ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಸಾಗಿಸಲು ಅವಕಾಶ


Team Udayavani, May 7, 2020, 6:44 PM IST

ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಸಾಗಿಸಲು ಅವಕಾಶ

ಮುಂಬಯಿ, ಮೇ 6: ಎಸ್‌ಎಸ್‌ಸಿ ಮತ್ತು ಎಚ್‌ಎಸ್‌ಸಿ ಫ‌ಲಿತಾಂಶಗಳ ಘೋಷಣೆಯನ್ನು ಖಚಿತಪಡಿಸಿಕೊಳ್ಳಲು, ರಾಜ್ಯ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಒಂದು ಸ್ಥಳದಿಂದ ಮತ್ತೂಂದು ಸ್ಥಳಕ್ಕೆ ಸಾಗಿಸಲು ಸಿಬಂದಿ ಚಲನೆಗೆ ಅವಕಾಶ ನೀಡಿದೆ.

ಎಸ್‌ಎಸ್‌ಸಿ ಮತ್ತು ಎಚ್‌ಎಸ್‌ಸಿ ಫ‌ಲಿತಾಂಶ ಗಳನ್ನು ಜೂನ್‌ 10 ರೊಳಗೆ ಪ್ರಕಟಿಸುವುದು ಇಲಾಖೆಗೆ ಕಡ್ಡಾಯವಾಗಿದೆ ಎಂಬ ಸುಪ್ರೀಂ ಕೋರ್ಟ್‌ ಆದೇಶವನ್ನು ಉಲ್ಲೇಖೀಸಿ, ಇಲಾಖೆ ತನ್ನ ಕಾರ್ಮಿಕರು, ಶಿಕ್ಷಕರು ಮತ್ತು ಶಾಲಾ ಸಿಬಂದಿಗೆ ಕೆಲಸ ಮಾಡಲು ರಾಜ್ಯಕ್ಕೆ ಅನುಮತಿ ನೀಡಿದೆ. ಶಾಲೆಗಳು ಅಥವಾ ರಕ್ಷಣಾ ಕೇಂದ್ರಗಳಲ್ಲಿ ಪತ್ರಿಕೆಗಳು ಇದ್ದಲ್ಲಿ ಅವುಗಳನ್ನು ಪರೀಕ್ಷಕರಿಗೆ ಸಾಗಿಸಬಹುದು. ಅಲ್ಲದೆ ಅವರು ಅವುಗಳನ್ನು ಮೌಲ್ಯಮಾಪನ ಮಾಡಬಹುದು.

ಇದಲ್ಲದೆ ಈ ಮೌಲ್ಯಮಾಪನ ಪತ್ರಿಕೆಗಳನ್ನು ಉದ್ದೇಶಪೂರ್ವಕವಾಗಿ ನಿಯೋಜಿಸಲಾಗಿರುವ ಸಿಬ್ಬಂದಿಗಳ ಮೂಲಕ ಮಾಡರೇಟರ್‌ಗಳಿಗೆ ಮಿತಗೊಳಿಸುವಿಕೆಗಾಗಿ ಕಳುಹಿಸಬಹುದು ಎಂದು ಇಲಾಖೆಯು ಎಲ್ಲಾ ಪುರಸಭೆ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳಿಗೆ ಸುತ್ತೋಲೆಯನ್ನು ಹೊರಡಿಸಿ ಆದೇಶಿಸಿದೆ.

ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ಸುಮಾರು 15 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದು, ಇದರಲ್ಲಿ ಮುಂಬಯಿ, ಥಾಣೆ, ರಾಯಗಡ್‌ ಮತ್ತು ಪಾಲ್‌ ಘರ್‌ ನ 3.5 ಲಕ್ಷ ಮಂದಿ ವಿದ್ಯಾರ್ಥಿಗಳು ಸೇರಿದ್ದಾರೆ. ರಾಜ್ಯ ಸರಕಾರದ ಅಧಿಕೃತ ಪಟ್ಟಿಯ ಪ್ರಕಾರ ರಾಯಗಢ ಆರೆಂಜ್‌ ವಲಯದಲ್ಲಿದ್ದರೆ, ಇತರ ಪ್ರದೇಶಗಳು ಕೆಂಪು ವಲಯದಲ್ಲಿವೆ.

ಒಮ್ಮೆ ಅನುಮತಿಗಳು ಜಾರಿಗೆ ಬಂದರೆ, ಉತ್ತರ ಪತ್ರಿಕೆಗಳ ಮೌಲ್ಯಮಾಪನ ಶೀಘ್ರದÇÉೇ ನಡೆದು ಫ‌ಲಿತಾಂಶಗಳನ್ನು ಸಮಯಕ್ಕೆ ಘೋಷಿಸಬಹುದು ಎಂದು ಮಂಡಳಿ ಆಶಿಸುತ್ತಿದೆ. ರಾಜ್ಯ ಮಂಡಳಿ ಸಾಮಾನ್ಯವಾಗಿ ಮೇ ಕೊನೆಯ ವಾರದಲ್ಲಿ 12 ನೇ ತರಗತಿ ಫ‌ಲಿತಾಂಶಗಳನ್ನು ಘೋಷಿಸುತ್ತದೆ. 10 ನೇ ತರಗತಿ ಫ‌ಲಿತಾಂಶಗಳು ಜೂನ್‌ ಎರಡನೇ ವಾರದಲ್ಲಿ ಪ್ರಕಟಗೊಳ್ಳುವ ನಿರೀಕ್ಷೆಯಿದೆ. ಶಿಕ್ಷಕರು ಮತ್ತು ಇತರ ಸಿಬಂದಿ ತಮ್ಮ ಸ್ವಂತ ವಾಹನಗಳನ್ನು ಅಥವಾ ಅವರಿಗೆ ಒದಗಿಸಿದ ಬಾಡಿಗೆ ವಾಹನಗಳನ್ನು ಬಳಸಬಹುದು.

ಟಾಪ್ ನ್ಯೂಸ್

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1–dddd

Vitla; ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ದಂಪತಿಗೆ ಗಾಯ, ಬಾಲಕ ಮೃ*ತ್ಯು

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

10

Udupi: ಸಂಚಾರ ಬದಲಿಸಿದರೂ ಸಮಸ್ಯೆ ಬದಲಾಗಲಿಲ್ಲ!

9

Surathkal-ಗಣೇಶಪುರ ರಸ್ತೆಯಲ್ಲಿ ಟ್ಯಾಂಕರ್‌ ರಾಜ್ಯಭಾರ!

8

Mangaluru: ಕರಾವಳಿ ಉತ್ಸವ; ಮತ್ಸ್ಯ ಲೋಕದೊಳಗೆ ನಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.