ಹೆಚ್ಚಿನ ಪರೀಕ್ಷೆ: ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಇಳಿಕೆ
Team Udayavani, Aug 9, 2020, 5:37 PM IST
ಮುಂಬಯಿ, ಆ. 8: ಮುಂಬಯಿಯಲ್ಲಿ ಜುಲೈ ಕೊನೆಯ ವಾರದಿಂದ ಹೆಚ್ಚಿನ ಪ್ರಮಾಣದ ಆ್ಯಂಟಿಜೆನ್ ಪರೀಕ್ಷೆಯನ್ನು ನಡೆಸಲು ಪ್ರಾರಂಭಿಸಿದ್ದು, ನಗರದಲ್ಲಿ ದೈನಂದಿನ ಕೋವಿಡ್ ಪರೀಕ್ಷೆಗಳ ಸಂಖ್ಯೆ ಸರಾಸರಿ 7,500ಕ್ಕೆ ಏರಿಕೆಯಾಗಿದೆ. ಪರೀಕ್ಷೆಯ ಹೆಚ್ಚಳದ ಹೊರತಾಗಿಯೂ, ಹೊಸ ಪ್ರಕರಣಗಳು ಸತತವಾಗಿ 1,000 ಕ್ಕಿಂತಲೂ ಕಡಿಮೆಯಾಗಿದ್ದು, ಇದು ನಗರದ ಸಕಾರಾತ್ಮಕ ದರವನ್ನು ಜುಲೈನಲ್ಲಿ ಶೇ. 21.68ರಿಂದ ಶೇ. 20.83ಕ್ಕೆ ಇಳಿಸಲು ಸಹಾಯ ಮಾಡಿದೆ ಎಂದು ಮುಂಬಯಿ ಮಹಾನಗರ ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ.
ಬಿಎಂಸಿ ತನ್ನ ಜಂಬೋ ಆಂಟಿಜೆನ್ ಟೆಸ್ಟಿಂಗ್ ಡ್ರೈವ್ ಅನ್ನು ಜುಲೈ 25ರಂದು ಪ್ರಾರಂಭಿಸಿತು. ಇದರ ಅಡಿಯಲ್ಲಿ ಘನತ್ಯಾಜ್ಯ ಮತ್ತು ಪೊಲೀಸ್ ಇಲಾಖೆಗಳ ನೂರಾರು ಮುಂಚೂಣಿ ಕಾರ್ಮಿಕರನ್ನು ಪ್ರತಿದಿನ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಆಗಸ್ಟ್ 4ರ ಹೊತ್ತಿಗೆ ಬಿಎಂಸಿ ಒಟ್ಟು 5,67,031 ಪರೀಕ್ಷೆ ನಡೆಸಿದೆ. ಕಳೆದ 12 ದಿನಗಳಲ್ಲಿ ಬಿಎಂಸಿ ಆ್ಯಂಟಿಜೆನ್ ಮತ್ತು ಆರ್‌ಟಿ-ಪಿಸಿಆರ್ ಪರೀಕ್ಷೆಗಳನ್ನು ಬಳಸಿಕೊಳ್ಳಲು ಪ್ರಾರಂಭಿಸಿದೆ. ಸತತ ಮೂರು ದಿನಗಳಲ್ಲಿ ನಾವು ಮುಂಬಯಿಯಲ್ಲಿ 10,000ಕ್ಕೂ ಹೆಚ್ಚು ಜನರನ್ನು ಪರೀಕ್ಷಿಸಿದ್ದೇವೆ. ನಾವು ಇನ್ನೂ ದೈನಂದಿನ ಪರೀಕ್ಷಾ ಸಂಖ್ಯೆಯನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಬಿಎಂಸಿಯ ಹೆಚ್ಚುವರಿ ಆಯುಕ್ತ ಸುರೇಶ್ ಕಾಕಾನಿ ಹೇಳಿದರು.
ಬಿಎಂಸಿಯ ಅಂಕಿಅಂಶಗಳ ಪ್ರಕಾರ ಜುಲೈ 27ರಂದು 11,643 ಮಂದಿಯನ್ನು ಪರೀಕ್ಷಿಸಲಾಗಿದೆ. ಹೆಚ್ಚಿದ ಪರೀಕ್ಷೆಗಳ ಸಂಖ್ಯೆಯಿಂದ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯನ್ನು ಕಂಡಿಲ್ಲ. ನಗರದ ದೈನಂದಿನ ಕೋವಿಡ್ ಸಂಖ್ಯೆ 1,000ಕ್ಕಿಂತ ಕಡಿಮೆಯಾಗಿದೆ. ಜುಲೈ 27ರಂದು 938 ಹೊಸ ಪ್ರಕರಣಗಳು ವರದಿಯಾಗಿವೆ. ಇದು ಮುಂಬಯಿಯಲ್ಲಿ ಸೋಂಕಿನ ತೀವ್ರತೆ ಕಡಿಮೆಯಾಗುತ್ತಿರುವುದನ್ನು ತೊರಿಸುತ್ತದೆ ಎಂದು ತಜ್ಞರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysore: ಮೊಬೈಲ್ ಜೂಜಾಟ; ನಾಲ್ವರ ಬಂಧನ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
Bharatanatyam; ರಾಜ್ಯ ಮಟ್ಟದ ಶಿಷ್ಯವೇತನಕ್ಕೆ ಅದಿತಿ ಜಿ.ಮಂಡೀಚ,ಸ್ವಾತಿ ಆಯ್ಕೆ
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.