ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಅಪೌಷ್ಟಿಕತೆ ಪ್ರಕರಣ 


Team Udayavani, Nov 9, 2021, 12:57 PM IST

ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಅಪೌಷ್ಟಿಕತೆ ಪ್ರಕರಣ 

ಮುಂಬಯಿ: ದೇಶದಲ್ಲಿ ಅಪೌಷ್ಟಿಕತೆಯ ಸಮಸ್ಯೆ ಬಹಳ ಹಿಂದಿನಿಂದಲೂ ಕಂಡುಬಂದಿದೆ. ಮಕ್ಕಳಿಗೆ ಮತ್ತು ತಾಯಂದಿರಿಗೆ ಯೋಗ್ಯ ಪೌಷ್ಟಿಕ ಆಹಾರ ದೊರೆಯದ ಕಾರಣ ಈ ಸಮಸ್ಯೆ ಕಂಡುಬರುತ್ತಿದೆ. ಅದರಲ್ಲೂ ಇದರಲ್ಲಿ ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಅಪೌಷ್ಟಿಕ ಮಕ್ಕಳಿ¨ªಾರೆ ಎಂದು ವರದಿಯಿಂದ ಬಹಿರಂಗಗೊಂಡಿದೆ.

ಸರಕಾರವು ಮಾಹಿತಿ ಹಕ್ಕು ಕಾಯಿದೆಯಡಿ ನೀಡಿರುವ ಇತ್ತೀಚಿನ ಅಂಕಿಅಂಶಗಳಿಂದ ಮಾಹಿತಿ ತಿಳಿದುಬಂದಿದೆ. ಬಡತನದಿಂದಾಗಿ ಲಕ್ಷಾಂತರ ತಾಯಂದಿರು ಪೌಷ್ಟಿಕ ಆಹಾರದಿಂದ ವಂಚಿತರಾಗಿರುವುದರಿಂದ ಹೆಚ್ಚಿನ ಸಂಖ್ಯೆಯ ಮಕ್ಕಳು ಅಪೌಷ್ಟಿಕತೆಯಿಂದ ಜನಿಸುತ್ತಿದ್ದಾರೆ.

ವರದಿಯ ಪ್ರಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಆರ್‌ಟಿಐ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದು, ದೇಶದಲ್ಲಿ 33 ಲಕ್ಷಕ್ಕೂ ಹೆಚ್ಚು ಅಪೌಷ್ಟಿಕ ಮಕ್ಕಳಿದ್ದು, ಅವರಲ್ಲಿ ಅರ್ಧಕ್ಕಿಂತ ಹೆಚ್ಚು ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಇದರಲ್ಲಿ ಮಹಾರಾಷ್ಟ್ರ, ಬಿಹಾರ ಮತ್ತು ಗುಜರಾತ್‌ಗಳಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಾಗಿದೆ. 2011ರ ಜನಗಣತಿ ಪ್ರಕಾರ ದೇಶದಲ್ಲಿ  46 ಕೋಟಿಗೂ ಹೆಚ್ಚು ಮಕ್ಕಳಿದ್ದಾರೆ. 2020ರ ನವೆಂಬರ್‌ನಲ್ಲಿ 9.27 ಲಕ್ಷಗಳಷ್ಟಿತ್ತು. ಅದೇ 2021ರ ಅಕ್ಟೋಬರ್‌ ವೇಳೆಗೆ ಅಪೌಷ್ಟಿಕ ಮಕ್ಕಳ ಸಂಖ್ಯೆ 17.76 ಲಕ್ಷಕ್ಕೆ ಏರಿಕೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಶೇ. 91ರಷ್ಟು ಹೆಚ್ಚಾಗಿದೆ.

ಮಹಾರಾಷ್ಟ್ರದಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ 6.16 ಲಕ್ಷಗಳಷ್ಟಿದ್ದು. ದೇಶದಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. ಈ ಪೈಕಿ ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ 4.58 ಲಕ್ಷದಷ್ಟಿದೆ. ಅದೇ 1.57 ಲಕ್ಷ‌ ಮಕ್ಕಳು ಮಧ್ಯಮ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ.

ಗರ್ಭಾವಸ್ಥೆಯಿಂದಲೇ ಕ್ರಮ ಅಗತ್ಯ:

ಅಪೌಷ್ಟಿಕತೆಯ ಸಮಸ್ಯೆಯನ್ನು ಪರಿಹರಿಸಲು ತತ್‌ಕ್ಷಣದ ಕ್ರಮಗಳ ಅಗತ್ಯವಿದೆ ಎಂದು ಅಪೊಲೋ ಆಸ್ಪತ್ರೆಯ ಹಿರಿಯ ಮಕ್ಕಳ ತಜ್ಞ ಅನುಪಮ್‌ ಸಿಬ್ಬಲ್‌ ಹೇಳಿದ್ದಾರೆ. ಅಪೌಷ್ಟಿಕತೆಯಿಂದ ಬೇರೆ ಕಾಯಿಲೆಗೆ ತುತ್ತಾಗುವ ಅಪಾಯವನ್ನು ಹೆಚ್ಚಿಸುತ್ತದೆ. ಆದ್ದರಿಂದ ಮಕ್ಕಳಲ್ಲಿ ಅಪೌಷ್ಟಿಕತೆಯ ಸಮಸ್ಯೆಯನ್ನು ತೊಡೆದುಹಾಕಲು ಗರ್ಭಾವಸ್ಥೆಯಿಂದಲೇ ಕ್ರಮ ಗಳನ್ನು ತೆಗೆದುಕೊಳ್ಳುವುದು ಆವಶ್ಯಕ. ಹಾಲುಣಿ ಸುವ ತಾಯಂದಿರಿಗೂ ಪೌಷ್ಟಿಕ ಆಹಾರದ ಅಗತ್ಯವಿದೆ. ಇದಕ್ಕಾಗಿ ಆರು ತಿಂಗಳ ವಯಸ್ಸಿನ ಶಿಶುಗಳಿಗೆ ಸರಿಯಾದ ಹಾಲುಣಿಸುವಿಕೆಯನ್ನು ಮತ್ತು ಐದು ವರ್ಷ ವಯಸ್ಸಿನೊಳಗೆ ಸಮತೋಲಿತ ಮತ್ತು ಪೌಷ್ಟಿಕಾಂಶದ ಆಹಾರವನ್ನು ನೀಡುವುದು ಮುಖ್ಯವಾಗಿದೆ ಎಂದು ಸಿಬಲ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

byndoor

Bantwal: ಅಪಘಾತ; ಗಾಯಾಳು ಸಾವು

POlice

Kumble: ಬುರ್ಖಾಧಾರಿ ಯುವಕ ವಶಕ್ಕೆ; ಕುಖ್ಯಾತ ಕಳವು ತಂಡದ ಸದಸ್ಯನೇ ಎಂಬ ಬಗ್ಗೆ ತನಿಖೆ

5

Mangaluru: ಎಎಸ್‌ಐಗೆ ಗಾಯ; ಡಿವೈಎಫ್ಐ ವಿರುದ್ಧ ಪ್ರಕರಣ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Untitled-1

Missing case: ಎರಡು ಪ್ರತ್ಯೇಕ ನಾಪತ್ತೆ ಪ್ರಕರಣ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.