ಮುಂಬಯಿ ಲೋಕಲ್‌ ರೈಲ್ವೇ ಸೇವೆಗಳಿಗೆ ಸದ್ಯ ಅನುಮತಿಯಿಲ್ಲ


Team Udayavani, Jun 16, 2021, 11:51 AM IST

———-

ಮುಂಬಯಿ: ಕೊರೊನಾ ಎರಡನೇ ಅಲೆ ಕಡಿಮೆಯಾಗಲು ಪ್ರಾರಂಭಿಸಿ ದ್ದರೂ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಜನಜೀವನ ಸಾಮಾನ್ಯ ಸ್ಥಿತಿಗೆ ಮರಳಿದೆ. ಆದರೆ ಪಶ್ಚಿಮ ಮಹಾರಾಷ್ಟ್ರ ಮತ್ತು ಕೊಂಕಣದಲ್ಲಿ ಕೊರೊನಾ ಸಂಕಷ್ಟ ಮುಂದುವರಿದಿದೆ.

ಕೊಲ್ಹಾಪುರ, ಸತಾರಾ, ಪುಣೆ, ರತ್ನಾಗಿರಿ, ಸಿಂಧುದುರ್ಗಾ ಮತ್ತು ರಾಯಗಢ ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಉಲ್ಬಣಗೊಳ್ಳುತ್ತಿರುವುದರಿಂದ ಜಿಲ್ಲೆಯಲ್ಲಿನ ನಿರ್ಬಂಧಗಳನ್ನು ಬಿಗಿಗೊಳಿಸುವುದರ ಜತೆಗೆ ಸಾಂಸ್ಥಿಕ ಕ್ವಾರಂಟೈನ್‌ಗೆ ಒತ್ತು ನೀಡುವಂತೆ ಪರಿಹಾರ ಮತ್ತು ಪುನರ್ವಸತಿ ಇಲಾಖೆಯಿಂದ ಸೂಚನೆಗಳನ್ನು ನೀಡಲಾಗಿದೆ.

ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ನಿಯಂತ್ರ ಣಕ್ಕೆ ಬಂದ ಬಳಿಕ ಜಿಲ್ಲೆಯಲ್ಲಿ ವಾರಕ್ಕೊಮ್ಮೆ ನಡೆಯುವ ಕೊರೊನಾ ಪಾಸಿಟಿವ್‌ ದರ ಮತ್ತು ಆಮ್ಲಜನಕಯುಕ್ತ ಹಾಸಿಗೆಗಳ ಮಾನದಂಡಗಳ ಆಧಾರದ ಮೇಲೆ ಮನಪಾ ಮತ್ತು ಜಿಲ್ಲಾವಾರು ನಿರ್ಬಂಧ ಸಡಿಲಿಸುವ ನೀತಿಯನ್ನು ಸರಕಾರ ಕಳೆದ 2 ವಾರಗಳಿಂದ ಜಾರಿಗೆ ತಂದಿದೆ. ಅದರ ಪ್ರಕಾರ ಸೋಮವಾರದಿಂದ ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಕೆಲವು ನಿರ್ಬಂಧ ಸಡಿಲಿಸ ಲಾಗಿದೆ. ಮುಂಬಯಿ, ನಾಸಿಕ್‌ನಂತಹ ನಗರ ಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದಿದ್ದರೂ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ

ಗ್ರಾಮೀಣ ಭಾಗಗಳಲ್ಲಿ ಕೊರೊನಾ ಆರ್ಭಟರಾಜ್ಯದ ಹೆಚ್ಚಿನ ಭಾಗಗಳಲ್ಲಿ ನಿರ್ಬಂಧ ಗಳನ್ನು ಸಡಿಲಗೊಳಿಸಿದ್ದರಿಂದ ಆಡಳಿತ ಮತ್ತು ಜನರು ನಿಟ್ಟುಸಿರು ಬಿಟ್ಟರೂ ಆರು ಜಿಲ್ಲೆಗಳಲ್ಲಿ ಕೊರೊನಾ ಪೀಡಿತರ ಸಂಖ್ಯೆ ಕಳೆದ ತಿಂಗಳಿನಿಂದ ಹೆಚ್ಚುತ್ತಿದೆ. ಪ್ರಸ್ತುತ ಕೊಲ್ಹಾಪುರ ಜಿಲ್ಲೆಯಲ್ಲಿ ಅತೀಹೆಚ್ಚು ಕೊರೊನಾ ಪ್ರಕರಣಗಳು ಕಂಡುಬರುತ್ತಿದ್ದು, ಜಿಲ್ಲೆಯಲ್ಲಿ ಪ್ರತೀದಿನ ಸಾವಿರಕ್ಕೂ ಹೆಚ್ಚು ರೋಗಿಗಳು ದಾಖಲಾಗುತ್ತಿದ್ದಾರೆ.

ಸತಾರಾ ಮತ್ತು ಪುಣೆಯ ಗ್ರಾಮೀಣ ಪ್ರದೇಶಗಳಲ್ಲೂ ಇದೇ ಪರಿಸ್ಥಿತಿಯಿದ್ದು, ಸಾಂಗ್ಲಿ ಜಿಲ್ಲೆಯಲ್ಲೂ ರೋಗಿಗಳ ಸಂಖ್ಯೆ ಕಡಿಮೆಯಾಗುತ್ತಿಲ್ಲ.ರಾಯಗಢದಲ್ಲಿ ಇನ್ನಷ್ಟು ಆತಂಕಕೊಲ್ಹಾಪುರ ಜಿಲ್ಲೆಯ ಪಕ್ಕದಲ್ಲಿರುವ ಸಿಂಧುದುರ್ಗಾ ಮತ್ತು ರತ್ನಾಗಿರಿ ಜಿಲ್ಲೆ ಗಳಲ್ಲಿ ಸೋಂಕಿತರ ದೈನಂದಿನ ಸಂಖ್ಯೆ 800ರಿಂದ 900ರ ವರೆಗೆ ಇದೆ. ರಾಯಗಢ ಜಿಲ್ಲೆಯ ಕೊರೊನಾ ಪರಿಸ್ಥಿತಿ ಇನ್ನಷ್ಟು ಆತಂಕಕಾರಿಯಾಗಿದೆ. ಈ ಎಲ್ಲ ಜಿಲ್ಲೆಗಳು ಒಂದಕ್ಕೊಂದು ಹೊಂದಿಕೊಂಡಿರುವುದರಿಂದ ಕೊರೊನಾ ಹಾಟ್‌ಸ್ಪಾಟ್‌ಗೆ ಕಾರಣ ಎಂದು ಮೂಲಗಳು ತಿಳಿಸಿವೆ. ಈ ಜಿಲ್ಲೆಯ ಕೊರೊನಾ ಸರಪಳಿಯನ್ನು ಸಮಯಕ್ಕೆ ಮುರಿಯದಿದ್ದರೆ ಇತರ ಜಿಲ್ಲೆಗಳಿಗೂ ಹರಡುವ ಅಪಾಯವಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident

Kundapura: ಕಾರು ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.