ನೆರೂಲ್: ಮಾತಾಅಮೃತಾನಂದಮಯಿ ಅವರಿಂದ ಆಶೀರ್ವಚನ
Team Udayavani, Mar 5, 2019, 5:09 PM IST
ನವಿಮುಂಬಯಿ: ಮಾತಾ ಶ್ರೀ ಅಮೃತಾನಂದಮಯಿ ಮಠದ ಶ್ರೀ ಮಾತಾ ಅಮೃತಾನಂದಮಯಿ ದೇವಿ ಅವರು ಮಾ. 4ರಂದು ನಗರಕ್ಕೆ ಆಗಮಿಸಿದ್ದು, ಅವರನ್ನು ಭವ್ಯವಾಗಿ ಸ್ವಾಗತಿಸಲಾಯಿತು.
ಮಾ. 4ರಂದು ಮುಂಜಾನೆ 6ರಿಂದ ಲಲಿತ ಸಹಸ್ರನಾಮಾರ್ಚನೆ ಕಾರ್ಯಕ್ರಮ ನಡೆಯಿತು. ಅಲ್ಲದೆ ಧ್ಯಾನ, ಪ್ರವಚನ,, ಭಜನೆ ಇನ್ನಿತರ ಕಾರ್ಯಕ್ರಮಗಳು ನೆರವೇರಿದವು. ಮಾ. 5ರಂದು ನೆರೂಲ್ ಪಶ್ಚಿಮದ ಮಾತಾ ಅಮೃತಾನಂದಮಯಿ ಮಠದ 24ನೇ ವಾರ್ಷಿಕ ಬ್ರಹ್ಮಸ್ಥಾನ ಮಹೋತ್ಸವ ಸಂಭ್ರಮದಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಲಿದ್ದಾರೆ. ಎರಡು ದಿನಗಳ ಕಾಲ ಬೆಳಗ್ಗೆ 11ರಿಂದ ಮಾತಾ ಅಮೃತಾನಂದಮಯಿ ಇವರಿಂದ ಪ್ರವಚನ, ಭಜನೆ, ಧ್ಯಾನ ಹಾಗೂ ದರ್ಶನ ಇನ್ನಿತರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಮಾನವೀಯ ನೆಲೆಯಲ್ಲಿ ಕಾರ್ಯ
ನಿರ್ವಹಿಸುತ್ತಿರುವ ಮಾತಾ ಅಮೃತಾನಂದಮಯಿ ಮಠವು ದೇಶದಾದ್ಯಂತ ಸಮಾಜಪರ ಕಾರ್ಯಕ್ರಮಗಳಲ್ಲಿ ತೊಡಗಿದ್ದು, ನೆರೂಲ್ ಮಠದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನು ನೀಡಲಾಗುತ್ತಿದೆ.
ಬ್ರಹ್ಮಚಾರಿ ಅವ್ಯಮೃತಾ ಚೈತನ್ಯ ಅವರ ನೇತೃತ್ವದಲ್ಲಿ 24ನೇ ವಾರ್ಷಿಕ ಬ್ರಹ್ಮಸ್ಥಾನ ಮಹೋತ್ಸವವು ಜರಗುತ್ತಿದ್ದು, ಸುಮಾರು 50 ಸಾವಿರಕ್ಕೂ ಅಧಿಕ ಭಕ್ತಾದಿಗಳು ಎರಡು ದಿನಗಳ ಕಾಲ ಆಶೀರ್ವಚನ ಪಡೆಯಲಿದ್ದಾರೆ. ಭಕ್ತಾದಿಗಳಿಗೆ ಎಲ್ಲಾ ರೀತಿಯ ಸೌಕರ್ಯಗಳನ್ನು ಮಾಡಲಾಗಿದ್ದು, ಅಮೃತ ಕಾರ್ಯಕರ್ತರು ಸಹಕರಿಸುತ್ತಿದ್ದಾರೆ. ಆಸ್ಪತ್ರೆ, ಶಾಲೆ ಇನ್ನಿತರ ಸೇವಾ ಸಂಸ್ಥೆಗಳನ್ನು ಸ್ಥಾಪಿಸಿ ಅದರ ಮುಖಾಂತರ ಸಮಾಜ ಸೇವೆಯನ್ನು ಗೈಯು ತ್ತಿರುವ ಈ ಸಂಸ್ಥೆಯು ಸಾವಿರಾರು ನಿರ್ಗತಿಕರಿಗೆ ಮನೆ, ಮಹಿಳಾ ಸಬಲೀಕರಣ, ವೈದ್ಯಕೀಯ ನೆರವು ಇನ್ನಿತರ ನೆಲೆಗಳಲ್ಲಿ ಸಹಕರಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.