ನಾಟಕ ರಂಗದಿಂದ ವ್ಯಕ್ತಿತ್ವ ವಿಕಸನ: ಜಯಶೀಲ ಸುವರ್ಣ


Team Udayavani, Apr 1, 2021, 11:21 AM IST

Personality evolution from theater

ಮುಂಬಯಿ: ನಾಟಕ ರಂಗದಿಂದ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ. ಎಲ್ಲ ಕಲಾವಿದರ ಪ್ರತಿಭೆಯನ್ನು ಹೊರಹೊಮ್ಮಿಸುವ ನಿರ್ದೇಶಕ ತನ್ನ ಸೃಜನಶೀಲತೆಯನ್ನು ಬಳಸಿಕೊಳ್ಳಬೇಕು. ಗಿರೀಶ್‌ ಕಾರ್ನಾಡ್‌ ಬರೆದದ್ದು ತುಘಲಕ್‌ ಕಾದಂಬರಿ; ನಾಟಕವಲ್ಲ. ಕೆ. ಕೆ. ಸುವರ್ಣರು ಅದನ್ನು ನಾಟಕವಾಗಿ ಬರೆಯಬೇಕೆಂದು ಒತ್ತಡ ಹಾಕಿದ ಪರಿಣಾಮ ತುಘಲಕ್‌ ಇಂದು ಅತ್ಯುತ್ತಮ ನಾಟಕವಾಗಿ ನಮಗೆ ದೊರೆತಿದೆ ಎಂದು ಹಿರಿಯ ರಂಗಕಲಾವಿದ, ಕಂಠದಾನ ಕಲಾವಿದ ಜಯಶೀಲ ಸುವರ್ಣ ಅವರು ಅಭಿಪ್ರಾಯಪಟ್ಟರು.

ನಗರದ ಹಿರಿಯ ರಂಗಸಂಸ್ಥೆ ಕನ್ನಡ ಕಲಾ ಕೇಂದ್ರವು ಶನಿವಾರ ಸಯಾನ್‌ನ ಸಂಘದ ಕಿರು ಸಭಾಗೃಹದಲ್ಲಿ ಆಯೋಜಿಸಿದ್ದ ವಿಶ್ವ ರಂಗಭೂಮಿ ದಿನಾಚರಣೆಯ ಅಂಗವಾಗಿ ರಂಗಾನುಭವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ನಾನೆಂದೂ ತುಘಲಕ್‌ ನಾಟಕ ಆಗುತ್ತದೆ ಎಂದು ಭಾವಿಸಲಿಲ್ಲ ಎಂಬ ಗಿರೀಶ್‌ ಕಾರ್ನಾಡ್‌ ಅವರ ಮಾತನ್ನು ಸ್ಮರಿಸುತ್ತಾ ಇಂದಿನ ಪ್ರೇಕ್ಷಕ ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದ ನಾಟಕವನ್ನು ಮನೆಯಲ್ಲೇ ಕುಳಿತು ನೋಡಬಲ್ಲ. ಆದ್ದರಿಂದ ಅತ್ಯುತ್ತಮ ನಾಟಕವನ್ನು ರಂಗದ ಮೇಲೆ ತರಬೇಕು. ಒಳ್ಳೆಯ ನಾಟಕವನ್ನು ನೋಡುವಂತೆ ಕೆಟ್ಟ ನಾಟಕವನ್ನೂ ನೋಡಬೇಕು. ಇದು ಬೆಳವಣಿಗೆಗೆ ಸಹಕಾರಿ ಆಗುತ್ತದೆ ಎಂದರು.

ಅತಿಥಿಗಳಾಗಿದ್ದ ರಂಗಾನುಭವದಲ್ಲಿ ಪ್ರಶಸ್ತಿ ಪುರಸ್ಕೃತ ಹಿರಿಯ ರಂಗಕರ್ಮಿ ನಾರಾಯಣ ಶೆಟ್ಟಿ ನಂದಳಿಕೆ, ಡಾ| ಜಿ. ಪಿ. ಕುಸುಮಾ, ನವೀನ್‌ ಶೆಟ್ಟಿ ಇನ್ನಬಾಳಿಕೆ, ಗೀತಾ ಎಲ್‌. ಭಟ್‌, ಗೋಪಾಲ್‌ ತ್ರಾಸಿ ಹಾಗೂ ಜಗದೀಶ್‌ ಡಿ. ರೈ ತಮ್ಮ ರಂಗ ಬದುಕಿನಲ್ಲಿನ ಅನುಭವಗಳ ಬಗ್ಗೆ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಕೇಂದ್ರದ ಅಧ್ಯಕ್ಷ ಮಧುಸೂದನ್‌ ಟಿ. ಆರ್‌ ಮಾತನಾಡಿ, ಜಾತಿ, ಮತ, ಧರ್ಮ, ಭಾಷೆ, ಶ್ರೀಮಂತ, ಬಡವ ಎಂಬ ಗಡಿಗಳನ್ನು ಮೀರಿ ನಿಂತಿದೆ ರಂಗಭೂಮಿ. ರಂಗಭೂಮಿಗೆ ಸೀಮಿತವಾಗಿರುವ ಕನ್ನಡ ಕಲಾಕೇಂದ್ರ ಪ್ರಥಮವಾಗಿ ವಿಶ್ವ ರಂಗಭೂಮಿ ದಿನವನ್ನು ಆಚರಿಸುತ್ತಿದೆ. ಆ ಮೂಲಕ ಮುಂಬಯಿ ರಂಗಭೂಮಿಯಲ್ಲಿ ಹೊಸ ಸಂಚಲನವನ್ನು ಉಂಟುಮಾಡಿದೆ. ಇಂತಹ ಕಾರ್ಯಕ್ರಮಗಳು ಒಬ್ಬರನ್ನೊಬ್ಬರು ಅರ್ಥೈಸಿಕೊಳ್ಳುವುದಕ್ಕೆ ಸಹಕಾರಿಯಾಗಲಿದೆ. ಮುಂದೆ ನಮ್ಮ ಯೋಜನೆಯಂತೆ ಮುಂಬಯಿ ರಂಗ ನಿರ್ದೇಶ ಕರಿಂದಲೇ ಮುಂಬಯಿ ಕಲಾ ಸಂಘಟನೆಗಳಿಂದ ಕನಿಷ್ಠ ಐದು ನಾಟಕಗಳೊನ್ನೊಳಗೊಂಡ ನಾಟಕ ಉತ್ಸವ ಆಯೋಜಿಸಲಾಗುವುದು ಎಂದು ತಿಳಿಸಿ ಶುಭ ಹಾರೈಸಿದರು.

ಅರ್ಥಪೂರ್ಣವಾಗಿ ಮೂಡಿಬಂದ ಈ ಕಾರ್ಯಕ್ರಮದಲ್ಲಿ ಚಂದ್ರಶೇಖರ್‌ ಕಂಬಾರ ಅವರ ಮಹಾಮಾಯಿ ನಾಟಕದ ದೃಶ್ಯವನ್ನು ಗಣೇಶ್‌ ಕುಮಾರ್‌ ಮತ್ತು ಸಾ. ದಯಾ ವಾಚಿಸಿದರು. ಕೇಂದ್ರದ ಸದಸ್ಯ ಭೀಮರಾಯ ಚಿಲ್ಕ ಸ್ವಾಗತಿಸಿದರು. ಯಕ್ಷಗಾನ ಕಲಾವಿದ, ಕೇಂದ್ರದ ಗೌರವ ಪ್ರಧಾನ ಕಾರ್ಯದರ್ಶಿ ರಮೇಶ್‌ ಬಿರ್ತಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಚಿತ್ರ-ವರದಿ: ರೊನಿಡಾ ಮುಂಬಯಿ

ಟಾಪ್ ನ್ಯೂಸ್

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.