ಪುಣೆ ಬಂಟರ ಸಂಘ: ಮಹಿಳಾ ವಿಭಾಗದಿಂದ ಅರಸಿನ ಕುಂಕುಮ
Team Udayavani, Aug 8, 2017, 4:11 PM IST
ಪುಣೆ: ಪುಣೆ ಬಂಟರ ಸಂಘದ ಉತ್ತರ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಅರಸಿನ ಕುಂಕುಮ ಕಾರ್ಯಕ್ರಮವು ಆ. 4ರಂದು ಕನ್ನಡ ಸಂಘದ ಕನ್ನಡ ಮಾಧ್ಯಮ ಹೈಸ್ಕೂಲ್ ಸಭಾಗೃಹದಲ್ಲಿ ನಡೆಯಿತು.
ಸಮಿತಿಯ ಕಾರ್ಯಾಧ್ಯಕ್ಷೆ ಚಂಪಾ ಎಸ್. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಮೊದಲಿಗೆ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ದೇವರ ಅಲಂಕೃತ ಮಂಟಪಕ್ಕೆ ಆರತಿ ಬೆಳಗಿ ಮಹಿಳಾ ವಿಭಾಗದ ಸದಸ್ಯೆಯರು ಪ್ರಾರ್ಥನೆಗೈದು ಪೂಜೆ ಸಲ್ಲಿಸಿದರು. ನಂತರ ಸೇರಿದ್ದ ನೂರಾರು ಸಂಖ್ಯೆಯ ಮಹಿಳೆಯರಿಗೆ ಸಮಿತಿ ಸದಸ್ಯೆಯರು ಹಚ್ಚಿ ನೆನಪಿನ ಕಾಣಿಕೆಗಳನ್ನು ನೀಡಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ…ಬೆಟ್ಟು, ಸಂಘದ ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಪುತ್ತೂರು, ಉತ್ತರ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ದಿನೇಶ್ ಶೆಟ್ಟಿ ಕಳತ್ತೂರು, ಕಾರ್ಯದರ್ಶಿ ಗಣೇಶ್ ಪೂಂಜಾ, ಕೋಶಾಧಿಕಾರಿ ರಾಘವ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸಂಧ್ಯಾ ವಿ. ಶೆಟ್ಟಿ ಮತ್ತು ಸದಸ್ಯರು, ಸಮಾಜ ಸೇವಕಿ ಪುಷ್ಪಾ$ ಕುಶಲ್ ಹೆಗ್ಡೆ, ದಕ್ಷಿಣ ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಗೀತಾ ಬಿ. ಶೆಟ್ಟಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಮಹಿಳಾ ಸದಸ್ಯೆಯರು ಉಪಸ್ಥಿಥರಿದ್ದರು.
ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಚಂಪಾ ಎಸ್. ಶೆಟ್ಟಿ, ಉಪ ಕಾರ್ಯಾಧ್ಯಕ್ಷೆ ಆಶಾ ಪಿ. ಶೆಟ್ಟಿ, ಕಾರ್ಯದರ್ಶಿ ಸುಕನ್ಯಾ ಡಿ. ಶೆಟ್ಟಿ, ಕೋಶಾಧಿಕಾರಿ ಅರುಣಾ ಆರ್. ಶೆಟ್ಟಿ, ಸದಸ್ಯೆಯರಾದ ಪ್ರಮೀಳಾ ಎಸ್. ಶೆಟ್ಟಿ, ರೇಣುಕಾ ಡಿ. ಶೆಟ್ಟಿ, ಆಶಾ ಡಿ. ಶೆಟ್ಟಿ ಬಜಗೋಳಿ, ಶರ್ಮಿಳಾ ಪಿ. ಶೆಟ್ಟಿ, ಪ್ರೇಮಾ ಆರ್. ಶೆಟ್ಟಿ, ಗೀತಾ ಆರ್. ಶೆಟ್ಟಿ, ವೀಣಾ ಪಿ. ಶೆಟ್ಟಿ ಅವರುಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಮನೋರಂಜನೆಯ ಅಂಗವಾಗಿ ರಸಮಂಜರಿ ಕಾರ್ಯಕ್ರಮ ನಡೆಯಿದು. ಲಘು ಉಪಾಹಾರದೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಡಾ. ತುಂಬೆ ಮೊಯ್ದೀನ್ ಅವರಿಗೆ ಪ್ರತಿಷ್ಠಿತ ಗ್ಲೋಬಲ್ ವಿಷನರಿ ಎನ್‌ಆರ್‌ಐ ಪ್ರಶಸ್ತಿ
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
Jimmy Carter Life Journey: ಜಿಮ್ಮಿ ಕಾರ್ಟರ್- ಮಾನವೀಯತೆ, ಶಾಂತಿಯ ಶಿಲ್ಪಿ
ವೈಕುಂಠ ಏಕಾದಶಿ: ಅಮೆರಿಕ ದೇವಸ್ಥಾನದಲ್ಲಿ ಆಚರಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.