ಪ್ರದರ್ಶಿಸಿದ ಹೆಗ್ಗಳಿಕೆ ಡಾ| ಮೀನಾಕ್ಷೀ ರಾಜು ಶ್ರೀಯಾನ್‌ ಇವರದ್ದಾಗಿದೆ. ಮೀನಾಕ್ಷೀ ರಾಜು ಶ್ರೀಯಾನ್‌ ಇವರು ಉತ್ತಮ ಸಂಘಟಕಿಯಾಗಿಯೂ ಹೆಸರು ಮಾಡಿದವರು. ಅವರ ಸಿದ್ಧಿ-ಸಾಧನೆಗಳಿಗೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿಗಳಲ್ಲದೆ, ವಿವಿಧ ಜಾತಿಯ, ತುಳು-ಕನ್ನಡಪರ ಸಂಘಟನೆ ಗಳ ಸಮ್ಮಾನ-ಪುರಸ್ಕಾರಗಳು ಲಭಿಸಿವೆ.

ಮುಂಬಯಿ  ವಿಶ್ವವಿದ್ಯಾಲಯದ ಎಂ.ಎ, ಎಂ.ಫಿಲ್‌, ಪಿಎಚ್‌.ಡಿ ಪದವಿ ಪಡೆದಿರುವ ಜಿ. ಪಿ. ಕುಸುಮಾ  ಅವರು ಕವಯತ್ರಿ, ಲೇಖಕಿ, ಅನುವಾದಕಿ, ರಂಗನಟಿಯಾಗಿ ಮುಂಬಯಿ ಕನ್ನಡಿಗರ ಸಾಂಸ್ಕೃತಿಕ  ಬದುಕಿನಲ್ಲಿ ಹಾಸುಹೊಕ್ಕಾಗಿದ್ದಾರೆ. ತುಳು-ಕನ್ನಡ ಎರಡೂ ಭಾಷೆಯಲ್ಲಿ ಸಾಹಿತ್ಯ  ಕೃಷಿ ಮಾಡುತ್ತಿರುವ ಇವರು ಮುಂಬಯಿಯ ಸಿಟಿ ಸಿವಿಲ್‌ ಮತ್ತು ಸೆಶನ್‌ ಕೋರ್ಟಿನಲ್ಲಿ ಉದ್ಯೋಗಿಯಾಗಿದ್ದಾರೆ. ಅಖೀಲ ಭಾರತ ಸಾಹಿತ್ಯ ಸಮ್ಮೇಳನವೂ ಸೇರಿದಂತೆ ಅನೇಕ ಸಂಘ-ಸಂಸ್ಥೆಗಳಲ್ಲಿ ತಮ್ಮ ಕವನ ಮತ್ತು ಪ್ರಬಂಧ ಮಂಡನೆಯನ್ನು ಮಾಡಿದ್ದಾರೆ. ಹಲವಾರು ಪ್ರಶಸ್ತಿ, ಪ್ರತಿಭಾ ಪುರಸ್ಕಾರಗಳನ್ನು ಪಡೆದುಕೊಂಡಿದ್ದಾರೆ.

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.