ಕಾರ್ಯಾಧ್ಯಕ್ಷರಾಗಿ ಮೋಹನ್ದಾಸ್ ಶೆಟ್ಟಿ ಅಧಿಕಾರ ಸ್ವೀಕಾರ
Team Udayavani, Dec 13, 2017, 4:13 PM IST
ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ನೂತನ ಕಾರ್ಯಾಧ್ಯಕ್ಷರಾಗಿ ಉದ್ಯಮಿ, ಸಮಾಜ ಸೇವಕ ಸಂಘದ ನಿರ್ಗಮನ ಗೌರವ ಪ್ರಧಾನ ಕಾರ್ಯದರ್ಶಿ ಉಳೂ¤ರು ಮೋಹನ್ದಾಸ್ ಶೆಟ್ಟಿ ಅವರು ಅಧಿಕಾರ ಸ್ವೀಕರಿಸಿದರು.
ಡಿ. 8ರಂದು ಕುರ್ಲಾ ಪೂರ್ವದ ಬಂಟರ ಸಂಘದಲ್ಲಿ ಸಂಘದ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಅವರ ನೇತೃತ್ವದಲ್ಲಿ ನಡೆದ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ನಿರ್ಗಮನ ಕಾರ್ಯಾಧ್ಯಕ್ಷ ನಗ್ರಿಗುತ್ತು ವಿವೇಕ್ಶೆಟ್ಟಿ ಅವರು ನೂತನ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್ದಾಸ್ ಶೆಟ್ಟಿ ಅವರಿಗೆ ಪದವಿ ಹಸ್ತಾಂತರಿಸಿ ಶುಭ ಹಾರೈಸಿದರು.
ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಉಪಕಾರ್ಯಾಧ್ಯಕ್ಷರಾಗಿ ಸಂಘದ ಭಿವಂಡಿ-ಕಲ್ಯಾಣ್-ಬದ್ಲಾಪುರ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾಗಿದ್ದ ಸುಬ್ಬಯ್ಯ ಎ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಸಂಘದ ನವಿ ಮುಂಬಯಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾಗಿದ್ದ ಭಾಸ್ಕರ ವೈ. ಶೆಟ್ಟಿ ಖಾಂದೇಶ್ ಹಾಗೂ ಗೌರವ ಕೋಶಾಧಿಕಾರಿಯಾಗಿ ಸುರೇಶ್ ಬಿ. ಶೆಟ್ಟಿ ಅವರು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಚಂದ್ರಹಾಸ್ ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಮಾಜಿ ಅಧ್ಯಕ್ಷರಾದ ಡಾ| ಪಿ. ವಿ. ಶೆಟ್ಟಿ, ಐಕಳ ಹರೀಶ್ ಶೆಟ್ಟಿ, ಕರ್ನಿರೆ ವಿಶ್ವನಾಥ ಶೆಟ್ಟಿ, ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ನಿರ್ಗಮನಕಾರ್ಯದರ್ಶಿ ಭಾಸ್ಕರ್ ಶೆಟ್ಟಿ ಕಾರ್ನಾಡ್, ಕೋಶಾಧಿಕಾರಿ ಸಿಎ ರಮೇಶ್ ಎ. ಶೆಟ್ಟಿ ಅವರು ಉಪಸ್ಥಿರಿದ್ದರು.
ಚಿತ್ರ-ವರದಿ: ಪ್ರೇಮನಾಥ್ ಶೆಟ್ಟಿ ಮುಂಡ್ಕೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.