ಮುಲುಂಡ್ ಬಂಟ್ಸ್‌ನ ವಾರ್ಷಿಕ ಕ್ರೀಡೋತ್ಸವ ಸಮಾರೋಪ
Team Udayavani, Jan 16, 2019, 1:49 PM IST
ಮುಂಬಯಿ: ಮುಲುಂಡ್ ಬಂಟ್ಸ್ ಪ್ರಸ್ತುತ ರಾಷ್ಟ್ರೀಯ ಮತ್ತು ಅಂತರಾ ಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿಯನ್ನು ಪಡೆದ ಒಂದು ಸಾಮಾಜಿಕ ಸಂಸ್ಥೆಯಾಗಿದೆ. ಇದು ಸಮಾಜ ಸೇವೆಯೊಂದಿಗೆ ಸಾಮಾಜಿಕ ಕಾರ್ಯಕ್ರ ಮಗಳಲ್ಲೂ ತನ್ನನ್ನು ತೊಡಗಿಸಿಕೊಂಡಿದೆ. ಸಂಸ್ಥೆಯ ಮಹಿಳಾ ವಿಭಾಗ, ಯುವ ವಿಭಾಗ ಹಾಗೂ ಎಲ್ಲಾ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಕ್ರಿಯಾಶೀಲರಾಗಿದ್ದು, ಸಂಘದ ಪ್ರತಿಯೊಂದು ಕಾರ್ಯಕ್ರಮಗಳಿಗೆ ಸಹಕರಿ ಸುತ್ತಿರುವುದು ಅಭಿನಂದನೀಯವಾಗಿದೆ. ಬೆಳಗ್ಗೆಯಿಂದ ನಡೆದ ಕ್ರೀಡೋತ್ಸವದಲ್ಲಿ ಸಮಾಜ ಬಾಂಧವರು ಒಮ್ಮತದಿಂದ ಪಾಲ್ಗೊಂಡು ಕ್ರೀಡೋತ್ಸವದ ಯಶಸ್ಸಿಗೆ ಸಹಕರಿಸಿರುವುದು ತುಂಬಾ ಸಂತೋಷವಾಯಿತು ಎಂದು ಮುಲುಂಡ್ ಬಂಟ್ಸ್‌ನ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಹುಂತರಿಕೆ ನುಡಿದರು.
ಜ. 13 ರಂದು ಸಂಜೆ ಮುಲುಂಡ್ ಜಿಮಾVನದಲ್ಲಿ ನಡೆದ ಮುಲುಂಡ್ ಬಂಟ್ಸ್ ನ ವಾರ್ಷಿಕ ಕ್ರೀಡೋತ್ಸವದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕ್ರೀಡಾಕ್ಷೇತ್ರದಲ್ಲೂ ಮುಲುಂಡ್ ಬಂಟ್ಸ್ ನ ಸದಸ್ಯ ಬಾಂಧವರು ಉತ್ತಮ ಸಾಧನೆಗಳನ್ನು ಮಾಡುತ್ತಿರುವುದು ಅಭಿನಂದನೀಯವಾಗಿದೆ. ಸದಸ್ಯ ಬಾಂಧವರ ಕ್ರೀಡಾಸ್ಫೂರ್ತಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪ್ರತೀ ವರ್ಷ ಕ್ರೀಡೋತ್ಸವವನ್ನು ಆಯೋಜಿಸಲಾಗುತ್ತಿದೆ. ಇದರಲ್ಲಿ ಮುಲುಂಡ್ ಪರಿಸರದ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿ ಸುತ್ತಿರುವುದು ಅಭಿಮಾನದ ಸಂಗತಿಯಾಗಿದೆ. ಸಂಘದ ಪ್ರತಿಯೊಂದು ಸಮಾಜಪರ ಕಾರ್ಯಗಳಿಗೆ ಸದಸ್ಯ ಬಾಂಧವರು, ದಾನಿಗಳ ಸಹಕಾರ, ಪ್ರೋತ್ಸಾಹ ಸದಾಯಿರಲಿ. ಸ್ಪರ್ಧೆ ಯಲ್ಲಿ ಸೋಲು-ಗೆಲುವು ಸಾಮಾನ್ಯ. ಅದನ್ನು ಸರಿಸಮಾನವಾಗಿ ಸ್ವೀಕರಿಸುವ ಗುಣ ನಮ್ಮಲ್ಲಿರ ಬೇಕು ಎಂದು ನುಡಿದು ವಿಜೇತ ಸ್ಪರ್ಧಿಗಳನ್ನು ಅಭಿನಂದಿಸಿದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಬೋಂಬೆ ಬಂಟ್ಸ್ ಅಸೋ. ಅಧ್ಯಕ್ಷ ನ್ಯಾಯವಾದಿ ಸುಭಾಶ್ ಶೆಟ್ಟಿ ಅವರು ಮಾತನಾಡಿ, ಶಾರೀರಿಕ ಬೆಳವಣಿಗೆಗೆ ಕ್ರೀಡೆಯು ಪೂರಕವಾಗಿದೆ. ಈ ನಿಟ್ಟಿನಲ್ಲಿ ಕ್ರೀಡಾಸಕ್ತಿಯನ್ನು ಬೆಳೆಸಿಕೊಳ್ಳುವ ಅಗತ್ಯವಿದೆ. ಮುಲುಂಡ್ ಬಂಟ್ಸ್‌ನಂತಹ ಸಂಸ್ಥೆಗಳು ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹವನ್ನು ನೀಡುತ್ತಿರುವುದು ಮೆಚ್ಚುವಂಥದ್ದಾಗಿದೆ. ಯುವಕರು ಇದರ ಸದುಪಯೋಗವನ್ನು ಪಡೆದುಕೊಂಡು ಪ್ರತಿಭೆಯನ್ನು ಬೆಳಗಿಸಬೇಕು. ನಾವೆಲ್ಲರುನ ಸಮಾನ ಮನಸ್ಸಿನಿಂದ ಇಂತಹ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡಿದಾಗ ಪ್ರತಿಭೆಗಳು ಬೆಳೆಯಲು ಸಾಧ್ಯವಾಗುತ್ತದೆ ಎಂದರು.
ಗೌರವ ಅತಿಥಿಯಾಗಿ ಪಾಲ್ಗೊಂಡ ದೇಹ ದಾಡ್ಯಪಟು ರೋಹಿತ್ ಶೆಟ್ಟಿ ಅವರು ಮಾತನಾಡಿ, ಮುಲುಂಡ್ ಬಂಟ್ಸ್‌ನ ಯುವಕರು ದೇಹಧಾಡ್ಯì ಸ್ಪರ್ಧೆಯಲ್ಲಿ ಭಾಗವಹಿಸಬೇಕು. ಈ ವಿಷಯದಲ್ಲಿ ನನ್ನಿಂದಾಗುವ ಸಹಕಾರವನ್ನು ನೀಡಲಿದ್ದೇನೆ. ಯುವಜನರಲ್ಲಿ ಕ್ರೀಡಾಸ್ಪೂರ್ತಿ ಇದ್ದಾಗ ಮಾತ್ರ ಭವಿಷ್ಯದಲ್ಲಿ ಉತ್ತಮ ನಾಗರಿಕರಾಗಿ ಬೆಳೆಯಲು ಸಾಧ್ಯ ಎಂದು ನುಡಿದು ಶುಭಹಾರೈಸಿದರು.
ಅತಿಥಿ-ಗಣ್ಯರು ದೀಪಪ್ರಜ್ವಲಿಸಿ ಸಮಾರಂಭಕ್ಕೆ ಚಾಲನೆ ನೀಡಿದರು. ವೇದಿಕೆಯಲ್ಲಿ ಮುಲುಂಡ್ ಬಂಟ್ಸ್‌ನ ಉಪಾಧ್ಯಕ್ಷ ವಸಂತ್ ಎನ್. ಶೆಟ್ಟಿ ಪಲಿಮಾರು, ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷ ಹೇಮಂತ್ ವಿ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಉದಯ ಎನ್. ಶೆಟ್ಟಿ, ಕೋಶಾಧಿಕಾರಿ ಎ. ಹರ್ಷವರ್ಧನ್ ಶೆಟ್ಟಿ, ಜತೆ ಕೋಶಾಧಿಕಾರಿ ಹರಿ ಪ್ರಸಾದ್ ಶೆಟ್ಟಿ, ಜತೆ ಕಾರ್ಯದರ್ಶಿ ಸುಧಾಕರ ಆರ್. ಶೆಟ್ಟಿ, ಜತೆ ಕೋಶಾಧಿಕಾರಿ ಪ್ರಸಾದ್ ಪಿ. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿನುತಾ ಎಸ್. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಮೋಹಿತ್ ಎಂ. ಶೆಟ್ಟಿ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪುರುಷರ ಕಬಡ್ಡಿ ಸ್ಪರ್ಧೆಯಲ್ಲಿ ಸುರೇಶ್ ಶೆಟ್ಟಿ ಪೂಜಾ ತಂಡ ಪ್ರಥಮ, ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಮೋಹನ್ ಶೆಟ್ಟಿ ಮತ್ತು ತಂಡ ಪ್ರಥಮ ಬಹುಮಾನ ಪಡೆಯಿತು. ಮೋಹಿತ್ ಶೆಟ್ಟಿ ಅವರು ಕಾರ್ಯಕ್ರಮ ನಿರ್ವಹಿಸಿದರು. ಹೀರಾ ಶೆಟ್ಟಿ ಮತ್ತು ಪ್ರಮೀಳಾ ಶೆಟ್ಟಿ ಅವರು ಪ್ರಾರ್ಥನೆಗೈದರು. ಉಪಾಧ್ಯಕ್ಷ ವಸಂತ್ ಶೆಟ್ಟಿ ಪಲಿಮಾರು ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ಉದಯ್ ಎನ್. ಶೆಟ್ಟಿ ವಂದಿಸಿದರು.
ಸದಸ್ಯ ಬಾಂಧವರಿಗೆ ವಯೋಮಿತಿಗೆ ಅನುಗು ಣವಾಗಿ ದಿನಪೂರ್ತಿ ವಿವಿಧ ಕ್ರೀಡಾಸ್ಪರ್ಧೆಗಳು ನಡೆಯಿತು. ಪುರುಷ-ಮಹಿಳೆಯರಿಗೆ ಪ್ರತ್ಯೇಕ ವಿಭಾಗಗಳಲ್ಲಿ ಶಾಟ್‌ಪುಟ್, ವಿಶೇಷವಾಗಿ ಮಹಿಳೆಯರಿಗೆ ತ್ರೋಬಾಲ್, ಪುರುಷರು ಮತ್ತು ಮಹಿಳೆಯರಿಗೆ ಹಗ್ಗಜಗ್ಗಾಟ, ಪುರುಷರಿಗೆ ಕಬ್ಬಡಿ, ಪುರುಷ ಮತ್ತು ಮಹಿಳೆಯರಿಗೆ ಲಗೋರಿ ಪಂದ್ಯಾಟಗಳನ್ನು ಆಯೋಜಿ ಸಲಾಗಿತ್ತು. ಕಾರ್ಯಕಾರಿ ಸಮಿತಿಯ ಸದಸ್ಯರು, ಉಪಸಮಿತಿಗಳ ಪದಾಧಿಕಾರಿಗಳು, ಮಹಿಳಾ ವಿಭಾಗ, ಯುವ ವಿಭಾಗದ ಸದಸ್ಯರು, ಮಾಜಿ ಅಧ್ಯಕ್ಷರುಗಳು ಪಾಲ್ಗೊಂಡು ಕ್ರೀಡೋತ್ಸವದ ಯಶಸ್ಸಿಗೆ ಸಹಕರಿಸಿದರು.
ಸದಸ್ಯ ಬಾಂಧವರು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕ್ರೀಡೋತ್ಸವದ ಯಶಸ್ಸಿಗೆ ಸಹಕರಿಸಿದರು. ಸಮಾರೋಪ ಸಮಾರಂಭದಲ್ಲಿ ಅತಿಥಿ-ಗಣ್ಯರು ಪಾಲ್ಗೊಂಡು ವಿಜೇತ ಸ್ಪರ್ಧಿಗಳಿಗೆ ಪ್ರಶಸ್ತಿ ಪ್ರದಾನಿಸಿ ಗೌರವಿಸಿ ಶುಭಹಾರೈಸಿದರು. ಕ್ರೀಡೋತ್ಸವದಲ್ಲಿ ಬೆಳಗ್ಗೆ ಉಪಾಹಾರ, ಮಧ್ಯಾಹ್ನ ಭೋಜನ, ಸಂಜೆ ಚಹಾದ ವ್ಯವಸ್ಥೆಯನ್ನು ಮಾಡಲಾಗಿತ್ತು.
ಚಿತ್ರ-ವರದಿ : ಸುಭಾಷ್ ಶಿರಿಯಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ
Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ
ಕ್ಲೀವ್ ಲ್ಯಾಂಡ್: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ
ಮೊಗವೀರ್ಸ್ ಬಹ್ರೈನ್ ಪ್ರೊ ಕಬಡ್ಡಿ;ತುಳುನಾಡ್ ತಂಡ ಪ್ರಥಮ,ಪುನಿತ್ ಬೆಸ್ಟ್ All ರೌಂಡರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.