ಪೆಸ್ತೂಮ್ ಸಾಗರ್ ಕರ್ನಾಟಕ ಸಂಘ ಮಹಿಳಾ ವಿಭಾಗ: ಆಟಿಡೊಂಜಿ ಕೂಟ
Team Udayavani, Aug 30, 2018, 12:13 PM IST
ಮುಂಬಯಿ: ತಿಲಕ್ ನಗರ ಪೆಸ್ತೂಂ ಸಾಗರ್ ಕರ್ನಾಟಕ ಸಂಘದ ವತಿಯಿಂದ ಆಟಿಡೊಂಜಿ ಕೂಟ ಕಾರ್ಯಕ್ರಮವು ಅಪರಾಹ್ನ ತಿಲಕ್ ನಗರದ ನವದುರ್ಗಾ ಮಿತ್ರ ಮಂಡಳ್‌ನಲ್ಲಿ ವೈವಿಧ್ಯ ಮಯ ಕಾರ್ಯಕ್ರಮ ಗಳೊಂದಿಗೆ ನಡೆಯಿತು.
ಸಂಘದ ಮಹಿಳಾ ವಿಭಾಗಾಧ್ಯಕ್ಷೆ ನಾಗವೇಣಿ ಶ್ರೀಧರ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ನಿವೃತ್ತ ಎಸಿಪಿ ಸುಶೀಲಾ ಸಿ. ಶೆಟ್ಟಿ, ತಿಲಕ್ ನಗರ ಸಮಾಜ ಸೇವಕಿ ಸಂಗೀತಾ ನಿಕಮ್ ಉಪಸ್ಥಿತರಿದ್ದರು. ಮಹಿಳಾ ವಿಭಾಗದ ಕಾರ್ಯದರ್ಶಿ ಮಾಲತಿ ಜೆ. ಮೊಲಿ, ಉಪ ಕಾರ್ಯಾಧ್ಯಕ್ಷೆ ಶಾಲಿನಿ ಎಸ್. ಶೆಟ್ಟಿ, ಕೋಶಾಧಿಕಾರಿ ಸಂಗೀತಾ ಸಿ. ಶೆಟ್ಟಿ, ಜತೆ ಕಾರ್ಯದರ್ಶಿ ಹೇಮಲತಾ ಎಸ್. ಶೆಟ್ಟಿ, ಜತೆ ಕೋಶಾಧಿಕಾರಿ ಸುಖಲತಾ ಸಿ. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಶಕುಂತಳಾ ಶೆಟ್ಟಿ, ಕಸ್ತೂರಿ ಹೆಗ್ಡೆ, ಸಂಧ್ಯಾ ಶೆಟ್ಟಿ, ವೇದಾವತಿ ಶೆಟ್ಟಿ, ಮಮತಾ ರೈ ಪ್ರಾರ್ಥನೆಗೈದರು. ಅತಿಥಿ-ಗಣ್ಯರು ದೀಪಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯಅತಿಥಿ ಸುಶೀಲಾ ಸಿ. ಶೆಟ್ಟಿ ಅವರು ಮಾತನಾಡಿ, ಸಂಘದ ವೈವಿಧ್ಯಮಯ ಕಾರ್ಯಕ್ರಮಗಳನ್ನು ಕಂಡಾಗ ಸಂತೋಷವಾಗುತ್ತದೆ. ಸಮಾಜ ಬಾಂಧವರನ್ನು ಒಗ್ಗೂಡಿಸುವ ಒಂದು ಉತ್ತಮ ಕೆಲಸವನ್ನು ಮಾಡುತ್ತಿದೆ ಎಂದರು. ಅತಿಥಿ-ಗಣ್ಯರು ಮಾತನಾಡಿದರು.
ಮಹಿಳಾ ವಿಭಾಗದ ಕಾರ್ಯದರ್ಶಿ ಮಾಲತಿ ಜೆ. ಶೆಟ್ಟಿ ಅವರು ಆಷಾಢ ಮಾಸದ ವಿಶೇಷತೆೆಗಳನ್ನು ವಿವರಿಸಿದರು. ಮಹಿಳಾ ವಿಭಾಗದ ಕ್ರೀಡಾ ಕಾರ್ಯದರ್ಶಿ ಜಯಂತಿ ಎಂ. ದೇವಾಡಿಗ ಅವರು ಆಟಿ ತಿಂಗಳ ಆಹಾರ ಸೇವನೆಯ ಬಗ್ಗೆ ತಿಳಿಸಿದರು. ಸಂಘದ ಸದಸ್ಯರಿಗಾಗಿ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ವಿಜೇತ ಸ್ಪರ್ಧಿಗಳಿಗೆ ಗಣ್ಯರು ಬಹುಮಾನ ವಿತರಿಸಿದರು. ಮಾಲತಿ ಜೆ. ಮೊಲಿ, ಹೇಮಾವತಿ ಸಂಪತ್ ಶೆಟ್ಟಿ ಅವರು ಕಾರ್ಯಕ್ರಮ ನಿರ್ವಹಿಸಿದರು. ಸಂಗೀತಾ ಶೆಟ್ಟಿ, ಸುಖಲತಾ ಶೆಟ್ಟಿ, ಜಯಂತಿ ಎಂ. ದೇವಾಡಿಗ ಸಹಕರಿಸಿದರು.
ವನಿತಾ ಶೆಟ್ಟಿ ಮತ್ತು ಶಾಲಿನಿ ಶೆಟ್ಟಿ ಅವರು ಆಟಿ ಕಳಂಜ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಮಾಲತಿ ಜೆ. ಮೊಲಿ ಮತ್ತು ಬಳಗದವರಿಂದ ತುಳು ಪಾಡªನ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ನಾಗವೇಣಿ ಶ್ರೀಧರ ಶೆಟ್ಟಿ ಅವರು ಮಾತನಾಡಿ, ಸಂಘದ ಚಟುವಟಿಕೆಗಳ ಬಗ್ಗೆ ವಿವರಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು.
ಸಂಘದ ರಾಮಣ್ಣ ಬಿ. ದೇವಾಡಿಗ ಮಾತನಾಡಿ, ಕಾರ್ಯಕ್ರಮದ ಆಯೋಜನೆಯನ್ನು ಶ್ಲಾಘಿಸಿದರು. ಅಲ್ಲದೆ ಸ್ವಂತ ಕಟ್ಟಡದ ಆವಶ್ಯಕತೆಯಿದೆ. ಅದಕ್ಕಾಗಿ ಎಲ್ಲರೂ ಸಹಾಯ ಮಾಡಬೇಕು ಎಂದು ಸದಸ್ಯರಲ್ಲಿ ವಿನಂತಿಸಿದರು.
ಕಟ್ಟಡ ಸಮಿತಿಯ ಕಾರ್ಯಾಧ್ಯಕ್ಷ ಜಯ ಶೆಟ್ಟಿ, ಕಾರ್ಯದರ್ಶಿ ಸುದೇಶ್ ಶೆಟ್ಟಿ, ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ಸುರೇಶ್ ಶೆಟ್ಟಿ, ಜತೆ ಕಾರ್ಯದರ್ಶಿ ಸಂಪತ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಶೆಟ್ಟಿ, ಟಿ. ಆರ್. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಶಾಲಿನಿ ಶೆಟ್ಟಿ ವಂದಿಸಿದರು. ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗದವರು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ
Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ
ಕ್ಲೀವ್ ಲ್ಯಾಂಡ್: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ
ಮೊಗವೀರ್ಸ್ ಬಹ್ರೈನ್ ಪ್ರೊ ಕಬಡ್ಡಿ;ತುಳುನಾಡ್ ತಂಡ ಪ್ರಥಮ,ಪುನಿತ್ ಬೆಸ್ಟ್ All ರೌಂಡರ್
ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.