ಪುಣೆ ಬಂಟರ ಸಂಘ ವಾರ್ಷಿಕೋತ್ಸವಕ್ಕೆ  ಚಾಲನೆ


Team Udayavani, Jan 28, 2019, 12:40 AM IST

2701mum03.jpg

ಪುಣೆ: ಪುಣೆ ಬಂಟರ ಸಂಘದ ವಾರ್ಷಿಕೋತ್ಸವ ಸಮಾರಂಭವು ಜ. 26 ರಂದು ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಕೇಂದ್ರದ ಲತಾ ಸುಧೀರ್‌ ಶೆಟ್ಟಿ ವೇದಿಕೆಯಲ್ಲಿ ವಿವಿಧ ಸಾಂಸ್ಕತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ  ನಡೆಯಿತು.

ಸಂಘದ ಅಧ್ಯಕ್ಷ ಇನ್ನ ಕುರ್ಕಿಲ್‌ಬೆಟ್ಟು  ಸಂತೋಷ್‌  ವಿ. ಶೆಟ್ಟಿಯವರ ಅಧ್ಯಕ್ಷತೆಯಲ್ಲಿ, ಗೌರವಾಧ್ಯಕ್ಷ  ಜಗನ್ನಾಥ  ಬಿ. ಶೆಟ್ಟಿಯವರ ಗೌರವ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಂಡಾರಿ ಫೌಂಡೇಶನ್‌ ನ ಸ್ಥಾಪಕ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ, ಎಂಆರ್‌ಜಿ ಗ್ರೂಪ್‌ ಬೆಂಗಳೂರು ಇದರ ಕಾರ್ಯಾಧ್ಯಕ್ಷರಾದ ಪ್ರಕಾಶ್‌  ಶೆಟ್ಟಿ ಮತ್ತು  ಆಶಾ ಪ್ರಕಾಶ್‌ ಶೆಟ್ಟಿ  ದಂಪತಿ ಉಪಸ್ಥಿತರಿದ್ದರು.

ಈ ಸಂದರ್ಭ ಪ್ರತೀ ವರ್ಷ ಸಮಾಜದ ಶ್ರೇಷ್ಠ ಸಾಧಕನನ್ನು ಗುರುತಿಸಿ ಕೊಡಮಾಡುವ ದಿ| ಗುಂಡೂರಾಜ್‌ ಎಂ.  ಶೆಟ್ಟಿ ಅತ್ಯುತ್ತಮ ಸಮಾಜಸೇವಕ ಪ್ರಶಸ್ತಿ -2018-19ನ್ನು ಎಂಆರ್‌ ಜಿ ಗ್ರೂಪ್‌ ಬೆಂಗಳೂರು ಇದರ ಕಾರ್ಯಾಧ್ಯಕ್ಷರಾದ ಪ್ರಕಾಶ್‌ ಶೆಟ್ಟಿಯವರಿಗೆ ಪ್ರದಾನಿಸಲಾಯಿತು. ವಿನಯ್‌ ಗುಂಡೂರಾಜ್‌ ಶೆಟ್ಟಿ  ಉಪಸ್ಥಿತರಿದ್ದರು.  ಅತಿಥಿಗಳು ದೀಪ ಪ್ರಜ್ವಲಿಸಿ ತೆಂಗಿನ ಹಿಂಗಾರವನ್ನು ಅರಳಿಸಿ  ಚಾಲನೆಯಿತ್ತರು.

ವೇದಿಕೆಯಲ್ಲಿ ಸಂಘದ ಉಪಾಧ್ಯ ಕ್ಷರಾದ ಸತೀಶ್‌ ಆರ್‌. ಶೆಟ್ಟಿ ಮತ್ತು ಮೋಹನ್‌ ಶೆಟ್ಟಿ, ಪ್ರಧಾನ ಕಾರ್ಯ ದರ್ಶಿ ಕೆ. ಅಜಿತ್‌ ಹೆಗ್ಡೆ, ಗೌರವ ಕೋಶಾಧಿಕಾರಿ ಎರ್ಮಾಳ್‌ ಚಂದ್ರ ಹಾಸ ಶೆಟ್ಟಿ, ಸಾಂಸ್ಕೃತಿಕ ಸಮಿತಿ  ಕಾರ್ಯಾಧ್ಯಕ್ಷ  ಪ್ರವೀಣ್‌ ಶೆಟ್ಟಿ ಪುತ್ತೂರು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಲತಾ ಎಸ್‌. ಶೆಟ್ಟಿ, ಯುವ ವಿಭಾಗದ  ಕಾರ್ಯಾಧ್ಯಕ್ಷ  ಯಶ್‌ರಾಜ್‌ ಶೆಟ್ಟಿ, ಉತ್ತರ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ  ಗಣೇಶ್‌ ಜೆ. ಪೂಂಜಾ, ದಕ್ಷಿಣ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ರವಿ ಕೆ. ಶೆಟ್ಟಿ, ಉತ್ತರ ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪ್ರಮೀಳಾ ಎಸ್‌. ಶೆಟ್ಟಿ  ಮತ್ತು ದಕ್ಷಿಣ ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ  ಅಂಬಿಕಾ ವಿ. ಶೆಟ್ಟಿ ಉಪಸ್ಥಿತರಿದ್ದರು.  ಗಣರಾಜ್ಯೋತ್ಸವದ ಅಂಗವಾಗಿ ನಿವೃತ್ತ ಭಾರತೀಯ ಸೇನೆಯ ಯೋಧ ಶ್ಯಾಮರಾಜ್‌ ಇ. ವಿ. ಇವರನ್ನು ಸಂಘದ  ಯುವ ವಿಭಾಗದ ವತಿಯಿಂದ ವಿಶೇಷವಾಗಿ ಸಮ್ಮಾನಿಸಲಾಯಿತು.

 ದಿವ್ಯಾ ಎಸ್‌. ಶೆಟ್ಟಿ, ಪ್ರಮೀಳಾ ಎಸ್‌. ಶೆಟ್ಟಿ ಮತ್ತು ಅಂಬಿಕಾ ವಿ. ಶೆಟ್ಟಿ ಪ್ರಾರ್ಥಿಸಿದರು. ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ಪ್ರವೀಣ್‌ ಶೆಟ್ಟಿ ಪುತ್ತೂರು  ಸ್ವಾಗತಿಸಿದರು. ಅತಿಥಿಗಳನ್ನು ಎಲೆ-ಅಡಿಕೆ  ನೀಡಿ ಸ್ವಾಗತಿಸಲಾಯಿತು. ಕಾಂತಿ ಸೀತಾರಾಮ ಶೆಟ್ಟಿ ಹಾಗೂ ಪತ್ರಕರ್ತ ಕಿರಣ್‌ ಬಿ. ರೈ ಕರ್ನೂರು ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಣ ಮತ್ತು ಸಾಮಾಜಿಕ ಸಮಿತಿ ಕಾರ್ಯಾಧ್ಯಕ್ಷ ಚಂದ್ರಶೇಖರ ಶೆಟ್ಟಿ ನಿಟ್ಟೆ ವಂದಿಸಿದರು. ಅಕ್ಷತಾ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ರೋಹನ್‌ ಆರ್‌. ಶೆಟ್ಟಿ ಸಮ್ಮಾನಪತ್ರ ವಾಚಿಸಿದರು. ಗೀತಾ ಆರ್‌. ಶೆಟ್ಟಿ  ಕ್ರೀಡಾ ಸ್ಪರ್ಧೆಗಳಲ್ಲಿ ಬಹುಮಾನ ವಿಜೇತರ ಹೆಸರುಗಳನ್ನು ವಾಚಿಸಿದರು.

ಅತಿಥಿ-ಗಣ್ಯರನ್ನು ಮಹಾರಾಷ್ಟ್ರದ ಪೇಟ ತೊಡಿಸಿ, ಶಾಲು, ಸ್ಮರಣಿಕೆ ಫಲಪುಷ್ಪವನ್ನಿತ್ತು  ಸಮ್ಮಾನಿಸ ಲಾಯಿತು. ಸಾಂಸ್ಕೃತಿಕ ಕಾರ್ಯ ಕ್ರಮದಂಗವಾಗಿ ಸದಸ್ಯರುಗಳ ಮಕ್ಕಳಿಂದ ನೃತ್ಯ ವೈವಿಧ್ಯಗಳು, ರಾಧಾಕೃಷ್ಣ ನೃತ್ಯ ಅಕಾಡೆಮಿ ಮುಂಬಯಿ ಕಲಾವಿದರಿಂದ ಸಮುದ್ರ ಮಂಥನ ನೃತ್ಯರೂಪಕ ಹಾಗೂ ಅಭಿನಯ ಮಂಟಪ ಮುಂಬಯಿ ಕಲಾವಿದರಿಂದ ಪುರುಸೊತ್ತಿಜ್ಜಿ ತುಳು ನಾಟಕ ಪ್ರದರ್ಶನಗೊಂಡಿತು.
ಸಂಘದ ಕಾರ್ಯಕಾರಿ ಸಮಿತಿ ಪದಾಧಿಕಾರಿ ಗಳು, ಮಹಿಳಾ ವಿಭಾಗ, ಯುವ ವಿಭಾಗ, ಉತ್ತರ ಹಾಗೂ ದಕ್ಷಿಣ ಪ್ರಾದೇಶಿಕ ಸಮಿತಿ ಪದಾಧಿಕಾರಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಸಂಘದ ಮಾಜಿ ಅಧ್ಯಕ್ಷರಾದ ಕುಶಲ್‌ ಹೆಗ್ಡೆ, ಸದಾನಂದ ಕೆ. ಶೆಟ್ಟಿ, ಜಯಂತ್‌ ಶೆಟ್ಟಿ, ಮೊಳಹಳ್ಳಿ ಬಾಲಕೃಷ್ಣ ಹೆಗ್ಡೆ, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು  ಉಪಸ್ಥಿತರಿದ್ದರು.  

ಚಿತ್ರ-ವರದಿ: ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

Divorce Rumours: ಚಹಾಲ್‌ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?

Divorce Rumours: ಚಹಾಲ್‌ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?

New Delhi; Argument with classmates;

New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ

Thane; Businessman, key witness in criminal case,

Thane; ಕ್ರಿಮಿನಲ್‌ ಕೇಸ್‌ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ

13-bng

Road Mishap: ಎಚ್ಚರ! ಬೆಂಗ್ಳೂರಲ್ಲಿದೆ 64 ಆಕ್ಸಿಡೆಂಟ್‌ ಡೇಂಜರ್‌ ಸ್ಪಾಟ್‌

12-chowta

Brijesh Chowta: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

19-bng

Cyber ಕೈಚಳಕ: 2.47 ಕೋಟಿ ರೂ. ವಂಚನೆ

18-bng

Bengaluru: ಪೊಲೀಸ್‌ ಮೇಲೆ ಹಲ್ಲೆ ನಡೆಸಿದ್ದ ವಿದೇಶಿ ಪ್ರಜೆ ಸೆರೆ

17-bng

Bengaluru: ಅನಧಿಕೃತ ಕಾಲ್‌ಸೆಂಟರ್‌ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

16-bng

Bengaluru: ಪ್ರೀತಿಸಿದವಳು ದೂರಾಗಿದ್ದಕ್ಕೆ ಯುವಕ ಆತ್ಮಹತ್ಯೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.