ನವಿ ಮುಂಬಯಿ: 2.50 ಲಕ್ಷ ಕೋವಿಡ್‌ ಪರೀಕ್ಷೆ

Team Udayavani, Oct 22, 2020, 6:22 PM IST

ನವಿ ಮುಂಬಯಿ: 2.50 ಲಕ್ಷ ಕೋವಿಡ್‌ ಪರೀಕ್ಷೆ

ಮುಂಬಯಿ, ಅ. 21: ಕಳೆದ ಕೆಲವು ದಿನಗಳಿಂದ ನಗರದಲ್ಲಿ ಕೋವಿಡ್‌ ಸೋಂಕಿನಿಂದ ಚೇತರಿಸುವವರ ಸಂಖ್ಯೆ ಹೆಚ್ಚಳವಾಗಿದೆ. ಕೋವಿಡ್‌ ದಿಂದ ಚೇತರಿಕೊಳ್ಳುವವರ ಸಂಖ್ಯೆ ಹೆಚ್ಚಾಗು ತ್ತಿದ್ದರೂ ದಿನಕ್ಕೆ ಸರಾಸರಿ 3,000 ಪರೀಕ್ಷೆಗಳನ್ನು ನಡೆಸುವ ಗುರಿ ಹೊಂದಿ ರುವ ನವಿ ಮುಂಬಯಿ ಮಹಾನಗರ ಪಾಲಿಕೆಯು ಇಲ್ಲಿಯವರೆಗೆ 2.50 ಲಕ್ಷ ಕೋವಿಡ್‌ ಪರೀಕ್ಷೆಗಳನ್ನು ನಡೆಸಿದೆ.

ಸುಮಾರು 15 ಲಕ್ಷ ಜನಸಂಖ್ಯೆ ಹೊಂದಿದ ನವಿ ಮುಂಬಯಿಯಲ್ಲಿ ಇದುವರೆಗೆ 2.5 ಲಕ್ಷಕ್ಕೂ ಹೆಚ್ಚಿನ ಜನರ ಕೊರೊನಾ ಪರೀಕ್ಷೆಗಳನ್ನು ನಡೆಸ ಲಾಗಿದೆ. ಮುಂಬರುವ ಅವಧಿಯಲ್ಲಿ ಹೆಚ್ಚು ಹೆಚ್ಚು ನಾಗರಿಕರನ್ನು ಪರೀಕ್ಷಿಸಲು ಮಹಾನಗರ ಪಾಲಿಕೆ ವತಿಯಿಂದ ಪ್ರಯತ್ನಿಸಲಾಗುತ್ತಿದೆ. ಮಹಾನಗರ ಪಾಲಿಕೆ ತನ್ನದೇ ಆದ ಪ್ರಯೋಗಾಲಯ ಪ್ರಾರಂಭಿಸಿದಾಗಿನಿಂದ ನಗರದಲ್ಲಿ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸಿದೆ. ನವಿ ಮುಂಬಯಿ ನಗರದ ಬೇಲಾಪುರ, ವಾಶಿ, ನೆರುಲ್, ಕೊಪರ್‌ ಖೈರ್ನಿ ಮತ್ತು ಐರೋಲಿ ವಿಭಾಗಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಪ್ರಕರಣಗಳು ಕಂಡುಬಂದಿದ್ದು, ಎಲ್ಲಕ್ಕಿಂತ ಹೆಚ್ಚು ಕೋವಿಡ್‌ ಪ್ರಕರಣಗಳು ನೆರೂಲ್‌ ಪರಿಸರದಲ್ಲಿ ಕಂಡುಬಂದಿದೆ. ಪರೀಕ್ಷೆಗಳನ್ನು ಹೆಚ್ಚಿಸುವುದರೊಂದಿಗೆ ತ್ವರಿತ ಚಿಕಿತ್ಸೆಗಳನ್ನು ಒದಗಿಸುವಂತೆ ಈಗಾಗಲೇ ವಿಶ್ವ ಆರೋಗ್ಯ ಸಂಸ್ಥೆಯು ಸೂಚಿಸಿದೆ.

ನಗರದಲ್ಲಿ 22ಕ್ಕೂ ಹೆಚ್ಚು ಸ್ಥಳಗ ಳಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತಿ ದ್ದು, ಪರೀಕ್ಷೆಗಳಿಗೆ ನಾಗರಿಕರು ಸಹಕರಿಸಬೇಕು. ಪ್ರಸ್ತುತ ಎಂಐಡಿಸಿಯಲ್ಲಿ ಯೂ ಹೆಚ್ಚಿನ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಪುರಸಭೆ ಆಯುಕ್ತ ಅಭಿಜಿತ್‌ ಬಂಗಾರ್‌ ತಿಳಿಸಿದ್ದಾರೆ. ಇಲ್ಲಿಯ ತನಕ 1,58,890 ಆ್ಯಂಟಿಜೆನ್‌ ಪರೀಕ್ಷೆಗಳನ್ನು, 91,363 ಆರ್‌ಟಿಪಿಸಿಆರ್‌ ಪರೀಕ್ಷೆಗಳನ್ನು ನಡೆಸು ವುದರೊಂದಿಗೆ ಒಟ್ಟು 2,50,253 ನಾಗರಿಕರನ್ನು ಪರೀಕ್ಷಿಸಲಾಗಿದೆ.

ಪ್ರತಿನಿತ್ಯ 24 ಸಾವಿರ ಟೆಸ್ಟ್‌: ಬಿಎಂಸಿಗೆ ಸೂಚನೆ :

ಮುಂಬಯಿ, ಅ. 21: ಲಾಕ್‌ಡೌನ್‌ ಸಡಿಲಿಕೆ  ಮತ್ತು ಸಾಲು ಸಾಲು ಹಬ್ಬಗಳಿರುವುದರಿಂದ ಜನಸಂಚಾರ ಹೆಚ್ಚಾಗಿ, ಕೊರೊನಾ ಇನ್ನಷ್ಟು ಆತಂಕಕಾರಿಯಾಗಿ ಕಾಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಬಿಎಂಸಿ ಪ್ರತಿನಿತ್ಯ 24 ಸಾವಿರ  ಕೋವಿಡ್‌ ಟೆಸ್ಟ್‌ ನಡೆಸಬೇಕು ಎಂದು ಕೋವಿಡ್‌  ಟಾಸ್ಕ್ಫೋರ್ಸ್‌ ಮುಖ್ಯಸ್ಥ ಡಾ| ಸಂಜಯ್‌ ಓಕ್‌ ಪಾಲಿಕೆಗೆ ಸೂಚಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಓಕ್‌, ಕಳೆದ ಎರಡು ವಾರಗಳಿಂದ ಬಿಎಂಸಿ ಪ್ರತಿನಿತ್ಯ 13-15 ಸಾವಿರ ಪರೀಕ್ಷೆ ನಡೆಸುತ್ತಿದೆ. ಅತಿ ಕಡಿಮೆ ದರದಲ್ಲಿ ಟೆಸ್ಟ್‌ ನಡೆಸಲು ನಗರದ ವಿವಿಧ ಪ್ರದೇಶಗಳಲ್ಲಿ ವ್ಯವಸ್ಥೆ ಕಲ್ಪಿಸಬೇಕು. ಮುಂಬಯಿ ನಿತ್ಯ 20-24 ಸಾವಿರ ಕೋವಿಡ್‌ ಪರೀಕ್ಷೆಗಳನ್ನು ನಡೆಸಲೇಬೇಕಿದೆ ಎಂದು ಹೇಳಿದ್ದಾರೆ.

ಡ್ರೈವ್‌ – ಇನ್‌ ಟೆಸ್ಟಿಂಗ್‌ ಸೌಲಭ್ಯಗಳನ್ನು ಕಡ್ಡಾಯವಾಗಿ ಪೂರೈಸಲಾಗುತ್ತದೆ. ಇದಕ್ಕೆ ಇನ್ನಷ್ಟು ಸಹಾಯಧನವನ್ನೂ ನಾವು ನಿರೀಕ್ಷಿಸಿದ್ದೇವೆ. ರಾಜ್ಯ ಸರಕಾರ ಕೂಡ ಉಚಿತವಾಗಿ ಅಥವಾ ಕಡಿಮೆ ದರದಲ್ಲಿ ಮಾಸ್ಕ್ಗಳನ್ನು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಕಳೆದ ವಾರ ನಡೆದ ಬಿಎಂಸಿ ಅಧಿಕಾರಿಗಳ ಸಭೆಯಲ್ಲಿ ಕಮಿಷನರ್‌ ಪ್ರತಿನಿತ್ಯ 20 ಸಾವಿರ ಟೆಸ್ಟ್‌ನ ಟಾರ್ಗೆಟ್‌ ನೀಡಿದ್ದರು. ಫಿವರ್‌ ಕ್ಯಾಂಪ್‌, ಸಂಪರ್ಕ ಪತ್ತೆ, ತ್ವರಿತ ಪರೀಕ್ಷೆಗಳಿಗೆ ಕ್ರಮ ಕೈಗೊಳ್ಳಲು ಹಾಗೂ ಪ್ರತಿ ಅಧಿಕಾರಿಗಳೂ ಒಂದೊಂದು ಕಂಟೈನ್ಮೆಂಟ್‌ ವಲಯದ ಉಸ್ತುವಾರಿ ಹೊರಲು ಸೂಚಿಸಿದ್ದರು.

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.