ಪುಣೆ ತುಳುಕೂಟ: ವಾರ್ಷಿಕ ದಸರಾ ಪೂಜೆ ಹಾಗೂ ತೆನೆಹಬ್ಬ


Team Udayavani, Sep 28, 2017, 1:30 PM IST

27-Mum07b.jpg

ಪುಣೆ:  ಪುಣೆ ತುಳುಕೂಟ ಮರಾಠಿ ಮಣ್ಣಿನಲ್ಲೂ ತುಳುನಾಡಿನ ಸಾಂಸ್ಕೃತಿಕ ಆಚರಣೆಗಳನ್ನು ಯಥಾಪ್ರಕಾರ ಆಚರಿಸುತ್ತಾ ಮಕ್ಕಳಿಗೆ, ಯುವ ಪೀಳಿಗೆಗೆ ನಮ್ಮ ಆಚಾರ ವಿಚಾರಗಳ ಅರಿವನ್ನು ಮೂಡಿಸಿ ಸಾಂಸ್ಕೃತಿಕ ಪರಂಪರೆಯನ್ನು ಉಳಿಸುವ ಕಾರ್ಯವನ್ನು ಮಾಡುತ್ತಿರುವುದಕ್ಕೆ ಅಭಿಮಾನವೆನಿಸುತ್ತಿದೆ. ದಸರಾದಂತಹ ಹಬ್ಬ ಹರಿದಿನಗಳ ಆಚರಣೆಗಳು ನಮ್ಮ ಧಾರ್ಮಿಕ ನೆಲಗಟ್ಟನ್ನು ಭದ್ರಪಡಿಸುವುದಲ್ಲದೆ,  ಸಂಸ್ಕಾರವಂತ ಜೀವನವನ್ನು ಪರಿಪೂರ್ಣಗೊಳಿಸುವ ಆದರ್ಶ ಗಳನ್ನು ಒಳಗೊಂಡಿದೆ. ಆದುದರಿಂದ ಇದು ನಮ್ಮ ಕರ್ತವ್ಯವೆಂದು ಭಾವಿಸಿ ಜೀವನದಲ್ಲಿ ಉತ್ತಮ ಸಂಸ್ಕಾರವಂತರಾಗಿ ತಲೆಮಾರಿನಿಂದ ನಡೆದುಕೊಂಡು ಬಂದಂತಹ  ಮೂಲ ನಂಬಿಕೆಗಳನ್ನು ಉಳಿಸುವ ಕಾರ್ಯ ನಮ್ಮಿಂದಾಗಬೇಕು ಎಂದು ಪುಣೆಯ ಯುವ ಕವಿ, ಲೇಖಕ ಪೊಳಲಿ ಮಹೇಶ್‌ ಪ್ರಸಾದ್‌  ಹೆಗ್ಡೆ ನುಡಿದರು.

ಸೆ. 23ರಂದು ಪುಣೆ ಕನ್ನಡ ಸಂಘದ ಡಾ| ಕಲ್ಮಾಡಿ ಶ್ಯಾಮರಾವ್‌ ಕನ್ನಡ ಮಾಧ್ಯಮ ಹೈಸ್ಕೂಲ್‌ ಸಭಾಂಗಣದಲ್ಲಿ ನಡೆದ ಪುಣೆ ತುಳುಕೂಟದ ದಸರಾ ಪೂಜೆ ಹಾಗೂ ತೆನೆಹಬ್ಬ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ  ಉಪಸ್ಥಿತರಿದ್ದು ಮಾತನಾಡಿದ ಅವರು, ಇಂದಿನ ಯಾಂತ್ರೀಕೃತ ಬದುಕಿನ ಧಾವಂತದಲ್ಲಿ ನಾವು ನಮ್ಮತನವನ್ನು ಕಳೆದುಕೊಂಡು ಪಾಶ್ಚಾತ್ಯ ಸಂಸ್ಕೃತಿಯ ದಾಸರಾಗುತ್ತಿರುವುದು ಮಾತ್ರ ಚಿಂತಿಸತಕ್ಕ ವಿಚಾರವಾಗಿದೆ. ನಮ್ಮ ಹಿರಿಯರ ಕಟ್ಟುಕಟ್ಟಳೆಗಳ ಚೌಕಟ್ಟಿನಲ್ಲಿ ಆಚರಿಸುತ್ತಿದ್ದ ಆಚಾರ ವಿಚಾರಗಳನ್ನು ಮೂಢನಂಬಿಕೆಗಳಂತೆ ಹಣೆಪಟ್ಟಿ ಕಟ್ಟುವ ನಮ್ಮ ದಿನಚರಿಗಳಲ್ಲಿ ಟಿವಿ ಮೊಬೈಲ್‌ಗ‌ಳೇ ಜೀವನದ ಅವಿಭಾಜ್ಯ ಅಂಗವೆನ್ನುವಂತಾಗಿದೆ. ನಮ್ಮ ಕೂಡುಕುಟುಂಬದ ಅರ್ಥ ಕಳೆದುಕೊಳ್ಳುತ್ತಿದೆ. ಬದುಕಿನ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಿ ಬದುಕನ್ನು ಆನಂದಿಸುವ ಪರಿಪಾಠ ನಮ್ಮದಾಗಲಿ. ನಮ್ಮ ಮಾತೃಭಾಷೆ, ಸಂಸ್ಕೃತಿ, ಧಾರ್ಮಿಕ ವಿಚಾರಗಳನ್ನು ಗೌರವಿಸುತ್ತಾ ನಮ್ಮ ಮಕ್ಕಳಿಗೆ ಆದರ್ಶದ ಅರಿವನ್ನು ಮೂಡಿಸುವ ಕಾರ್ಯ ನಮ್ಮಿಂದಾಗಲಿ ಎಂದರು.

ಯುವ ವಿಭಾಗದ ಕಾರ್ಯಾಧ್ಯಕ್ಷ ನ್ಯಾಯವಾದಿ ರೋಹನ್‌ ಶೆಟ್ಟಿ ಮಾತನಾಡಿ, ಸಂಘದ ಹಿರಿಯರ ಸಹಕಾರದಿಂದ ಯುವ ವಿಭಾಗ ಮುನ್ನಡೆಯುತ್ತಿದ್ದು, ಸಂಘ ಯಾವುದೇ ಕೆಲಸಗಳನ್ನು ನೀಡಿದರೂ ಮಾಡಲು ಸಿದ್ಧರಿದ್ದೇವೆ. ಮುಂದೆ ಯುವವಿಭಾಗದಿಂದ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.

ವೇದಿಕೆಯಲ್ಲಿ ಸಂಘದ ಗೌರವಾಧ್ಯಕ್ಷ ಮಿಯ್ನಾರ್‌ ರಾಜ್‌ಕುಮಾರ್‌ ಎಂ. ಶೆಟ್ಟಿ, ಕೋಶಾಧಿಕಾರಿ ಸಂತೋಷ್‌ ಶೆಟ್ಟಿ ಎಣ್ಣೆಹೊಳೆ, ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ಶ್ರೀಧರ ಶೆಟ್ಟಿ ಕಲ್ಲಾಡಿ, ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ಸುಜಾತಾ ದಿವಾಕರ ಶೆಟ್ಟಿ ಉಪಸ್ಥಿತರಿದ್ದರು. ಅತಿಥಿಗಳನ್ನು ಗೌರವಿಸಲಾಯಿತು. ಸಂತೋಷ್‌ ಶೆಟ್ಟಿ ಸ್ವಾಗತಿಸಿ ವಂದಿಸಿದರು. ಭತ್ತದ ತೆನೆಗಳನ್ನು ಪೂಜಿಸಿ ಸದಸ್ಯರಿಗೆ ಹಂಚಲಾಯಿತು.

ಶ್ರೀ  ಶಾರದಾ ಭಜನಾ ಮಂಡಳಿಯ ಯಶೋದಾ ಎಂ. ಶೆಟ್ಟಿ ಮತ್ತು ಬಳಗ, ಶಂಕರ ಪೂಜಾರಿ ಬಂಟಕಲ್ಲು ಹಾಗೂ ಸಂಘದ ಸದಸ್ಯ ರಿಂದ ಭಜನೆ, ಅನಂತರ
ದಾಂಡಿಯಾ ಕಾರ್ಯìಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪುಣೆ ಬಂಟರ ಸಂಘದ ಶಿಕ್ಷಣ ಮತ್ತು ಸಾಮಾಜಿಕ ಸಮಿತಿ ಕಾರ್ಯಾ ಧ್ಯಕ್ಷ  ಚಂದ್ರಶೇಖರ ಶೆಟ್ಟಿ ನಿಟ್ಟೆ, ಕ್ರೀಡಾ ಕಾರ್ಯಾಧ್ಯಕ್ಷ ವಿವೇಕಾನಂದ ಶೆಟ್ಟಿ ಆವರ್ಸೆ, ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸಂಧ್ಯಾ ವಿ. ಶೆಟ್ಟಿ,ಶ್ರೀ ಅಯ್ಯಪ್ಪ ಯಕ್ಷಗಾನ ಮಂಡಳಿ ಅಧ್ಯಕ್ಷ ಪಾಂಗಾಳ ವಿಶ್ವನಾಥ ಶೆಟ್ಟಿ, ಹಿರಿಯ ಯಕ್ಷ ಗಾನ ಕಲಾವಿದ ರಾಮಣ್ಣ ರೈ ಪುತ್ತೂರು, ಪುರುಷೋತ್ತಮ ಶೆಟ್ಟಿ, ಸಂಘದ ಸ್ಥಾಪಕಾಧ್ಯಕ್ಷ ಜಯ ಕೆ. ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷ ಮೋಹನ್‌ ಶೆಟ್ಟಿ ಎಣ್ಣೆಹೊಳೆ, ಶಿಕ್ಷಣ ಮತ್ತು ಸಾಮಾಜಿಕ ಸಮಿತಿ ಕಾರ್ಯಾಧ್ಯಕ್ಷ ದಿವಾಕರ ಶೆಟ್ಟಿ ಮಾಣಿಬೆಟ್ಟು, ಕ್ರೀಡಾ ಕಾರ್ಯಾಧ್ಯಕ್ಷ ಯಶವಂತ್‌ ಶೆಟ್ಟಿ ತಾಮಾರು, ಪದಾಧಿಕಾರಿಗಳಾದ ವಿಶ್ವನಾಥ ಶೆಟ್ಟಿ, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆಯರಾದ ಶಕುಂತಳಾ ಆರ್‌. ಶೆಟ್ಟಿ, ನಯನಾ ಸಿ. ಶೆಟ್ಟಿ, ಸದಸ್ಯೆಯರಾದ ಶಶಿಕಲಾ ಎ. ಶೆಟ್ಟಿ, ಸರಿತಾ ತುಷಾರ್‌ ಶೆಟ್ಟಿ, ಪ್ರಿಯಾ ಎಚ್‌. ದೇವಾಡಿಗ, ಸರಿತಾ ಯಶವಂತ್‌ ಶೆಟ್ಟಿ, ರಮಾ ಶೆಟ್ಟಿ, ರಂಜಿತಾ ರಮೇಶ್‌ ಶೆಟ್ಟಿ, ಉಮಾ ಎಸ್‌.ಶೆಟ್ಟಿ, ಗೀತಾ ಪೂಜಾರಿ,  ಸರಸ್ವತಿ ಕುಳಾಲ್‌, ನವಿತಾ ಪೂಜಾರಿ, ಯುವ ವಿಭಾಗದ ಕಾರ್ಯದರ್ಶಿ ಭಾಗೆÂàಶ್‌ ಬಿ. ಶೆಟ್ಟಿ, ಹಿತೇಶ್‌ ಶೆಟ್ಟಿ ಕಳತ್ತೂರು ಮತ್ತು ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಕೊನೆಯಲ್ಲಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. 

ಪ್ರತೀವರ್ಷ ಸಂಘದ ವತಿಯಿಂದ ದಸರಾ ಕಾರ್ಯಕ್ರಮಗಳನ್ನು ಹಾಗೂ ತೆನೆಹಬ್ಬವನ್ನು ಆಚರಿಸುತ್ತಾ ನಮ್ಮ ತುಳುನಾಡಿನ ಸಾಂಸ್ಕೃತಿಕ, ಧಾರ್ಮಿಕ ಆಚರಣೆಗಳನ್ನು  ಉಳಿಸಿ ಬೆಳೆಸುವ ಕಾರ್ಯವನ್ನು ಮಾಡುತ್ತಾ ಬಂದಿರು ತ್ತೇವೆ. ಪುಣೆಯಲ್ಲಿರುವ ನಾಡಿನ ಎಲ್ಲ ತುಳುವರು ಜಾತ್ಯತೀತವಾಗಿ ತುಳುಕೂಟದ ಕಾರ್ಯಕ್ರಮಕ್ಕೆ ಪ್ರೋತ್ಸಾಹ  ನೀಡಿ ಉತ್ಸಾಹ  ತುಂಬುವ ಕಾರ್ಯವನ್ನು ಮಾಡುತ್ತಿರುವುದು ಸಂಘಟನೆ ಬಲಗೊಳ್ಳಲು ಕಾರಣವಾಗಿದೆ. ಅಂತೆಯೇ ಇಂದು ನಮ್ಮ ಸಂಸ್ಕೃತಿ ಅಲ್ಲದಿ ದ್ದರೂ ಅನ್ಯ ಸಂಸ್ಕೃತಿಯನ್ನು ಗೌರವಿಸುವ  ಉದ್ದೇಶದಿಂದಲೂ ಮತ್ತು ನಮ್ಮ ಯುವ ವಿಭಾಗದ ಸದಸ್ಯರಿಗೆ ಪ್ರೋತ್ಸಾಹ   ನೀಡುವ ದೃಷ್ಟಿಯಿಂದ ದಾಂಡಿಯಾ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ. ಇಂದಿನ ಕಾರ್ಯಕ್ರಮ ಯಶಸ್ವಿಯಾಗಲು ಸಹಕಾರ ನೀಡಿದ ಕಾರ್ಯಕಾರಿ, ಮಹಿಳಾ ವಿಭಾಗ ಹಾಗೂ ಯುವ ವಿಭಾಗಕ್ಕೆ ಕೃತಜ್ಞತೆಗಳು. ಮಂದೆಯೂ ನಿಮ್ಮೆಲ್ಲರ ಸಹಕಾರ ಸಂಘಕ್ಕಿರಲಿ
 – ತಾರಾನಾಥ ಕೆ. ರೈ ಮೇಗಿನಗುತ್ತು                
  (ಅಧ್ಯಕ್ಷರು: ಪುಣೆ ತುಳುಕೂಟ)

ಟಾಪ್ ನ್ಯೂಸ್

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.