ಪುಣೆ ಹವ್ಯಕ ಸಂಘದಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ

Team Udayavani, Feb 22, 2019, 3:20 PM IST

2102mum10.jpg

ಪುಣೆ: ಹವ್ಯಕ ಸಂಘ ಪುಣೆ ವತಿಯಿಂದ  ಫೆ. 14ರಂದು ಜಮ್ಮು  ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಭಯೋತ್ಪಾದಕರ ಪೈಶಾಚಿಕ ಕೃತ್ಯದಿಂದ ಹುತಾತ್ಮರಾದ 40 ಸಿಆರ್‌ಪಿಎಫ್‌ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಫೆ. 17ರಂದು ಪುಣೆಯ ಕರ್ವೆನಗರದ  ಎಂ. ಎಸ್‌. ಭಟ್‌. ಅವರ ದುರ್ಗಾ ಸದನದಲ್ಲಿ ನಡೆದ ಸಭೆಯಲ್ಲಿ ಪುಲ್ವಾಮದಲ್ಲಿ ಪಾಕಿಸ್ಥಾನದ ಪಿತೂರಿಯಿಂದ ನಡೆದ  ನರರಾಕ್ಷಸರ ಪೈಶಾಚಿಕ ಕೃತ್ಯವನ್ನು ಸಂಘ ಬಲವಾಗಿ ಖಂಡಿಸಿದ್ದಲ್ಲದೆ ಸೇರಿದ್ದ ಸದಸ್ಯರೆಲ್ಲರೂ ಪುಷ್ಪನಮನವನ್ನು ಸಲ್ಲಿಸಿ ಮೌನ ಪ್ರಾರ್ಥನೆಯ ಮೂಲಕ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಈ ಸಂದರ್ಭ ರಾಮಚಂದ್ರಾಪುರ ಮಠದ ಪುಣೆ ವಲಯಾಧ್ಯಕ್ಷರಾದ ಮದಂಗಲ್ಲು ಆನಂದ ಭಟ್‌ ಅವರು, ದೇಶದ ಗಡಿ ಕಾಯುವ ಯೋಧರ ಬಗ್ಗೆ ನಾವು ಹೆಮ್ಮೆ ಪಡುತ್ತೇವೆ. ಅವರಿಂದಾಗಿಯೇ ನಾವು ದೇಶದಲ್ಲಿ ನಿರ್ಭಯವಾಗಿ ಜೀವಿಸಲು ಸಾಧ್ಯ. ಅಂತಹ ವೀರಯೋಧರು ನರಹಂತಕ ಹೇಡಿಗಳ ದುಷ್ಕೃತ್ಯಕ್ಕೆ ಬಲಿಯಾಗಿದ್ದು ದುರದೃಷ್ಟ ಕರವಾಗಿದ್ದು ಈ ಘಟನೆಯನ್ನು ನಾವೆಲ್ಲರೂ ಬಲವಾಗಿ ಖಂಡಿಸುವುದಲ್ಲದೆ ಮುಂದೆ ಇಂಥ ಘಟನೆಗಳು ನಡೆಯದಿರಲಿ ಎಂಬ ಪ್ರಾರ್ಥನೆ ಯೊಂದಿಗೆ ಅಗಲಿದ ಅವರ ಆತ್ಮಕ್ಕೆ ದೇವರು ಚಿರಶಾಂತಿ ಕರುಣಿಸಲಿ ಹಾಗೂ ಅವರ ಕುಟುಂಬದವರಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸೋಣ ಎಂದರು.

ರಾಮಚಂದ್ರಾಪುರ ಮಠದ ಪುಣೆ ವಲಯದ ಗುರಿಕ್ಕಾರ ಶರತ್‌ ಭಟ್‌ ಅತ್ರಿವನ ಮಾತನಾಡಿ,
ದೇಶ ಕಾಯುವ ಯೋಧರ ಬಗ್ಗೆ ನಮಗೆಲ್ಲರಿಗೂ ಅಪಾರವಾದ ಅಭಿಮಾನವಿದೆ.  ನಿವೃತ್ತ ವೀರಯೋಧರಾದ ಇ. ವಿ. ಶಾಮರಾಜ್‌ ಇವರನ್ನು ನಾವು ಹತ್ತಿರದಿಂದ ಬಲ್ಲವ ರಾಗಿದ್ದು  ಅವರ ಮನೋಬಲ, ಆತ್ಮ ಸ್ಥೈರ್ಯ, ದೇಶಪ್ರೇಮ, ಬದ್ಧತೆ ಎಲ್ಲರಿಗೂ ಮಾದರಿಯಾಗಿದೆ. ಫೆ. 14ರಂದು ಭಯೋ ತ್ಪಾದಕರ ಕುತಂತ್ರಕ್ಕೆ  ನಮ್ಮ ಯೋಧರು ಬಲಿಯಾಗಿದ್ದು ದೇಶವಾಸಿಗಳಾದ ನಾವೆಲ್ಲರೂ ವೀರ ಹುತಾತ್ಮ ಯೋಧರ ದುಃಖದಲ್ಲಿ ಸಹಭಾಗಿಗಳಾಗಿದ್ದೇವೆ. ಇಂಥ ನೀಚಕೃತ್ಯವನ್ನು ನಾವೆಲ್ಲರೂ ಖಂಡಿಸುತ್ತೇವೆ.

ಅಗಲಿದ ವೀರಯೋಧರ ಆತ್ಮಕ್ಕೆ ದೇವರು ಚಿರಶಾಂತಿ ಕರುಣಿಸಲೆಂದು ನಾವೆಲ್ಲರೂ ಪ್ರಾರ್ಥಿಸೋಣ ಎಂದರು.

ಈ ಸಂದರ್ಭ ಸೇರಿದ್ದ ಸದಸ್ಯರೆಲ್ಲರೂ ರಾಮತಾರಕ ಮಂತ್ರ ಹಾಗೂ ಭಜನಾ ರಾಮಾಯಣವನ್ನು ಸಾಮೂಹಿಕವಾಗಿ ಪಠಿಸಿ ಸೇನೆಗೆ ಧೈರ್ಯ, ಸ್ಥೈರ್ಯಕ್ಕಾಗಿ ಪ್ರಾರ್ಥಿಸಲಾಯಿತು. ಸಭೆಯಲ್ಲಿ ಕಾರ್ಯಕ್ರಮ ಸಂಯೋಜಕ ಹಿರಿಯರಾದ ಮಹಾಬಲ ಭಟ್‌, ಕಾರ್ಯದರ್ಶಿ ಶ್ಯಾಮಸುಂದರ್‌ ಭಟ್‌, ಕೋಶಾಧಿಕಾರಿ ಗಣೇಶ್‌ ಪ್ರಸಾದ್‌, ಮದಂಗಲ್ಲು ಅಶೋಕ್‌ ಭಟ್‌, ವೆಂಕಟ್ರಮಣ ಭಟ್‌, ಕೌಶಲ್‌ ಭಟ್‌, ರಾಮಚಂದ್ರ ಭಟ್‌, ಶಾರದಾ ಭಟ್‌, ಮಹಿಳಾ ವಿಭಾಗದ ಸದಸ್ಯರಾದ ಮದಂಗಲ್ಲು ಹೇಮಾ ಎ. ಭಟ್‌, ಮಲ್ಲಿಕಾ ಭಟ್‌, ಜಯಲಕ್ಷ್ಮೀಭಟ್‌ ಮತ್ತಿತರ ಸದಸ್ಯರು ಉಪಸ್ಥಿತರಿದ್ದರು. 

 ಚಿತ್ರ-ವರದಿ: ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

INDvAUS: Is captain Rohit Sharma standing against to Shami?; Aussie tour difficult for pacer!

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?;‌ ವೇಗಿಗೆ ಆಸೀಸ್‌ ಪ್ರವಾಸ ಕಷ್ಟ!

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.