ಪಟ್ಲ ಸಂಭ್ರಮ ಒಡಿಯೂರು ಶ್ರೀಗಳಿಂದ ಆಮಂತ್ರಣ ಪತ್ರಿಕೆ ಬಿಡುಗಡೆ
Team Udayavani, Aug 8, 2017, 3:18 PM IST
ಮುಂಬಯಿ: ಶ್ರೀ ಕ್ಷೇತ್ರ ಒಡಿಯೂರಿನ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಆ. 13ರಂದು ಕುರ್ಲಾ ಪೂರ್ವದ ಬಂಟರ ಭವನದಲ್ಲಿ ನಡೆಯಲಿರುವ ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಮುಂಬಯಿ ಘಟಕದ ಪಟ್ಲ ಸಂಭ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.
ಆ. 6ರಂದು ಮಧ್ಯಾಹ್ನ ಚೆಂಬೂರು ಮೈತ್ರಿಪಾರ್ಕ್‌ನ ಶ್ರೀ ಸಾಯಿ ಬಾಬಾ ಮಂದಿರದ ಸಮೀಪದಲ್ಲಿರುವ ಉದ್ಯಮಿ, ಸಮಾಜ ಸೇವಕ ಮೇರ್ಕಳ ತ್ಯಾಂಪಣ್ಣ ಶೆಟ್ಟಿ ಅವರ ಬಂಗ್ಲೋದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದ ಶ್ರೀಗಳು, ಐಕಳ ಹರೀಶ್ ಶೆಟ್ಟಿ ಅವರ ಸಂಘಟನ ನಾಯಕತ್ವದಲ್ಲಿ ಯಾವುದೇ ಕಾರ್ಯಕ್ರಮಗಳು ಯಶಸ್ವಿಯಾಗುವುದರಲ್ಲಿ ಸಂಶಯವಿಲ್ಲ. ಒಂದು ಒಳ್ಳೆಯ ಉದ್ದೇಶವನ್ನು ಇಟ್ಟುಕೊಂಡು ನೀವೆಲ್ಲರು ಈ ಸಮಾರಂಭಕ್ಕೆ ಇಳಿದಿದ್ದೀರಿ. ಪಟ್ಲ ಸತೀಶ್ ಶೆಟ್ಟಿ ಅವರು ಕಲಾವಿದರ ಆಶಾ ಕಿರಣವಾಗಿ ರೂಪಿಸಿರುವ ಫೌಂಡೇಷನ್‌ನ ಎಲ್ಲಾ ಯೋಜನೆಗಳು ಉತ್ತಮ ರೀತಿಯಲ್ಲಿ ಸಾಗಲಿದೆ. ಭಗವಂತನ ಅನುಗ್ರಹ ಸದಾ ನಿಮ್ಮ ಮೇಲಿದೆ ಎಂದು ನುಡಿದು ಕಾರ್ಯಕ್ರಮದ ಯಶಸ್ಸಿಗೆ ಅನುಗ್ರಹಿಸಿದರು.
ಈ ಸಂದರ್ಭ ಸಾಧ್ವಿ ಮಾತಾನಂದಮಯಿ, ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಮುಂಬಯಿ ಘಟಕದ ಗೌರವಾಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಸಂಸ್ಥೆಯ ಸಂಚಾಲಕ ಅಶೋಕ್ ಶೆಟ್ಟಿ ಪೆರ್ಮುದೆ, ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್
ಮಂಗಳೂರಿನ ಸಂಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಬಂಟರ ಸಂಘ ಮುಂಬಯಿ ಇದರ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರನಾಥ ಭಂಡಾರಿ, ಬಂಟರ ಸಂಘ ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಬೆಳ್ಳಂಪಳ್ಳಿ ಬಾಲಕೃಷ್ಣ ಹೆಗ್ಡೆ, ಗುರುದೇವ ಸೇವಾ ಬಳಗದ ಮಹಾರಾಷ್ಟ್ರ ಘಟಕದ ಕಾರ್ಯದರ್ಶಿ ಪೇಟೆಮನೆ ಪ್ರಕಾಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.