ಜನಪ್ರಿಯ ಯಕ್ಷಗಾನ ಕಲಾ ಮಂಡಳದ ವಜ್ರ ಮಹೋತ್ಸವ
Team Udayavani, Mar 21, 2017, 4:30 PM IST
ಮುಂಬಯಿ: ಯಕ್ಷಗಾನ ಉಳಿಸಿ-ಬೆಳೆಸುವಲ್ಲಿ ಜಿಎಸ್‌ಬಿ ಸಮಾಜದ ಕೊಡುಗೆ ಅಪಾರವಾಗಿದೆ. ಕಳೆದ 60 ವರ್ಷಗಳಿಂದ ಮುಂಬಯಿ ಮಹಾನಗರದಲ್ಲಿ ಜನಪ್ರಿಯ ಯಕ್ಷಗಾನ ಕಲಾಮಂಡಳಿಯು ಯಕ್ಷಗಾನ ಕಲೆಯನ್ನು ಯುವ ಪೀಳಿಗೆಗೆ ಪರಿಚಯಿಸುವಲ್ಲಿ ನಿರಂತವಾಗಿ ಶ್ರಮಿಸುತ್ತಿದೆ. ಅನೇಕ ಏರಿಳಿತಗಳನ್ನು ಕಂಡರೂ ಸಮಾಜದ ಗುರುಗಳ ಹಾಗೂ ಹಿರಿಯರ ಮಾರ್ಗದರ್ಶನದಲ್ಲಿ ಉತ್ತಮ ಕಲಾಸೇವೆ ಮಾಡಿದೆ. ಹಲವಾರು ಯುವ ಪ್ರತಿಭೆಗಳನ್ನು ಪೋಷಿಸಿ ಬೆಳೆಸುವುದ ಜತೆಗೆ ಅವರಿಗೆ ಉತ್ತಮವಾದ ವೇದಿಕೆ ಕಲ್ಪಿಸಿಕೊಟ್ಟಿರುವುದು ಅಭಿನಂದ ನೀಯ. ಈ ಸಂದರ್ಭದಲ್ಲಿ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಮಹಾನೀಯರನ್ನು ನೆನಪಿಸುವುದು ನಮ್ಮ ಕರ್ತವ್ಯ ಎಂದು ಜನಪ್ರಿಯ ಯಕ್ಷಗಾನ ಕಲಾ ಮಂಡಳದ ಮಾಜಿ ಕಾರ್ಯದರ್ಶಿ ಮೂಲ್ಕಿ ಸದಾಶಿವ ಕಾಮತ್ ಅವರು ಅಭಿಪ್ರಾಯಪಟ್ಟರು.
ಮಾ. 18 ರಂದು ಸಂಜೆ ಮುಲುಂಡ್ ಪಶ್ಚಿಮದ ಮಹಾರಾಷ್ಟ್ರ ಸೇವಾ ಸಂಘದ ಸಭಾಗೃಹದಲ್ಲಿ ಜನಪ್ರಿಯ ಯಕ್ಷಗಾನ ಕಲಾ ಮಂಡಳದ ವಜ್ರ ಮಹೋತ್ಸವ ಸಂಭ್ರಮದ ಅಂಗವಾಗಿ ಆಯೋಜಿಸಲಾಗಿದ್ದ, ಕಲಾವಿದರು ಹಾಗೂ ದಾನಿಗಳು, ಸಹಕರಿಸಿದ ಸಂಘ-ಸಂಸ್ಥೆಗಳಿಗೆ ಗೌರವಾರ್ಪಣೆ ಸಮಾರಂಭದಲ್ಲಿ ಸಮ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಕೊಂಕಣಿ ಭಾಷೆಯಲ್ಲಿ ಸುಮಾರು ಹತ್ತಕ್ಕಿಂತಲೂ ಅಧಿಕ ಯಕ್ಷಗಾನ ಪ್ರಸಂಗಗಳು ರಚಿತವಾಗಿದ್ದರೂ ಅದು ಪ್ರಕಟಗೊಳ್ಳದಿರುವುದು ವಿಷಾದನೀಯ. ಈ ಬಗ್ಗೆ ಯಕ್ಷಗಾನ ಪ್ರೇಮಿಗಳು ಗಮನ ಹರಿಸಬೇಕು ಎಂದು ಮನವಿ ಮಾಡಿದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಉದ್ಯಮಿ ಜಿ. ಅರವಿಂದ ರಾವ್ ಅವರು ಮಾತನಾಡಿ, ಯಕ್ಷಗಾನ ಕ್ಷೇತ್ರಕ್ಕೆ ಜನಪ್ರಿಯ ಯಕ್ಷಗಾನ ಕಲಾಮಂಡಲದ ಕೊಡುಗೆ ಬಹಳಷ್ಟಿದೆ. ಈ ಮಂಡಲದಿಂದ ನಿರಂತರ ಯಕ್ಷಗಾನ ಸೇವೆಯು ಇನ್ನಷ್ಟು ಜರಗಿ ಯಕ್ಷಗಾನ ಕಲೆ ವಿಶ್ವಮಾನ್ಯತೆ ಪಡೆಯಲಿ ಎಂದು ಹಾರೈಸಿದರು.
ಗೌರವ ಅತಿಥಿಯಾಗಿ ಪಾಲ್ಗೊಂಡ ದಾಮೋದರ ರಾವ್ ಮಾತನಾಡಿ, ಜನಪ್ರಿಯ ಯಕ್ಷಗಾನ ಮಂಡಳಿಯು ಮಹಾನಗರದಲ್ಲಿ ಯಕ್ಷಗಾನ ಜನಪ್ರಿಯಗೊಳಿಸುವಲ್ಲಿ ಮಹತ್ವದ ಕೊಡುಗೆ ನೀಡಿದೆ. ಜಿಎಸ್‌ಬಿ ಸಮಾಜದ ಅನೇಕ ಕಲಾವಿದರನ್ನು ಪ್ರೋತ್ಸಾಹಿಸಿ, ಬೆಳೆಸುವಲ್ಲಿ ಮಹತ್ವದ ಪಾತ್ರವನ್ನು ನಿರ್ವಹಿಸಿದೆ. ಮಂಡಳಿಯಿಂದ ಇನ್ನಷ್ಟು ಹೊಸ ಪ್ರತಿಭೆಗಳು ಮಿಂಚುವಂತಾಗಲಿ ಎಂದರು.
ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಅಧ್ಯಕ್ಷ ಚಂದ್ರಶೇಖರ ಪಾಲೆತ್ತಾಡಿ ಅವರು ಮಾತನಾಡಿ, ಕೊಂಕಣಿ ಭಾಷಿಗರು ವಿಶೇಷವಾದ ಪ್ರೋತ್ಸಾಹವನ್ನು ನೀಡುತ್ತಿದ್ದಾರೆ. ಮುಂಬಯಿ ಮಹಾನಗರದಲ್ಲಿ ಜನಪ್ರಿಯ ಯಕ್ಷಗಾನ ಮಂಡಳಿಯು ಒಂದು ಉತ್ತಮ ಯಕ್ಷಕಲಾ ಮಂಡಲವಾಗಿ ಬೆಳೆದಿರುವುದು ಅಭಿನಂದನೀಯ. ಇದು 60 ವರ್ಷಗಳಲ್ಲಿ ಅನೇಕ ಕಲಾವಿದರನ್ನು ಸೃಷ್ಟಿಸಿದೆ ಎಂದರು.
ಹಿರಿಯ ಸಂಘಟಕ ಎಚ್. ಬಿ. ಎಲ್. ರಾವ್ ಅವರು ಮಾತನಾಡಿ, ದಿ| ರಾಮ ನಾಯಕ್ ಅವರಂತಹ ಹಿರಿಯರು ಯಕ್ಷಗಾನ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅನನ್ಯವಾಗಿದೆ. ಜನಪ್ರಿಯ ಯಕ್ಷಗಾನ ಕಲಾ ಮಂಡಲದಂತಹ ಹಿರಿಯ ಸಂಸ್ಥೆಯ ದಾಖಲೀಕರಣದ ಅಗತ್ಯವಿದ್ದು, ಈ ಬಗ್ಗೆ ನಾನು ಶ್ರಮಿಸುತ್ತಿದ್ದೇನೆ. ಅದಕ್ಕಾಗಿ ಎಲ್ಲರ ಸಹಕಾರ ಅಗತ್ಯ ಎಂದರು.
ವೇದಿಕೆಯಲ್ಲಿ ಉದ್ಯಮಿ, ಯಕ್ಷಗಾನ ಪ್ರೋತ್ಸಾಹಕ ಸತೀಶ್ ರಾಮ ನಾಯಕ್, ಡಾ| ಭುಜಂಗ ಪೈ, ಜಿಎಸ್‌ಬಿ ಸೇವಾ ಮಂಡಲ ಸಯಾನ್ ಅಧ್ಯಕ್ಷ ಯಶವಂತ್ ಕಾಮತ್, ಮಹಾರಾಷ್ಟ್ರ ಸೇವಾ ಸಂಘ ಮುಲುಂಡ್ ಗೌರವ ಕಾರ್ಯದರ್ಶಿ ಜಯಪ್ರಕಾಶ್ ಬರ್ವೆ, ಜಿಎಸ್‌ಬಿ ಸಭಾ ಮುಲುಂಡ್ ಅಧ್ಯಕ್ಷ ಶಾಂತಾರಾಮ ಎ. ಭಟ್ ಮೊದಲಾದವರು ಉಪಸ್ಥಿತರಿದ್ದು ಶುಭಹಾರೈಸಿದರು.
ಜನಪ್ರಿಯ ಯಕ್ಷಗಾನ ಕಲಾ ಮಂಡಳದ ಅಧ್ಯಕ್ಷ ಮೇಲ್ ಗಂಗೊಳ್ಳಿ ರವೀಂದ್ರ ಪೈ ಅವರು ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾ ಡಿದರು. ಗೌರವ ಕಾರ್ಯದರ್ಶಿ ಕುಕ್ಕೆಹಳ್ಳಿ ವಿಠಲ್ ಎನ್. ಪ್ರಭು, ಗೌರವ ಕೋಶಾಧಿಕಾರಿ ಯೋಗೇಶ್ ಕೃಷ್ಣ ಡಾಂಗೆ ಮೊದಲಾದವರು ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ ಅವರ ಸಂಸ್ಮರಣಾರ್ಥ ನರಕಾಸುರ ವಧೆ ಯಕ್ಷಗಾನ ಕನ್ನಡದಲ್ಲಿ ಪ್ರದರ್ಶನಗೊಂಡಿತು.
ಚಿತ್ರ-ವರದಿ : ಸುಭಾಶ್ ಶಿರಿಯಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.