ಬಂಟರ ಸಂಘ ಮುಂಬಯಿ ನೂತನ ಅಧ್ಯಕ್ಷರಾಗಿ ಚಂದ್ರಹಾಸ್ ಕೆ. ಶೆಟ್ಟಿ ಅವಿರೋಧ ಆಯ್ಕೆ
Team Udayavani, Feb 1, 2021, 7:46 PM IST
ಮುಂಬಯಿ: ಮುಂಬಯಿಯ ಹಿರಿಯ ಪ್ರತಿಷ್ಠಿತ ಸಮಾಜ ಸೇವಾ ಸಂಸ್ಥೆ ಬಂಟರ ಸಂಘ ಮುಂಬಯಿ ಇದರ ನೂತನ ಅಧ್ಯಕ್ಷರಾಗಿ ಸಮಾಜ ಸೇವಕ, ಹಿರಿಯ ಹೊಟೇಲ್ ಉದ್ಯಮಿ, ಸಂಘಟಕ ಚಂದ್ರಹಾಸ್ ಕೆ. ಶೆಟ್ಟಿ ಅವರು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜ. 31ರಂದು ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಘದ 92ನೇ ವಾರ್ಷಿಕ ಮಹಾಸಭೆಯಲ್ಲಿ 2021-2023ರ ಅವಧಿಗೆ ಚಂದ್ರಹಾಸ್ ಕೆ. ಶೆಟ್ಟಿ ಅವರನ್ನು ಸಂಘದ ಮೂವತ್ತನೇ ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಚಂದ್ರಹಾಸ ಕೆ. ಶೆಟ್ಟಿ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಿರಿಯ ನ್ಯಾಯವಾದಿ ಡಿ. ಕೆ. ಶೆಟ್ಟಿ ಪ್ರಕಟಿಸಿದಾಗ ಸದಸ್ಯರು ಹಷೊìದ್ಘಾರದಿಂದ ಅವರನ್ನು ಸ್ವಾಗತಿಸಿ ಅನುಮೋದಿಸಿದರು. ನೂತನ ಅಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ ಅವರನ್ನು ನಿರ್ಗಮನ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಅವರು ಪುಷ್ಪಗುತ್ಛವನ್ನಿತ್ತು ಅಭಿನಂದಿಸಿ ಗೌರವಿಸಿದರು.
ಇದೇ ಸಂದರ್ಭದಲ್ಲಿ ಮಹಿಳಾ ವಿಭಾಗದ ನೂತನ ಕಾರ್ಯಾಧ್ಯಕ್ಷೆಯಾಗಿ ಉಮಾಕೃಷ್ಣ ಶೆಟ್ಟಿ ಮತ್ತು ಯುವ ವಿಭಾಗದ ನೂತನ ಕಾರ್ಯಾಧ್ಯಕ್ಷರಾಗಿ ಸಾಗರ್ ದಿವಾಕರ ಶೆಟ್ಟಿ ಅವರನ್ನು ನೇಮಿಸಲಾಯಿತು.
ಇದನ್ನೂ ಓದಿ:ರಾಯರ ದರ್ಶನದಿಂದ ಜೀವನ ಪಾವನ: ಪ್ರಹ್ಲಾದಾಚಾರ್ಯ
ಮಹಿಳಾ ವಿಭಾಗದ ನಿರ್ಗಮನ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ ಹೆಗ್ಡೆ ಅವರು ನೂತನ ಕಾರ್ಯಾಧ್ಯಕ್ಷೆ ಉಮಾಕೃಷ್ಣ ಶೆಟ್ಟಿ ಅವರನ್ನು ಪುಷ್ಪಗುತ್ಛವನ್ನಿತ್ತು ಅಭಿನಂದಿಸಿದರೆ, ಯುವ ವಿಭಾಗದ ನಿರ್ಗಮನ ಕಾರ್ಯಾಧ್ಯಕ್ಷ ಶರತ್ ಶೆಟ್ಟಿ ಅವರು ನೂತನ ಕಾರ್ಯಾಧ್ಯಕ್ಷ ಸಾಗರ್ ದಿವಾಕರ್ ಶೆಟ್ಟಿ ಅವರನ್ನು ಪುಷ್ಪಗುತ್ಛವನ್ನಿತ್ತು ಅಭಿನಂದಿಸಿ ಗೌರವಿಸಿದರು. ಚಿತ್ರ-ವರದಿ: ಪ್ರೇಮನಾಥ್ ಶೆಟ್ಟಿ ಮುಂಡ್ಕೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
ಲ್ಯಾಂಬೆತ್ಗೆ ಸಚಿವ ಎಂ.ಬಿ.ಪಾಟೀಲ್ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.