ಮುಂಬಯಿ ವಿವಿಯ 50ನೇ ಯುವಜನ ಸಾಂಸ್ಕೃತಿಕ ಉತ್ಸವ 


Team Udayavani, Aug 22, 2017, 12:22 PM IST

19-Mum08.jpg

ಮುಂಬಯಿ: ಬಂಟರ ಸಂಘ ಮುಂಬಯಿ ಸಂಚಾಲಕತ್ವದ ಎಸ್‌ಎಂ ಶೆಟ್ಟಿ ವಿಜ್ಞಾನ, ವಾಣಿಜ್ಯ ಹಾಗೂ ಮ್ಯಾನೇಜ್‌ಮೆಂಟ್‌ ಕಾಲೇಜು ಪೊವಾಯಿ ಇಲ್ಲಿ ಜರಗಿದ ಮುಂಬಯಿ ವಿಶ್ವವಿದ್ಯಾಲಯದ ಐವತ್ತನೇ ವಾರ್ಷಿಕ ಯುವಜನ ಸಾಂಸ್ಕೃತಿಕ ಉತ್ಸವವನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ ಪ್ರಸಿದ್ಧ ಸಿನಿ ಕಲಾವಿದ ಶಶಾಂಕ್‌ ಉಡಪಾರ್ಕರ್‌ ಅವರು ದೀಪಪ್ರಜ್ವಲಿಸಿ ಆ. 18ರಂದು ಉದ್ಘಾಟಿಸಿದರು.

ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರಭಾಕರ ಎಲ್‌. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜರಗಿದ ಎರಡು ದಿನಗಳ ಯುವಜನ ಸಾಂಸ್ಕೃತಿಕ ಉತ್ಸವಕ್ಕೆ ಸಿನಿತಾರೆ ಶರ್ಬಾನಿ ಮುಖರ್ಜಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಪೊವಾಯಿ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಜಯರಾಮ ಎನ್‌. ಶೆಟ್ಟಿ ಮತ್ತು ಪದಾಧಿಕಾರಿಗಳ ನೇತೃತ್ವದಲ್ಲಿ ಜರಗಿದ ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ಬಂಟರ ಸಂಘ ಎಸ್‌ಎಂ ಶೆಟ್ಟಿ ಕಾಲೇಜಿನ ಪ್ರಾಂಶುಪಾಲ ಡಾ| ಶ್ರೀಧರ ಶೆಟ್ಟಿ, ಉಪ ಪ್ರಾಂಶುಪಾಲೆ ಡಾ| ವಿಜಿ ಸಂತೋಷ್‌, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ವಹಿಸಿದ್ದರು.

ಪೊವಾಯಿ ಶಿಕ್ಷಣ ಸಮಿತಿಯ ಉಪ ಕಾರ್ಯಾಧ್ಯಕ್ಷ ರತ್ನಾಕರ ಶೆಟ್ಟಿ ಮುಂಡ್ಕೂರು, ಕಾರ್ಯದರ್ಶಿ ನಿತ್ಯಾನಂದ ಹೆಗ್ಡೆ, ಕೋಶಾಧಿಕಾರಿ ಪ್ರವೀಣ್‌ ಬಿ. ಶೆಟ್ಟಿ, ಮುಂಬಯಿ ವಿಶ್ವವಿದ್ಯಾಲಯದ ಸಾಂಸ್ಕೃತಿಕ ಸಮನ್ವಯಕ ನಿಲೇಶ್‌ ಸಾವೆ, ಜಿಲ್ಲಾ ಸಾಂಸ್ಕೃತಿಕ ಸಮನ್ವಯಕ ಬಲಿರಾಮ್‌ ಗಾಯಕ್ವಾಡ್‌, ಜಿಲ್ಲಾ ಸಾಂಸ್ಕೃತಿಕ ಉಪ ಸಮನ್ವಯಕಿ ಸ್ಟೆಪಿ ಸಾಲ್ವೆ ಅವರು ಕಾರ್ಯಕ್ರಮದ ಸಂಯೋಜನೆಗೆ ಶ್ರಮಿಸಿದ್ದರು.
ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿ ಶಶಾಂಕ್‌ ಉಡಪಾರ್ಕರ್‌ ಅವರು ಮಾತನಾಡಿ, ಕಲೆ ಎಂಬುವುದು ಜೀವನವಾಗಿದೆ. ಎಲ್ಲಿ ಕಲೆ ಇರುತ್ತದೋ ಅಲ್ಲಿ ಜೀವನವಿದೆ. ಬಂಟರ ಸಂಘ ಎಸ್‌ಎಂ ಶೆಟ್ಟಿ ಕಾಲೇಜಿನ ವಿದ್ಯಾರ್ಥಿಗಳ ಗುಣಮಟ್ಟ, ಶಿಸ್ತು, ಪೊವಾಯಿ ಶಿಕ್ಷಣ ಸಮಿತಿಯ ಪ್ರೋತ್ಸಾಹ ಮೆಚ್ಚುವಂತದ್ದಾಗಿದೆ ಎಂದರು.

ಅತಿಥಿ ಶರ್ಬಾನಿ ಮುಖರ್ಜಿ ಅವರು ಮಾತನಾಡಿ, ವಿದ್ಯಾರ್ಥಿಗಳ ಸುಪ್ತ ಪ್ರತಿಭೆ ಬೆಳಕಿಗೆ ಬರಲು ಮುಂಬಯಿ ವಿಶ್ವವಿದ್ಯಾಲಯದ ಪ್ರಯತ್ನ ಸ್ವಾಗತಾರ್ಹ. ಅದರಲ್ಲೂ ಬಂಟರ ಸಂಘದ ಎಸ್‌ಎಂ ಶೆಟ್ಟಿ ಕಾಲೇಜು ಸಾಂಸ್ಕೃತಿಕ ಉತ್ಸವವನ್ನು ವೈವಿಧ್ಯಪೂರ್ಣವಾಗಿ ಆಯೋಜಿಸಿರುವುದನ್ನು ಕಂಡು ಸಂತಸವಾಗಿದೆ ಎಂದು ನುಡಿದರು.

ಮುಂಬಯಿ ವಿಶ್ವವಿದ್ಯಾಲಯದ ಸಾಂಸ್ಕೃತಿಕ ಸಮನ್ವಯಕ ನಿಲೇಶ್‌ ಸಾವೆ ಮಾತನಾಡಿ, ಸಾಂಸ್ಕೃತಿಕ ಉತ್ಸವಕ್ಕೆ ಹೆಸರಾಗಿರುವ ಮುಂಬಯಿ ವಿಶ್ವವಿದ್ಯಾಲಯ ದೇಶದಲ್ಲೇ ಮೊಟ್ಟ ಮೊದಲ ಹೆಗ್ಗಳಿಕೆಗೆ ಪಾತ್ರವಾಗಿದೆ. ರಾಷ್ಟ್ರ ಮಟ್ಟದಲ್ಲಿ ಸತತ ಮೂವತ್ತೂಂದು ವರ್ಷ ರಾಷ್ಟ್ರೀಯ ಚಾಂಪಿಯನ್‌ಶಿಪ್‌ ಪಡೆದ ಮುಂಬಯಿ ವಿಶ್ವವಿದ್ಯಾಲಯಕ್ಕೆ ಯಾವುದೇ ವಿಶ್ವವಿದ್ಯಾಲಯ ಸರಿಸಾಟಿ ಇಲ್ಲ ಎಂದರು.

ಸಂಸ್ಥೆಗೆ ದೊರೆತ ಗೌರವ
ಕಾಲೇಜಿನ ಪ್ರಾಂಶುಪಾಲ ಡಾ| ಶ್ರೀಧರ ಶೆಟ್ಟಿ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಕಳೆದ ಎರಡು ವರ್ಷಗಳ ಹಿಂದೆ ಸಂಸ್ಥೆಯಲ್ಲಿ ಮುಂಬಯಿ ವಿಶ್ವವಿದ್ಯಾಲಯದ ಯುವಜನ ಸಾಂಸ್ಕೃತಿಕೋತ್ಸವವು ಯಶಸ್ವಿಯಾಗಿ ನಡೆದಿರುವುದು ಅಭಿಮಾನದ ಸಂಗತಿಯಾಗಿದೆ. ಈ ಬಾರಿ ಮತ್ತೆ ವಿಶ್ವವಿದ್ಯಾಲಯದ 50 ನೇ ಯುವ ಜನ ಸಾಂಸ್ಕೃತಿಕೋತ್ಸವ ಸಂಭ್ರಮ ಆಯೋಜಿಸುವ ಅವಕಾಶ ಸಂಸ್ಥೆಗೆ ದೊರೆತಿರುವುದು ಸಂಸ್ಥೆಗೆ ದೊರೆತ ಗೌರವವಾಗಿದೆ. ಮುಂಬಯಿಯ ವಲಯ 2 ರ ಸುಮಾರು 40 ಕಾಲೇಜುಗಳು ಉತ್ಸವದಲ್ಲಿ ಭಾಗಿಯಾಗಿದ್ದು, ಸುಮಾರು 1200 ವಿದ್ಯಾರ್ಥಿಗಳು ವಿವಿಧ ಕಲೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದಾರೆ. ಎರಡು ದಿನಗಳ ಈ ಸಂಭ್ರಮದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲಿದ್ದಾರೆ ಎಂದು ನುಡಿದರು.

ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿತು. ಉಪಪ್ರಾಂಶುಪಾಲೆ ಡಾ| ಲಿಜಿ ಸಂತೋಷ್‌ ಅವರು ವಂದಿಸಿದರು. ಬಂಟರ ಸಂಘ ಮುಂಬಯಿ ಉಪಾಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ, ಗೌರವ ಪ್ರಧಾನ ಕಾರ್ಯದರ್ಶಿ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ಐ. ಆರ್‌. ಶೆಟ್ಟಿ, ಸಂಘದ ವಿಶ್ವಸ್ತ ಶಾಂತಾರಾಮ ಶೆಟ್ಟಿ ಸನ್‌ಸಿಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲತಾ ಜಯರಾಮ ಶೆಟ್ಟಿ, ಸಂಘದ ಉನ್ನತ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಚಂದ್ರಹಾಸ ಶೆಟ್ಟಿ, ಉಪ ಕಾರ್ಯಾಧ್ಯಕ್ಷ ಬಿ. ಆರ್‌. ಶೆಟ್ಟಿ, ಕಾರ್ಯದರ್ಶಿ ಸಿಎ ಹರೀಶ್‌ ಶೆಟ್ಟಿ, ಸಿಎ ಸದಾಶಿವ ಶೆಟ್ಟಿ, ರವೀಂದ್ರನಾಥ ಭಂಡಾರಿ, ರಾಜೇಂದ್ರ ಶೆಟ್ಟಿ, ಹರೀಶ್‌ವಾಸು ಶೆಟ್ಟಿ, ನ್ಯಾಯವಾದಿ ಬಿ. ಬಿ. ಶೆಟ್ಟಿ, ಡಾ| ಪ್ರಭಾಕರ ಶೆಟ್ಟಿ ಬಿ., ಅಪ್ಪಣ್ಣ ಶೆಟ್ಟಿ ಪೊವಾಯಿ, ಹರೀಶ್‌ ಶೆಟ್ಟಿ, ದಿನಕರ್‌ ಶೆಟ್ಟಿ ರಮಾಡ, ನವೀನ್‌ ಶೆಟ್ಟಿ ಇನ್ನಬಾಳಿಕೆ ಉಪಸ್ಥಿತರಿದ್ದರು. ಪೊವಾಯಿ ಶಿಕ್ಷಣ ಸಮಿತಿಯ ಉಪಾಧ್ಯಕ್ಷ ರತ್ನಾಕರ ಶೆಟ್ಟಿ ಮುಂಡ್ಕೂರು, ಕಾರ್ಯದರ್ಶಿ ನಿತ್ಯಾನಂದ ಹೆಗ್ಡೆ, ಬಲಿರಾಮ ಗಾಯಕ್ವಾಡ್‌, ನಿಲೇಶ್‌ ಸಾವೆ, ಡಾ| ಶ್ರೀಧರ ಶೆಟ್ಟಿ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

50ನೇ ಯುವ ಜನ ಸಾಂಸ್ಕೃತಿಕ ಉತ್ಸವದ ಸಂಭ್ರಮ ಈ ಬಾರಿ ನಮ್ಮ ಸಂಸ್ಥೆಗೆ ದೊರೆತಿರುವುದು ಸಂಸ್ಥೆಯ ಪ್ರತಿಷ್ಠೆ ಮತ್ತು ಗೌರವಕ್ಕೆ ದೊರೆತ ಇನ್ನೊಂದು ಕಿರೀಟವಾಗಿದೆ. ಮುಂಬಯಿ ವಿಶ್ವವಿದ್ಯಾಲಯದ ಮಾನ್ಯತೆ ಪಡೆದ ನಮ್ಮ ಸಂಸ್ಥೆಯು ಕಳೆದ ಹತ್ತು ವರ್ಷಗಳಲ್ಲಿ ಮಹತ್ವದ ಸಾಧನೆಯನ್ನು ಮಾಡಿದೆ. ವಿದ್ಯಾರ್ಥಿಗಳ ಸಂಖ್ಯೆ, ಶಿಕ್ಷಣದ ಗುಣಮಟ್ಟ, ವಿವಿಧ ಅತ್ಯಾಧುನಿಕ ಸೌಲಭ್ಯಗಳು, ಸಂಸ್ಥೆಯ ಸೇವೆ, ನ್ಯಾಕ್‌ಗೆÅàಡ್‌, ಶೈಕ್ಷಣಿಕ ಸಾಧನೆ ಅತಿ ಮಹತ್ವದ್ದಾಗಿದೆ. ಬಂಟರ ಸಂಘ ಎಸ್‌ಎಂ ಶೆಟ್ಟಿ ಶಿಕ್ಷಣ ಸಂಸ್ಥೆಯು ಈಗಾಗಲೇ ಹಲವಾರು ಅಂತರ್‌ಕಾಲೇಜು ಸ್ಪರ್ಧೆಗಳನ್ನು ಆಯೋಜಿಸಿ ಯಶಸ್ವಿಯಾಗಿದೆ. ಆದರೆ ಸಾಂಸ್ಕೃತಿಕ ಉತ್ಸವವು ಇವೆಲ್ಲದಕ್ಕಿಂತ ಭಿನ್ನವಾದ ವಿಶೇಷ ಕಾರ್ಯಕ್ರಮವಾಗಿದ್ದು, ಅತೀ ಜವಾಬ್ದಾರಿಯಿಂದ ಕೂಡಿರುವುದಾಗಿದೆ. ಭಾಗವಹಿಸಿದ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಶುಭವಾಗಲಿ 
– ಜಯರಾಮ ಎನ್‌. ಶೆಟ್ಟಿ 
(ಕಾರ್ಯಾಧ್ಯಕ್ಷರು : ಪೊವಾಯಿ ಶಿಕ್ಷಣ ಸಮಿತಿ)

ಸಂಘದ ಎಸ್‌ಎಂ ಶೆಟ್ಟಿ ಶಿಕ್ಷಣ ಸಂಸ್ಥೆ ಸಂಪೂರ್ಣ ಮಹಾರಾಷ್ಟ್ರದಲ್ಲೊಂದು ಮಾದರಿ ಸಂಸ್ಥೆಯಾಗಿ ಕೀರ್ತಿ ಪತಾಕೆಯನ್ನು ಹಾರಿಸಿದೆ. ವಿದ್ಯಾರ್ಥಿಗಳು ವಿದ್ಯಾರ್ಜನೆಯ ಜೊತೆಗೆ ಸಾಂಸ್ಕೃತಿಕ ಕ್ಷೇತ್ರದಲ್ಲೂ ತಮ್ಮ ಪ್ರತಿಭೆ ಮೆರೆಯಬೇಕು. ಭಾರತವು ಸಂಸ್ಕೃತಿ ಸಂಪನ್ನ ರಾಷ್ಟ್ರವಾಗಿದೆ. ಭಾರತೀಯರ ಕಣ ಕಣಗಳಲ್ಲಿ ಸಂಸ್ಕೃತಿಯ ರಕ್ತ ಹರಿದಾಡುತ್ತಿದೆ. ಸಂಸ್ಕೃತಿಯೇ ದೇಶದ ಬಲುದೊಡ್ಡ ಸಂಪತ್ತಾಗಿದೆ. ಪೊವಾಯಿ ಶಿಕ್ಷಣ ಸಂಸ್ಥೆಯು ಕಾರ್ಯಾಧ್ಯಕ್ಷ ಜಯರಾಮ ಎನ್‌. ಶೆಟ್ಟಿ ಮತ್ತು ಪದಾಧಿಕಾರಿಗಳ ನೇತೃತ್ವದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ 
– ಪ್ರಭಾಕರ ಎಲ್‌. ಶೆಟ್ಟಿ 
(ಅಧ್ಯಕ್ಷರು : ಬಂಟರ ಸಂಘ ಮುಂಬಯಿ)

ಚಿತ್ರ-ವರದಿ : ಪ್ರೇಮನಾಥ್‌ ಶೆಟ್ಟಿ ಮುಂಡ್ಕೂರು

ಟಾಪ್ ನ್ಯೂಸ್

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.