ರಾಜ್ಯದಲ್ಲಿ 1.50 ಲ.ಕ್ಕೂ ಅಧಿಕ ಚೇತರಿಕೆ
Team Udayavani, Jul 18, 2020, 5:39 PM IST
ಮುಂಬಯಿ, ಜು. 17: ರಾಜ್ಯಾದ್ಯಂತ ಕೋವಿಡ್ ಸೋಂಕಿನಿಂದ ಚೇತರಿಸಿ ಕೊಂಡವರ ಸಂಖ್ಯೆ 1.50 ಲಕ್ಷ ದಾಟಿದೆ, ಇಲ್ಲಿಯವರೆಗೆ 1,52,613 ಸೋಂಕಿತರನ್ನು ರಾಜ್ಯದ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ 15 ದಿನಗಳಲ್ಲಿ 61,000ಕ್ಕೂ ಅಧಿಕ ಕೋವಿಡ್ ಸೋಂಕಿತರು ಚೇತರಿಸಿ ಕೊಂಡಿದ್ದಾರೆ. 3,606 ಸೋಂಕಿತರನ್ನು ಗುರುವಾರವೆ ಬಿಡುಗಡೆ ಮಾಡಲಾಗಿದೆ. ಮಹಾರಾಷ್ಟ್ರದ ಚೇತರಿಕೆ ದರವು ಶೇ. 55.39ರಷ್ಟಿದ್ದು, ಇದು ರಾಷ್ಟ್ರೀಯ ದರಕ್ಕಿಂತ ಶೇ. 63.24ರಷ್ಟಿದೆ. ವೈದ್ಯಕೀಯ ಶಿಕ್ಷಣ ಮತ್ತು ಔಷಧ ವಿಭಾಗವು ಬಿಡುಗಡೆ ಮಾಡಿದ ವರದಿಯ ಪ್ರಕಾರ ರಾಜ್ಯದ ಮರಣ ಪ್ರಮಾಣವು ಶೇ. 4ರಷ್ಟಿದ್ದು, ಇದು ರಾಷ್ಟ್ರೀಯ ಸರಾಸರಿಗಿಂತ ಶೇ. 2.6ರಷ್ಟಿದೆ. ಸಣ್ಣ ಪಟ್ಟಣಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ನಿಯಂತ್ರಿಸಿದರೆ ಮುಂದಿನ ಕೆಲವು ವಾರಗಳಲ್ಲಿ ಪರಿಸ್ಥಿತಿ ಸುಧಾರಿಸಬಹುದು ಎಂದು ರಾಜ್ಯ ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆಗಸ್ಟ್ ಅಂತ್ಯದ ವೇಳೆಗೆ ಕೋವಿಡ್ ಸಂಪೂರ್ಣ ಹತೋಟಿಗೆ ಬರುವ ವಿಶ್ವಾಸವಿದೆ ಎಂದು ರಾಜ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಲ್ಲಿ, ರಾಜ್ಯದ ಸೋಂಕಿನ ಕೇಂದ್ರಬಿಂದುವಾಗಿ ಹೊರಹೊಮ್ಮಿದ್ದ ಮುಂಬಯಿಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕ್ಷೀಣಿಸುತ್ತಿದೆ. ಈ ಹಿಂದೆ ಎಂಎಂಆರ್ ಮತ್ತು ಪುಣೆ ಜಿಲ್ಲೆಯಲ್ಲದೆ, ಔರಂ ಗಾಬಾದ್, ಜಲ್ಗಾಂವ್, ನಾಸಿಕ್, ಅಹ್ಮದ್ನಗರ, ಧುಲೆ, ಮತ್ತು ಸೋಲಾಪುರದಲ್ಲಿ ಕೋವಿಡ್ ಹೆಚ್ಚಿನ ಪ್ರಕರಣಗಳು ವರದಿಯಾಗಿತ್ತು.
ಹಾಸಿಗೆ ಸಾಮರ್ಥ್ಯ ಹೆಚ್ಚಳ : ರಾಜ್ಯ ಪರಿಸರ ಮತ್ತು ಪ್ರವಾಸೋದ್ಯಮ ಸಚಿವ ಆದಿತ್ಯ ಠಾಕ್ರೆ ಅವರು ಮಾತನಾಡಿ, ರಾಜ್ಯದ ಎಂಎಂಆರ್ನಲ್ಲಿ ಸುಮಾರು 50,000 ಹಾಸಿಗೆಗಳ ಸಾಮರ್ಥ್ಯ ಹೊಂದಿದೆ ಎಂದು ತಿಳಿಸಿದ್ದಾರೆ. ಮುಂಬಯಿಯಲ್ಲಿ ಜಂಬೋ ಸೌಲಭ್ಯಗಳು ಸುಮಾರು 20,000 ಹಾಸಿಗೆಗಳನ್ನು ಹೊಂದಿವೆ. ಆಸ್ಪತ್ರೆಗಳಲ್ಲಿನ ಸಾಂಸ್ಥಿಕ ಹಾಸಿಗೆಗಳ ಸಂಖ್ಯೆ ಸುಮಾರು 8,000ಗಳಷ್ಟಿದೆ. ಎಂಎಂಆರ್ ನಲ್ಲಿ ಪುರಸಭೆ ಆಯುಕ್ತರು ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸಲು ಅಧಿಕಾವಧಿ ಕೆಲಸ ಮಾಡುತ್ತಿದ್ದಾರೆ ಎಂದು ಠಾಕ್ರೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.