ನಲಸೋಪರ ಧರ್ಮ ಮಾರಿಯಮ್ಮ ದೇವಸ್ಥಾನ: ವರ್ಧಂತಿ ಮಹೋತ್ಸವ


Team Udayavani, Jun 28, 2018, 5:16 PM IST

2706mum01.jpg

ಮುಂಬಯಿ: ನಲಸೋಪರ ಪೂರ್ವದ, ಲೋಟಸ್‌ ರಸ್ತೆಯ ಅಚೋಲೆ ತಲಾವ್‌ ಸಮೀಪದಲ್ಲಿರುವ  ತುಳು-ಕನ್ನಡಿಗರ ಕಾರಣಿಕ ಕ್ಷೇತ್ರವಾಗಿ ಬಿಂಬಿತಗೊಂಡಿರುವ ಶ್ರೀ ಧರ್ಮ ಮಾರಿಯಮ್ಮ ದೇವಸ್ಥಾನದ 11ನೇ ವರ್ಧಂತಿ ಮಹೋತ್ಸವವು ಜೂ. 26 ರಂದು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ  ಜರಗಿತು.

ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ 8 ರಿಂದ ಗಣಹೋಮ, ಅನಂತರ ನವಕ  ಕಲಶ, ನವಗ್ರಹ ಶಾಂತಿ ಆನಂತರ  ಪ್ರಧಾನ ಹೋಮ, ಪೂರ್ವಾಹ್ನ 11.15ರಿಂದ ಕಲಶಾಭಿಷೇಕ, ಮಧ್ಯಾಹ್ನ 12ರಿಂದ ಪ್ರಸನ್ನ ಪೂಜೆ, ಮಹಾಪೂಜೆ, ತೀರ್ಥ ಪ್ರಸಾದ ವಿತರಣೆಯನ್ನು ಆಯೋಜಿಸಲಾಗಿತ್ತು.

ಮಧ್ಯಾಹ್ನ 1ರಿಂದ ಅಪರಾಹ್ನ 3 ರವರೆಗೆ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು. ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಅನ್ನಪ್ರಸಾದ ಸ್ವೀಕರಿಸಿದರು.  
ಸಂಜೆ 5ರಿಂದ ರಾತ್ರಿ 7ರ ವರೆಗೆ ದೇವಸ್ಥಾನದ ಸದಸ್ಯ ಬಾಂಧವರಿಂದ ಹಾಗೂ ತುಳು-ಕನ್ನಡಿಗರಿಂದ ಭಜನ ಕಾರ್ಯಕ್ರಮ ನೆರವೇರಿತು. 

ರಾತ್ರಿ 8ರಿಂದ ದೀಪಾರಾಧನೆ, ರಂಗಪೂಜೆಯನ್ನು ಆಯೋಜಿಸಲಾಗಿತ್ತು.
ಸ್ಥಳೀಯ ಉದ್ಯಮಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ದಾನಿಗಳು, ಸಮಾಜ ಸೇವಕರು, ತುಳು-ಕನ್ನಡಿಗರು, ಅನ್ಯ ಭಾಷಿಗ ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಸಮಿತಿಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ವಿಶ್ವಸ್ತರು  ಸಹಕರಿಸಿದರು.

ದೇವಸ್ಥಾನದಲ್ಲಿ ಪ್ರತೀ ನಿತ್ಯ ಪೂಜೆ, ಪುನಸ್ಕಾರಗಳು ದಿನಂಪ್ರತಿ ನಡೆಯುತ್ತಿದ್ದು, ಈ ಕ್ಷೇತ್ರದಲ್ಲಿ ಮಾರಿಯಮ್ಮ, ಶನಿದೇವರು, ಮಹಾಗಣಪತಿ, ಮಹಾಕಾಳಿ ಮೊದಲಾದ ದೇವರುಗಳಿಗೆ ನಿತ್ಯಪೂಜೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಮಂದಿರವು ಜೀರ್ಣೋದ್ಧಾರಗೊಳ್ಳಲಿದ್ದು, ಭಕ್ತರಿಗೆ ವಿಶೇಷ ಸೌಲಭ್ಯಗಳನ್ನು ಕಲ್ಪಿಸಿಕೊಡುವುದ ರೊಂದಿಗೆ ನೂತನ ದೇವಸ್ಥಾನವನ್ನು ಸ್ಥಾಪಿಸುವ ಬಗ್ಗೆ ಕಾರ್ಯಕಾರಿ ಸಮಿತಿಯು ಮುಂದಾಗಿದೆ. 

ಸುಮಾರು 11 ವರ್ಷಗಳ ಹಿಂದೆ ಶ್ರೀ ಧರ್ಮ ಮಾರಿಯಮ್ಮ ಮಂದಿರವು ಪ್ರಾರಂಭದಲ್ಲಿ ಶನಿಮಂದಿರದೊಂದಿಗೆ ಸ್ಥಾಪನೆಗೊಂಡಿತು. ದೇವಸ್ಥಾನದಲ್ಲಿ ವರ್ಷವಿಡೀ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಿರಂತರವಾಗಿ ಜರಗುತ್ತಿದ್ದು, ಪ್ರಸ್ತುತ ಮಂದಿರವು ಚಾರಿಟೆಬಲ್‌ ಟ್ರಸ್ಟ್‌ನ ಮಾರ್ಗದರ್ಶನ ದಲ್ಲಿ ಹಲವಾರು ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಪರಿಸರದಲ್ಲಿ ಪ್ರಸಿದ್ಧಿಯನ್ನು ಪಡೆದಿದೆ.

ಚಿತ್ರ-ವರದಿ : ರಮೇಶ್‌ ಉದ್ಯಾವರ

ಟಾಪ್ ನ್ಯೂಸ್

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

vidan-soudha-kannada

Golden Jubilee: ಕನ್ನಡವೇ ಅಧಿಕಾರಿಗಳ‌ ಹೃದಯದ ಭಾಷೆ ಆಗಲಿ

KSRTC

Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

9-desi

Kannada Alphanbets: “ಕ’ ಕಾರದಲ್ಲಿನ ವಿಶೇಷ:‌ ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ

8-

ನ.9: ವಿಶ್ವ ಕನ್ನಡ ಹಬ್ಬ: ಈ ಬಾರಿ ಸಿಂಗಾಪುರದಲ್ಲಿ ರಂಗೇರಲಿರುವ ಸಂಭ್ರಮ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.