ನವದುರ್ಗಾ ಅಯ್ಯಪ್ಪ ಸೇವಾ ಸಂಘ: ವಾರ್ಷಿಕ ಮಹಾಪೂಜೆ

Team Udayavani, Dec 12, 2017, 12:00 PM IST

10-Mum01a.jpg

ಮುಂಬಯಿ: ದಹಿಸರ್‌ ಶ್ರೀ ನವದುರ್ಗಾ ಅಯ್ಯಪ್ಪ ಸೇವಾ ಸಂಘ ಇದರ 25ನೇ ವಾರ್ಷಿಕ ಮಹಾಪೂಜೆಯು ದಹಿಸರ್‌ ಪೂರ್ವದ ಶೈಲೇಂದ್ರ ನಗರದ ಹ್ಯಾಪಿ ಹೋಂನಲ್ಲಿರುವ ಶಿಬಿರದ ಆವರಣದಲ್ಲಿ ಡಿ. 9ರಂದು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ ವಿಶ್ವನಾಥ್‌ ಅಯ್ಯರ್‌ ಗುರುಸ್ವಾಮಿ, ಕಣ್ಣನ್‌ ನಾಯರ್‌ ಗುರುಸ್ವಾಮಿ ಬಾಂದ್ರಾ, ಗಣೇಶ್‌ ಗುರುಸ್ವಾಮಿ ಘಾಟ್‌ಕೋಪರ್‌, ಶ್ರೀ ಧರ್ಮಶಾಸ್ತ ಭಕ್ತವೃಂದ ಬಾಂದ್ರಾ ಅಧ್ಯಕ್ಷ ರಾಮಣ್ಣ ಗುರುಸ್ವಾಮಿ, ಶ್ರೀ  ನವದುರ್ಗಾ ಅಯ್ಯಪ್ಪ ಸೇವಾ ಸಂಘದ ಗೌರವಾಧ್ಯಕ್ಷ ಸುರೇಂದ್ರ ಗುರುಸ್ವಾಮಿ ಬೆಳಗಾವಿ, ಅಧ್ಯಕ್ಷ ಸುಧಾಕರ ಎನ್‌. ಶೆಟ್ಟಿ ಬಿಯಾಳಿ ಮಂದಾರ್ತಿ, ಕಾರ್ಯದರ್ಶಿ ಮೋಹನ್‌ ರೈ ಗುರುಸ್ವಾಮಿ ಉಪ್ಪಳ, ಕೋಶಾಧಿಕಾರಿ ಗಣೇಶ್‌ ಶೆಟ್ಟಿ ಕುಂಬ್ಳೆ, ಮಹಾಲಿಂಗೇಶ್ವರ ದೇವಸ್ಥಾನದ ಟ್ರಸ್ಟಿ, ಪ್ರಧಾನ ಅರ್ಚಕ ಸಾಂತಿಂಜ ಜನಾರ್ದನ ಭಟ್‌ ಅವರ ಪೌರೋಹಿತ್ಯದಲ್ಲಿ ಗಣಹೋಮ, ಅಯ್ಯಪ್ಪ ಪ್ರತಿಷ್ಠೆ, ಸಹಸ್ರ ನಾಮ ಅರ್ಚನೆ ಹಾಗೂ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿತು.

ಜಯಂತಿ ಶೆಟ್ಟಿ ನೇತೃತ್ವದ ಬೊರಿವಲಿ ಪಶ್ಚಿಮದ ಶ್ರೀ ಲಕ್ಷ್ಮೀನಾರಾಯಣ ಭಜನ ಮಂಡಳಿ ಇದರ ಮಹಿಳಾ ಸದಸ್ಯೆಯರಿಂದ ಮತ್ತು ಶ್ರೀ ಲಕ್ಷ್ಮೀನಾರಾಯಣ ಭಜನ ಮಂಡಳಿ ಮೀರಾರೋಡ್‌ ಇದರ ಸದಸ್ಯರಿಂದ ಭಜನ ಕಾರ್ಯಕ್ರಮ ನಡೆಯಿತು. ಮೀರಾರೋಡ್‌ ಶ್ರೀ ಅಯ್ಯಪ್ಪ ಭಕ್ತಮಂಡಳಿಯ ಗುರುಸ್ವಾಮಿ ಜಯಶೀಲ ತಿಂಗಳಾಯ ಮತ್ತು ಗುರುಸ್ವಾಮಿ ಉಮೇಶ್‌ ಕಾಂತಾವರ ಅವರು ಹಾಗೂ ಅಯ್ಯಪ್ಪ ವ್ರತಧಾರಿಗಳು ಶ್ರೀ ಸನ್ನಿಧಿಯ ಪರಿಚಯವನ್ನು ಶರಣು ಘೋಷದ ಮೂಲಕ ಮಾಡಿದರು.

ಶ್ರೀ ನವದುರ್ಗಾ ಅಯ್ಯಪ್ಪ ಸೇವಾ ಸಂಘ ಇದರ ಶಿಬಿರದ ವ್ರತಧಾರಿ ಅಯ್ಯಪ್ಪ ಸ್ವಾಮಿಗಳು ಪಡಿಪೂಜೆಯ ಹದಿನೆಂಟು ಮೆಟ್ಟಿಲುಗಳಿಗೆ ಶಾಸ್ತ್ರೋಕ್ತ ಹಾಗೂ ಸನಾತನ ಪೂಜಾ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ತುಪ್ಪದ ದೀಪ, ಕರ್ಪೂರವನ್ನು ಹಚ್ಚಿ ಶ್ರೀ ಅಯ್ಯಪ್ಪ ಸ್ವಾಮಿಯನ್ನು ಸ್ಮರಿಸಿದರು. ಶಿಬಿರದ ಗುರುಸ್ವಾಮಿಗಳಿಂದ ಮಹಾಪೂಜೆಯ ಬಳಿಕ ಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆ ನಡೆಯಿತು.  ಅನ್ನಸಂತರ್ಪಣೆಯಲ್ಲಿ ತುಳು-ಕನ್ನಡಿಗರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡಿದ್ದರು.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಾತ್ರಿ ಶ್ರೀ ಗುರುನಾರಾಯಣ ಯಕ್ಷಗಾನ ಕಲಾಮಂಡಳಿ ಸಾಂತಾಕ್ರೂಜ್‌ ಕಲಾವಿದರಿಂದ ಬ್ರಹ್ಮ ಬಲಾಂಡಿ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು. ದಿನಪೂರ್ತಿ ನಡೆದ ಧಾರ್ಮಿಕ 
ಉತ್ಸವದಲ್ಲಿ ಸ್ಥಳೀಯ ನಗರ ಸೇವಕರು, ಪೊಲೀಸ್‌ ಅಧಿಕಾರಿಗಳು, ದಾನಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ವಿವಿಧ ಸಮಾಜದ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ಪ್ರಸಾದ 
ಸ್ವೀಕರಿಸಿದರು.  

ಟಾಪ್ ನ್ಯೂಸ್

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.