ನವೋದಯ ಕನ್ನಡ ಸೇವಾ ಸಂಘ: ಸುವರ್ಣ ಮಹೋತ್ಸವ ಉದ್ಘಾಟನೆ


Team Udayavani, Jul 17, 2018, 2:01 PM IST

1507mum04.jpg

ಮುಂಬಯಿ: ಕರಾವಳಿ ಕರ್ನಾಟಕದ ಜನರು ಬುದ್ಧಿವಂತರು. ಹೃದಯ ಶ್ರೀಮಂತಿಕೆ ಉಳ್ಳವರು. ವಿದ್ಯೆಗೆ ಹೆಚ್ಚು ಮಹತ್ವವ‌ನ್ನು ನೀಡುತ್ತಾರೆ. ಐವತ್ತು ವರ್ಷಗಳ ಹಿಂದೆ ಹಿರಿಯರು ಬಡವರಿಗೆ ಶಿಕ್ಷಣ ಸಿಗಬೇಕು ಎಂಬ ಸದುದ್ದೇಶದಿಂದ ಸಂಘಟನೆಯನ್ನು ಸ್ಥಾಪಿಸಿ ಆ ಮೂಲಕ ಶಿಕ್ಷಣ ಸಂಸ್ಥೆಯನ್ನು ತೆರೆದಿರುವುದು ಅಭಿನಂದನೀಯ. ಸಂಸ್ಥೆಯು ಪ್ರಸ್ತುತ ಹೆಮ್ಮರವಾಗಿ ಬೆಳೆದಿದ್ದು, ಹಿರಿಯರು ಕಂಡ ಕನಸು ನನಸಾಗಿದೆ. ನವೋದಯ ಕನ್ನಡ ಸೇವಾ ಸಂಘದ ಶೈಕ್ಷಣಿಕ ಸೇವೆ ಅಭಿನಂದನೀಯವಾಗಿದೆ ಎಂದು ಉದ್ಯಮಿ, ಎಂಆರ್‌ಜಿ  ಗ್ರೂಪ್‌ನ ಕಾರ್ಯಾಧ್ಯಕ್ಷ ಪ್ರಕಾಶ್‌ ಶೆಟ್ಟಿ ಅವರು ನುಡಿದರು.

ಜು. 15 ರಂದು ಚೆಂಬೂರು ಫೈನ್‌ಆರ್ಟ್ಸ್ ಆಡಿಟೋರಿಯಂನಲ್ಲಿ ಜರಗಿದ ನವೋದಯ ಕನ್ನಡ ಸೇವಾ ಸಂಘದ ಸುವರ್ಣ ಮಹೋತ್ಸವ ಸಮಾರಂಭದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಅವರು, ಶಿಕ್ಷಣ ಸಂಸ್ಥೆಗೆ ವಿದ್ಯಾರ್ಥಿಗಳೇ ಸಂಪತ್ತಾಗಿದ್ದು, ಸಂಸ್ಥೆಯು ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನ ನೀಡುತ್ತಿದೆ ಎಂದರೆ ಅದು ಸಾಮಾನ್ಯ ಮಾತಲ್ಲ. ಇಂದಿನ ಸಮಾರಂಭವು ಉತ್ತಮ ರೀತಿಯಲ್ಲಿ ನಡೆದಿದ್ದು, ನಾಡಿನ ಕಲೆ, ಸಂಸ್ಕೃತಿಯು ವಿದ್ಯಾರ್ಥಿಗಳಿಂದ  ಮೇಳೈಸಿದೆ. ಕಲೆಯ ಮೇಲಿನ ಅವರ ಅಭಿರುಚಿ ಹಾಗೂ ನಿಷ್ಠೆ ಅವರನ್ನು ಮುಂದೆ ಉತ್ತಮ ನಾಗರಿಕರನ್ನಾಗಿ ಬೆಳೆಸುವಲ್ಲಿ ಸಹಕಾರಿಯಾಗುತ್ತದೆ. 

ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡುವುದು ತನಗೆ ಆತ್ಮತೃಪ್ತಿಯನ್ನು ನೀಡುತ್ತದೆ. ಬಡ ವಿದ್ಯಾರ್ಥಿಗಳ ನೋವು ನನಗೆ ತಿಳಿದಿದೆ. ಆ ಕಾರಣದಿಂದ ನಾನು ಸದಾ ಸಹಕರಿಸುತ್ತಿರುತ್ತೇನೆ. ನವೋದಯ ಶಿಕ್ಷಣ ಸಂಸ್ಥೆಯೊಂದಿಗೆ ತನಗೆ ಆತ್ಮೀಯವಾದ ಸಂಬಂಧವಿದ್ದು, ಇದು ಉತ್ತಮ ಶಿಕ್ಷಣ ಸಂಸ್ಥೆಯಾಗಿ ಇನ್ನಷ್ಟು ಬೆಳಗುವಂತಾಗಬೇಕು ಎಂದು ನುಡಿದರು.

ಇನ್ನೋರ್ವ ಅತಿಥಿ ಬಿಸಿಸಿಐನ ಮಾಜಿ ಮಹಾ ಪ್ರಬಂಧಕ ಪ್ರೊ| ರತ್ನಾಕರ ಶೆಟ್ಟಿ ಇವರು ಮಾತನಾಡಿ, ನಮ್ಮ ಒಗ್ಗಟ್ಟಿನಿಂದಲೇ ಸಂಸ್ಥೆ ಬೆಳೆಯಲು ಸಾಧ್ಯವಾಗುತ್ತದೆ. ಕರಾವಳಿಯ ಜನತೆ ತಮ್ಮದೇ ಆದ ವಿಶಿಷ್ಟ ಸಂಸ್ಕೃತಿಯನ್ನು ಹೊಂದಿದ್ದಾರೆ. ಅಲ್ಲಿಯ ಜನರು ಮುಂಬಯಿಗೆ ಬಂದು ಸಂಘಟನೆಗಳನ್ನು ಸ್ಥಾಪಿಸಿ ಆ ಮೂಲಕ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿ ಶೈಕ್ಷಣಿಕ ಕ್ಷೇತ್ರದಲ್ಲೂ ತಮ್ಮ ಸೇವೆಯನ್ನು ನೀಡುತ್ತಿರುವುದು ಅಭಿನಂದನೀಯ ಎಂದರು.

ಅತಿಥಿಯಾಗಿ ಪಾಲ್ಗೊಂಡ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಅಧ್ಯಕ್ಷ ಚಂದ್ರಶೇಖರ ಪಾಲೆತ್ತಾಡಿ ಇವರು ಮಾತನಾಡಿ, ನಾವು ನಮ್ಮ ಸುಸಂಸ್ಕೃತ ಬದುಕನ್ನು ಮುಂದಿನ ಪೀಳಿಗೆಗೆ ಶಿಕ್ಷಣದ ಮೂಲಕ ಕಲಿಸಬೇಕಾದ ಅಗತ್ಯವಿದೆ. ಶಿಕ್ಷಣ ಯಾವುದೇ ಭಾಷೆಯಲ್ಲಿದ್ದರೂ ಅದು ಶಿಕ್ಷಣವೇ. ಈ ಕಾರ್ಯವನ್ನು ನವೋದಯ ಕನ್ನಡ ಸೇವಾ ಸಂಘ ಕಳೆದ ಐವತ್ತು ವರ್ಷಗಳಿಂದ ಮಾಡುತ್ತಾ ಬಂದಿದ್ದು, ಇದಕ್ಕೆ ಕಾರಣೀಭೂತರಾದ ಮಹಾನೀಯರು ಉತ್ತಮ ಸಮಾಜ ನಿರ್ಮಾಣದ ಕನಸನ್ನು ಹೊಂದಿದವರಾಗಿದ್ದಾರೆ. ಅವರ ಕನಸು ಇಂದು ನನಸಾಗಿದೆ ಎಂದು ಹೇಳಿದರು.
ಸಮಾರಂಭದಲ್ಲಿ ಸಂಸ್ಥೆಯ ಸ್ಥಾಪಕ ಪದಾಧಿಕಾರಿಗಳು ಹಾಗೂ ಸಮಿತಿಯ ಸದಸ್ಯರಾದ ಕೆ. ಎಸ್‌. ಬಂಗೇರ, ಎಂ. ಬಿ. ಸಾಲ್ಯಾನ್‌, ಎಸ್‌. ಬಿ. ಕೋಟ್ಯಾನ್‌, ಆರ್‌. ಬಿ. ಶೆಟ್ಟಿ, ಎಲ್‌. ಬಿ. ಪಿಜಾರ್‌, ವೈ. ಎಸ್‌. ಶೆಟ್ಟಿ ಮೊದಲಾದವರನ್ನು ಅತಿಥಿ-ಗಣ್ಯರು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿದರು.  ಸಮ್ಮಾನ ಸ್ವೀಕರಿಸಿ ಮಾತನಾಡಿದ ಕೆ. ಎಸ್‌. ಬಂಗೇರ ಅವರು, ಕನ್ನಡಿಗರು ಒಟ್ಟು ಸೇರಿ ಸಮಾಜ ಸೇವೆಯ ದೃಷ್ಟಿಯಿಂದ ನಿರ್ಮಿಸಿದ ಈ ಸಂಸ್ಥೆ ಮುಂದೆ ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆಗೈದು ಇಂದು ಪ್ರತಿಷ್ಠಿತ ಸಂಸ್ಥೆಯಾಗಿ ಬೆಳೆದಿರುವುದು ಸಂತೋಷದ ಸಂಗತಿಯಾಗಿದೆ ಎಂದರು.

ವೇದಿಕೆಯಲ್ಲಿ ಉದ್ಯಮಿ ಕೃಷ್ಣ ವೈ. ಶೆಟ್ಟಿ ಉಪಸ್ಥಿತರಿದ್ದು ಶುಭಹಾರೈಸಿದರು. ಗೌರವ ಪ್ರಧಾನ ಕಾರ್ಯದರ್ಶಿ ದಯಾನಂದ ಎಸ್‌. ಶೆಟ್ಟಿ ಅವರು ಸಂಸ್ಥೆಯ ಸಿದ್ಧಿ-ಸಾಧನೆಗಳನ್ನು ವಿವರಿಸಿದರು. ಗೌರವ ಪ್ರಧಾನ ಕೋಶಾಧಿಕಾರಿ ಸುನೀಲ್‌ ಎಸ್‌. ಶೆಟ್ಟಿ ವಂದಿಸಿದರು. ವೇದಿಕೆಯಲ್ಲಿ ಉಪಾಧ್ಯಕ್ಷ ಕೇಶವ ಟಿ. ನಾಯಕ್‌, ಜತೆ ಕಾರ್ಯದರ್ಶಿ ಪ್ರಶಾಂತ್‌ ಎಸ್‌. ಶೆಟ್ಟಿ, ಜತೆ ಕೋಶಾಧಿಕಾರಿ ದಯಾನಂದ ಬಿ. ಹೆಗ್ಡೆ ಉಪಸ್ಥಿತರಿದ್ದರು. 

ಸಮಿತಿಯ ಸದಸ್ಯ ರವಿ ಹೆಗ್ಡೆ ಹೆರ್ಮುಂಡೆ ಕಾರ್ಯಕ್ರಮ ನಿರ್ವಹಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಸತೀಶ್‌ ಎರ್ಮಾಳ್‌ ನಿರ್ವಹಿಸಿದರು. ಸಂಸ್ಥೆಯ ಸುವರ್ಣ ಮಹೋತ್ಸವದ ಅಂಗವಾಗಿ ಕವಿ, ಲೇಖಕ ಪೇತ್ರಿ ವಿಶ್ವನಾಥ ಶೆಟ್ಟಿ ರಚಿಸಿರುವ ಗೀತೆಯನ್ನು ಪದ್ಮನಾಭ ಸಸಿಹಿತ್ಲು ಅವರ ಸಂಗೀತ ಸಂಯೋಜನೆಯೊಂದಿಗೆ ಶಾಲಾ ವಿದ್ಯಾರ್ಥಿಗಳು ಹಾಡಿದರು. 

ಐವತ್ತು ವರ್ಷಗಳ ಹಿಂದೆ ಥಾಣೆ ಪರಿಸರದ ತುಳು-ಕನ್ನಡಿಗರು ಸಂಘಟಿತರಾಗಿ ಸಂಸ್ಥೆಯನ್ನು  ಸ್ಥಾಪಿಸಿದರು. ಆ ಸಂಸ್ಥೆ ಇಂದು ಹೆಮ್ಮರವಾಗಿ ಬೆಳೆದು ಸಾವಿರಾರು ಮಕ್ಕಳ ಬದುಕನ್ನು ರೂಪಿಸಿ ನೂರಾರು ಕುಟುಂಬಗಳಿಗೆ ಅನ್ನವನ್ನು ನೀಡುತ್ತಿದೆ. ಉತ್ತಮ ಶಿಕ್ಷಕ-ಶಿಕ್ಷಕಿಯರು ಹಾಗೂ ಆಡಳಿತ ಸಮಿತಿಯ ಒಗ್ಗಟ್ಟಿನ ಕಾರ್ಯದಿಂದ ಶಾಲೆಯು ನಿರಂತರವಾಗಿ ಶೇ. 100 ಫಲಿತಾಂಶನ್ನು ತರುತ್ತಿರುವುದು ನಮಗೆ ಸಂತೋಷದ ಸಂಗತಿಯಾಗಿದೆ. ದಾನಿಗಳ ಸಹಕಾರದಿಂದ ಶಾಲೆಗೆ ಹೊಸ ಕಟ್ಟಡ ಹಾಗೂ ಆಧುನಿಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಈ ಸಂದರ್ಭದಲ್ಲಿ ನಿಧಿ ಸಂಗ್ರಹ ಸಮಿತಿಯ ಕಾರ್ಯಾಧ್ಯಕ್ಷ ಶೇಖರ್‌ ಶೆಟ್ಟಿ ಅವರ ಯೋಗದಾನವನ್ನು ಮರೆಯುವಂತಿಲ್ಲ. ಆಧುನಿಕ ಶಿಕ್ಷಣ ವ್ಯವಸ್ಥೆಗೆ ಅನುಗುಣವಾಗಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದೆ. ಇದು ಸಂಸ್ಥೆಯ ಧ್ಯೇಯೋದ್ಧೇಶವೂ ಆಗಿದೆ. ಈ ನಿಟ್ಟಿನಲ್ಲಿ ದಾನಿಗಳ, ಶಿಕ್ಷಣಪ್ರೇಮಿಗಳ ಸಹಕಾರವನ್ನು ಮರೆಯುವಂತಿಲ್ಲ. ಸಂಸ್ಥೆಯ ಸುವರ್ಣ ಮಹೋತ್ಸವದ ಸರಣಿ ಕಾರ್ಯಕ್ರಮಗಳಿಗೆ ತುಳು-ಕನ್ನಡಿಗರು, ದಾನಿಗಳ ಪ್ರೋತ್ಸಾಹ, ಸಹಕಾರ ಸದಾಯಿರಲಿ 
– ಜಯ ಕೆ. ಶೆಟ್ಟಿ 
ಅಧ್ಯಕ್ಷರು : ನವೋದಯ ಕನ್ನಡ ಸೇವಾ ಸಂಘ ಥಾಣೆ

ಶಿಕ್ಷಣದಲ್ಲಿ ಮಕ್ಕಳನ್ನು ತಿದ್ದುವ ಕೆಲಸವಾಗಬೇಕು: ಒಡಿಯೂರು ಶ್ರೀ
ಸಮಾರಂಭವನ್ನು ದೀಪಪ್ರಜ್ವಲಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀ ಕ್ಷೇತ್ರ ಒಡಿಯೂರಿನ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು, ಪ್ರಜ್ಞಾವಂತ ಪ್ರಜೆಗಳ ನಿರ್ಮಾಣ ಶಿಕ್ಷಕರಿಂದ ಆಗಬೇಕು. ವಿದ್ಯೆ ಎಂಬುವುದು ಬದುಕನ್ನು ರೂಪಿಸಲು ಪ್ರೇರಕವಾಗಿರಬೇಕೇ ಹೊರತು ಮಾರಕವಲ್ಲ. ಶಿಕ್ಷಣದಲ್ಲಿ ಮಕ್ಕಳನ್ನು ತಿದ್ದುವ ಕೆಲಸ ಆದಾಗ ಮಾತ್ರ ಮಕ್ಕಳು ಉತ್ತಮ ನಾಗರಿಕರಾಗಿ ಬೆಳೆಯಲು ಸಾಧ್ಯ. ಕನ್ನಡವನ್ನು ಕಟ್ಟಿಬೆಳೆಸಿದ ಈ ಸಂಸ್ಥೆ ಶಿಕ್ಷಣದ ಮೂಲಕ ಸಮಾಜ ಸೇವೆ ಮಾಡುತ್ತಿದೆ. ಸುವರ್ಣ ಸಂಭ್ರಮವನ್ನು ಆಚರಿಸುತ್ತಿರುವ ಈ ಸಂಘವು ಮುಂಬಯಿಯ ಕನ್ನಡಿಗರ ಸಾಮರ್ಥ್ಯವನ್ನು ತೋರಿಸುತ್ತದೆ. ಕನ್ನಡ ಎನ್ನುವಾಗ ನಮಗೆ ತಾಯಿಯ ಪ್ರೇಮ ಹುಟ್ಟಿಕೊಳ್ಳುತ್ತದೆ. ನವೋದಯ ಕನ್ನಡ ಸೇವಾ ಸಂಘವು ನೂರಾರು ವರ್ಷ ತಮ್ಮ ಸೇವೆಯನ್ನು ಮಾಡುತ್ತಾ, ಸುಸಂಸ್ಕೃತ ಸಮಾಜವನ್ನು ನಿರ್ಮಿಸಲಿ ಎಂದು ಹಾರೈಸಿದರು.

ಚಿತ್ರ-ವರದಿ : ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

1-aaa

Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-SL

Test; ದಕ್ಷಿಣ ಆಫ್ರಿಕಾ ಎದುರು ನಿಕೃಷ್ಟ ಮೊತ್ತಕ್ಕೆ ಶ್ರೀಲಂಕಾ ಆಲೌಟ್‌

1-aaa

Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.