ರಾಜ್ಯದಲ್ಲಿ ಪ್ರಯೋಗಾಲಯಗಳ ಸಂಖ್ಯೆ 100ಕ್ಕೆ ಏರಿಕೆ: ಠಾಕ್ರೆ
Team Udayavani, Jun 22, 2020, 11:55 AM IST
ಮುಂಬಯಿ, ಜೂ. 21: ರಾಜ್ಯದ ಕೋವಿಡ್-19 ಪರೀಕ್ಷಾ ಪ್ರಯೋಗಾಲಯಗಳ ಸಂಖ್ಯೆ 100ಕ್ಕೆ ಏರಿಕೆಯಾಗಿದೆ ಎಂದು ಮಹಾರಾಷ್ಟ್ರ ಉದ್ಧವ್ ಠಾಕ್ರೆ ಹೇಳಿದ್ದಾರೆ. ಇದು ಮೊದಲ ಹಂತವಾಗಿದ್ದು ಮುಂದಿನ ದಿನಗಳಲ್ಲಿ ಈ ಪ್ರಯೋಗಾಲಯಗಳ ಸಂಖ್ಯೆ ಇನ್ನಷ್ಟು ಹೆಚ್ಚಳವಾತ್ತದೆ ಎಂದು ಭರವಸೆ ನೀಡಿದ್ದಾರೆ.
ಶಿವಸೇನೆ ಪಕ್ಷದ ಮುಖಂಡರು ಮತ್ತು ಪದಾಧಿಕಾರಿಗಳನ್ನು ಆನ್‌ಲೈನ್ ನಲ್ಲಿ ಉದ್ದೇಶಿಸಿ ಮಾನಾಡಿದ ಅವರು, ವೈದ್ಯರಿಗೆ ಮುಖವಸ್ತ್ರ, ಪಿಪಿಇ ಕಿಟ್ ಗಳು ಮತ್ತು ಕೈಗವಸುಗಳಂತಹ ಅಗತ್ಯ ಸಾಧನಗಳನ್ನು ಒದಗಿಸಲಾಗುತ್ತಿದೆ ಎಂದು ವಿಚಾರಿಸಿದರು. ಗಾಲ್ವಾನ್ ವ್ಯಾಲಿ ಘರ್ಷಣೆ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸುವುದಾಗಿ ಅವರು ಪಕ್ಷದ ಕಾರ್ಯಕರ್ತರಿಗೆ ಮಾಹಿತಿ ನೀಡಿದರು.
ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸಿದ ಅವರು ಯಾವುದೇ ಬಿಕ್ಕಟ್ಟಿಗೆ ಶಿವಸೈನಿಕರು ಹೆದರುವವರಲ್ಲ. ಅವರು ಎಲ್ಲವನ್ನೂ ಬಿಟ್ಟು ಸಾರ್ವಜನಿಕರಿಗಾಗಿ ಕೆಲಸ ಮಾಡುತ್ತಾರೆ ಎಂದು ಹೇಳಿದರು. ಚಂಡಮಾರುತ ಅಥವಾ ಇನ್ನಾವುದೇ ಬಿಕ್ಕಟ್ಟು ಇರಲಿ ನಿಮ್ಮಂತಹ ಶಿವ ಸೈನಿಕರು ನನ್ನೊಂದಿಗೆ ಇರುವವರೆಗೂ ಹೆದರುವುದಿಲ್ಲ ಎಂದರು. ಶಿವಸೇನೆ ಮುಖಂಡ ಆದಿತ್ಯ ಠಾಕ್ರೆ ಕೂಡ ಈ ಸಂದರ್ಭದಲ್ಲಿ ಕಾರ್ಮಿಕರನ್ನು ಉದ್ದೇಶಿಸಿ ದೇಶದ ಪ್ರತಿ ರಾಜ್ಯದಲ್ಲಿ ಪಕ್ಷದ ನೆಲೆಯನ್ನು ಹೆಚ್ಚಿಸುವ ಬಗ್ಗೆ ಒತ್ತಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.