ಪ್ರಮೋದ್ ಮಧ್ವರಾಜ್ ಪುಣೆ ಬಂಟರ ಭವನಕ್ಕೆ ಭೇಟಿ
Team Udayavani, May 3, 2019, 3:15 PM IST
ಪುಣೆ: ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜೆಡಿಎಸ್ – ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಪುಣೆ ಬಂಟರ ಭವನಕ್ಕೆ ಭೇಟಿ ನೀಡಿದರು.
ಅವರನ್ನು ಪುಣೆ ಬಂಟರ ಸಂಘದ ಪದಾಧಿಕಾರಿಗಳು ಸ್ವಾಗತಿಸಿ, ಶಾಲು ಹೊದೆಸಿ, ನೆನಪಿನ ಕಾಣಿಕೆ ನೀಡಿ ಸಮ್ಮಾನಿಸಿದರು. ಮೊದಲಿಗೆ ಭವನದ ಆರತಿ ಶಶಿಕಿರಣ್ ಶೆಟ್ಟಿ ಚಾವಡಿಯಲ್ಲಿ ದೇವರಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದರು.
ಅನಂತರ ಪೂರ್ತಿ ಭವನವನ್ನು ವೀಕ್ಷಿಸಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು, ಭವನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಾ ಪುಣೆಯ ಬಂಟ- ಬಾಂಧವರು ಅದ್ಭುತವಾದ ಬಲು ಸುಂದರವಾದ ಸುಸಜ್ಜಿತವಾದ ಬಂಟರ ಭವನವನ್ನು ನಿರ್ಮಿಸಿದ್ದು, ಇದನ್ನು ಕಂಡಾಗ ಹೊಸ ಅನುಭವವಾಗುತ್ತಿದೆ. ವಿವಿಧ ಸಮಾಜಗಳ ಸಮುದಾಯಗಳ ಹಲವಾರು ಭವನಗಳನ್ನು ನೋಡಿ ದ್ದೇನೆ. ಬಹುಶ ಇಂಥ ಸುಂದರ ವಾದ ಭವನವನ್ನು ಇನ್ನೆಲ್ಲೂ ಕಂಡಿಲ್ಲ. ಪುಣೆಯ ಬಂಟರ ಸಂಘದ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಕಾರ್ಯ ನಿಜವಾಗಿಯೂ ಶ್ಲಾಘನೀಯವಾಗಿದೆ ಎಂದು ನುಡಿದರು.
ಈ ಸಂದರ್ಭ ಪುಣೆ ಬಂಟರ ಸಂಘದ ಉಪಾಧ್ಯಕ್ಷರಾದ ಸತೀಶ್ ಶೆಟ್ಟಿ, ಸಾಂಸ್ಕೃತಿಕ ಸಮಿತಿ
ಕಾರ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಪುತ್ತೂರು, ಕ್ರೀಡಾ ಸಮಿತಿ ಕಾರ್ಯಾಧ್ಯಕ್ಷ ದಿನೇಶ್ ಶೆಟ್ಟಿ ಕಳತ್ತೂರು, ಕ್ಯಾಟರಿಂಗ್ ಸಮಿತಿ ಕಾರ್ಯಾಧ್ಯಕ್ಷ ತಾರಾನಾಥ ಕೆ. ರೈ ಮೇಗಿನಗುತ್ತು, ಸುಜಿತ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಲತಾ ಸತೀಶ್ ಶೆಟ್ಟಿ, ಮಹಿಳಾ ವಿಭಾಗದ ಕೋಶಾಧಿಕಾರಿ ಶಮ್ಮಿ ಅಜಿತ್ ಹೆಗ್ಡೆ, ದಕ್ಷಿಣ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ರವಿ ಕೆ. ಶೆಟ್ಟಿ, ಕಾರ್ಯದರ್ಶಿ ಸುಧಾಕರ ಸಿ. ಶೆಟ್ಟಿ, ಜಗದೀಶ್ ಬಿ. ಶೆಟ್ಟಿ, ಸಂಪತ್ ಶೆಟ್ಟಿ ,ಜಗದೀಶ್ ಶೆಟ್ಟಿ, ಅರುಣ್ ಶೆಟ್ಟಿ, ಉತ್ತರ ಪ್ರಾದೇಶಿಕ ಸಮಿತಿ ಉಪಕಾರ್ಯಾಧ್ಯಕ್ಷ ರಾಜಾರಾಮ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಚಿತ್ರ-ವರದಿ :ಕಿರಣ್ ಬಿ. ರೈ ಕರ್ನೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.