ಪುಣೆ ಬಂಟರ ಸಂಘದ ವಾರ್ಷಿಕ ಕ್ರೀಡೋತ್ಸವ
Team Udayavani, Jan 10, 2019, 11:05 AM IST
ಪುಣೆ: ಪುಣೆ ಬಂಟರ ಸಂಘ ಪ್ರತೀ ವರ್ಷ ಸಮಾಜ ಬಾಂಧವರನ್ನು ಒಂದುಗೂಡಿಸಿ ಕ್ರೀಡಾಕೂಟವನ್ನು ಸಂಘಟಿಸಿಸುತ್ತಾ ಬಂದಿದೆ. ಅದೇ ರೀತಿ ಈ ವರ್ಷವೂ ಕ್ರೀಡಾಕೂಟವನ್ನು ವ್ಯವಸ್ಥಿತವಾಗಿ ನಾವು ಆಯೋಜಿಸಿದ್ದಲ್ಲದೆ ನಮ್ಮ ಸಂಘದ ವಿವಿಧ ಚಟುವಟಿಕೆಗಳು,ಸಾಮಾಜಿಕ ಕಾರ್ಯಗಳು ಇಲ್ಲಿನ ಸ್ಥಳೀಯರಿಗೂ ತಿಳಿಯು ವಂತಾಗಲು ನಾವು ನಗರದ ಶಾಸಕರು, ಪೊಲೀಸ್ ಅಧಿಕಾರಿಗಳು, ಮರಾಠಿ ಪತ್ರಕರ್ತರು, ನಗರ ಸೇವಕರನ್ನೂ ಇಂದಿನ ಕ್ರೀಡಾಕೂಟಕ್ಕೆ ಆಮಂತ್ರಿಸಿದ್ದು ಅವರ ಆಗಮನದಿಂದ ಇಂದಿನ ಕಾರ್ಯಕ್ರಮಕ್ಕೆ ವಿಶೇಷ ಮೆರಗು ಬಂದಿದೆ ಎನ್ನಲು ಸಂತೋಷವಾಗುತ್ತಿದೆ. ಸಂಘದ ಮೂಲಕ ಇಂತಹ ಕ್ರೀಡೋತ್ಸವಗಳನ್ನು ಆಚರಿಸುವುದರಿಂದ ನಮ್ಮ ಸಮಾಜ ಬಾಂಧವರನ್ನು ಸಾಮಾಜಿಕವಾಗಿ ಬೆಸೆಯುವುದರೊಂದಿಗೆ ನಮ್ಮೊಳಗಿನ ಒಗ್ಗಟ್ಟು ಇನ್ನಷ್ಟು ಪ್ರಬಲವಾಗುವುದು. ಆದುದರಿಂದ ಇಂತಹ ಕ್ರೀಡೋತ್ಸವ ನಮ್ಮ ಸಾಮಾಜಿಕ ಏಕತೆಗೆ ಪೂರಕವಾಗಿದೆ ಎಂದು ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನಕುರ್ಕಿಲ್ ಬೆಟ್ಟು ಅವರು ಅಭಿಪ್ರಾಯಪಟ್ಟರು.
ಜ. 6 ರಂದು ನಗರದ ಸ್ವಾರ್‌ಗೆàಟ್ ಹತ್ತಿರದಲ್ಲಿರುವ ಸನಾಸ್ ಮೈದಾನದಲ್ಲಿ ನಡೆದ ಪುಣೆ ಬಂಟರ ಸಂಘದ ವಾರ್ಷಿಕ ಕ್ರೀಡೋತ್ಸವದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಆಧುನಿಕ ತಂತ್ರಜ್ಞಾನ ಯುಗದಲ್ಲಿ ನಮ್ಮ ಮಕ್ಕಳು ಮೈದಾನದಲ್ಲಿ ದೇಹದಂಡಿಸಿ ಆಡುತ್ತಿದ್ದ ಆಟಗಳನ್ನು ಮರೆತು ಮೊಬೈಲ್, ಕಂಪ್ಯೂಟರ್ ಆಟಗಳನ್ನು ನೆಚ್ಚಿಕೊಂಡಿದ್ದು ಮಾನಸಿಕ ವಾಗಿಯೂ ದುರ್ಬಲತೆಯನ್ನು ಹೊಂದುವ ಸ್ಥಿತಿಯಲ್ಲಿರುವುದು ದುರದೃಷ್ಟವಾಗಿದೆ. ಅಂತಹ ಮಕ್ಕಳಿಗೆ ಕ್ರೀಡಾಕೂಟಗಳಿಂದ ಪ್ರೇರಣೆ ದೊರೆಯಲಿ ಎಂಬ ಉದ್ದೇಶ ನಮ್ಮದಲ್ಲದೆ ರಾಜ್ಯ, ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಪಟುಗಳಾಗಿ ಬೆಳೆಯಲು ನಮ್ಮ ಮಕ್ಕಳಿಗೆ ಪ್ರೋತ್ಸಾಹ ತುಂಬುವ ಕಾರ್ಯವನ್ನೂ ನಾವು ಮಾಡುತ್ತಿದ್ದೇವೆ. ಸಂಘದ ಮಹತ್ವಾಕಾಂಕ್ಷೆಯ ಕಲ್ಪವೃಕ್ಷ ಯೋಜನೆಯ ಮೂಲಕ ಕ್ರೀಡೆಗೆ ಇನ್ನಷ್ಟು ಉತ್ತೇಜನ ನೀಡಿ ಮಕ್ಕಳನ್ನು ಪ್ರೋತ್ಸಾಹಿಸುವ ಗುರಿ ಸಂಘದ ಭವಿಷ್ಯದ ಉದ್ದೇಶವಾಗಿದೆ ಎಂದರು.
ಇಂದಿನ ಕ್ರೀಡೋತ್ಸವಕ್ಕೆ ಕ್ರೀಡಾ ಸಮಿತಿ ಕಾರ್ಯಾಧ್ಯಕ್ಷರು, ಸಂಘದ ಪದಾಧಿಕಾರಿಗಳು, ಮಹಿಳಾ ವಿಭಾಗ, ಯುವ ವಿಭಾಗ ಹಾಗೂ ಪ್ರಾದೇಶಿಕ ಸಮಿತಿಗಳ ಸದಸ್ಯರು ಬಹಳಷ್ಟು ಶ್ರಮಪಟ್ಟು ಸಕಲ ರೀತಿಯ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಮಾಡಿರುತ್ತಾರೆ. ಸಂಘದ ಹಿತಚಿಂತನೆಯಲ್ಲಿ ಸಹಕಾರ ನೀಡುತ್ತಿರುವ ಪ್ರತಿಯೊಬ್ಬರಿಗೂ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದೇನೆ ಎಂದರು.
ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಪರ್ವತಿ ವಿಧಾನಸಭಾ ಕ್ಷೇತ್ರದ ಶಾಸಕಿ ಮಾಧುರಿ ತಾಯಿ ಮಿಸಾಲ್ ಮಾತನಾಡಿ, ಪುಣೆಯಲ್ಲಿ ಬಂಟ ಸಮಾಜ ಬಾಂಧವರು ಇಷ್ಟೊಂದು ಸಂಖ್ಯೆಯಲ್ಲಿ ಸೇರಿಕೊಂಡು ಒಗ್ಗಟ್ಟಿನಿಂದ ಕ್ರೀಡಾಕೂಟದಂತಹ ಚಟುವಟಿಕೆಗಳನ್ನು ನಡೆಸುತ್ತಿರುವುದು ಅಭಿ ನಂದನೀಯವಾಗಿದೆ. ಇಲ್ಲಿನ ಬಂಟ ಬಾಂಧ ವರನ್ನು ಹಲವಾರು ವರ್ಷಗಳಿಂದ ಬಹಳ ಹತ್ತಿರದಿಂದ ಬಲ್ಲವಳಾಗಿದ್ದೇನೆ. ಬಂಟರ ಆಹಾರ ಪದ್ಧತಿಯಿಂದ ಬಹಳಷ್ಟು ಆಕರ್ಷಿತಳಾಗಿದ್ದೇನೆ. ಕ್ರಿಯಾಶೀಲ ವ್ಯಕ್ತಿತ್ವದೊಂದಿಗೆ ಗುರುತಿಸಿಕೊಳ್ಳುವ ಬಂಟ ಸಮಾಜದಿಂದ ಇನ್ನಷ್ಟು ಸಮಾಜಮುಖೀ ಕಾರ್ಯಕ್ರಮಗಳು ನಡೆಯಲಿ. ಕ್ರೀಡಾಕೂಟಕ್ಕೆ ಶುಭ ಹಾರೈಕೆಗಳು ಎಂದರು.
ಮಹಾರಾಷ್ಟ್ರ ಮರಾಠಿ ಪತ್ರಕಾರ ಸಂಘದ ಅಧ್ಯಕ್ಷ ಕಿರಣ್ ಜೋಶಿ ಮಾತನಾಡಿ, ನಮ್ಮವರ ÇÉೊಂದಾಗಿ ಪುಣೆಯ ಅಭಿವೃದ್ಧಿಗೆ ಕೊಡುಗೆ ನೀಡುತ್ತಿರುವ ಬಂಟ ಸಮಾಜ ಬಾಂಧವರು ನಮ್ಮವರೇ ಆಗಿ¨ªಾರೆ. ಹೊರಗಿನವರೆನ್ನುವ ಭಾವನೆ ಯಾವತ್ತೂ ಬಂದಿಲ್ಲ. ನಿಮ್ಮ ಸಾಮಾ ಜಿಕ ಚಟುವಟಿಕೆ ಸಮಾಜದ ಅಭಿವೃದ್ಧಿಯ ದೃಷ್ಟಿಯಿಂದ ಮಹತ್ವ¨ªಾಗಿದ್ದು ನಿರಂತರವಾಗಿ ಮುಂದುವರಿಯಲಿ ಎಂದರು.
ನಗರಸೇವಕಿಯರಾದ ಸರಸ್ವತಿ ಕೆ. ಶೆಂಡೆY, ಸ್ಮಿತಾ ಪಿ. ವಸ್ತೆ, ದತ್ತವಾಡಿ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ದೇವದಾಸ್ ಗೆವಾರೆ, ಸ್ವಾರ್‌ಗೆàಟ್ ಪೊಲೀಸ್ ಇನ್ಸ್‌ಪೆಕ್ಟರ್ ಅಶೋಕ್ ಕದಮ್ ಉಪಸ್ಥಿತರಿದ್ದು ಶುಭ ಹಾರೈಸಿದರು. ಅತಿಥಿ-ಗಣ್ಯರನ್ನು ಸತ್ಕರಿಸಲಾಯಿತು. ಕ್ರೀಡೋತ್ಸವದಲ್ಲಿ ಉಪಸ್ಥಿತರಿದ್ದ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರುಗಳನ್ನು ಗೌರವಿಸಲಾಯಿತು.
ವೇದಿಕೆಯಲ್ಲಿ ಸಂಘದ ಗೌರವಾಧ್ಯಕ್ಷ ಜಗನ್ನಾಥ ಬಿ. ಶೆಟ್ಟಿ, ಅಧ್ಯಕ್ಷರಾದ ಜಯಂತ್ ಶೆಟ್ಟಿ, ಮೊಳಹಳ್ಳಿ ಬಾಲಕೃಷ್ಣ ಹೆಗ್ಡೆ, ಸಂಘದ ಉಪಾಧ್ಯಕ್ಷರಾದ ಸತೀಶ್ ಶೆಟ್ಟಿ, ಮೋಹನ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಅಜಿತ್ ಕೆ. ಹೆಗ್ಡೆ, ಗೌರವ ಕೋಶಾಧಿಕಾರಿ ವೈ. ಚಂದ್ರಹಾಸ ಶೆಟ್ಟಿ, ಕ್ರೀಡಾ ಸಮಿತಿ ಕಾರ್ಯಾಧ್ಯಕ್ಷ ದಿನೇಶ್ ಶೆಟ್ಟಿ ಕಳತ್ತೂರು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಲತಾ ಎಸ್. ಶೆಟ್ಟಿ, ಉತ್ತರ ಪ್ರಾದೇಶಿಕ ಕಾರ್ಯಾಧ್ಯಕ್ಷ ಗಣೇಶ್ ಪೂಂಜಾ, ಯುವ ವಿಭಾಗದ ಕಾರ್ಯಾಧ್ಯಕ್ಷ ಯಶ್‌ರಾಜ್ ಶೆಟ್ಟಿ ಉಪಸ್ಥಿತರಿದ್ದರು.
ಸಂಘದ ಕ್ರೀಡಾ ಸಮಿತಿ ಕಾರ್ಯಾಧ್ಯಕ್ಷರಾದ ದಿನೇಶ್ ಶೆಟ್ಟಿ ಕಳತ್ತೂರು ಕ್ರೀಡಾಜ್ಯೋತಿಯನ್ನು ಹಿಡಿದು ಮೈದಾನದ ಸುತ್ತ ಕ್ರೀಡಾಳುಗಳೊಂದಿಗೆ ಪಥಸಂಚಲನ ನಡೆಸಿದರು. ಬೆಳಗ್ಗೆಯಿಂದ ಸಂಜೆ ಯವರೆಗೆ ನಡೆದ ಕ್ರೀಡಾಕೂಟದಲ್ಲಿ ಸಮಾಜ ಬಾಂಧವರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿ ದ್ದರು. ವಯೋಮಿತಿಗೆ ಅನುಗುಣವಾಗಿ ವೈವಿಧ್ಯಮಯ ಕ್ರೀಡಾಸ್ಪರ್ಧೆಗಳು ನಡೆದವು. ಪುಣೆಯ ವಿವಿಧ ಸಂಘಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗ್ಗಿನ ಉಪಾಹಾರ, ಮಧ್ಯಾಹ್ನದ ಭೋಜನ, ಚಹಾ ಪಾನೀಯಗಳ ವ್ಯವಸ್ಥೆಯನ್ನು ಮಾಡಲಾ ಗಿತ್ತು. ಸಂಘದ ಪದಾಧಿಕಾರಿಗಳಾದ ರಾಮಕೃಷ್ಣ ಎಂ. ಶೆಟ್ಟಿ, ಶ್ರೀನಿವಾಸ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ ನಿಟ್ಟೆ, ಗಣೇಶ್ ಶೆಟ್ಟಿ, ವಿವೇಕಾನಂದ ಶೆಟ್ಟಿ ಆವರ್ಸೆ, ತಾರಾನಾಥ ರೈ ಮೇಗಿನಗುತ್ತು, ಶಶೀಂದ್ರ ಶೆಟ್ಟಿ, ಗಣೇಶ್ ಹೆಗ್ಡೆ, ವಿಶ್ವನಾಥ ಎಸ್. ಶೆಟ್ಟಿ, ವಸಂತ್ ಶೆಟ್ಟಿ ಬೈಲೂರು, ಪ್ರಶಾಂತ್ ಎ. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಲತಾ ಎಸ್. ಶೆಟ್ಟಿ, ಪದಾಧಿಕಾರಿಗಳಾದ ಸುಚಿತ್ರಾ ಶ್ರೀನಿವಾಸ್ ಶೆಟ್ಟಿ, ಶಮ್ಮಿ ಅಜಿತ್ ಹೆಗ್ಡೆ, ದಿವ್ಯಾ ಸಂತೋಷ್ ಶೆಟ್ಟಿ, ಸಾರಿಕಾ ಚಂದ್ರಹಾಸ ಶೆಟ್ಟಿ, ಸಂಧ್ಯಾ ರಾಮಕೃಷ್ಣ ಶೆಟ್ಟಿ, ನೀನಾ ಬಾಲಕೃಷ್ಣ ಶೆಟ್ಟಿ, ನಯನಾ ಜಯ ಶೆಟ್ಟಿ, ನಿವೇದಿತಾ ಸುಧಾಕರ್ ಶೆಟ್ಟಿ, ವಿನಯಾ ಉಮಾನಾಥ ಶೆಟ್ಟಿ ಹಾಗೂ ಗೀತಾ ಜಯ ಶೆಟ್ಟಿ, ವೀಣಾ ಪ್ರಶಾಂತ್ ಶೆಟ್ಟಿ, ಗೀತಾ ರತ್ನಾಕರ್ ಶೆಟ್ಟಿ ಹಾಗೂ ಆಶಾ ಪ್ರವೀಣ್ ಶೆಟ್ಟಿ, ಸಂಘದ ಉತ್ತರ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪ್ರಮೀಳಾ ಎಸ್. ಶೆಟ್ಟಿ ಮತ್ತು ಸದಸ್ಯರು, ದಕ್ಷಿಣ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಅಂಬಿಕಾ ವಿ. ಶೆಟ್ಟಿ , ಸದಸ್ಯರು, ಯುವ ವಿಭಾಗದ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಪುಣೆಯಲ್ಲಿರುವ ಬಂಟ ಸಮಾಜ ಬಾಂಧವರ ಬಗ್ಗೆ ತುಂಬು ಅಭಿಮಾನವಿದೆ.ನಗರ ಸೇವಕನಾಗಿ ಕಾರ್ಯನಿರ್ವಹಿಸುತ್ತಿರುವ ನಾನು ನಿಮ್ಮ ಯಾವುದೇ ರೀತಿಯ ಸಮಸ್ಯೆಗಳಿದ್ದಲ್ಲಿ ಪರಿಹಾರಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸುವೆ.
– ರಘುನಾಥ ಗೌಡ,ನಗರ ಸೇವಕರು
40 ವರ್ಷಗಳಿಂದ ಬಂಟರ ಸಂಘ ಪುಣೆಯಲ್ಲಿ ಹಲವಾರು ಸಾಮಾಜಿಕ ಕಾರ್ಯ ಗಳೊಂದಿಗೆ ಗುರುತಿಸಿಕೊಂಡಿದೆಯಲ್ಲದೆ ಸಮಾಜದ ಜನರು ಪುಣೆಯ ಅಭಿವೃದ್ಧಿಗೂ ಕೊಡುಗೆ ನೀಡುತ್ತಾ ಬಂದಿರುತ್ತಾರೆ. ಇಂತಹ ಸಮಾಜ ಬಾಂಧವರನ್ನು ನಾನು ಅಭಿನಂದಿಸುತ್ತೇನೆ.
-ಮಹೇಶ್ ನಾಮೆªàವ್ ರಾವ್ ಲಡ್ಕತ್ ನಗರ ಸೇವಕರು
ಮಾನಸಿಕ ವಿಕಾಸಕ್ಕೆ ಕ್ರೀಡೆ ಅಗತ್ಯ. ಬದಲಾಗುತ್ತಿರುವ ಕಾಲಘಟ್ಟದಲ್ಲಿ ಮಕ್ಕಳು ವಿಡಿಯೋ ಗೇಮ್‌ಗಳ ದಾಸರಾಗುತ್ತಿದ್ದು, ದೈಹಿಕ ಆರೋಗ್ಯ ಕಾಪಾಡುವಲ್ಲಿ ಇಂತಹ ಕ್ರೀಡಾ ಕೂಟ ಆಯೋಜಿಸುತ್ತಿರುವುದು ಶ್ಲಾಘನೀಯ.
– ಧೀರಜ್ ಆರ್. ಘಾಟೆ, ನಗರ ಸೇವಕರು
ಚಿತ್ರ-ವರದಿ : ಕಿರಣ್ ಬಿ. ರೈ ಕರ್ನೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.