ಒಂದು ಹೊತ್ತಿನ ಊಟಕ್ಕೂ ಹೆಣಗಾಡುತ್ತಿರುವ 600ಕ್ಕೂ ಹೆಚ್ಚು ಕೂಲಿ ಕಾರ್ಮಿಕರು
Team Udayavani, Apr 12, 2020, 7:11 PM IST
ಸಾಂದರ್ಭಿಕ ಚಿತ್ರ
ಮುಂಬಯಿ: ಘಾಟ್‌ಕೋಪರ್ ಪೂರ್ವದ ಪ್ರಾದೇಶಿಕ ಸಾರಿಗೆ ಕಚೇರಿ(ಆರ್‌ಟಿಒ) ಹಿಂಭಾಗದಲ್ಲಿರುವ ಕೊಳೆಗೇರಿ ಪ್ರದೇಶದ ಸುಮಾರು 600 ದೈನಂದಿನ ಕೂಲಿ ಕಾರ್ಮಿಕರು ಲಾಕ್‌ಡೌನ್ ಘೋಷಿಸಿದಾಗಿನಿಂದ ದಿನಕ್ಕೆ ಒಂದು ಹೊತ್ತಿನ ಊಟವನ್ನು ಸಹ ಪಡೆಯಲು ಹೆಣಗಾಡುತ್ತಿದ್ದಾರೆ. ಸ್ಥಳೀಯ ಶಾಸಕರ ಆಶ್ವಾಸನೆಗಳ ಹೊರತಾಗಿಯೂ ಕಾರ್ಮಿಕರು ಯಾವುದೇ ಸರಿಯಾದ ಆಹಾರ ಧಾನ್ಯಗಳನ್ನು ಹೊಂದಿರದ ಕಾರಣ ಸರಿಯಾಗಿ ಊಟ ಮಾಡದೆ ಎರಡು ವಾರಗಳಿಗಿಂತ ಹೆಚ್ಚು ಸಮಯವಾಗಿದೆ ಎಂದು ಕಾರ್ಮಿಕರು ಹೇಳುತ್ತಾರೆ.
ಪ್ರದೇಶದ ಸಾಮಾಜಿಕ ಕಾರ್ಯಕರ್ತೆ ರಜಿಯಾ ಅಖಾಡೆ ಅವರು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸ್ಥಳೀಯ ಶಾಸಕರ ಗಮನ ಸೆಳೆಯಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಅಗತ್ಯವಿರುವ ಜನರ ಪಟ್ಟಿಯನ್ನು ಶಾಸಕರ ಕಚೇರಿಗೆ ಕಳುಹಿಸಲು ನಮ್ಮನ್ನು ಕೇಳಲಾಯಿತು. ಪಟ್ಟಿಯನ್ನು ಕಳುಹಿಸಿದರೂ ಯಾವುದೇ ಪರಿಹಾರ ನಮಗೆ ತಲುಪಿಲ್ಲ. ಇತರ ಪ್ರದೇಶಗಳ ಜನರು ನಮ್ಮ ಕೋಟಾದಿಂದ ಆಹಾರ ಸಾಮಗ್ರಿಗಳನ್ನು ಸಂಗ್ರಹಿಸುತ್ತಿದ್ದಾರೆಂದು ನಾನು ತಿಳಿದುಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.
ದೈನಂದಿನ ಕೂಲಿ ಕಾರ್ಮಿಕ 37 ವರ್ಷದ ಅಹ್ಮದ್ ಹುಸೈನ್ ಅವರು ಮಾತನಾಡಿ ನಮ್ಮ ಪರಿಸ್ಥಿತಿ ಕಠಿಣವಾಗಿದೆ. ನಾವು ಬೆಳಗ್ಗೆ ಆಹಾರವನ್ನು ಪಡೆದರೆ ಮಧ್ಯಾಹ್ನ ಅಥವಾ ಸಂಜೆ ನಮಗೆ ಏನಾದರೂ ತಿನ್ನಲು ಸಿಗಬಹುದೆ ಎಂದು ನಮಗೆ ಖಚಿತವಿಲ್ಲ. ನನ್ನ ಕುಟುಂಬದಲ್ಲಿ ಐದು ಜನ ಸದಸ್ಯರಿದ್ದಾರೆ. ಎಲ್ಲರೂ ನನ್ನ ಮೇಲೆ ಅವಲಂಬಿತರಾಗಿದ್ದಾರೆ. ನಮ್ಮಲ್ಲಿ ಪಡಿತರ ಸಂಗ್ರಹವು ಮುಗಿದಿದೆ. ಮುಂದೆ ನಾವು ಹೇಗೆ ಬದುಕುಳಿಯುತ್ತೇವೆ ಎಂದು ನನಗೆ ತಿಳಿದಿಲ್ಲ ಎಂದು ತಿಳಿಸಿದ್ದಾರೆ. ಕೆಲವರು ನಮ್ಮ ಸ್ಥಳದಿಂದ ಒಂದು ಅಥವಾ ಎರಡು ಕಿಲೋಮೀಟರ್ ದೂರದಲ್ಲಿ ಆಹಾರದೊಂದಿಗೆ ಬರುತ್ತಾರೆ. ಆದರೆ ಪೊಲೀಸರು ನಮ್ಮ ಪ್ರದೇಶದಿಂದ ಹೊರಗೆ ಹೋಗಲು ಅನುಮತಿ ನೀಡುವುದಿಲ್ಲ ಎಂದು ಅವರು ಹೇಳಿದರು.
ಆ ಪ್ರದೇಶದ ಇನ್ನೊಬ್ಬ ನಿವಾಸಿ ಮಂದಾ ಯೆಡೆ, ನಾನು ರಸ್ತೆ ಮತ್ತು ಕಸದ ರಾಶಿಯಿಂದ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸು ಕಾರ್ಯದಲ್ಲಿ ತೊಡಗಿದ್ದೆನ್ನೆ. ನನ್ನ ಜೀವನೋಪಾಯವು ಅದರ ಮೇಲೆ ಅವಲಂಬಿತವಾಗಿದೆ. ನನಗೆ ಇಬ್ಬರು ಮಕ್ಕಳಿದ್ದಾರೆ. ಅವರು ನಿರ್ಮಾಣ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಲಾಕ್‌ಡೌನ್ ಆದಾಗಿನಿಂದ ನಾವೆಲ್ಲರೂ ಮನೆಯಲ್ಲಿ ಕುಳಿತಿದ್ದೇವೆ. ಅವರ ನಿಯಮಗಳನ್ನು ಅನುಸರಿಸಿ ಮತ್ತು ಎಲ್ಲಿಯೂ ಹೋಗದೆ ನಾವು ಸರ್ಕಾರದೊಂದಿಗೆ ಸಹಕರಿಸುತ್ತಿದ್ದೇವೆ, ಆದರೆ ಬದುಕಲು ನಮಗೆ ಆಹಾರ ಬೇಕು ಎಂದು ತಿಳಿಸಿದ್ದಾರೆ.
ಮಧ್ಯಾಹ್ನ ಸ್ಥಳೀಯ ಬಿಜೆಪಿ ಶಾಸಕ ಪರಾಗ್ ಷಾ ಅವರನ್ನು ಸಂಪರ್ಕಿಸಿದಾಗ, ನಾವು ಪ್ರತಿ ಮನೆಯನ್ನೂ ತಲುಪಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ನಾನು ಈಗಾಗಲೇ ಕೊಳೆಗೇರಿ ಪ್ರದೇಶಗಳಲ್ಲಿ 12,000 ಆಹಾರ ಪ್ಯಾಕೆಟ್‌ಗಳನ್ನು ವಿತರಿಸಿದ್ದೇವೆ.ಒಂದು ಲಕ್ಷಕ್ಕೂ ಹೆಚ್ಚು ಜನರು ಅಲ್ಲಿ ವಾಸಿಸುತ್ತಿರುವುದರಿಂದ ಕೊಳೆಗೇರಿ ಜನಸಂಖ್ಯೆ ತುಂಬಾ ದೊಡ್ಡದಾಗಿದೆ. ಆದ್ದರಿಂದ ಎಲ್ಲರಿಗೂ ತಲುಪುವುದು ಕಷ್ಟ. ಆದರೆ ರಾಜ್ಯ ಸರ್ಕಾರದ ಪರಿಹಾರ ಶೀಘ್ರದಲ್ಲೇ ಜನರನ್ನು ತಲುಪಲಿದೆ ಎಂದು ನನಗೆ ಖಾತ್ರಿಯಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.