ಮಕ್ಕಳ ಪ್ರತಿಭೆಗೆ ವೇದಿಕೆ ನಮ್ಮ ಕರ್ತವ್ಯ: ಚಂದ್ರಹಾಸ್ ಕೆ. ಶೆಟ್ಟಿ
ಬಂಟರ ಸಂಘ ಕುರ್ಲಾ-ಭಾಂಡುಪ್ ಪ್ರಾದೇಶಿಕ ಸಮಿತಿಯಿಂದ "ಬರವುದ ತೇರ್'
Team Udayavani, Sep 21, 2021, 2:28 PM IST
ಮುಂಬಯಿ: ಇದೊಂದು ವಿಭಿನ್ನವಾದ ಕಾರ್ಯಕ್ರಮವಾಗಿದೆ. ಶೈಕ್ಷಣಿಕ ನೆರವಿನ ಮೂಲಕ ಸಮುದಾಯದ ಯುವ ಶಕ್ತಿಯನ್ನು ಪ್ರೋತ್ಸಾಹಿ ಸುತ್ತಿರುವುದು ಅಭಿನಂದನೀಯ. ಇನ್ನಷ್ಟು ಅಪೂರ್ವ ಮತ್ತು ವಿಭಿನ್ನ ಕಾರ್ಯಕ್ರಮಗಳನ್ನು ತಾವೆಲ್ಲರೂ ರೂಪಿಸಬೇಕು. ಇಂತಹ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಬೆಳಗಿಸಲು ಸಹಕಾರಿಯಾಗುತ್ತವೆ. ಸಂಘದ ಕುರ್ಲಾ- ಭಾಂಡುಪ್ ಪ್ರಾದೇಶಿಕ ಸಮಿತಿ ಈಗಾಗಲೇ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಸಮಾಜ ಬಾಂಧವರೊಂದಿಗೆ ಮಕ್ಕಳೂ ಪಾಲ್ಗೊಳ್ಳುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಬಂಟರ ಸಂಘ ಮುಂಬಯಿ ಅಧ್ಯಕ್ಷ ಚಂದ್ರಹಾಸ್ ಕೆ. ಶೆಟ್ಟಿ ತಿಳಿಸಿದರು.
ಸೆ. 18ರಂದು ಕುರ್ಲಾ ಪೂರ್ವದ ಬಂಟರ ಭವನದ ಎಸ್‌ಎಂಎಸ್ ಸಭಾಗೃಹದಲ್ಲಿ ಬಂಟರ ಸಂಘ ಮುಂಬಯಿ ಇದರ ಕುರ್ಲಾ-ಭಾಂಡುಪ್ ಪ್ರಾದೇಶಿಕ ಸಮಿತಿ ವತಿಯಿಂದ ನಡೆದ “ಬರವುದ ತೇರ್’ ಎನ್ನುವ ಶೈಕ್ಷಣಿಕ ದತ್ತು ಸ್ವೀಕಾರ ಮತ್ತು ಮಕ್ಕಳ ಛದ್ಮವೇಷ ಸ್ಪರ್ಧೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕುರ್ಲಾ ಭಾಂಡುಪ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರು ಮತ್ತು ಪದಾಧಿಕಾರಿಗಳ ಕಾರ್ಯ ಅಭಿನಂದನೀಯವಾಗಿದೆ. ನಮ್ಮ ಮಕ್ಕಳನ್ನು ಶೈಕ್ಷಣಿಕವಾಗಿ ಪ್ರೋತ್ಸಾಹಿಸಬೇಕು. ಸಂಘದ ಧ್ಯೇಯವೂ ಇದೇ ಆಗಿದೆ. ಮಕ್ಕಳ ಪ್ರತಿಭೆಯನ್ನು ಎಳವೆಯಿಂದಲೇ ಪ್ರೋತ್ಸಾಹಿಸಿದಾಗ ಅವರು ಆಯಾಯ ಕ್ಷೇತ್ರಗಳಲ್ಲಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿ ಶುಭ ಹಾರೈಸಿದರು.
ಅತಿಥಿ-ಗಣ್ಯರು ದೀಪ ಬೆಳಗಿಸಿ ಸಮಾರಂಭವನ್ನು ಉದ್ಘಾಟಿಸಿದರು. ಬಂಟ ಗೀತೆಯನ್ನು ಮೊಳಗಿಸಲಾಯಿತು. ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಬಂಟರ ಸಂಘ ಉನ್ನತ ಶಿಕ್ಷಣ ಮತ್ತು ವೃತ್ತಿಪರ ಶಿಕ್ಷಣದ ಮುಖ್ಯಸ್ಥ, ಮುಂಬಯಿ ಬಂಟರ ಸಂಘದ ಮಾಜಿ ಕೋಶಾಧಿ ಕಾರಿ ಪ್ರವೀಣ್ ಭೋಜ ಶೆಟ್ಟಿ ಉಪಸ್ಥಿತರಿದ್ದರು.
ಮಧ್ಯ ಪ್ರಾದೇಶಿಕ ಸಮಿತಿಗಳ ಸಮನ್ವಯಕ ಐಕಳ ಗುಣಪಾಲ ಶೆಟ್ಟಿ ಮಾತನಾಡಿ, ವಿಭಿನ್ನ ಹೆಸರಿನೊಂದಿಗೆ ವಿಶಿಷ್ಟವಾಗಿ ಆಯೋಜಿಸಿದ ಈ ಕಾರ್ಯಕ್ರಮ ನಿಜವಾಗಿಯೂ ಅರ್ಥ ಪೂರ್ಣವಾಗಿದೆ. ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿರಬೇಕು ಎಂದು ತಿಳಿಸಿ, ಕುರ್ಲಾ- ಭಾಂಡುಪ್ ಪ್ರಾದೇಶಿಕ ಸಮಿತಿಯ ಕಾರ್ಯವೈಖರಿಯನ್ನು ಎಂದು ಶ್ಲಾಘಿಸಿದರು.
ಇದನ್ನೂ ಓದಿ:ದಟ್ಟ ಮಂಜು ಕವಿದ ವಾತಾವರಣ; ಉಧಾಂಪುರ್ ನಲ್ಲಿ ಸೇನಾ ಹೆಲಿಕಾಪ್ಟರ್ ಪತನ, ಪೈಲಟ್ ಪಾರು
ಕುರ್ಲಾ-ಭಾಂಡುಪ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಹರೀಶ್ ಶೆಟ್ಟಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದ ರ್ಭ ದಲ್ಲಿ ಮಕ್ಕಳಿಗಾಗಿ ಛದ್ಮವೇಷ ಸ್ಪರ್ಧೆಯನ್ನು ಆಯೋಜಿಸಲಾಯಿತು. ಸ್ಪರ್ಧೆಯಲ್ಲಿ ಧನುಷ್ ಆರ್. ಶೆಟ್ಟಿ ಪ್ರಥಮ, ಆಯುಷಿ ಅಜಯ್ ಶೆಟ್ಟಿ ದ್ವಿತೀಯ ಮತ್ತು ವ್ರತಿಕಾ ಡಿ. ಶೆಟ್ಟಿ ಮತ್ತು ಗ್ಯಾತಾ ಪಿ. ಶೆಟ್ಟಿ ತೃತೀಯ ಬಹುಮಾನ ಪಡೆದರು. ಸ್ಪರ್ಧೆಯಲ್ಲಿ ಪಾಲ್ಗೊಂಡ ಎಲ್ಲ ಮಕ್ಕಳಿಗೆ ಸಮಾಧಾನಕರ ಬಹುಮಾನಗಳನ್ನು ವಿತರಿ ಸಲಾಯಿತು. ಕುರ್ಲಾ-ಭಾಂಡುಪ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಇತ್ತೀಚೆಗೆ ಆಯೋಜಿಸಿದ ನಾಟ್ಯ ಸುಧಾ ಸೂಪರ್ ಮೊಮ್ಸ್ ಸ್ಪರ್ಧೆಯ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಶೈಕ್ಷಣಿಕ ನೆರವನ್ನು ನೀಡಿದಂತಹ ದಾನಿಗಳನ್ನು ಗೌರವಿಸಲಾಯಿತು. ಸುಮಾರು 30 ಮಕ್ಕಳನ್ನು ಶೈಕ್ಷಣಿಕ ನೆರವಿನಡಿಯಲ್ಲಿ ದತ್ತು ಸ್ವೀಕರಿಸಿ ಚೆಕ್ಕನ್ನು ವಿತರಿಸಲಾಯಿತು.
ಬಂಟರ ಸಂಘದ ಉಪಾಧ್ಯಕ್ಷ ಉಳ್ತೂರು ಮೋಹನ್‌ದಾಸ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಡಾ| ಆರ್. ಕೆ. ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ಹರೀಶ್ ಡಿ. ಶೆಟ್ಟಿ, ಜತೆ ಕಾರ್ಯದರ್ಶಿ ದಿವಾಕರ್ ಶೆಟ್ಟಿ ಇಂದ್ರಾಳಿ, ಜತೆ ಕೋಶಾಧಿಕಾರಿ ಮುಂಡಪ್ಪ ಎಸ್. ಪಯ್ಯಡೆ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಮಾ ಕೆ. ಶೆಟ್ಟಿ ಹಾಗೂ ಕುರ್ಲಾ ಭಾಂಡುಪ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸಂಗೀತಾ ಸಿ. ಶೆಟ್ಟಿ, ಯುವ ವಿಭಾಗದ ಕಾರ್ಯಧ್ಯಕ್ಷ ವಿಕಾಸ್ ರೈ ಉಪಸ್ಥಿತರಿದ್ದರು. ಮುಂಬಯಿ ಬಂಟರ ಸಂಘದ ಮಹಿಳಾ ವಿಭಾಗದ ಪದಾಧಿಕಾರಿಗಳು ಮತ್ತು ಯುವ ವಿಭಾಗದ ಪದಾಧಿಕಾರಿಗಳು, ಸಂಘದ ಎಲ್ಲ ಉಪಸಮಿತಿಗಳ ಕಾರ್ಯಾಧ್ಯಕ್ಷರು, ಪದಾಧಿಕಾರಿಗಳು, ಕುರ್ಲಾ – ಭಾಂಡುಪ್ ಪ್ರಾದೇಶಿಕ ಸಮಿತಿಯ ಪದಾಧಿಕಾರಿಗಳು, ಮಹಿಳಾ ವಿಭಾಗದ ಪದಾಧಿಕಾರಿಗಳು ಮತ್ತು ಯುವ ವಿಭಾಗದ ಪದಾಧಿಕಾರಿಗಳು ಭಾಗವಹಿಸಿದ್ದರು.
ಮಹಿಳಾ ವಿಭಾಗದ ಕೋಶಾಧಿಕಾರಿ ಸರೋಜಿನಿ ಎಸ್. ಶೆಟ್ಟಿ ದೇವರ ಸ್ತುತಿಗೈದರು. ಮುಖ್ಯ ಅತಿಥಿ ಪರಿಚಯ ಮತ್ತು ನಿರ್ಣಾಯಕರಾಗಿ ಭಾಗವಹಿಸಿದ ಸತ್ಯಾ ಪಿ. ಶೆಟ್ಟಿ ಮತ್ತು ರೇಶ್ಮಾ ಹರೀಶ್ ಶೆಟ್ಟಿ ಅವ ರನ್ನು ಸಮಿತಿಯ ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ನಂದಳಿಕೆ ನಾರಾಯಣ ಶೆಟ್ಟಿ, ಮಹಿಳಾ ವಿಭಾಗದ ಸಾಂಸ್ಕೃತಿಕ ವಿಭಾಗದ ಕಾರ್ಯಧ್ಯಕ್ಷೆ ವಿನುತಾ ಶೆಟ್ಟಿ, ಕೋಶಾಧಿಕಾರಿ ಮಲ್ಲಿಕಾ ಶೆಟ್ಟಿಯವರು ಕ್ರಮ ವಾಗಿ ಪರಿಚಯಿಸಿದರು. ಪ್ರಾದೇಶಿಕ ಸಮಿತಿಯ ಉಪಾಧ್ಯಕ್ಷ ಗಿರೀಶ್ ಶೆಟ್ಟಿ ವಂದಿಸಿದರು. ಸಂಪೂರ್ಣ ಕಾರ್ಯ ಕ್ರಮವನ್ನು ಮಹಿಳಾ ವಿಭಾಗದ ಉಪಾಧ್ಯಕ್ಷೆ ಅಮೃತಾ ಶೆಟ್ಟಿ ನಿರ್ವಹಿಸಿದರು.
ಮಕ್ಕಳ ಸಮಗ್ರ ಬೆಳವಣಿಗೆ
ಮಕ್ಕಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಬರವುದ ತೇರ್ ಎಂಬ ವಿನೂತನ ರೀತಿಯ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ. ಮಕ್ಕಳ ಶಿಕ್ಷಣದೊಂದಿಗೆ ಅವರ ಸಮಗ್ರ ಬೆಳವಣಿಗೆಗೆ ಪೂರಕವಾಗಿರುವ ಕಾರ್ಯಚಟುವಟಿಕೆಗಳನ್ನು ನಿರಂತರವಾಗಿ ನಡೆಸಲಾಗುವುದು. ನಮ್ಮ ಈ ಕಾರ್ಯಕ್ರಮಕ್ಕೆ ಸಹಕರಿಸಿ ಪ್ರೋತ್ಸಾಹ ನೀಡಿದ ಎಲ್ಲರಿಗೂ ಕೃತಜ್ಞತೆಗಳು. ಮಕ್ಕಳನ್ನು ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ಮಹಿಳೆಯರು ಪ್ರೋತ್ಸಾಹಿಸಬೇಕು. ಮಕ್ಕಳ ಪ್ರತಿಭೆಯನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ಮತ್ತು ವೇದಿಕೆ ಕಲ್ಪಿಸುವುದು ನಮ್ಮ ಗುರಿಯಾಗಿದೆ. ಇದರಿಂದ ಮಕ್ಕಳ ಸಮಗ್ರ ಬೆಳವಣಿಗೆ ಸಾಧ್ಯವಾಗುತ್ತದೆ. ಸಮಿತಿಯ ಕಾರ್ಯಕ್ರಮಗಳಿಗೆ ಎಲ್ಲರ ಸಹಕಾರ ಅಗತ್ಯ.
-ಹರೀಶ್ ಶೆಟ್ಟಿ, ಕಾರ್ಯಾಧ್ಯಕ್ಷರು, ಬಂಟರ ಸಂಘ ಕುರ್ಲಾ-ಭಾಂಡುಪ್ ಪ್ರಾದೇಶಿಕ ಸಮಿತಿ
ಪದಾಧಿಕಾರಿಗಳ
ಕೆಲಸ ಶ್ಲಾಘನೀಯ
ವಿದ್ಯೆ ಮನುಷ್ಯನ ಸಮಗ್ರ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಆರ್ಥಿಕವಾಗಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸಿ ಬೆಳೆಸುತ್ತಿರುವ ಕುರ್ಲಾ-ಭಾಂಡುಪ್ ಪ್ರಾದೇಶಿಕ ಸಮಿತಿಯ ಪದಾಧಿಕಾರಿಗಳ ಕೆಲಸ ಶ್ಲಾಘನೀಯ. ಸಿರಿ ಬಂದ ಕಾಲಕ್ಕೆ ಕರೆದು ದಾನವ ಮಾಡು ಎಂಬ ಕನ್ನಡದ ನುಡಿಯಂತೆ ಸಮಾಜದ ದಾನಿಗಳಿಂದ ಇಂದು ನೂರಾರು ಮಕ್ಕಳು ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಇದು ಹೆಮ್ಮೆ ಪಡುವ ವಿಷಯವಾಗಿದೆ. ಮಕ್ಕಳ ಪ್ರತಿಭೆಯನ್ನು ಗುರುತಿಸಿ, ಅವರನ್ನು ಪ್ರೋತ್ಸಾಹಿಸುವ ಇಂತಹ ಕೆಲಸವನ್ನು ಪ್ರತೀ ಪ್ರಾದೇಶಿಕ ಸಮಿತಿಗಳು ನಡೆಸಬೇಕು.
-ಪ್ರವೀಣ್ ಭೋಜ ಶೆಟ್ಟಿ, ಸಮನ್ವಯಕರು, ಬಂಟರ ಸಂಘ ಉನ್ನತ ಶಿಕ್ಷಣ ಮತ್ತು ವೃತ್ತಿಪರ ಸ್ಕಾಲರ್‌ಶಿಪ್ ನಿಧಿ ಸಮಿತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.