ನವೋದಯ ಕಲಾರಂಗ ಮುಂಬಯಿ ವಾರ್ಷಿಕೋತ್ಸವ ಸಂಭ್ರಮಕ್ಕೆ ಚಾಲನೆ


Team Udayavani, Feb 7, 2018, 4:06 PM IST

0502mum06.jpg

ಮುಂಬಯಿ: ನವೋದಯ ಕಲಾರಂಗ ಮುಂಬಯಿ 30 ನೇ ವಾರ್ಷಿಕೋತ್ಸವ ಸಂಭ್ರಮವು ಫೆ. 4 ರಂದು ಅಪರಾಹ್ನ 2.30 ರಿಂದ ಸಾಂತಾಕ್ರೂಜ್‌ ಪೂರ್ವದ ಬಿಲ್ಲವ ಭವನದ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ಅತಿಥಿ-ಗಣ್ಯರು ದೀಪಪ್ರಜ್ವಲಿಸಿ ಸಮಾರಂಭಕ್ಕೆ ಚಾಲನೆ ನೀಡಿದರು. ಪುರೋಹಿತ ಡಾ| ಪ್ರವೀಣ್‌ ಜೆ. ಭಟ್‌ ಅವರು ಆಶೀರ್ವಚನ ನೀಡಿದರು.  ಅಧ್ಯಕ್ಷತೆಯನ್ನು ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಮಾಜಿ ಅಧ್ಯಕ್ಷ ಶ್ಯಾಮ್‌ ಎನ್‌. ಶೆಟ್ಟಿ ವಹಿಸಿದ್ದರು. 

ಗೌರವ ಅತಿಥಿಗಳಾಗಿ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಅಧ್ಯಕ್ಷ ನ್ಯಾಯವಾದಿ ಸುಭಾಶ್‌ ಬಿ. ಶೆಟ್ಟಿ, ಬಿಲ್ಲವರ ಅಸೋಸಿಯೇಶನ್‌ ಕಲ್ವಾ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ನಾರಾಯಣ ಎಲ್‌. ಸುವರ್ಣ, ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಉಪಾಧ್ಯಕ್ಷ ಅರವಿಂದ ಶೆಟ್ಟಿ, ಬಿಲ್ಲವರ ಅಸೋಸಿಯೇಶನ್‌ ಕಲ್ವಾ ಸ್ಥಳೀಯ ಸಮಿತಿಯ ಉಪ ಕಾರ್ಯಾಧ್ಯಕ್ಷ ಹರೀಶ್‌ ಪಿ. ಸಾಲ್ಯಾನ್‌ ಬಜೆಗೋಳಿ, ಬಿಲ್ಲವರ ಅಸೋಸಿಯೇಶನ್‌ ಅಂಧೇರಿ ಸ್ಥಳೀಯ ಕಚೇರಿಯ ಕಾರ್ಯಾಧ್ಯಕ್ಷ ರವೀಂದ್ರ ಎಸ್‌. ಕೋಟ್ಯಾನ್‌, ಉದ್ಯಮಿ ಹರೀಶ್‌ ಜಿ. ಅಮೀನ್‌, ಬಿಲ್ಲವರ ಅಸೋಸಿಯೇಶನ ಮಲಾಡ್‌ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ಸಂತೋಷ್‌ ಪೂಜಾರಿ, ಬಂಟರ ಸಂಘ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ  ಲತಾ ಜಯರಾಮ್‌ ಶೆಟ್ಟಿ ಹಾಗೂ ನ್ಯಾಯವಾದಿ ಸೌಮ್ಯಾ ಸಿ. ಪೂಜಾರಿ ಅವರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಸಂಸ್ಥೆಯ ಸಾಧಕ ಪುರಸ್ಕಾರವನ್ನು ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ಉಪಾಧ್ಯಕ್ಷ, ಚಲನಚಿತ್ರ ನಿರ್ದೇಶಕ, ನಟ, ನಿರ್ಮಾಪಕ  ಡಾ| ರಾಜಶೇಖರ್‌ ಕೋಟ್ಯಾನ್‌ ಅವರಿಗೆ ಗಣ್ಯರ ಸಮ್ಮುಖದಲ್ಲಿ ಪ್ರದಾನಿಸಿ ಗೌರವಿಸಲಾಯಿತು.  ಅಲ್ಲದೆ ವಿವಿಧ ಕ್ಷೇತ್ರಗಳಲ್ಲಿ ಗಮನೀಯ ಸಾಧನೆಗೈದ ಚಲನಚಿತ್ರ ನಟ, ರಂಗಭೂಮಿ ಕಲಾವಿದ ಭವಾನಿ ಶಂಕರ್‌ ಶೆಟ್ಟಿ, ಕನ್ನಡ ವೆಲ್ಫೆàರ್‌ ಸೊಸೈಟಿ ಘಾಟ್‌ಕೋಪರ್‌ ಅಧ್ಯಕ್ಷ, ರಂಗಕಲಾವಿದ ನವೀನ್‌ ಶೆಟ್ಟಿ ಇನ್ನಬಾಳಿಕೆ, ಬಿಲ್ಲವರ ಅಸೋಸಿಯೇಶನ್‌ ಸಾಂಸ್ಕೃತಿಕ ಸಮಿತಿಯ ಕಾರ್ಯದರ್ಶಿ ಅಶೋಕ್‌ ಸಸಿಹಿತ್ಲು ಅವರನ್ನು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಿ ಗೌರವಿಸಲಾಯಿತು.  ರಂಗಕಲಾವಿದ ಜಿ.ಕೆ. ಕೆಂಚನಕೆರೆ ಅವರು ಕಾರ್ಯಕ್ರಮ ನಿರ್ವಹಿಸಿದರು.

ಸಂಸ್ಥೆಯ ಅಧ್ಯಕ್ಷ ಎಸ್‌. ಟಿ. ವಿಜಯಕುಮಾರ್‌, ಗೌರವ ಪ್ರಧಾನ ಕಾರ್ಯದರ್ಶಿ 
ಪ್ರತಿಮಾ ಬಂಗೇರ, ಗೌರವ ಕೋಶಾಧಿಕಾರಿ ಚಂದ್ರಕಾಂತ್‌ ಸಸಿಹಿತ್ಲು ಹಾಗೂ ಇತರ ಪದಾಧಿಕಾರಿಗಳು, ಮಹಿಳಾ ವಿಭಾಗದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯ-ಸದಸ್ಯೆಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮವಾಗಿ ಸಂಸ್ಥೆಯ ಸದಸ್ಯ ಬಾಂಧವರಿಂದ ನೃತ್ಯ ವೈವಿಧ್ಯ ಹಾಗೂ ರವಿ ಆಚಾರ್ಯ ರಚಿಸಿ, ಚಂದ್ರಕಾಂತ್‌ ಸಾಲ್ಯಾನ್‌ ಇವರ ನಿರ್ದೇಶನದಲ್ಲಿ ಪಗಡೆದ ಪಂತ ತುಳು ಪೌರಾಣಿಕ ನಾಟಕವು ಸಂಸ್ಥೆಯ ಕಲಾವಿದರುಗಳಿಂದ ಪ್ರದರ್ಶನಗೊಂಡು ಕಲಾಪ್ರೇಮಿಗಳ ಮನರಂಜಿಸಿತು.  ಕಲಾಭಿಮಾನಿ ಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. 

ಚಿತ್ರ-ವರದಿ : ಸುಭಾಶ್‌ ಶಿರಿಯಾ

ಟಾಪ್ ನ್ಯೂಸ್

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.