ಪನ್ವೇಲ್ ಕರ್ನಾಟಕ ಸಂಘದಲ್ಲಿ ಕನ್ನಡ ಕಲಿಕೆಗೆ ಅವಕಾಶ
Team Udayavani, Jul 6, 2017, 1:54 PM IST
ಪನ್ವೇಲ್: ಕನ್ನಡ ಬಾರದವರಿಗೆ, ಕನ್ನಡೇತರರಿಗೆ ಕನ್ನಡ ಕಲಿಸುವ ಯೋಜನೆಯನ್ನು ಪನ್ವೇಲ್ ಕರ್ನಾಟಕ ಸಂಘ ಹಮ್ಮಿಕೊಂಡಿದ್ದು ಆಸಕ್ತರು ತಕ್ಷಣ ಪನ್ವೇಲ್ ಕರ್ನಾಟಕ ಸಂಘವನ್ನು ಸಂಪರ್ಕಿಸಬಹುದಾಗಿದೆ.
ಮುಂಬಯಿ ವಿಶ್ವವಿದ್ಯಾಲಯದ ಮಾನ್ಯತೆ ಪಡೆದ ಕನ್ನಡ ಕಲಿಕಾ ಕೇಂದ್ರವಾಗಿ ಪನ್ವೇಲ್ ಕರ್ನಾಟಕ ಸಂಘ ಕೆಲಸ ಮಾಡುತ್ತಿದ್ದು, ಕಳೆದ ಸಾಲಿನಲ್ಲಿ 50ಕ್ಕೂ ಅಧಿಕ ವಿದ್ಯಾರ್ಥಿಗಳು ಯಶಸ್ವಿಯಾಗಿ ಕನ್ನಡವನ್ನು ಕಲಿತಿದ್ದಾರೆ. ಈ ವರ್ಷವೂ ವಿಶ್ವವಿದ್ಯಾಲಯದ ಕನ್ನಡ ಕಲಿಕಾ ಯೋಜನೆಯನ್ವಯ ಕನ್ನಡ ಕಲಿಕಾ ತರಬೇತಿಯು ಆಗಸ್ಟ್ 19ರಿಂದ ಆರಂಭಗೊಳ್ಳಲಿದೆ. ಆ. 14ರ ಒಳಗೆ ಆಸಕ್ತರು ಪ್ರವೇಶವನ್ನು ಪಡೆಯಬಹುದಾಗಿದೆ. ಕನ್ನಡ ಕಲಿಕಾ ಕೇಂದ್ರದ ಸಂಚಾಲಕರಾದ ಉಮಾ ಕಲಾಧರ ಶೆಟ್ಟಿ (9969950293), ವಿದುಷಿ ಶ್ಯಾಮಲಾ ಪ್ರಕಾಶ್ ( 9930515123) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.