ಮುಂಬಯಿಯಲ್ಲಿ ಅಗಸ್ಟ್ 13 ರಂದು ಯಕ್ಷಧ್ರುವ ಪಟ್ಲ ಸಂಭ್ರಮ-2017
Team Udayavani, Aug 3, 2017, 2:34 PM IST
ಮುಂಬಯಿ: ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಮಂಗಳೂರು ಇದರ ಮುಂಬಯಿ ಘಟಕದ ವತಿಯಿಂದ ಯಕ್ಷಧ್ರುವ ಪಟ್ಲ ಸಂಭ್ರಮ-2017 ಸಮಾರಂಭವು ಆ. 13ರಂದು ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಅಪರಾಹ್ನ 2ರಿಂದ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ಅಪರಾಹ್ನ 2ರಿಂದ ಉದ್ಘಾಟನ ಸಮಾರಂಭ ಜರಗಲಿದೆ. ಅನಂತರ ಗಾನ ವೈಭವ ಮತ್ತು ನಾಟ್ಯ ವೈಭವ ಜರಗಲಿದೆ. ಸಂಜೆ ನಡೆಯಲಿರುವ ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆಯನ್ನು ಎಂ. ಆರ್. ಜಿ. ಗ್ರೂಪ್ ಬೆಂಗಳೂರು ಇದರ ಮುಖ್ಯ ಆಡಳಿತ ನಿರ್ದೇಶಕ ಪ್ರಕಾಶ್ ಕೆ. ಶೆಟ್ಟಿ ಅವರು ವಹಿಸಲಿದ್ದಾರೆ. ತಾರಾ ಆಕರ್ಷಣೆಯಾಗಿ ಬಾಲಿವುಡ್ ನಟ ಸುನಿಲ್ ವಿ. ಶೆಟ್ಟಿ, ಗೌರವ ಅತಿಥಿಯಾಗಿ ಚರಿಷ್ಮಾ ಬಿಲ್ಡರ್ನ ಮುಖ್ಯ ಆಡಳಿತ ನಿರ್ದೇಶಕ ಸುಧೀರ್ ವಿ. ಶೆಟ್ಟಿ ಅವರು ಭಾಗವಹಿಸಲಿದ್ದಾರೆ.
ಗೌರವ ಅತಿಥಿ ಗಳಾಗಿ ವಿಶ್ವತ್ ಕೆಮಿ ಕಲ್ಸ್‌ನ ಮುಖ್ಯ ಆಡಳಿತ ನಿರ್ದೇಶಕ ಬಿ. ವಿವೇಕ್ ಶೆಟ್ಟಿ, ಸಂಪೂರ್ಣ ಹೊಟೇಲ್ಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕ ಪದ್ಮನಾಭ ಎಸ್. ಪಯ್ಯಡೆ, ಭವಾನಿ ಶಿಪ್ಪಿಂಗ್ ಸರ್ವಿಸಸ್‌ನ ಮುಖ್ಯ ಆಡಳಿತ ನಿರ್ದೇಶಕ ಕೆ. ಡಿ. ಶೆಟ್ಟಿ, ಅಂಧೇರಿ ಹೊಟೇಲ್ ರಿಜೇನ್ಸಿಯ ಜಯರಾಮ ಎನ್. ಶೆಟ್ಟಿ, ಬಂಟರ ಸಂಘ ಪುಣೆ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನಕುರ್ಕಿಲ್‌ಬೆಟ್ಟು, ಆಹಾರ್‌ನ ಅಧ್ಯಕ್ಷ ಆದರ್ಶ್ ಶೆಟ್ಟಿ, ಸ್ಟೀಲ್ ಸ್ಟಾÅಂಗ್ ಇದರ ಸಿಎಂಡಿ ರಮೇಶ್ ಶೆಟ್ಟಿ, ಸನ್‌ಸಿಟಿ ಗ್ರೂಪ್ ಆಫ್ ಹೊಟೇಲ್ಸ್‌ನ ಶಾಂತಾರಾಮ ಶೆಟ್ಟಿ, ಬಾಬಾ ಗ್ರೂಪ್‌ನ ಕಾರ್ಯಾಧ್ಯಕ್ಷ ಮಹೇಶ್ ಶೆಟ್ಟಿ, ಪುಣೆಯ ಉದ್ಯಮಿ ಉಮೇಶ್ ಶೆಟ್ಟಿ ಪರೀಕಾ, ಕಟೀಲು ಮೇಳದ ಸಂಚಾಲಕ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ, ಶಿವಾಸ್ ಹೇರ್ ಡಿಸೈನರ್ ಎಂಡಿ ಶಿವರಾಮ್ ಭಂಡಾರಿ, ಹೊಟೇಲ್ ಅಶ್ವಿತ್ ಬೇಲಾಪುರ ನವಿಮುಂಬಯಿ ಸಂಜೀವ ಶೆಟ್ಟಿ, ಕ್ರಿಸ್ಟಲ್ ಅಟೊಮೇಶನ್ ಪ್ರೈವೇಟ್ ಲಿಮಿಟೆಡ್‌ನ ಚಂದ್ರಶೇಖರ್ ಎಸ್. ಶೆಟ್ಟಿ, ಸೂರತ್ ಹೊಟೇಲ್ ರಾಧಾಕೃಷ್ಣದ ರಾಧಾಕೃಷ್ಣ ಶೆಟ್ಟಿ, ತುಳು ಸಂಘ ಬರೋಡಾ ಇದರ ಅಧ್ಯಕ್ಷ ಶಶಿಧರ ಶೆಟ್ಟಿ, ಪ್ಯಾಪಿಲೋನ್ ಕ್ಯಾಟರರ್ ಸೂರತ್ ಜಯಂತ್ ಶೆಟ್ಟಿ, ಉದ್ಯಮಿ, ಸಮಾಜ ಸೇವಕಿ ರೇಷ್ಮಾ ರವಿರಾಜ್ ಅವರು ಪಾಲ್ಗೊಳ್ಳಲಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭ
ಸಮಾರೋಪ ಸಮಾರಂಭದಲ್ಲಿ ಪ್ರಸಿದ್ಧ ಯಕ್ಷಗಾನ ಭಾಗವತ ನಾದಲೋಲ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ಅವರಿಗೆ ಸಂಸ್ಥೆಯ ಪ್ರತಿಷ್ಠಿತ ಯಕ್ಷಧ್ರುವ ಪ್ರಶಸ್ತಿಯನ್ನು ಪ್ರದಾನಿಸಲಾಗುವುದು. ತಾಳಮದ್ದಳೆಯ ಅರ್ಥದಾರಿ ಚಿಕ್ಕಯ್ಯ ಶೆಟ್ಟಿ, ಯಕ್ಷಗಾನ ವಿಮರ್ಶಕ, ಅರ್ಥದಾರಿ ಕೊಲ್ಯಾರು ರಾಜು ಶೆಟ್ಟಿ, ಚೆಂಡೆವಾದಕ ಕೆ. ಕೆ. ದೇವಾಡಿಗ, ಪ್ರಸಂಗಕರ್ತ ಎಂ. ಟಿ. ಪೂಜಾರಿ, ಭಾಗವತ ದೇವಲ್ಕುಂದ ಭಾಸ್ಕರ ಶೆಟ್ಟಿ, ವೇಷಧಾರಿ ಭೋಜ ಬಂಗೇರ ಇವರನ್ನು ಪ್ರತಿಷ್ಠಿತ ಯಕ್ಷಧ್ರುವ ಕಲಾ ಗೌರವ ಪ್ರಶಸ್ತಿಯನ್ನು ಪ್ರದಾನಿಸಲಾಗುವುದು.
ಯಕ್ಷಗಾನ ಬಯಲಾಟ
ಸಮಾರೋಪ ಸಮಾರಂಭದ ಬಳಿಕ ಊರಿನ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ವಿರೋಚನ ಕಾಳಗ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಭಾಗವತರಾಗಿ ಪಟ್ಲ ಸತೀಶ್ ಶೆಟ್ಟಿ, ಸತ್ಯನಾರಾಯಣ ಪುಣಿಚಿತ್ತಾಯ, ಗಣೇಶ್ ಹೆಬ್ರಿ ಹಾಗೂ ಚೆಂಡೆ-ಮದ್ದಳೆಯಲ್ಲಿ ಪದ್ಮನಾಭ ಉಪಾಧ್ಯಾಯ, ಚೈತನ್ಯ ಕೃಷ್ಣ ಪದ್ಯಾಣ, ಗುರುಪ್ರಸಾದ್ ಬೊಳಿಂಜಡ್ಕ, ಪ್ರಶಾಂತ್ ಶೆಟ್ಟಿ ವಗೆನಾಡು ಇವರು ಸಹಕರಿಸಲಿದ್ದಾರೆ. ಕಲಾವಿದರಾಗಿ ಉಜಿರೆ ಅಶೋಕ್ ಭಟ್, ರಾಧಾಕೃಷ್ಣ ನಾವಡ, ಸರಪಾಡಿ ಅಶೋಕ್ ಶೆಟ್ಟಿ, ಜಯಪ್ರಕಾಶ್ ಶೆಟ್ಟಿ ಪೆರ್ಮುದೆ, ಹರಿನಾರಾಯಣ ಭಟ್ ಎಡನೀರು, ಶಶಿಧರ ಕುಲಾಲ್ ಕನ್ಯಾನ, ಮಾಧವ ಕೊಳತ್ತಮಜಲು, ಪ್ರಜ್ವಲ್ ಕುಮಾರ್, ಹರಿರಾಜ್, ಲೋಕೇಶ್ ಮುಚ್ಚಾರು, ರಾಜೇಶ್, ರಾಹುಲ್, ಅರುಣ್ ಜಾರ್ಕಳ, ಪೂರ್ಣೇಶ್ ಆಚಾರ್ಯ, ಪ್ರಶಾಂತ್ ಶೆಟ್ಟಿ ನೆಲ್ಯಾಡಿ, ಅಕ್ಷಯ್ ಮಾರ್ನಾಡ್ ಅವರು ಪಾಲ್ಗೊಳ್ಳಲಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಮುಂಬಯಿ ಘಟಕದ ಗೌರವಾಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಅಧ್ಯಕ್ಷ ಕಡಂದಲೆ ಸುರೇಶ್ ಭಂಡಾರಿ ಅವರ ಮಾರ್ಗದರ್ಶನದಲ್ಲಿ, ಉಪಾಧ್ಯಕ್ಷರಾದ ಕೈರಬೆಟ್ಟು ವಿದ್ವಾನ್ ವಿಶ್ವನಾಥ್ ಭಟ್, ಉಳೂ¤ರು ಮೋಹನ್‌ದಾಸ್ ಶೆಟ್ಟಿ, ರತ್ನಾಕರ ಶೆಟ್ಟಿ ಮುಂಡ್ಕೂರು, ಅಶೋಕ್ ಪಕ್ಕಳ, ಸುರೇಶ್ ಬಿ. ಶೆಟ್ಟಿ ಮರಾಠ, ಸಂಚಾಲಕರುಗಳಾದ ಐಕಳ ಗಣೇಶ್ ಶೆಟ್ಟಿ, ಅಶೋಕ್ ಶೆಟ್ಟಿ ಪೆರ್ಮುದೆ, ಗೌರವ ಕಾರ್ಯದರ್ಶಿ ಕರ್ನೂರು ಮೋಹನ್ ರೈ, ಕೋಶಾಧಿಕಾರಿಗಳಾದ ಬಾಬು ಎನ್. ಶೆಟ್ಟಿ ಪೆರಾರ, ಸಿಎ ಸುರೇಂದ್ರ ಶೆಟ್ಟಿ, ಜೊತೆ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಅಜೆಕಾರು ಹಾಗೂ ಸರ್ವ ಸದಸ್ಯರ ನೇತೃತ್ವದಲ್ಲಿ ಸಮಾರಂಭವು ಜರಗಲಿದೆ. ಕಲಾಭಿಮಾನಿಗಳು ಪಾಲ್ಗೊಂಡು ಸಮಾರಂಭದ ಯಶಸ್ಸಿಗೆ ಸಹಕರಿಸುವಂತೆ ಮುಂಬಯಿ ಘಟಕದ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ಹೊಸ ಸೇರ್ಪಡೆ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ “ಗುರಿ’!
Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ
Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ
New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್’!
ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.