ನವೋದಯ ಕನ್ನಡ ಸೇವಾ ಸಂಘದ ಸುವರ್ಣ ಮಹೋತ್ಸವ ಸರಣಿ ಕಾರ್ಯಕ್ರಮ
Team Udayavani, Dec 12, 2018, 5:41 PM IST
ಥಾಣೆ: ನವೋದಯ ಕನ್ನಡ ಸಂಘವು ಐವತ್ತು ವರ್ಷಗಳನ್ನು ಪೂರೈಸಿರುವುದು ಅಭಿಮಾನದ ಸಂಗತಿಯಾಗಿದೆ. ಒಂದು ಪ್ರತಿಷ್ಠಿತ ವಿದ್ಯಾಸಂಸ್ಥೆಯೊಂದಿಗೆ ಗುರುತಿಸಿ ಕೊಂಡಿರುವ ಸಂಘವು ಸಾವಿರಾರು ಮಕ್ಕಳಿಗೆ ಜ್ಞಾನ ದಾಸೋಹವನ್ನು ನೀಡುವಲ್ಲಿ ಯಶಸ್ವಿಯಾಗಿದೆ ಎಂದರೆ ಅದು ಸಾಮಾನ್ಯದ ಮಾತಲ್ಲ. ಎಲ್ಲರೂ ಅಭಿಮಾನಪಡುವಂತಹ ವಿಷಯವಾಗಿದೆ. ಮಹಾನ್ ಸಾಧನೆ ಯನ್ನು ಮಾಡಿರುವ ಈ ಸಂಸ್ಥೆ ಅರ್ಥಪೂರ್ಣವಾಗಿ ಯಶಸ್ಸಿನ ಉತ್ತುಂಗಕ್ಕೇರಿ ಶತಮಾನೋತ್ಸವವನ್ನು ಆಚರಿಸುವಂತಾಗಲಿ ಎಂದು ಥಾಣೆ ಮೇಯರ್ ಮೀನಾಕ್ಷೀ ರಾಜೇಂದ್ರ ಶಿಂಧೆ ಪೂಜಾರಿ ಅವರು ಹೇಳಿದರು.
ಥಾಣೆಯ ಕಾಶಿನಾಥ್ ಘಾಣೇಕರ್ ಸಭಾಗೃಹದಲ್ಲಿ ನಡೆದ ನವೋದಯ ಕನ್ನಡ ಸೇವಾ ಸಂಘದ ಸುವರ್ಣ ಮಹೋತ್ಸವ ಸರಣಿ ಕಾರ್ಯಕ್ರಮ-6 ಅನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾವು ತುಳು-ಕನ್ನಡಿಗರು ಎಂಬ ಅಭಿಮಾನದೊಂದಿಗೆ ಮರಾಠಿ ಮಣ್ಣನ್ನು ಗೌರವಿಸುವ ಗುಣವನ್ನು ಬೆಳೆಸಿಕೊಳ್ಳಬೇಕು. ನಾವು ಮರಾಠಿ ಮಣ್ಣಿನಲ್ಲಿ ಬೆಳೆದರು ಕೂಡಾ ತುಳುನಾಡಿನವಳು ಎಂಬ ಅಭಿಮಾನ ನನಗಿದೆ. ಮರಾಠಿ ಸಂಸ್ಕೃತಿಯೊಂದಿಗೆ ತುಳುನಾಡ ಸಂಸ್ಕೃತಿ-ಸಂಸ್ಕಾರವನ್ನು ಆರಾಧಿಸುತ್ತೇನೆ. ತುಳು-ಕನ್ನಡಿಗರು ಮರಾಠಿ ಮಣ್ಣಿನಲ್ಲಿ ಒಗ್ಗಟ್ಟಿನಿಂದ, ಪ್ರೀತಿ, ಗೌರವದಿಂದ ಬಾಳಿ ಸಮಾಜ ಪರ ಕಾರ್ಯಕ್ರಮಗಳಲ್ಲಿ ತೊಡಗಿರುವುದು ಅಭಿಮಾನದ ಸಂಗತಿಯಾಗಿದೆ. ತಾಯ್ನಾಡ ಋಣದೊಂದಿಗೆ ಮರಾಠಿ ಮಣ್ಣಿನ ಋಣ ತೀರಿಸಲು ನಾವು ಮುಂದಾಗಬೇಕು ಎಂದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಥಾಣೆ ಬಂಟ್ಸ್ ಅಸೋಸಿಯೇಶನ್ ಅಧ್ಯಕ್ಷ ಕುಶಲ್ ಸಿ. ಭಂಡಾರಿ ಇವರು ಮಾತನಾಡಿ, 50 ವರ್ಷಗಳ ಹಿಂದೆ ಕನ್ನಡದ ಮನಸುಗಳನ್ನು ಒಗ್ಗೂಡಿಸಿ, ಕನ್ನಡದ ಬೀಜವನ್ನು ಬಿತ್ತಿದ ಹಿರಿಯರಿಗೆ ನಾವಿಂದು ತಲೆಬಾಗಬೇಕು. ನಾವು ದುಡಿದು ಹಣ ಸಂಪಾದಿಸುವುದಕ್ಕಿಂತ ಈ ರೀತಿಯ ಸಮಾಜಪರ ಸೇವೆಯಲ್ಲಿ ತೊಡಗಿಸಿಕೊಂಡರೆ ನಮ್ಮ ಜನ್ಮ ಸಾರ್ಥಕವಾಗಬಹುದು. ನವೋ ದಯ ಕನ್ನಡ ಸೇವಾ ಸಂಘದ ಎಲ್ಲಾ ಕಾರ್ಯಕ್ರಮಗಳಲ್ಲೂ ಥಾಣೆ ಬಂಟ್ಸ್ ನ ಸಹಕಾರ ನಿರಂತರವಾಗಿರುತ್ತದೆ ಎಂದು ನುಡಿದರು.
ಇನ್ನೋರ್ವ ಅತಿಥಿ ಜಾಸ್ಮಿàನ್ ಕೋ. ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಕಾರ್ಯಾಧ್ಯಕ್ಷ ಡಾ| ಸುರೇಂದ್ರ ಶೆಟ್ಟಿ ಅವರು ಮಾತನಾಡಿ, ಐವತ್ತು ವರ್ಷದ ಹಿಂದೆ ಹುಟ್ಟಿದ ಈ ಸಂಸ್ಥೆ ಹೆಮ್ಮರವಾಗಿ ಬೆಳೆದು ಪರಿಸರದವರಿಗೆಲ್ಲಾ ಫಲ ನೀಡುತ್ತಿದೆ. ಉತ್ತಮ ಉದ್ದೇಶದಿಂದ ಯಾವುದೇ ಕೆಲಸ ಮಾಡಿದರೂ ಅದು ಫಲಕಾರಿ ಯಾಗುತ್ತದೆ ಎನ್ನುವುದಕ್ಕೆ ಈ ಸಂಸ್ಥೆ ನಿದರ್ಶನ. ಪದಾಧಿಕಾರಿಗಳೆಲ್ಲರ ನಿಸ್ವಾರ್ಥ ಸೇವೆಯಿಂದ ಬೆಳೆದು ಬಂದಿರುವ ಈ ಸಂಸ್ಥೆಯು ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿಯನ್ನು ಕಂಡು ವಜ್ರಮಹೋತ್ಸವವನ್ನು ಆಚರಿಸುವಂತಾಗಲಿ ಎಂದರು.
ಅತಿಥಿಯಾಗಿ ಪಾಲ್ಗೊಂಡ ಕ್ರಿಸ್ಟಲ್ ಆಟೋಮೇಶನ್ ಪ್ರೈವೇಟ್ ಲಿಮಿಟೆಡ್‌ನ ಆಡಳಿತ ನಿರ್ದೇಶಕ ಚಂದ್ರಶೇಖರ್ ಎಸ್. ಶೆಟ್ಟಿ ಅವರು ಮಾತನಾಡಿ, ನಮ್ಮ ಹಿರಿಯರು ಸ್ಥಾಪಿಸಿದ ಈ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಮಾಡುತ್ತಿರುವ ಸೇವೆ ಅಪಾರವಾಗಿದೆ. ಸುಮಾರು ಮೂರು ಸಾವಿರಕ್ಕೂ ಅಧಿಕ ಮಕ್ಕಳು ಶಿಕ್ಷಣವನ್ನು ಪಡೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಅತೀ ಕಡಿಮೆ ಶುಲ್ಕದಲ್ಲಿ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣವನ್ನು ನೀಡುತ್ತಿರುವ ಸಂಸ್ಥೆ ಇದಾಗಿದೆ. ಹಿರಿಯರು ಕಂಡ ಕನಸು ಇಂದು ನನಸಾಗುತ್ತಿರುವುದು ಅಭಿನಂದನೀಯ. ಈ ಶಾಲೆಯಲ್ಲಿ ಕಲಿತ ಮಕ್ಕಳು ಭವಿಷ್ಯದಲ್ಲಿ ಉನ್ನತ ಹುದ್ಧೆಯನ್ನು ಅಲಂಕರಿಸಿ ಶಾಲೆಯ ಋಣ ತೀರಿಸುವತ್ತ ಮನಸು ಮಾಡಬೇಕು ಎಂದರು.
ಸಮಾರಂಭದಲ್ಲಿ ಸ್ಥಾಪಕ ಹಿರಿಯ ಪದಾಧಿಕಾರಿಗಳನ್ನು, ಪೂರ್ವ ಕಾರ್ಯಕಾರಿ ಸಮಿತಿಯ ಸದಸ್ಯರನ್ನು, ಸಂಘದ ಏಳ್ಗೆಗಾಗಿ ಶ್ರಮಿಸಿ ಅಗಲಿದ ಚೇತನರ ಸ್ಮರಣಾರ್ಥಕವಾಗಿ ಅವರ ಪತ್ನಿ, ಪರಿವಾರದ ಸದಸ್ಯರನ್ನು ಗಣ್ಯರ ಸಮ್ಮುಖದಲ್ಲಿ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಲಾಯಿತು. ಅತಿಥಿ- ಗಣ್ಯರು ದೀಪಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭಹಾರೈಸಿದರು.
ಸಂಘದ ಗೌರವ ಪ್ರಧಾನ ಕಾರ್ಯ ದರ್ಶಿ ದಯಾನಂದ ಎಸ್. ಶೆಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸಂಸ್ಥೆಯ ಹುಟ್ಟು ,ಬೆಳವಣಿಗೆ, ಸಂಘದ ಆಶ್ರಯದಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕಾರ್ಯಕ್ರಮದ ಬಗ್ಗೆ, ನವೋದಯ ಕನ್ನಡ ಸೇವಾ ಸಂಘ ಸಂಚಾಲಕತ್ವದಲ್ಲಿ ನಡೆಯುತ್ತಿರುವ ಹೈಸ್ಕೂಲ್ ಮತ್ತು ಕಾಲೇಜಿನ ವಾರ್ಷಿಕ ಚಟುವಟಿಕೆಗಳನ್ನು, ಶಾಲಾ ವಿದ್ಯಾರ್ಥಿಗಳ ಸಾಧನೆ, ಶಿಕ್ಷಕ ವರ್ಗದ ಪರಿಶ್ರಮದ ಸಂಪೂರ್ಣ ಮಾಹಿತಿ ನೀಡಿದರು.
ಅತಿಥಿ-ಗಣ್ಯರನ್ನು ಗೌರವ ಪ್ರಧಾನ ಕೋಶಾಧಿಕಾರಿ ಸುನೀಲ್ ಎಸ್. ಶೆಟ್ಟಿ, ಉಪಾಧ್ಯಕ್ಷ ಕೇಶವ ಟಿ. ನಾಯಕ್, ಜತೆ ಕಾರ್ಯದರ್ಶಿ ಪ್ರಶಸ್ಥ ಎಸ್. ಶೆಟ್ಟಿ, ಜತೆ ಕೋಶಾಧಿಕಾರಿ ದಯಾನಂದ್ ಬಿ. ಹೆಗ್ಡೆ ಅವರು ಪರಿಚಯಿಸಿದರು. ಅಧ್ಯಕ್ಷ ಜಯ ಕೆ. ಶೆಟ್ಟಿ ಅವರು ಅತಿಥಿ-ಗಣ್ಯರನ್ನು ಶಾಲು ಹೊದೆಸಿ, ಪುಷ್ಪಗುತ್ಛ, ಸ್ಮರಣಿಕೆಯನ್ನಿತ್ತು ಗೌರವಿಸಿದರು.
ವಿದ್ಯಾರ್ಥಿಗಳು ಪ್ರಾರ್ಥನೆಗೈದರು. ವೇದಿಕೆಯಲ್ಲಿ ಅತಿಥಿ-ಗಣ್ಯರೊಂದಿಗೆ ಸಂಘದ ಪದಾಧಿಕಾರಿಗಳು, ಸಂಘದ ಉಪಾಧ್ಯಕ್ಷ ಕೇಶವ ಟಿ. ನಾಯಕ್ ಹಾಗೂ ನವೋದಯ ಮಾಧ್ಯಮಿಕ ಶಾಲೆಯ ಮುಖ್ಯ ಶಿಕ್ಷಕಿ ಅಜಿತಾ ಪ್ರದೀಪ್ ಕುಮಾರ್ ಮತ್ತು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಅನುರಾಧಾ ಅರ್ಜುನ್ ವಾಡ್ಕರ್ ಉಪಸ್ಥಿತರಿದ್ದರು. ಕಾರ್ಯಕಾರಿ ಸಮಿತಿಯ ಸದಸ್ಯ ರವಿ ಹೆಗ್ಡೆ ಹೆರ್ಮುಂಡೆ ಕಾರ್ಯಕ್ರಮ ನಿರ್ವಹಿಸಿದರು. ಗೌರವ ಪ್ರಧಾನ ಕಾರ್ಯದರ್ಶಿ ದಯಾನಂದ ಎಸ್. ಶೆಟ್ಟಿ ವಂದಿಸಿದರು. ಸಂಘದ ಪದಾಧಿ ಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಯಶಸ್ಸಿಗೆ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.